ವಧು ನೋಡಲು ಹೋದವರಿಗೆ ಬಂತು ಕೊರೋನಾ; ಮದುವೆ ಬ್ರೋಕರ್​ನಿಂದ 8 ಜನರಿಗೆ ಸೋಂಕು

Chikmagalur News: ತುಮಕೂರಿಗೆ ಹೋಗಿ ಬಂದ ಚಿಕ್ಕಮಗಳೂರಿನ ಗ್ರಾಮಸ್ಥರಿಗೆ ಸೋಂಕು ತಗುಲಿರುವುದರಿಂದ ಸಂಬಂಧ ಬೆಸೆಯಲು ಹೋಗಿದ್ದ ಮೂರು ಹಳ್ಳಿಯ ಜನರಲ್ಲಿ ಇದೀಗ ಕೊರೋನಾ ಆತಂಕ ಎದುರಾಗಿದೆ.

news18-kannada
Updated:June 30, 2020, 12:18 PM IST
ವಧು ನೋಡಲು ಹೋದವರಿಗೆ ಬಂತು ಕೊರೋನಾ; ಮದುವೆ ಬ್ರೋಕರ್​ನಿಂದ 8 ಜನರಿಗೆ ಸೋಂಕು
ಸಾಂದರ್ಭಿಕ ಚಿತ್ರ
  • Share this:
ಚಿಕ್ಕಮಗಳೂರು (ಜೂ. 30): ಮದುವೆಯ ಬ್ರೋಕರ್ ಜೊತೆ ತುಮಕೂರಿಗೆ ವಧುವನ್ನು ನೋಡಲು ಹೋದ 8 ಮಂದಿಗೆ ಕೊರೋನಾ ಪಾಸಿಟಿವ್ ಬಂದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ. ಚಿಕ್ಕಮಗಳೂರಿನ ತರೀಕೆರೆ ತಾಲೂಕಿನ ಗಡಿ ಗಿರಿಯಾಪುರ ಹಾಗೂ ದಂದೂರು ಸೇರಿದಂತೆ ಒಂದೇ ವಂಶದ 3 ಹಳ್ಳಿಯ ಸುಮಾರು 20 ಜನ ಭದ್ರಾವತಿ ಮೂಲದ ಬ್ರೋಕರ್ ಜೊತೆ ತುಮಕೂರಿಗೆ ವಧುವನ್ನು ನೋಡಲು ಹೋಗಿದ್ದರು. ವಧುವನ್ನು ನೋಡಿ ಹಿಂತಿರುಗುವಾಗ ಹೆಮ್ಮಾರಿ ಕೊರೋನಾ ಜೊತೆ ವಾಪಾಸ್ ಬಂದಿದ್ದಾರೆ.

ಹುಡುಗಿಯನ್ನು ನೋಡಲು ಹೋದ ಸುಮಾರು 20 ಮಂದಿಯಲ್ಲಿ 8 ಜನಕ್ಕೆ ಕೊರೋನಾ ಪಾಸಿಟಿವ್ ಬಂದಿದೆ. ತುಮಕೂರಿಗೆ ಹೋಗಿ ಬಂದ ಗ್ರಾಮಸ್ಥರಿಗೆ ಸೋಂಕು ತಗುಲಿರುವುದರಿಂದ ಸಂಬಂಧ ಬೆಸೆಯಲು ಹೋಗಿದ್ದ ಮೂರು ಹಳ್ಳಿಯ ಜನರಲ್ಲಿ ಇದೀಗ ಕೊರೋನಾ ಆತಂಕ ಎದುರಾಗಿದೆ. ಇನ್ನು ಕೊರೋನಾ ಆರಂಭದ ಮೊದಲ 55 ದಿನಗಳ ಕಾಲ ಜಿಲ್ಲೆಯಲ್ಲಿ ಒಂದೇ ಒಂದು ಕೊರೋನಾ ಪಾಸಿಟಿವ್ ಪ್ರಕರಣಗಳು ಇರಲಿಲ್ಲ. ಆದರೆ, ಮೇ 19ರಿಂದ ಆರಂಭವಾದ ಪಾಸಿಟಿವ್ ಸಂಖ್ಯೆ ಇಂದು 70ಕ್ಕೆ ಏರಿಕೆಯಾಗಿದೆ.

ಇದನ್ನೂ ಓದಿ: Karnataka Dams Water Level: ರಾಜ್ಯದಲ್ಲಿ ಇನ್ನೆರಡು ದಿನ ಮಳೆ​; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

ನಿನ್ನೆ ಒಂದೇ ದಿನ ಜಿಲ್ಲೆಯಲ್ಲಿ 17 ಪಾಸಿಟಿವ್ ಕೇಸ್ ಗಳು ಪತ್ತೆಯಾಗಿದ್ದು, ಚಿಕ್ಕಮಗಳೂರು ಜಿಲ್ಲೆಯ ಜನರಲ್ಲಿ ಆತಂಕ ಹೆಚ್ಚಾಗಿದೆ. ನಿನ್ನೆ ಜಿಲ್ಲೆಯ ಒಟ್ಟು 17 ಕೇಸ್ ಗಳ ಪೈಕಿ ಬಹುತೇಕ ಕೇಸ್ ಗಳಿಗೆ ಬೆಂಗಳೂರಿನ ನಂಟಿದೆ. ಬೆಂಗಳೂರಿನಲ್ಲಿ ಎಂಎನ್ಸಿ ಕಂಪನಿ ಉದ್ಯೋಗಿ ಬೆಂಗಳೂರಿನಿಂದ ಹಿಂತಿರುಗಿ ಬಂದು ತನ್ನ ಕುಟುಂಬದ ಮೂವರಿಗೆ ಸೋಂಕನ್ನು ಅಂಟಿಸಿದ್ದಾನೆ. ತರೀಕೆರೆ ತಾಲೂಕಿನ ಶಿವನಿಯಿಂದ ಪ್ರತಿದಿನ ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿಗೆ ಹೋಗಿ ಬರುತ್ತಿದ್ದ ಉಪನ್ಯಾಸಕರಿಗೂ ಹೆಮ್ಮಾರಿ ಅಂಟಿದೆ. ಬೆಂಗಳೂರಿನಿಂದ ಹಿಂತಿರುಗಿ ಬಂದಿದ್ದ ವಕೀಲನ ಸಂಪರ್ಕದ ಕುಟುಂಬ ಒಬ್ಬರಿಗೆ, ತರಕಾರಿ ವ್ಯಾಪಾರಿ ಸಂಪರ್ಕದ ಇಬ್ಬರಿಗೆ ಹಾಗೂ ಬೆಂಗಳೂರಿಗೆ ಹೋಗಿ ಬಂದಿದ್ದ ಕಡೂರಿನ ಯುವಕನೋರ್ವನಲ್ಲೂ ಸೋಂಕು ಕಾಣಿಸಿಕೊಂಡಿತ್ತು.

ಇದನ್ನೂ ಓದಿ: TikTok: ಟಿಕ್​ಟಾಕ್​ ಆ್ಯಪ್ ತೆಗೆದುಹಾಕಿದ ಗೂಗಲ್ ಪ್ಲೇ ಸ್ಟೋರ್, ಆ್ಯಪ್ ಸ್ಟೋರ್

ಇದೀಗ ಅವರು ಕೂಡ ತಮ್ಮ ಕುಟುಂಬದ ಒಬ್ಬೊಬ್ಬರಿಗೆ ಸೋಂಕು ತಗುಲಿಸಿದ್ದಾರೆ. ಜಿಲ್ಲೆಯಾದ್ಯಂತ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು ಜಿಲ್ಲೆಯ ಜನ ಕಂಗಾಲಾಗಿದ್ದಾರೆ. ಜಿಲ್ಲೆಯಲ್ಲಿ ಮಳೆ ಆರಂಭವಾಗಿದ್ದು, ಇದೇ ವೇಳೆ ಸೋಂಕಿತರ ಸಂಖ್ಯೆ ಕೂಡ ಹೆಚ್ಚಾಗುತ್ತಿರುವುದರಿಂದ ಜಿಲ್ಲೆಯಲ್ಲಿ ಆತಂಕ ಇಮ್ಮಡಿಗೊಂಡಿದೆ.
ಸದ್ಯ ಜಿಲ್ಲೆಯಲ್ಲಿ 70 ಪ್ರಕರಣಗಳು ಪತ್ತೆಯಾಗಿದ್ದು, ದಿನೇ ದಿನೇ ಕೊರೊನಾ ಕೇಸ್ ಗಳು ಜಾಸ್ತಿ ಆಗುತ್ತಿರುವುದು ಜನಸಾಮಾನ್ಯರಲ್ಲಿ ಆತಂಕ ಮೂಡಿಸಿದೆ. ಚಿಕ್ಕಮಗಳೂರು ನಗರದಲ್ಲಿ ಪ್ರತಿ ನಿತ್ಯ ಎರಡು-ಮೂರು ಹೊಸ ಪ್ರಕರಣಗಳು ಪತ್ತೆಯಾಗುತ್ತಿದ್ದವು. ಆದರೆ,  ನಿನ್ನೆ ಒಂದೇ ದಿನ ಜಿಲ್ಲೆಯಲ್ಲಿ 17 ಪ್ರಕರಣಗಳು ದಾಖಲಾಗಿದ್ದು ವಧು ನೋಡಲು ಹೋದ ಎಂಟು ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿರುವುದರಿಂದ ಸಮುದಾಯಕ್ಕೆ ಕೊರೋನಾ ಹಬ್ಬುತ್ತಿದೆಯಾ ಎಂಬ ಅನುಮಾನ ಜನಸಾಮಾನ್ಯರನ್ನು ಕಾಡುತ್ತಿದೆ.
First published: June 30, 2020, 12:18 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading