ಕೊರೋನಾ ಭೀತಿ ಹೆಚ್ಚಳ - ಕಲಾಪ ಮುಗಿಯುತ್ತಿದ್ದಂತೆಯೇ ಜಿಲ್ಲೆಗಳಿಗೆ ತೆರಳಿ ಎಂದು ಸಚಿವರಿಗೆ ಸಿಎಂ ತಾಕೀತು

ಸರ್ಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲನೆ ಮಾಡಲು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು. ಜಿಲ್ಲಾಡಳಿತದ ಜೊತೆಯಿದ್ದು ಕೆಲಸ ಮಾಡುವಂತೆ ಸಚಿವರಿಗೆ ಹಾಗೂ ಶಾಸಕರಿಗೆ ಸಿಎಂ ಎಚ್ಚರಿಕೆಯನ್ನು ನೀಡಿದ್ದಾರೆ.

ಸಿಎಂ ಬಿ.ಎಸ್​. ಯಡಿಯೂರಪ್ಪ

ಸಿಎಂ ಬಿ.ಎಸ್​. ಯಡಿಯೂರಪ್ಪ

 • Share this:
  ಬೆಂಗಳೂರು(ಮಾ.24) : ರಾಜ್ಯದಲ್ಲಿ ಕೊರೋನಾ ಭೀತಿ ಹೆಚ್ಚಳದ ಹಿನ್ನೆಲೆಯಲ್ಲಿ ವಿಧಾನಸಭೆ ಕಲಾಪ ಮುಗಿಯುತ್ತಿದ್ದಂತೆ ಸಚಿವರು ಸುಮ್ಮನೆ ಕೂರುವ ಹಾಗಿಲ್ಲ. ಪ್ರತಿ ಜಿಲ್ಲೆಯ ಜವಾಬ್ದಾರಿ ಆಯಾ ಜಿಲ್ಲಾ ಉಸ್ತುವಾರಿ ಸಚಿವರು ನೋಡಿಕೊಳ್ಳಬೇಕು ಎಂದು ಶಾಸಕರಿಗೆ ಹಾಗೂ ಸಚಿವರಿಗೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಖಡಕ್ ಸೂಚನೆಯನ್ನು ನೀಡಿದ್ದಾರೆ.

  ಆಯಾ ಜಿಲ್ಲಾಧಿಕಾರಿಗಳ ಜೊತೆಗೂಡಿ ಯುದ್ದೋಪಾದಿಯಲ್ಲಿ ಕೆಲಸ ಮಾಡಬೇಕು. ಜಿಲ್ಲೆಯಲ್ಲಿ ಕರೋನಾ ವೈರಸ್ ಹರಡದೇ ರೀತಿ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಮುಂದಾಗಬೇಕು. ಸರ್ಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲನೆ ಮಾಡಲು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು. ಜಿಲ್ಲಾಡಳಿತದ ಜೊತೆಯಿದ್ದು ಕೆಲಸ ಮಾಡುವಂತೆ ಸಚಿವರಿಗೆ ಹಾಗೂ ಶಾಸಕರಿಗೆ ಸಿಎಂ ಎಚ್ಚರಿಕೆಯನ್ನು ನೀಡಿದ್ದಾರೆ.

  ಆಯಾ ಜಿಲ್ಲೆಯ ಉಸ್ತುವಾರಿ ಸಂಪೂರ್ಣವಾಗಿ ಜಿಲ್ಲಾ ಉಸ್ತುವಾರಿ ಸಚಿವರ ಮೇಲೆ ಇರುತ್ತದೆ. ಪಕ್ಷದ ಶಾಸಕರು ತಮ್ಮ ತಮ್ಮ ಕ್ಷೇತ್ರಗಳಲ್ಲಿ ಇದ್ದು, ತಾಲೂಕು ಮಟ್ಟದಲ್ಲಿ ಅಧಿಕಾರಿಗಳ ಜೊತೆ ಕೊರೋನಾ ವೈರಸ್ ಕುರಿತಾಗಿ ಕೆಲಸ ಮಾಡಬೇಕು. ಇದರಲ್ಲಿ ಏನೇ ಅಗತ್ಯ ಇದ್ದರೂ ತಕ್ಷಣ ಜಿಲ್ಲಾ ಉಸ್ತುವಾರಿ ಸಚಿವರ ಗಮನಕ್ಕೆ ತರಬೇಕು. ಗ್ರಾಮೀಣ ಪ್ರದೇಶಗಳಿಗೆ ಕರೋನಾ ವೈರಸ್ ಹರಡದೇ ರೀತಿ ಮುಂಜಾಗ್ರತಾ ಕ್ರಮಕೈಗೊಂಡು ನಿಗಾ ಇಡುವಂತೆ ಹೇಳಿದ್ದಾರೆ.

   ಶುಕ್ರವಾರ ಸಚಿವ ಸಂಪುಟ ಸಭೆ:

  ರಾಜ್ಯದಲ್ಲಿ ಕೊರೋನಾ ಭೀತಿಯನ್ನು ಎದುರಿಸುವ ಸಂಬಂಧ ಸಿಎಂ ಯಡಿಯೂರಪ್ಪ ಇದೇ ಶುಕ್ರವಾರ (ಮಾ.27) ಮಹತ್ವದ ಸಚಿವ ಸಂಪುಟ ಸಭೆ ಕರೆದಿದ್ದಾರೆ. ಸಭೆಯಲ್ಲಿ ಕರೋನಾ ವೈರಸ್ ಕುರಿತಾಗಿ ಚರ್ಚೆ ನಡೆಲಿದ್ದು, ಪ್ರತಿ ಜಿಲ್ಲೆಯ ಮಾಹಿತಿ ಕ್ರೂಢಿಕರಿಸುವಂತೆ ಆಯಾ ಜಿಲ್ಲಾ ಉಸ್ತುವಾರಿ ಸಚಿವರಿಗೆ ಸಿಎಂ ಈಗಾಗಲೇ ಸೂಚನೆ ನೀಡಿದ್ದಾರೆ.

  ಇದನ್ನೂ ಓದಿ : ಕೊರೋನಾ ಎದುರಿಸಲು ರಾಜ್ಯ ಸರ್ಕಾರ ಸಂಪೂರ್ಣ ವಿಫಲ: ಎಸ್ ​ಆರ್​ ಪಾಟೀಲ್

  ಬೆಂಗಳೂರೊಂದರಲ್ಲೇ ಒಟ್ಟು 25 ಪ್ರಕರಣಗಳು ಪತ್ತೆಯಾಗಿದೆ. ಸೋಂಕು ತಗುಲಿದ್ದ ಒಬ್ಬರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಕಲಬುರ್ಗಿಯಲ್ಲಿ 3, ಕೊಡಗಿನಲ್ಲಿ 1, ಚಿಕ್ಕಬಳ್ಳಾಪುರದಲ್ಲಿ 3, ಮೈಸೂರಿನಲ್ಲಿ 2, ಧಾರವಾಡದಲ್ಲಿ 1 ಮತ್ತು ದಕ್ಷಿಣ ಕನ್ನಡದಲ್ಲಿ 1, ಉತ್ತರ ಕನ್ನಡದಲ್ಲಿ 2 ಪ್ರಕರಣ ಪತ್ತೆಯಾಗಿದೆ.

   
  First published: