HOME » NEWS » Coronavirus-latest-news » CM BS YEDIYURAPPA ANNOUNCES LOCKDOWN EXTEND TILL JUNE 7 IN KARNATAKA KVD

Karnataka Lockdown: ಕರ್ನಾಟಕದಲ್ಲಿ ಲಾಕ್​​ಡೌನ್​ ವಿಸ್ತರಣೆ; ಜೂ.7ರವರೆಗೆ ಟಫ್ ಲಾಕ್ ಘೋಷಿಸಿದ ಸಿಎಂ

ಬ್ಲ್ಯಾಕ್ ಫಂಗಸ್ ರೋಗಕ್ಕೆ ‌ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ನೀಡುತ್ತೇವೆ ಎಂದು ಸಿಎಂ ಬಿ.ಎಸ್​.ಯಡಿಯೂರಪ್ಪ ಘೋಷಿಸಿದರು.

Kavya V | news18-kannada
Updated:May 21, 2021, 7:35 PM IST
Karnataka Lockdown: ಕರ್ನಾಟಕದಲ್ಲಿ ಲಾಕ್​​ಡೌನ್​ ವಿಸ್ತರಣೆ; ಜೂ.7ರವರೆಗೆ ಟಫ್ ಲಾಕ್ ಘೋಷಿಸಿದ ಸಿಎಂ
ಸಾಂದರ್ಭಿಕ ಚಿತ್ರ.
  • Share this:
ಬೆಂಗಳೂರು: ರಾಜ್ಯದಲ್ಲಿ ಇನ್ನೂ ನಿರೀಕ್ಷಿತ ಮಟ್ಟದಲ್ಲಿ ಕೊರೋನಾ ಸೋಂಕು ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಲಾಕ್​ಡೌನ್​​ನ ವಿಸ್ತರಿಸಿದೆ. ಮೇ 24ರವರೆಗೆ ಲಾಕ್​ಡೌನ್​ ಘೋಷಿಸಿದ್ದ ಸಿಎಂ ಬಿ.ಎಸ್​.ಯಡಿಯೂರಪ್ಪ ಈಗ ಲಾಕ್​​ಡೌನ್​​ನ ಜೂ.7ರವರೆಗೆ ವಿಸ್ತರಿಸಿ ಆದೇಶ ಹೊರಡಿಸಿದ್ದಾರೆ. ಸಚಿವರ ಜೊತೆ ಸಭೆ ನಡೆಸಿದ ಬಳಿಕ ಮಾಧ್ಯಮಗಳ ಎದುರು ಮತ್ತೆ 14 ದಿನಗಳ ಕಾಲ ರಾಜ್ಯಾದ್ಯಂತ ಟಫ್​ ಲಾಕ್​ಡೌನ್​ ಮುಂದುವರೆಯಲಿದೆ ಎಂದು ಘೋಷಿಸಿದರು.

ಹಿರಿಯ ಸಚಿವರು ಹಾಗೂ ಅಧಿಕಾರಿಗಳ ಜೊತೆ ಚರ್ಚಿಸಿದ್ದೇನೆ. ಲಾಕ್‌ಡೌನ್ ವಿಚಾರದಲ್ಲಿ ಕೆಲ ನಿರ್ಧಾರ ಮಾಡಿದ್ದೇವೆ. ರಾಜ್ಯದ ಹಿತದೃಷ್ಟಿಯಿಂದ ಈ ನಿರ್ಧಾರ ಮಾಡಿದ್ದೇವೆ. ಕೋವಿಡ್ ಹಳ್ಳಿಗಳಿಗೆ ಹೆಚ್ಚಾಗಿ ಹರಡಿದೆ. ಹೀಗಾಗಿ ಕೋವಿಡ್ ನಿಯಂತ್ರಣಕ್ಕೆ ಲಾಕ್​ಡೌನ್​ ಮುಂದುವರಿಕೆ ತೀರ್ಮಾನ ಮಾಡಲಾಗಿದೆ. ಕಠಿಣ ನಿರ್ಬಂಧ ಹೇರಿಕೆ ಹಿನ್ನೆಲೆ ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕೆ ಬಂದಿದೆ. ಜನರು ಈ ಕಠಿಣ ನಿರ್ಬಂಧಗಳನ್ನು ಪಾಲಿಸಬೇಕು.

ಇನ್ನು ಜನರು ಭಯಗೊಂಡಿರುವ ಬ್ಲ್ಯಾಕ್​​ ಫಂಗಸ್ ರೋಗಕ್ಕೆ ‌ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ನೀಡುತ್ತೇವೆ. ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ನೀಡಲಿದ್ದೇವೆ ಎಂದು ಸಿಎಂ ಘೋಷಿಸಿದರು. ಹಿಂದಿನ ಮಾರ್ಗಸೂಚಿ ನಿಯಮಗಳೇ ಮುಂದುವರಿಯಲಿವೆ ಎಂದು ಬಿಎಸ್​ವೈ ತಿಳಿಸಿದರು. ಬೆಳಗ್ಗೆ 10 ಗಂಟೆ ಬಳಿಕ ಮನೆಯಿಂದ ಹೊರಬರದೇ ಲಾಕ್​ಡೌನ್​ ನಿಯಮಗಳನ್ನು ಕಟ್ಟುನಿಟ್ಟಿನಿಂದ ಪಾಲಿಸಬೇಕು ಎಂದು ಮನವಿ ಮಾಡಿಕೊಂಡರು.

ಬೆಳಗ್ಗೆ 10 ಗಂಟೆಯ ನಂತರವೂ ಜನ ಅನಗತ್ಯವಾಗಿ ಓಡಾಡುತ್ತಿರುವುದು ಕಂಡು ಬರುತ್ತಿದೆ. ಜನ ಲಾಕ್​ಡೌನ್​ ನಿಯಮಗಳನ್ನು ಕಟ್ಟುನಿಟ್ಟಿನಿಂದ ಪಾಲಿಸಬೇಕು ಇಲ್ಲವಾದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ.

ಈಗ ಜಾರಿಯಲ್ಲಿರುವ ನಿಯಮವಾದ ಬೆಳಗ್ಗೆ 6ರಿಂದ ಬೆಳಗ್ಗೆ 10 ಗಂಟೆವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಮುಂದುವರೆಯಲಿದೆ. ಈಗ ಜಾರಿಯಲ್ಲಿರುವ ಎಲ್ಲಾ ಲಾಕ್​ಡೌನ್​ ನಿಯಮಗಳೂ ಜೂನ್​ 7ರವರೆಗೆ ಮುಂದುವರೆಯಲಿದೆ.  ಅನುಮತಿ ನೀಡಿರುವ ಕ್ಷೇತ್ರಗಳ ನೌಕರರು, ವ್ಯಾಕ್ಸಿನ್​​ ಪಡೆಯುವವರು, ತುರ್ತು  ಕಾರಣಗಳಿರುವವರು ಮಾತ್ರ ಸಂಚರಿಸಲು ಅನುಮತಿ ನೀಡಲಾಗಿದೆ.
Youtube Video

ಜೂನ್​​ 7ರವರೆಗೆ ಬಸ್​​ ಸಂಚಾರ, ಮೆಟ್ರೋ ಸಂಚಾರ ಸಂಪೂರ್ಣ ಬಂದ್​​​ ಇರಲಿದೆ. ಮಾಲ್​​, ಚಿತ್ರಮಂದಿರಗಳು, ಪಾರ್ಕ್​ಗಳು, ಈಜುಕೊಳಗಳನ್ರನು ತೆರೆಯುವಂತಿಲ್ಲ. ಧಾರ್ಮಿಕ ಕಾರ್ಯಗಳಾದ ಜಾತ್ರೆ, ಮಹೋತ್ಸವಗಳು, ದೇವರ ಉತ್ಸವಗಳು, ದೇವಸ್ಥಾನಗಳು, ಧಾರ್ಮಿಕ ಸ್ಥಳಗಳ ಮೇಲಿನ ನಿರ್ಬಂಧ ಮುಂದುವರೆಯಲಿದೆ.ಇನ್ನು ರಾಜ್ಯದಲ್ಲಿಂದೂ ಕೊರೋನಾ ಆರ್ಭಟ ಮುಂದುವರೆದಿದ್ದು, 24 ಗಂಟೆಗಳ ಅವಧಿಯಲ್ಲಿ 32,218 ಪಾಸಿಟಿವ್​ ಪ್ರಕರಣಗಳು ಪತ್ತೆಯಾಗಿವೆ. ಒಂದೇ ದಿನ ರಾಜ್ಯಾದ್ಯಂತ ಬರೋಬ್ಬರಿ 353 ಮಂದಿ ಕೊರೋನಾಗೆ ಬಲಿಯಾಗಿದ್ದಾರೆ. ಇನ್ನು ಇಂದು 52,581 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ ಇಂದು 9,591 ಮಂದಿ ಕೋವಿಡ್​ ರಿಪೋರ್ಟ್​ ಪಾಸಿಟಿವ್​ ಬಂದಿದೆ. 26,956 ಕೊರೋನಾ ಸೋಂಕಿನಿಂದ ಗುಣಮುಖರಾಗಿದ್ದಾರೆ. ಜನ ಜವಾಬ್ದಾರಿ ಮರೆಯದೇ ಮಾಸ್ಕ್​​​ನ್ನು ಕಡ್ಡಾಯವಾಗಿ ಧರಿಸಬೇಕು ಹಾಗೂ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕಿದೆ. ಕೊರೋನಾ ವ್ಯಾಕ್ಸಿನ್​ ಪಡೆಯುವ ಮೂಲಕ ಕೊರೋನಾ ವಿರುದ್ಧದ ಯುದ್ಧದಲ್ಲಿ ಎಲ್ಲರೂ  ಕೈಜೋಡಿಸಬೇಕಿದೆ.
Published by: Kavya V
First published: May 21, 2021, 7:08 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories