HOME » NEWS » Coronavirus-latest-news » CHITRADURGA CORONAVIRUS 10 DAYS HOME QUARANTINE FOR WHO ARE TRAVELING TO CHITRADURGA FROM OTHER DISTRICTS VTC SCT

Chitradurga Coronavirus | ಬೇರೆ ಜಿಲ್ಲೆಗಳಿಂದ ಚಿತ್ರದುರ್ಗಕ್ಕೆ ಬರುವ ಜನರಿಗೆ 10 ದಿನ ಕ್ವಾರಂಟೈನ್!

Chitradurga Coronavirus | ಚಿತ್ರದುರ್ಗದಲ್ಲಿ ಬೇರೆ ಜಿಲ್ಲೆಗಳಿಗೆ ಪ್ರಯಾಣ ಬೆಳೆಸುವವರಿಗೆ ಯಾವುದೇ ರೀತಿಯ ಪಾಸ್‍ಗಳು ವಿತರಣೆ ಮಾಡುವುದಿಲ್ಲ. ಅಗತ್ಯ ದಾಖಲೆಗಳನ್ನು ಹಾಜರುಪಡಿಸಿ ಪ್ರಯಾಣ ಬೆಳೆಸಬಹುದಾಗಿದೆ. ತುರ್ತು ಸಮಯದಲ್ಲಿ ವಾಹನಗಳ ಅವಶ್ಯಕತೆ ಇದ್ದರೆ RTOಗೆ ಸಂಪರ್ಕಿಸಬಹುದು.

news18-kannada
Updated:April 29, 2021, 7:56 AM IST
Chitradurga Coronavirus | ಬೇರೆ ಜಿಲ್ಲೆಗಳಿಂದ ಚಿತ್ರದುರ್ಗಕ್ಕೆ ಬರುವ ಜನರಿಗೆ 10 ದಿನ ಕ್ವಾರಂಟೈನ್!
ಚಿತ್ರದುರ್ಗ ಡಿಸಿ ಕವಿತಾ
  • Share this:
ಚಿತ್ರದುರ್ಗ: ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಚಿತ್ರದುರ್ಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಆಗಮಿಸುತ್ತಿದ್ದಾರೆ. ಇಂತಹವರು ಸ್ವಯಂ ಪ್ರೇರಣೆಯಿಂದ 10 ದಿನಗಳ ಕಾಲ ಕ್ವಾರಂಟೈನ್ ಆಗಬೇಕು. ರೋಗ ಲಕ್ಷಣಗಳು ಕಂಡು ಬಂದರೆ ಕೋವಿಡ್ ಪರೀಕ್ಷೆ ಮಾಡಿಸಬೇಕು. ಬೇರೆ ಜಿಲ್ಲೆಗಳಿಗೆ ಪ್ರಯಾಣ ಬೆಳೆಸುವವರಿಗೆ ಯಾವುದೇ ರೀತಿಯ ಪಾಸ್‍ಗಳು ವಿತರಣೆ ಮಾಡುವುದಿಲ್ಲ. ಅಗತ್ಯ ದಾಖಲೆಗಳನ್ನು ಹಾಜರುಪಡಿಸಿ ಪ್ರಯಾಣ ಮಾಡಬೇಕು. ಕೊರೋನಾ ಎರಡನೇ ಅಲೆ ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆ ಸರ್ಕಾರದ  ಆದೇಶದಂತೆ  ಏ. 27ರ ರಾತ್ರಿ 9ರಿಂದ ಮೇ 12ರವರೆಗೆ ಬೆಳಿಗ್ಗೆ 6 ಗಂಟೆವರೆಗೆ ಕರ್ಫ್ಯೂ ಜಾರಿಯಿದೆ. ಈ ವೇಳೆಯಲ್ಲಿ ಅನವಶ್ಯಕವಾಗಿ ಓಡಾಡುವವರ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಹೇಳಿದ್ದಾರೆ.

ಚಿತ್ರದುರ್ಗದಲ್ಲಿ ಬೆಳಿಗ್ಗೆ 6 ರಿಂದ 10 ರವರೆಗೆ ಮಾತ್ರ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಕಲ್ಪಿಸಲಾಗಿದೆ. ಮೆಡಿಕಲ್ ಸ್ಟೋರ್ ಹಾಗೂ ವೈದ್ಯಕೀಯ ಸೇವೆ ಹೊರತು ಪಡಿಸಿ ಕರ್ಫ್ಯೂ ಅವಧಿಯಲ್ಲಿ ಯಾವುದೇ ಅಂಗಡಿಗಳು ತೆರೆದಿರುವುದಿಲ್ಲ. ಸರ್ಕಾರ ಹೊರಡಿಸಿದ ಮಾರ್ಗಸೂಚಿಗಳ ಪಾಲನೆಗೆ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುತ್ತದೆ  ಎಂದಿದ್ದಾರೆ. ಬೇರೆ ಜಿಲ್ಲೆಗಳಿಗೆ ಪ್ರಯಾಣ ಬೆಳೆಸುವವರಿಗೆ ಯಾವುದೇ ರೀತಿಯ ಪಾಸ್‍ಗಳು ವಿತರಣೆ ಮಾಡುವುದಿಲ್ಲ. ಅಗತ್ಯ ದಾಖಲೆಗಳನ್ನು ಹಾಜರುಪಡಿಸಿ ಪ್ರಯಾಣ ಬೆಳೆಸಬಹುದಾಗಿದೆ. ತುರ್ತು ಸಮಯದಲ್ಲಿ ವಾಹನಗಳ ಅವಶ್ಯಕತೆ ಇದ್ದರೆ RTOಗೆ ಸಂಪರ್ಕಿಸಬಹುದು. ಇದರ ಜೊತೆಗೆ 108 ವಾಹನದ ಸೌಲಭ್ಯವೂ ಲಭ್ಯವಿದೆ ಎಂದರು.

ಎರಡನೇ ಅಲೆಯ ಸಂದರ್ಭದಲ್ಲಿ ಕೋವಿಡ್‍ಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಇಬ್ಬರು ಮರಣ ಹೊಂದಿದ್ದಾರೆ. ವೈದ್ಯಕೀಯ ಸಲಹೆ ವಿರೋಧಿಸಿ ಬೇರೆ ಜಿಲ್ಲೆಗೆ ಪ್ರಯಾಣ ಮಾಡಿದ ಸಂದರ್ಭದಲ್ಲಿ ಮಾರ್ಗ ಮಧ್ಯೆ ಹಾಗೂ ಹೃದಯ ಸಂಬಂಧಿ ಕಾಯಿಲೆ ಇರುವುದರಿಂಂದ ಇಬ್ಬರು ಕೋವಿಡ್ ಸೋಂಕಿತರು ಮರಣ ಹೊಂದಿದ್ದಾರೆ. ಕೋವಿಡ್ ಸೋಂಕಿತರಿಗೆ ಕೋವಿಡ್ ಆಸ್ಪತ್ರೆಯ ಡೆತ್ ಆಡಿಟ್ ಸಮಿತಿಯಿಂದ ಡೆತ್ ಆಡಿಟ್ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಬೆಳಿಗ್ಗೆ 6ರಿಂದ 10 ರವರೆಗೆ ಅಗತ್ಯ ವಸ್ತುಗಳ ಖರೀದಿ ಸಮಯದಲ್ಲಿ ಅಗತ್ಯ ವಸ್ತುಗಳನ್ನು ನಿಗದಿತ ಬೆಲೆಗಿಂತ ಹೆಚ್ಚಿನ ದರಕ್ಕೆ  ಮಾರಾಟ ಮಾಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಪ್ಲೈಯಿಂಗ್ ಸ್ಕ್ವಾಡ್ ನೇಮಕ ಮಾಡಲಾಗಿದೆ. ರೆಮ್‍ಡಿಸಿವರ್ ಕಾಳಸಂತೆಯಲ್ಲಿ ಮಾರಾಟವಾಗುತ್ತಿದೆ ಎಂದು  ಸ್ಕ್ವಾಡ್ ನೇಮಕ ಮಾಡಲಾಗಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡುವ ಮೊದಲು ಆರೋಗ್ಯ ಇಲಾಖೆಯಿಂದ ಅನುಮತಿ ಪಡೆಯುವುದು ಕಡ್ಡಾಯವಾಗಿದೆ. ಅನುಮತಿ ಇಲ್ಲದೆ ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡುವ ನರ್ಸಿಂಗ್ ಹೋಂ, ಕ್ಲಿನಿಕ್, ಆಸ್ಪತ್ರೆಗಳ ಮೇಲೆ ಶಿಸ್ತಿನ ಕ್ರಮ ಕೈಗೊಳ್ಳಲಾಗುವುದು. ಬಸವೇಶ್ವರ ಆಸ್ಪತ್ರೆ ಹಾಗೂ ವೈದ್ಯಕೀಯ ಕಾಲೇಜು, ಕೃಷ್ಣ ನರ್ಸಿಂಗ್ ಹೋಂ, ಅಕ್ಷಯ ಗ್ಲೋಬಲ್ ಹಾಸ್ಟಿಟಲ್ ಸೇರಿದಂತೆ ಜಿಲ್ಲೆಯ ಐದು ಖಾಸಗಿ ಆಸ್ಪತ್ರೆಗಳಿಗೆ ಮಾತ್ರ ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡಲು ಅನುಮತಿ ನೀಡಲಾಗಿದೆ ಎಂದು ಹೇಳಿದರು.
Youtube Video

ಎಸ್ಪಿ ಜಿ. ರಾಧಿಕಾ ಮಾತನಾಡಿ, ಮೊಳಕಾಲ್ಮರಿನ ತಾಲ್ಲೂಕಿನ ಎದ್ದಲ ಬೊಮ್ಮಯ್ಯನಹಟ್ಟಿ ಹಾಗೂ ತಮ್ಮೇನಹಳ್ಳಿ, ಹಿರಿಯೂರು ತಾಲ್ಲೂಕಿನ ಜೆ.ಜಿ ಹಳ್ಳಿ, ಹೊಸದುರ್ಗ ತಾಲ್ಲೂಕಿನ ತರೀಕೆರೆ ರಸ್ತೆ, ಶ್ರೀರಾಂಪುರ ಬೆಲಗೂರಿನಲ್ಲಿ ಚೆಕ್‍ಪೋಸ್ಟ್ ಸ್ಥಾಪಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

(ವರದಿ: ವಿನಾಯಕ ತೊಡರನಾಳ್)
Published by: Sushma Chakre
First published: April 29, 2021, 7:56 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories