‘ ಕೋವಿಡ್​​-19 ಲಾಕ್​ಡೌನ್​​ನಿಂದ ತತ್ತರಿಸಿದ ಪ್ರವಾಸೋದ್ಯಮ ಪುನಶ್ಚೇತನಕ್ಕೆ ಸರ್ಕಾರ ಬದ್ಧ’ - ಬಿಎಸ್​ವೈ ವಿಶ್ವಾಸ

ರಾಜ್ಯಕ್ಕೆ ಪ್ರವಾಸಿಗರನ್ನು ಆಕರ್ಷಿಸುವ, ಅತ್ಯುತ್ತಮ ಪ್ರವಾಸಿ ಗಮ್ಯವಾಗಿಸುವ ನಿಟ್ಟಿನಲ್ಲಿ ಎಲ್ಲ ಪಾಲುದಾರರೂ ಕೈಜೋಡಿಸಬೇಕು. ಪ್ರವಾಸೋದ್ಯಮ ಪುನಶ್ಚೇತನಕ್ಕೆ ರಾಜ್ಯ ಸರ್ಕಾರ ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳಲಿದ್ದು, ಕಾರವಾನ್ ಪ್ರವಾಸೋದ್ಯಮ ಇದಕ್ಕೆ ಪೂರಕವಾಗಲಿದೆ ಎಂದು ಆಶಿಸುತ್ತೇನೆ ಎಂದರು.

news18-kannada
Updated:June 17, 2020, 1:26 PM IST
‘ ಕೋವಿಡ್​​-19 ಲಾಕ್​ಡೌನ್​​ನಿಂದ ತತ್ತರಿಸಿದ ಪ್ರವಾಸೋದ್ಯಮ ಪುನಶ್ಚೇತನಕ್ಕೆ ಸರ್ಕಾರ ಬದ್ಧ’ - ಬಿಎಸ್​ವೈ ವಿಶ್ವಾಸ
ಕಾರವಾನ್ ಮಿನಿ ಬಸ್‌ಗೆ ಚಾಲನೆ ನೀಡಿದ ಮುಖ್ಯಮಂತ್
  • Share this:
ಬೆಂಗಳೂರು(ಜೂ.17): ಇಂದು ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪನವರು ಸ್ಮಾರ್ಟ್​ ಆ್ಯಪ್ ಯೋಜನೆಯಡಿ ಕಾರವಾನ್‌ ಪ್ರವಾಸೋದ್ಯಮದ ಉತ್ತೇಜನಕ್ಕಾಗಿ ಅಭಿವೃದ್ಧಿಪಡಿಸಿದ ಹೊಸ ಕಾರವಾನ್​​ಗಳಿಗೆ ಗ್ರೀನ್​​ ಸಿಗ್ನಲ್​​ ತೋರುವ ಮೂಲಕ ಚಾಲನೆ ನೀಡಿದರು. ಬಳಿಕ ಸುದ್ದಿಗಾರರ ಜತೆ ಮಾತಾಡಿದ ಸಿಎಂ, ಪ್ರವಾಸೋದ್ಯಮ ಅತಿ ಹೆಚ್ಚು ಉದ್ಯೋಗಗಳನ್ನು ಸೃಜಿಸುವ ಉದ್ಯಮವಾಗಿದೆ. ಕೋವಿಡ್-19ರ ಹಿನ್ನೆಲೆಯಲ್ಲಿ ಪ್ರವಾಸೋದ್ಯಮಕ್ಕೆ ಭಾರಿ ಹಿನ್ನಡೆ ಉಂಟಾಗಿರುವುದು ಸರ್ವವೇದ್ಯವಾಗಿದೆ. ಈ ಸನ್ನಿವೇಶದಲ್ಲಿ ನಿರುದ್ಯೋಗ ನಿವಾರಣೆಯ ದಿಕ್ಕಿನಲ್ಲಿ ಪ್ರವಾಸೋದ್ಯಮಕ್ಕೆ ಚೇತರಿಕೆ ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಭರವಸೆ ನೀಡಿದರು.

ರಾಜ್ಯದ ಜಿ.ಡಿ.ಪಿ.ಗೆ ಪ್ರವಾಸೋದ್ಯಮದ ಕೊಡುಗೆ ಶೇಕಡಾ 14 ರಷ್ಟಿದ್ದು, ಮುಂದಿನ ದಿನಗಳಲ್ಲಿ ಈ ಗುರಿಯನ್ನು ಹೆಚ್ಚಿಸುವ ಗುರಿ ಹೊಂದಲಾಗಿದೆ. ಕೋವಿಡ್-19ರ ನಂತರದ ದಿನಗಳಲ್ಲಿ ರಾಜ್ಯದಲ್ಲಿ ಪ್ರವಾಸೋದ್ಯಮವನ್ನು ಪುನಶ್ಚೇತನಗೊಳಿಸಲು ಸರ್ಕಾರ ಮುಂದಾಗಿದೆ. ಇದರ ಭಾಗವಾಗಿ ಕಾರವಾನ್ (ಮಿನಿ ಬಸ್) ಪ್ರವಾಸೋದ್ಯಮಕ್ಕೆ ಇಂದು ಚಾಲನೆ ನೀಡಲಾಗಿದೆ ಎಂದು ಯಡಿಯೂರಪ್ಪ.

ಕಾರವಾನ್ ಪ್ರವಾಸೋದ್ಯಮ ಪರಿಕಲ್ಪನೆಯು ಸ್ವತಂತ್ರ ತಿರುಗಾಟದ ಅನುಭವಕ್ಕಾಗಿ ಅತ್ಯಂತ ಜನಪ್ರಿಯವಾಗಿದೆ. ಪ್ರವಾಸದ ಅವಧಿಯಲ್ಲಿ ಸೂಕ್ತ ರಕ್ಷಣೆ, ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಲು ಕಾರವಾನನಲ್ಲಿ ಪ್ರವಾಸ ಕೈಗೊಳ್ಳುವುದು ಸೂಕ್ತವಾಗಿದೆ. ಕಾರವಾನ್‍ಗಳ ನಿಲುಗಡೆಗೆ ಪ್ರಾಥಮಿಕ ಹಂತದಲ್ಲಿ ರಾಜ್ಯ ಸರ್ಕಾರದ ಸಂಸ್ಥೆಗಳಾದ ಅರಣ್ಯ ವಸತಿ ಮತ್ತು ವಿಹಾರಧಾಮ ಹಾಗೂ ಕೆ.ಎಸ್.ಟಿ.ಡಿ.ಸಿ ಘಟಕಗಳ ಆವರಣದಲ್ಲಿ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದು ಹೇಳಿದರು.

ಇದನ್ನೂ ಓದಿ: ಕೊರೋನಾ ಎಫೆಕ್ಟ್​: ಬೀದರ್​​ನಲ್ಲಿ ಕೂಲಿ ಮಾಡುತ್ತಿರುವ ಎಂಬಿಎ ಮತ್ತು ಇಂಜಿನಿಯರಿಂಗ್​​ ಪದವೀಧರರು

ಪ್ರಾಥಮಿಕ ಹಂತದಲ್ಲಿ ಹಂಪಿ, ಗೋಕರ್ಣ, ಬಾದಾಮಿ, ಕುದುರೆಮುಖ, ಸಕಲೇಶಪುರ, ಬೇಲೂರು, ಹಳೇಬೀಡು, ಸಕ್ರೆಬೈಲು ಹಾಗೂ ಕೊಡಗು ಪ್ರವಾಸಿ ತಾಣಗಳಲ್ಲಿ ಕಾರವಾನ್‍ಗಳನ್ನು ನಿಯೋಜಿಸಲಾಗುವುದು. ರಾಜ್ಯದ ನೂತನ ಪ್ರವಾಸಿ ನೀತಿಯನ್ವಯ ಇನ್ನೂ ಹೆಚ್ಚಿನ ಪ್ರವಾಸಿ ತಾಣಗಳಲ್ಲಿ ಕಾರವಾನ್ ಪ್ರವಾಸೋದ್ಯಮವನ್ನು ಪ್ರೋತ್ಸಾಹಿಸಲಾಗುವುದು ಎಂದು ಹೇಳಿದರು.

ಕಳೆದ ವಾರವಷ್ಟೇ ಪ್ರವಾಸೋದ್ಯಮ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯನ್ನು ಕರೆದು ಪ್ರವಾಸೋದ್ಯಮ ಅಭಿವೃದ್ಧಿ ಕುರಿತಂತೆ ಚರ್ಚಿಸಲಾಗಿದೆ. ಕೋವಿಡ್-19ನಿಂದಾಗಿ ಪ್ರವಾಸೋದ್ಯಮ ವಲಯದಲ್ಲಿ ಸುಮಾರು 15 ಸಾವಿರ ಕೋಟಿ ರೂ. ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ. ರಾಜ್ಯದ ಪ್ರವಾಸಿ ತಾಣಗಳನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ 20 ಪ್ರಮುಖ ತಾಣಗಳ ಸಮಗ್ರ ಅಭಿವೃದ್ಧಿಗೆ ಯೋಜನಾ ವರದಿ ಸಿದ್ಧವಾಗಿದ್ದು, ಇವುಗಳನ್ನು ಹಂತ ಹಂತವಾಗಿ ಜಾರಿಗೊಳಿಸಲು ಸೂಚನೆ ನೀಡಿದ್ದೇನೆ ಎಂದರು.
ರಾಜ್ಯಕ್ಕೆ ಪ್ರವಾಸಿಗರನ್ನು ಆಕರ್ಷಿಸುವ, ಅತ್ಯುತ್ತಮ ಪ್ರವಾಸಿ ಗಮ್ಯವಾಗಿಸುವ ನಿಟ್ಟಿನಲ್ಲಿ ಎಲ್ಲ ಪಾಲುದಾರರೂ ಕೈಜೋಡಿಸಬೇಕು. ಪ್ರವಾಸೋದ್ಯಮ ಪುನಶ್ಚೇತನಕ್ಕೆ ರಾಜ್ಯ ಸರ್ಕಾರ ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳಲಿದ್ದು, ಕಾರವಾನ್ ಪ್ರವಾಸೋದ್ಯಮ ಇದಕ್ಕೆ ಪೂರಕವಾಗಲಿದೆ ಎಂದು ಆಶಿಸುತ್ತೇನೆ ಎಂದರು.

ಈ ವೇಳೆ ಮುಖ್ಯಮಂತ್ರಿಯವರೊಂದಿಗೆ ಪ್ರವಾಸೋದ್ಯಮ ಸಚಿವ ಸಿ.ಟಿ ರವಿ, ಡಿಸಿಎಂ ಡಾ. ಸಿ.ಎನ್ ಅಶ್ವತ್ಥ ನಾರಾಯಣ ಮತ್ತಿತರರು ಇದ್ದರು.
First published: June 17, 2020, 1:24 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading