ಇಂದು ಸಿಎಂ ನೇತೃತ್ವದಲ್ಲಿ ಸರ್ವಪಕ್ಷಗಳ ಸಭೆ; ಕೊರೋನಾ ತಡೆಗೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಮಹತ್ವದ ಚರ್ಚೆ

ಭಾನುವಾರ (ಮಾ.29) ಮಧ್ಯಾಹ್ನ 12 ಗಂಟೆಗೆ ವಿಧಾನಸೌಧದ 3ನೇ ಮಹಡಿ ಕೊಠಿಡಿ ಸಂಖ್ಯೆ 334ರಲ್ಲಿ ಸರ್ವ ಪಕ್ಷಗಳ ಮುಖಂಡರ ಸಭೆ ಕರೆಯಲಾಗಿದೆ. ಈ ಸಭೆಗೆ ತಾವುಗಳು ಆಗಮಿಸಿ, ಸಲಹೆ ಸೂಚನೆಗಳನ್ನು ನೀಡುವಂತೆ ಕೋರುತ್ತೇನೆ ಎಂದು ಸಿಎಂ ಬಿಎಸ್​ವೈ ಅವರು ಪತ್ರದಲ್ಲಿ ಮನವಿ ಮಾಡಿದ್ದಾರೆ.

ಸಿಎಂ ಬಿ.ಎಸ್​​ ಯಡಿಯೂರಪ್ಪ.

ಸಿಎಂ ಬಿ.ಎಸ್​​ ಯಡಿಯೂರಪ್ಪ.

  • Share this:
    ಬೆಂಗಳೂರು(ಮಾ.29): ಕೊರೋನಾ ವೈರಸ್​​ ದಿನದಿಂದ ದಿನಕ್ಕೆ ವ್ಯಾಪಕವಾಗಿ ಹರಡುತ್ತಿದೆ. ಈ ಹಿನ್ನೆಲೆಯಲ್ಲಿ ಕೋವಿಡ್-19 ನಿಯಂತ್ರಣಕ್ಕಾಗಿ ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚೆ ನಡೆಸಲು ಸಿಎಂ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಸರ್ವಪಕ್ಷಗಳ ಸಭೆ ನಡೆಯಲಿದೆ. ಇಂದು ವಿಧಾನಸೌಧದಲ್ಲಿ ಮಧ್ಯಾಹ್ನ 12 ಗಂಟೆಗೆ ಸಭೆ ಕರೆದಿರುವ ಸಿಎಂ ಬಿಎಸ್​ವೈ ಎಲ್ಲ ಪಕ್ಷಗಳ ಮುಖಂಡರು ಸಭೆಯಲ್ಲಿ ಭಾಗವಹಿಸಿ ಕೊರೋನಾ ವೈರಸ್​ ನಿಯಂತ್ರಣ ಸಂಬಂಧ ಸಲಹೆ ಮತ್ತು ಸೂಚನೆಗಳನ್ನು ನೀಡುವಂತೆ ಮನವಿ ಮಾಡಿಕೊಂಡಿದ್ದಾರೆ. ಅದರಂತೆಯೇ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಎಚ್​​.ಡಿ ಕುಮಾರಸ್ವಾಮಿ ಸೇರಿದಂತೆ ಹಲವರು ಭಾಗಿಯಾಗುವ ಸಾಧ್ಯತೆ ಇದೆ.

    ಕೋವಿಂಡ್​​-19 (ನೋವೆಲ್ ಕೊರೋನಾ) ವೈರಸ್ ವಿಶ್ವವ್ಯಾಪಿ ಲಕ್ಷಾಂತರ ಜನರಿಗೆ ಹರಡಿ ಹಲವಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಕರ್ನಾಟಕದಲ್ಲಿಯೂ ಕೋವಿಡ್-19 ಹಲವು ಜನರಿಗೆ ಹರಡಿರುವ ಪ್ರಕರಣಗಳು ಕಂಡು ಬಂದಿದೆ. ಇದರ ನಿಯಂತ್ರಣಕ್ಕಾಗಿ ಎಲ್ಲಾ ರೀತಿಯ ಅಗತ್ಯ ಕ್ರಮಗಳನ್ನು ತೆಗೆದಿಕೊಳ್ಳಲಾಗುತ್ತಿದೆ. ಲಾಕ್​ಡೌನ್ ವ್ಯವಸ್ಥೆ ಜಾರಿಯಲ್ಲಿ ಇರುವುದರಿಂಧ ರಾಜ್ಯದ ಜನರ ಹಿತದೃಷ್ಟಿಯಿಂದ ಎಲ್ಲಾ ಪಕ್ಷಗಳ ಮುಖಂಡರೊಂದಿಗೆ ಚರ್ಚಿಸಲು ತೀರ್ಮಾನಿಸಲಾಗಿದ್ದೇನೆ. ಕೋವಿಡ್-19 ನಿಯಂತ್ರಣಕ್ಕಾಗಿ ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತಾಗಿ ಚರ್ಚಿಸಲು ಭಾನುವಾರ (ಮಾ.29) ಮಧ್ಯಾಹ್ನ 12 ಗಂಟೆಗೆ ವಿಧಾನಸೌಧದ 3ನೇ ಮಹಡಿ ಕೊಠಿಡಿ ಸಂಖ್ಯೆ 334ರಲ್ಲಿ ಸರ್ವ ಪಕ್ಷಗಳ ಮುಖಂಡರ ಸಭೆ ಕರೆಯಲಾಗಿದೆ. ಈ ಸಭೆಗೆ ತಾವುಗಳು ಆಗಮಿಸಿ, ಸಲಹೆ ಸೂಚನೆಗಳನ್ನು ನೀಡುವಂತೆ ಕೋರುತ್ತೇನೆ ಎಂದು ಸಿಎಂ ಬಿಎಸ್​ವೈ ಅವರು ಪತ್ರದಲ್ಲಿ ಮನವಿ ಮಾಡಿದ್ದಾರೆ.

    ಇದನ್ನೂ ಓದಿ: ಸಾವಿರ ಗಡಿ ಸಮೀಪಿಸಿದ ಕೊರೋನಾ ಸೋಂಕಿತರ ಸಂಖ್ಯೆ; ನಿಲ್ಲದ ಮರಣಮೃದಂಗ

    ಕರ್ನಾಟಕದಲ್ಲಿ ಕೊರೋನಾ ವೈರಸ್​ ಅಟ್ಟಹಾಸ ಮುಂದುವರೆದಿದೆ. ನಿನ್ನೆ ಒಂದೇ ದಿನ ರಾಜ್ಯದಲ್ಲಿ ಹೊಸದಾಗಿ 12 ಕೋವಿಡ್​​-19 ಪಾಸಿಟಿವ್​​ ಕೇಸುಗಳು ಪತ್ತೆಯಾಗಿವೆ. ಆದ್ದರಿಂದಲೇ ಇಲ್ಲಿಯವರೆಗಿನ ಸೋಂಕಿತರ ಸಂಖ್ಯೆ 76ಕ್ಕೆ ಏರಿಯಾಗಿದೆ. ಈ ಪೈಕಿ ಹೆಚ್ಚು ಕೇಸುಗಳು ಬೆಂಗಳೂರಿನಲ್ಲೇ ಕಂಡು ಬಂದಿವೆ ಎಂದು ರಾಜ್ಯ ಸರ್ಕಾರ ಮಾಹಿತಿ ಬಿಡುಗಡೆ ಮಾಡಿದೆ.
    First published: