HOME » NEWS » Coronavirus-latest-news » CM BS YEDIYURAPPA INAUGURATES VACCINE CAMPAIGN TODAY FOR ABOVE 18 YEARS LG

ವ್ಯಾಕ್ಸಿನ್​ ಲಭ್ಯವಿಲ್ಲ ಎಂದು ಹೇಳಿಕೊಂಡೇ ಇಂದು ಸಾಂಕೇತಿಕವಾಗಿ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿದ ಸಿಎಂ ಯಡಿಯೂರಪ್ಪ

ಲಸಿಕಾ ಅಭಿಯಾನದ ಬಳಿಕ ಮಾತನಾಡಿದ ಸಿಎಂ ಯಡಿಯೂರಪ್ಪ, ಲಕ್ಷ ಲಸಿಕೆ ಕೇಂದ್ರದಿಂದ ಲಭ್ಯವಾಗಿದೆ.  ನಮ್ಮ ಬಳಿಯೂ 1 ಲಕ್ಷ ಲಸಿಕೆ ಇದೆ. 2 ಕೋಟಿ ಲಸಿಕೆ ಖರೀದಿಗೆ ಈಗಾಗಲೇ ಚಾಲನೆ ನೀಡಲಾಗಿದೆ.  ಕೋವಿಡ್ ಅಲೆ ಸಾಕಷ್ಟು‌ ಪೀಡಿಸುತ್ತಿರುವ ಸಂದರ್ಭ ಇದಾಗಿದೆ. ಹೀಗಾಗಿ  ಕೇಂದ್ರ ಸರ್ಕಾರ ಸಾಕಷ್ಟು ಸಹಕಾರ ನೀಡುತ್ತಿದೆ. ಈ ಸಂದರ್ಭದಲ್ಲಿ ನಾನು  ಪ್ರಧಾನಿಗೆ ಅಭಿನಂದನೆ ಸಲ್ಲಿಸುವೆ ಎಂದು ಹೇಳಿದರು.

news18-kannada
Updated:May 1, 2021, 1:32 PM IST
ವ್ಯಾಕ್ಸಿನ್​ ಲಭ್ಯವಿಲ್ಲ ಎಂದು ಹೇಳಿಕೊಂಡೇ ಇಂದು ಸಾಂಕೇತಿಕವಾಗಿ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿದ ಸಿಎಂ ಯಡಿಯೂರಪ್ಪ
ಲಸಿಕಾ ಅಭಿಯಾನ
  • Share this:
ಬೆಂಗಳೂರು(ಮೇ 01): ನಿನ್ನೆ ಸಿಎಂ ಬಿಎಸ್ ಯಡಿಯೂರಪ್ಪ ಹಾಗೂ ಆರೋಗ್ಯ ಸಚಿವ ಸುಧಾಕರ್​ ಕರ್ನಾಟಕಕ್ಕೆ ಇನ್ನೂ ಸಹ ಕೊರೋನಾ ಲಸಿಕೆ ಬಂದಿಲ್ಲ. ಹೀಗಾಗಿ ನಾಳೆ 18-44 ವರ್ಷದವರಿಗೆ ಕೊರೋನಾ ಲಸಿಕೆ ನೀಡಲ್ಲ ಎಂದು ಹೇಳಿದ್ದರು. ಆದರೆ ಇಂದು ಅಚ್ಚರಿ ಎಂಬಂತೆ ಸಿಎಂ ಬಿಎಸ್ ಯಡಿಯೂರಪ್ಪ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ. ಹೌದು, ಲಸಿಕಾ ಕಂಪನಿಗಳಿಂದ ಇನ್ನೂ ಸಹ ಕೊರೋನಾ ಲಸಿಕೆ ಕರ್ನಾಟಕಕ್ಕೆ ಬಂದಿಲ್ಲ. ಹಾಗಾದ್ರೆ ಹೇಗೆ ಲಸಿಕಾ ಅಭಿಯಾನಕ್ಕೆ ಚಾಲನೆ ಹೇಗೆ ನೀಡಿದರು ಎಂಬ ಪ್ರಶ್ನೆಗೆ ಉತ್ತರ ಇಲ್ಲಿದೆ. ಕೇಂದ್ರ ಸರ್ಕಾರದ ಸೂಚನೆಯಂತೆ ಕೇಂದ್ರ ನೀಡಿರುವ ಲಸಿಕೆಯನ್ನು ರಾಜ್ಯ ಸರ್ಕಾರ ಆದ್ಯತೆಯ ಮೇರೆಗೆ ನೀಡುತ್ತಿದೆ. 

ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಲಸಿಕಾ ಅಭಿಯಾನಕ್ಕೆ ಸಿಎಂ ಯಡಿಯೂರಪ್ಪ ಚಾಲನೆ ನೀಡಿದರು.  18 ವರ್ಷದ ಮೇಲ್ಪಟ್ಟವರಿಗೆ‌ ಲಸಿಕೆ ನೀಡುವ ಕಾರ್ಯಕ್ಕೆ ಚಾಲನೆ ನೀಡಿದರು.  ಈ ವೇಳೆ ಸಚಿವ ಸುರೇಶ್ ಕುಮಾರ್, ಸಂಸದ‌ ಪಿ.ಸಿ.ಮೋಹನ್, ರಿಜ್ವಾನ್‌ ಹರ್ಷದ್ ಸೇರಿ ಬಿಬಿಎಂಪಿ ಅಧಿಕಾರಿಗಳು ಇದ್ದರು.




ಟ್ವೀಟ್ ಮಾಡಿರುವ ಸಿಎಂ ಬಿಎಸ್​ವೈ, ಕೊರೋನಾ ವಿರುದ್ಧ ಲಸಿಕೆಯೇ ನಮ್ಮ ಸುರಕ್ಷಾ ಕವಚವಾಗಿದೆ. ಕರ್ನಾಟಕದಲ್ಲಿ ಕೇಂದ್ರ ಸರ್ಕಾರದ ಸೂಚನೆಗಳಂತೆ, ಆದ್ಯತೆಯ ಮೇರೆಗೆ ಲಸಿಕೆ ನೀಡಲಾಗುತ್ತಿದೆ. ಅರ್ಹರು ನೋಂದಣಿ ಮಾಡಿಸಿಕೊಂಡು, ತಮ್ಮ ಸರದಿ ಬಂದಾಗ ತಪ್ಪದೇ ಲಸಿಕೆ ಪಡೆಯಿರಿ. ಸರ್ಕಾರದೊಂದಿಗೆ ಸಹಕರಿಸಿ, ಎಲ್ಲಾ ಸುರಕ್ಷತಾ ನಿಯಮಗಳನ್ನು ತಪ್ಪದೇ ಪಾಲಿಸಿ ಎಂದು ಟ್ವೀಟ್​ ಮುಖಾಂತರ ಮನವಿ ಮಾಡಿದ್ದಾರೆ.


Coronavirus India Updates: ದೇಶದಲ್ಲಿ 4 ಲಕ್ಷಕ್ಕೂ ಹೆಚ್ಚು ಕೊರೋನಾ ಪ್ರಕರಣಗಳು ಪತ್ತೆ

ಲಸಿಕಾ ಅಭಿಯಾನದ ಬಳಿಕ ಮಾತನಾಡಿದ ಸಿಎಂ ಯಡಿಯೂರಪ್ಪ,  18ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡುವ ಕಾರ್ಯಕ್ಕೆ ಸಾಂಕೇತಿಕ ಚಾಲನೆ ನೀಡಿದ್ದೇವೆ. ಕೋವಿಡ್ ವಿರುದ್ಧದ ಸಮರದಲ್ಲಿ ಮಹತ್ವದ ದಿನ ಇದು. ಇಂದು ಲಸಿಕೆ ನೀಡುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ರಾಜ್ಯ ಸರ್ಕಾರದಿಂದ ಉಚಿತವಾಗಿ ಲಸಿಕೆ ನೀಡಲಾಗುತ್ತದೆ. 3 ಲಕ್ಷ ಲಸಿಕೆ ಕೇಂದ್ರದಿಂದ ಲಭ್ಯವಾಗಿದೆ.  ನಮ್ಮ ಬಳಿಯೂ 1 ಲಕ್ಷ ಲಸಿಕೆ ಇದೆ. 2 ಕೋಟಿ ಲಸಿಕೆ ಖರೀದಿಗೆ ಈಗಾಗಲೇ ಚಾಲನೆ ನೀಡಲಾಗಿದೆ.  ಕೋವಿಡ್ ಅಲೆ ಸಾಕಷ್ಟು‌ ಪೀಡಿಸುತ್ತಿರುವ ಸಂದರ್ಭ ಇದಾಗಿದೆ. ಹೀಗಾಗಿ  ಕೇಂದ್ರ ಸರ್ಕಾರ ಸಾಕಷ್ಟು ಸಹಕಾರ ನೀಡುತ್ತಿದೆ. ಈ ಸಂದರ್ಭದಲ್ಲಿ ನಾನು  ಪ್ರಧಾನಿಗೆ ಅಭಿನಂದನೆ ಸಲ್ಲಿಸುವೆ ಎಂದು ಹೇಳಿದರು.

ಮುಂದುವರೆದ ಅವರು,   ಖಾಸಗಿ ಆಸ್ಪತ್ರೆಯಲ್ಲಿ ಲಸಿಕೆಗೆ ದರ ನಿಗದಿ ಪಡಿಸಲಾಗಿದೆ ನಿಗದಿಪಡಿಸಿದ ದರಕ್ಕಿಂತ ಹೆಚ್ಚು ಬೆಲೆ‌ ತೆಗೆದುಕೊಳ್ಳುವಂತಿಲ್ಲ. ಸಾಮಾಜಿಕ ಅಂತರ, ಮಾಸ್ಕ್ ಧರಿಸಿ ಎಂದು ಮನವಿ ಮಾಡಿದರು.

ರೆಮಿಡಿಸಿವಿರ್ ಲಸಿಕೆಯನ್ನು ಕಾಳಸಂತೆಯಲ್ಲಿ ಮಾರಾಟ ಮಾಡುವವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು.  ಕ್ರಿಮಿನಲ್ ‌ಮೊಕದ್ದಮೆ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ.  ಯಾರೇ‌ ಹೆಚ್ಚು ಬೆಲೆಗೆ ಮಾರಾಟ ಮಾಡಿದರೆ ನನ್ನ ಗಮನಕ್ಕೆ ತನ್ನಿ. ಅಂತವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.
Youtube Video

ಇನ್ನು,  ಖಾಸಗಿ ಆಸ್ಪತ್ರೆಗಳು ಬೆಡ್ ನೀಡದ ಆರೋಪಕ್ಕೆ ನಾನೇ ಇಂದು ಸಂಜೆ ಸಭೆ ನಡೆಸಲಿದ್ದೇನೆ. ಎಲ್ಲಾ ವ್ಯವಸ್ಥೆ ಮಾಡಲು ಸೂಚನೆ ಕೊಡುತ್ತೇನೆ. ಈಗ 40 ಲಕ್ಷ ಲಸಿಕೆ ಇದೆ, ಮುಂದೆ ಸ್ಟಾಕ್ ಬರಲಿದೆ ಎಂದು ಹೇಳಿದರು.
Published by: Latha CG
First published: May 1, 2021, 1:25 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories