news18-kannada Updated:June 2, 2020, 7:27 AM IST
ಸಿಎಂ ಬಿ.ಎಸ್ ಯಡಿಯೂರಪ್ಪ.
ಬೆಂಗಳೂರು(ಜೂ.02): ರಾಜ್ಯದಲ್ಲಿ ಮಾರಕ ಕೊರೋನಾ ವೈರಸ್ ಆರ್ಭಟ ಮುಂದುವರಿದಿದೆ. ಈಗಾಗಲೇ ಕೇಂದ್ರದ ಮಾರ್ಗಸೂಚಿ ಮೇರೆಗೆ ಸಿಎಂ ಬಿ.ಎಸ್ ಯಡಿಯೂರಪ್ಪ ನೇತೃತ್ವದ ಸರ್ಕಾರ ರಾಜ್ಯದಲ್ಲಿ ಲಾಕ್ಡೌನ್ ಸಡಿಲಗೊಳಿಸಿದೆ. ಈ ಬೆನ್ನಲ್ಲೀಗ ಕೋವಿಡ್-19 ಲಾಕ್ಡೌನ್ನಿಂದ ರಾಜ್ಯಕ್ಕಾದ ಲಾಭ ಮತ್ತು ನಷ್ಟದ ಬಗ್ಗೆ ತಿಳಿಯಲು ಯಡಿಯೂರಪ್ಪ ಮುಂದಾಗಿದ್ದಾರೆ. ಆದ್ದರಿಂದಲೇ ಇಂದು ಎಲ್ಲಾ ಜಿಲ್ಲಾಧಿಕಾರಿಗಳು, ಪೊಲೀಸ್ ವರಿಷ್ಠಾಧಿಕಾರಿಗಳು ಹಾಗೂ ಸಿಇಒಗಳ ಜತೆ ಸಿಎಂ ವೀಡಿಯೋ ಕಾನ್ಫರೆನ್ಸ್ ನಡೆಸಲಿದ್ದಾರೆ.
ಇಂದು ಬೆಳಿಗ್ಗೆ 10.30ಕ್ಕೆ ಮುಖ್ಯಮಂತ್ರಿಗಳ ಅಧಿಕೃತ ಗೃಹ ಕಚೇರಿ ಕೃಷ್ಣಾದಲ್ಲಿ ವೀಡಿಯೋ ಕಾನ್ಪೆರೆನ್ಸ್ ನಡೆಯಲಿದೆ. ಪ್ರಮುಖವಾಗಿ ಲಾಕ್ಡೌನ ಸಡಿಲಿಕೆ ನಂತರ ಆಗಿರುವ ಲಾಭದ ಬಗ್ಗೆ ಸಿಎಂ ರಾಜ್ಯದ ಅಧಿಕಾರಿಗಳಿಂದ ಮಾಹಿತಿ ಪಡೆಯಲಿದ್ದಾರೆ. ಕೊವೀಡ್ ಹೆಚ್ಚಿರುವ ಜಿಲ್ಲೆಗಳ ಅಧಿಕಾರಿಗಳ ಜೊತೆ ವೀಡಿಯೋ ಕಾನ್ಪೆರೆನ್ಸ್ ನಡೆಸಲಿರುವ ಸಿಎಂ ಯಡಿಯೂರಪ್ಪ, ಜಿಲ್ಲೆಯ ವಾಸ್ತಗತೆ ಬಗ್ಗೆ ತಿಳಿಯಲಿದ್ದಾರೆ.
ಈಗಾಗಲೇ ಹಲವು ಜಿಲ್ಲೆಗಳಲ್ಲಿ ಕೊರೋನಾ ಅಟ್ಟಹಾಸ ಮುಂದುವರೆದಿದೆ. ಹೀಗಾಗಿ ಆ ಜಿಲ್ಲೆಗಳಲ್ಲಿ ಯಾವ ರೀತಿ ಕೊರೋನಾ ನಿಯಂತ್ರಣ ಮಾಡಬೇಕು. ಈಗಾಗಲೇ ಜಿಲ್ಲೆಯಲ್ಲಿ ಎಷ್ಟು ಕೊರೋನಾ ನಿಯಂತ್ರಣ ಆಗಿದೆ. ಕೊರೋನಾದಿಂದ ಜಿಲ್ಲೆಯಲ್ಲಿ ಸಂಭವಿಸಿದ ಹಾನಿಯ ಬಗ್ಗೆ ಸಿಎಂ ಚರ್ಚೆ ನಡೆಸಲಿದ್ದಾರೆ.
ಹೊರ ರಾಜ್ಯಗಳಿಂದ ಎಷ್ಟು ಜನರು ಜಿಲ್ಲೆಗೆ ಬಂದಿದ್ದಾರೆ. ಅವರನ್ನು ಕ್ವಾರಂಟೇನ್ ಮಾಡಿರುವುದು ಹಾಗೂ ಜಿಲ್ಲೆಯ ಕೊರೋನಾ ಪಾಸಿಟಿವ್ ಬಗ್ಗೆ ಮಾಹಿತಿ ಪಡೆಯಲಿದ್ದಾರೆ. ಇನ್ನೂ ಕೊರೋನಾದಿಂದ ಸರ್ಕಾರಿ ಕಾರ್ಯಕ್ರಮಗಳು ಜನರಿಗೆ ತಲುಪುತ್ತಿಲ್ಲ. ಜೊತೆಗೆ ಜಿಲ್ಲೆಯ ಅಭಿವೃದ್ಧಿ ಗಳು ಕೂಡ ಆಗುತ್ತಿಲ್ಲ. ಹೀಗಾಗಿ ಏನೇನು ಅಭಿವೃದ್ಧಿ ಮಾಡಬೇಕು ಎಂಬ ಬಗ್ಗೆಯೂ ಮಾತುಕತೆ ಆಗಲಿದೆ.
ಜಿಲ್ಲೆಗಳಿಗೆ ಏನೆಲ್ಲಾ ಕಾರ್ಯಕ್ರಮ ರೂಪಿಸಬೇಕು. ಲಾಕ್ಡೌನ್ ಸಂದರ್ಭದಲ್ಲಿ ಸರ್ಕಾರ ಘೋಷಿಸಿದ ಕಾರ್ಯಕ್ರಮಗಳು ಜನರಿಗೆ ತಲುಪಿಸುವುದು. ಮಧ್ಯಮ ಬಡ, ಕೂಲಿ ಕಾರ್ಮಿಕರಿಗೆ ಸರ್ಕಾರದಿಂದ ಘೋಷಣೆ ಯಾಗಿರುವ ಕಾರ್ಯಕ್ರಮಗಳನ್ನು ತಲುಪಿಸುವ ಬಗ್ಗೆ ಮಹತ್ವದ ಚರ್ಚೆ ನಡೆಸಲಿದ್ದಾರೆ.
ಒಟ್ಟಾರೆ ಲಾಕ್ ಡೌನ್ ಸಡಿಲಿಕೆ ಬಳಿಕ ಮೊದಲ ಬಾರಿಗೆ ಸಿಎಂ ಬಿಎಸ್ವೈ ಅವರ ವೀಡಿಯೋ ಕಾನ್ಫರೆನ್ಸ್ ಇದಾಗಿದ್ದು, ಅತ್ಯಂತ ಮಹತ್ವ ಪಡೆದಿದೆ. ಇನ್ನೂ ಸಿಎಂ ಯಡಿಯೂರಪ್ಪ, ಸದ್ಯ ಜಿಲ್ಲೆಯಲ್ಲಿ ವಸ್ತುಸ್ಥಿತಿಯನ್ನು ಅರಿತು, ಕೊರೋನಾ ತಡೆಗೆ ಮತ್ತಷ್ಟು ಕ್ರಮಗಳ ಬಗ್ಗೆ ಸೂಚನೆ ಕೊಡಲಿದ್ದಾರೆ.
First published:
June 2, 2020, 7:27 AM IST