ಕೊರೋನಾ ಭೀತಿ | ಮುಖ್ಯಮಂತ್ರಿಯಿಂದ ಹಿಡಿದು ಸಚಿವರ ಇಂದಿನ ಎಲ್ಲಾ ಕಾರ್ಯಕ್ರಮಗಳು ರದ್ದು

ಕೊರೋನಾ ವೈರಸ್​ಗೆ ಕಲಬುರಗಿಯ ವೃದ್ಧನೋರ್ವ ಮೃತಪಟ್ಟ ಹಿನ್ನೆಲೆಯಲ್ಲಿ ಶುಕ್ರವಾರ ಸಿಎಂ ಬಿ.ಎಸ್​.ಯಡಿಯೂರಪ್ಪ ಅವರು ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿದ್ದರು.

news18-kannada
Updated:March 14, 2020, 7:08 AM IST
ಕೊರೋನಾ ಭೀತಿ | ಮುಖ್ಯಮಂತ್ರಿಯಿಂದ ಹಿಡಿದು ಸಚಿವರ ಇಂದಿನ ಎಲ್ಲಾ ಕಾರ್ಯಕ್ರಮಗಳು ರದ್ದು
ಸಿಎಂ ಬಿ.ಎಸ್.ಯಡಿಯೂರಪ್ಪ.
  • Share this:
ಬೆಂಗಳೂರು: ಮಾರಕ ಕೊರೋನಾ ವೈರಸ್ ಇಡೀ ವಿಶ್ವವನ್ನೇ ಬೆಚ್ಚಿಬೀಳಿಸಿದೆ. ಈವರೆಗೂ ಜಗತ್ತಿನಾದ್ಯಂತ 5 ಸಾವಿರಕ್ಕೂ ಹೆಚ್ಚು ಮಂದಿ ಅಸುನೀಗಿದ್ದಾರೆ. ಭಾರತದಲ್ಲೂ 81 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, ಕರ್ನಾಟಕದಲ್ಲಿ ಈ ಸೋಂಕಿಗೆ ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ. ಈ ಮೂಲಕ ರಾಜ್ಯದಲ್ಲಿ ವ್ಯಾಪಕ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ.

ಕೊರೋನಾ ವೈರಸ್ ಸಾಂಕ್ರಾಮಿಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಇಂದು ಮತ್ತು ನಾಳೆ ನಿಗದಿಯಾಗಿದ್ದ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಎಲ್ಲ ಅಧಿಕೃತ ಕಾರ್ಯಕ್ರಮಗಳು ರದ್ದಾಗಿವೆ. ಅಷ್ಟೇ ಅಲ್ಲದೇ, ಸಚಿವರು ಕೂಡ ತಮ್ಮ ಕಾರ್ಯಕ್ರಮಗಳನ್ನು ರದ್ದು ಮಾಡಿದ್ದಾರೆ.

ಕೊರೋನಾ ವೈರಸ್​ಗೆ ಕಲಬುರಗಿಯ ವೃದ್ಧನೋರ್ವ ಮೃತಪಟ್ಟ ಹಿನ್ನೆಲೆಯಲ್ಲಿ ಶುಕ್ರವಾರ ಸಿಎಂ ಬಿ.ಎಸ್​.ಯಡಿಯೂರಪ್ಪ ಅವರು ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿದ್ದರು. ಬಳಿಕ ಒಂದು ವಾರಗಳ ಕಾಲ ಸಿನಿಮಾ ಥಿಯೇಟರ್, ಮಾಲ್, ಸಭೆ, ಸಮಾರಂಭಗಳನ್ನು ರದ್ದು ಮಾಡಿ ಆದೇಶ ಹೊರಡಿಸಿದ್ದರು ಅಷ್ಟೇ ಶಾಲಾ-ಕಾಲೇಜುಗಳಿಗೆ 15 ದಿನಗಳವರೆಗೆ ರಜೆ ಘೋಷಣೆ ಮಾಡಲಾಗಿದೆ. ಒಂದರಿಂದ ಆರನೇ ತರಗತಿವರೆಗಿನ ಪರೀಕ್ಷೆಗಳನ್ನು ರದ್ದು ಮಾಡಲಾಗಿದೆ.

ಇದನ್ನು ಓದಿ: ರಾಜ್ಯದಲ್ಲಿ ಕೊರೋನಾ ಎಮರ್ಜೆನ್ಸಿ: ಬಹುತೇಕ ಸಾರ್ವಜನಿಕ ವಲಯಕ್ಕೆ ನಿಷೇಧ, ಏನಿರತ್ತೆ? ಏನಿರಲ್ಲ?

ರಾಜ್ಯದಲ್ಲಿ ಈವರೆಗೂ 5 ಕೊರೋನಾ ವೈರಸ್ ಪ್ರಕರಣಗಳು ಪತ್ತೆಯಾಗಿವೆ. ಅವರನ್ನು ಪ್ರತ್ಯೇಕವಾಗಿ ಇರಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಹಾಗೂ ಅವರ ಸಂಪರ್ಕದಲ್ಲಿ ಇದ್ದವರನ್ನು ಗುರುತಿಸಿ, ಅವರ ರಕ್ತದ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಜೊತೆಗೆ ಕೊರೋನಾದಿಂದ ಮೃತಪಟ್ಟ ವೃದ್ಧನ ಕುಟುಂಬದ ನಾಲ್ವರು ಸದಸ್ಯರು ಶೀತ-ಕೆಮ್ಮಿನಿಂದ ಬಳಲುತ್ತಿದ್ದು, ಅವರ ಗಂಟಲು ದ್ರವ ಮಾದರಿಯನ್ನು ಪರೀಕ್ಷೆಗೆ ಕಳಿಸಲಾಗಿದೆ. ಇನ್ನು ಆ ವ್ಯಕ್ತಿ ವಾಸವಾಗಿದ್ದ ಮನೆಯನ್ನು ಸೂಕ್ಷ್ಮ ವಲಯವನ್ನಾಗಿ ಘೋಷಿಸಿ, ಅಗತ್ಯ ಮುಂಜಾಗ್ರತಾ ಕ್ರಮ ವಹಿಸಲಾಗಿದೆ.
First published:March 14, 2020
ಮತ್ತಷ್ಟು ಓದಿರಿ
ಮುಂದಿನ ಸುದ್ದಿ
corona virus btn
corona virus btn
Loading