HOME » NEWS » Coronavirus-latest-news » CM BS YEDIYURAPPA MEETING WITH PRIVATE HOSPITAL CHIEFS OVER ON COVID RHHSN

CM BSY | ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರೊಂದಿಗೆ ಸಿಎಂ ಬಿಎಸ್​ವೈ ನಡೆಸಿದ ಸಭೆಯ ಪ್ರಮುಖಾಂಶಗಳೇನು?

ಕೋವಿಡ್ ಕರ್ತವ್ಯದಲ್ಲಿ ತೊಡಗಿರುವ ವೈದ್ಯರು/ವೈದ್ಯಕೀಯ ಸಿಬ್ಬಂದಿಗಳು ಸೋಂಕಿತರಾದಲ್ಲಿ ಅವರಿಗೆ ಸರ್ಕಾರಿ ವೆಚ್ಚದಲ್ಲಿ ಚಿಕಿತ್ಸೆ ನೀಡಲು ಕ್ರಮ ಕೈಗೊಳ್ಳುವುದು ಹಾಗೂ ಅಂತಿಮ ವರ್ಷದ ವೈದ್ಯಕೀಯ ವಿದ್ಯಾರ್ಥಿಗಳನ್ನು ಕೋವಿಡ್ ಚಿಕಿತ್ಸೆಗೆ ಬಳಸಿಕೊಂಡಲ್ಲಿ  ಅವರಿಗೆ ಆದ್ಯತೆಯ ಮೇಲೆ ಕೋವಿಡ್ ಲಸಿಕೆ ನೀಡಲು ಕ್ರಮ ಕೈಗೊಳ್ಳುವ ನಿರ್ಧಾರ ಸೇರಿ ಹಲವು ನಿರ್ಣಯಗಳನ್ನು ಸಭೆಯಲ್ಲಿ ತೆಗೆದುಕೊಳ್ಳಲಾಯಿತು.

news18-kannada
Updated:May 1, 2021, 7:11 PM IST
CM BSY | ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರೊಂದಿಗೆ ಸಿಎಂ ಬಿಎಸ್​ವೈ ನಡೆಸಿದ ಸಭೆಯ ಪ್ರಮುಖಾಂಶಗಳೇನು?
ಸಿಎಂ ಅಧ್ಯಕ್ಷತೆಯಲ್ಲಿ ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರೊಂದಿಗೆ ನಡೆದ ಸಭೆ.
  • Share this:
ಬೆಂಗಳೂರು: ಸಿಎಂ ಬಿಎಸ್ ಯಡಿಯೂರಪ್ಪ ಅವರು ಇಂದು ಸಂಜೆ ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರೊಂದಿಗೆ ಸಭೆ ನಡೆಸಿದರು. ಸಭೆಯಲ್ಲಿ ಡಿಸಿಎಂ ಅಶ್ವತ್ಥ್ ನಾರಾಯಣ, ಆರೋಗ್ಯ ಸಚಿವ ಡಾ. ಕೆ. ಸುಧಾಕರ್, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಹಾಗೂ ಪ್ರಮುಖ ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರಾದ ಡಾ. ಸುದರ್ಶನ ಬಲ್ಲಾಳ್, ಡಾ.ಜಯರಾಂ, ಡಾ.ಶಂಕರಲಿಂಗೇಗೌಡ, ಡಾ.ದೇವಿಶೆಟ್ಟಿ ಸೇರಿ ಇನ್ನಿತರರು ಉಪಸ್ಥಿತರಿದ್ದರು. ಸಭೆಯಲ್ಲಿ ಕೋವಿಡ್ ರೋಗಿಗಳಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಮೀಸಲಿಡಬೇಕಾದ ಹಾಸಿಗೆ, ಕೋವಿಡ್ ಚಿಕಿತ್ಸೆ, ನಿಯಂತ್ರಣಕ್ಕೆ ತೆಗೆದುಕೊಳ್ಳಬೇಕಾದ ವಿಚಾರವಾಗಿ ಚರ್ಚೆ ನಡೆಸಲಾಯಿತು. 

ಸಭೆಯ ಮುಖ್ಯಾಂಶಗಳು ಹೀಗಿವೆ?


  • ಆಕ್ಸಿಜನ್ ಕಾನ್ಸನ್ಟ್ರೇಟರ್​ಗಳನ್ನು ಬಳಸಿಕೊಂಡು ಹೋಟೆಲ್​ಗಳನ್ನು ಆಕ್ಸಿಜನೇಟೆಡ್ ಬೆಡ್ ಮಾದರಿಯ ಸ್ಟೆಪ್ ಡೌನ್ ಕೋವಿಡ್ ಆಸ್ಪತ್ರೆಗಳನ್ನಾಗಿ ಪರಿವರ್ತಿಸಲು ಕ್ರಮ ಕೈಗೊಳ್ಳುವುದು.

  • ಸೆಂಟ್ರಲೈಜ್ಡ್ ಆಕ್ಸಿಜನೇಷನ್ ವ್ಯವಸ್ಥೆ ಇರುವ ಬೆಡ್​ಗಳನ್ನು ಐ.ಸಿ.ಯು. ಬೆಡ್​ಗಳನ್ನಾಗಿ ಪರಿವರ್ತಿಸಲು ಕ್ರಮ ಕೈಗೊಳ್ಳುವುದು.

  • ವೈದ್ಯಕೀಯ ಮಾನವ ಸಂಪನ್ಮೂಲ ಕೊರತೆ ನೀಗಿಸಲು ಅಂತಿಮ ವರ್ಷದ ವೈದ್ಯಕೀಯ ಮತ್ತು ನರ್ಸಿಂಗ್ ವಿದ್ಯಾರ್ಥಿಗಳನ್ನು ಗ್ರೇಸ್ ಅಂಕಗಳನ್ನು ನೀಡಿ ಕೋವಿಡ್ ಚಿಕಿತ್ಸೆಗೆ ಬಳಸಿಕೊಳ್ಳಲು ಕ್ರಮ ಕೈಗೊಳ್ಳುವುದು. ಇದಕ್ಕೆ ಸಹಕಾರಿಯಾಗಿ ಅಂತಿಮ ವರ್ಷದ ಪರೀಕ್ಷೆಗಳನ್ನು ಮುಂದೂಡಲಾಗಿದ್ದು ಮತ್ತು ಸೂಕ್ತ ಇನ್ಸೆಂಟಿವ್​ ನೀಡಲು ಕ್ರಮ ಕೈಗೊಳ್ಳುವುದು.

  • ನರ್ಸಿಂಗ್ ಕೋರ್ಸ್​ಗಳ, ಫಾರ್ಮಸಿ ಕೋರ್ಸ್​ಗಳ, ಫಿಜಿಯೋಥೆರಪಿ ಕೋರ್ಸ್​ಸಳ, ಆಯುಷ್ ವೈದ್ಯ ಕೋರ್ಸ್​ಗಳ, ದಂತ ವೈದ್ಯಕೀಯ ಕೋರ್ಸ್​ಗಳ ಹಾಗೂ ಹಾಸ್ಪಿಟಲ್ ಮ್ಯಾನೇಜ್ಮೆಂಟ್ ಕೋರ್ಸ್​ಗಳ ಅಂತಿಮ ವರ್ಷದ ವಿದ್ಯಾರ್ಥಿಗಳನ್ನು ಕೋವಿಡ್ ಚಿಕಿತ್ಸೆಗೆ ಬಳಸಿಕೊಳ್ಳುವುದು.
  • ವಿದೇಶಗಳಲ್ಲಿ ವೈದ್ಯಕೀಯ ಪದವಿ ಮುಗಿಸಿರುವ ವಿದ್ಯಾರ್ಥಿಗಳನ್ನು ಕೋವಿಡ್ ಚಿಕಿತ್ಸೆಗೆ ಬಳಸಿಕೊಳ್ಳಲು ಅನುಕೂಲವಾಗುವಂತೆ ಕರ್ನಾಟಕ ಮೆಡಿಕಲ್ ಕೌನ್ಸಿಲ್​ನಲ್ಲಿ ನೋಂದಣಿ ಮಾಡಿಸಿ ಅವರನ್ನು ಬಳಸಿಕೊಳ್ಳಲು ಕ್ರಮ ಕೈಗೊಳ್ಳಲು ಪರಿಶೀಲಿಸುವುದು.

  • ಆಸ್ಪತ್ರೆಗಳಲ್ಲಿ ಚಿಕಿತ್ಸೆ ಅಗತ್ಯವಿಲ್ಲದ ರೋಗ ಲಕ್ಷಣರಹಿತ ಸೋಂಕಿತರು ಆಸ್ಪತ್ರೆಗಳಲ್ಲಿ ದಾಖಲಾಗುತ್ತಿದ್ದು, ಇದನ್ನು ಕಡಿಮೆಗೊಳಿಸಲು ಟ್ರಯಾಜಿಂಗ್ ಮಾಡಿ ಅಗತ್ಯವಿದ್ದವರನ್ನು ಮಾತ್ರ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಿ ಉಳಿದ ಲಕ್ಷಣರಹಿತ ಸೋಂಕಿತರನ್ನು ಮನೆಯಲ್ಲಿಯೇ ಐಸೋಲೇಷನ್ ಮಾಡಿ ಚಿಕಿತ್ಸೆ ಮುಂದುವರೆಸಲು ಖಾಸಗಿ ಆಸ್ಪತ್ರೆಗಳ ಸಹಭಾಗಿತ್ವದಲ್ಲಿ ಟೆಲಿ ಮೆಡಿಸಿನ್ ಸೌಲಭ್ಯವನ್ನು ಬಲಪಡಿಸುವುದು.

  • ವೈದ್ಯಕೀಯ ಕಾಲೇಜುಗಳ ಹಾಸ್ಟೇಲ್​ಗಳ ಸಾಮಾನ್ಯ ಬೆಡ್​ಗಳನ್ನು ಆಕ್ಸಿಜನೇಟೆಡ್ ಬೆಡ್​ಗಳಾಗಿ ಪರಿವರ್ತಿಸಲು ಕ್ರಮ ಕೈಗೊಳ್ಳುವುದು.

  • ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿ ಆಕ್ಸಿಜನ್ ಜನರೇಷನ್ ಪ್ಲಾಂಟ್ ಅಳವಡಿಸಲು ಸರ್ಕಾರದಿಂದ ಧನ ಸಹಾಯ ನೀಡುವುದು.

  • ಕಡಿಮೆ ಕಾರ್ಯಭಾರವಿರುವ ವೈದ್ಯಕೀಯ ಸಿಬ್ಬಂದಿಗಳನ್ನು ಗುರುತಿಸಿ ಅವರುಗಳನ್ನು ಪರಿಪೂರ್ಣವಾಗಿ ಉಪಯೋಗಿಸಿಕೊಳ್ಳಲು ಕ್ರಮ ಕೈಗೊಳ್ಳುವುದು.

  • ರೆಮ್ಡಿಸೀವರ್ ಮತ್ತು ಆಕ್ಸಿಜನ್ ಅನಗತ್ಯವಾಗಿ ಬಳಕೆಯಾಗುತ್ತಿದ್ದು, ಇದನ್ನು ತಪ್ಪಿಸಲು ಸೂಕ್ತ ಆಡಿಟ್ ವ್ಯವಸ್ಥೆ ರೂಪಿಸುವುದು.

  • 3ನೇ ಅಲೆಯನ್ನು ಸಮರ್ಥವಾಗಿ ನಿಭಾಯಿಸಲು ಒಂದು ತಜ್ಞರ ಸಮಿತಿಯನ್ನು ರಚಿಸಲು ತೀರ್ಮಾನಿಸಲಾಯಿತು.

  • ಕೋವಿಡ್ ಲಸಿಕೆಯನ್ನು ಹಾಕುವುದನ್ನು ವೇಗವರ್ಧನಗೊಳಿಸುವುದು.

  • ಕೋವಿಡ್ ಚಿಕಿತ್ಸೆಯಲ್ಲಿ ತೊಡಗಿರುವ ವೈದ್ಯರಿಗೆ ಈಗ ನೀಡುತ್ತಿರುವ ಇನ್ಸೆಂಟಿವ್​ ಹೆಚ್ಚಿಸಲು ನಿರ್ಧರಿಸಲಾಯಿತು.


ಇದನ್ನು ಓದಿ: Lockdown | ದೆಹಲಿಯಲ್ಲಿ ಮತ್ತೊಂದು ವಾರ ಲಾಕ್​ಡೌನ್ ವಿಸ್ತರಣೆ; ಸಿಎಂ ಅರವಿಂದ ಕೇಜ್ರಿವಾಲ್
Youtube Video


  • ಕೋವಿಡ್ ಕರ್ತವ್ಯದಲ್ಲಿ ತೊಡಗಿರುವ ವೈದ್ಯರು/ವೈದ್ಯಕೀಯ ಸಿಬ್ಬಂದಿಗಳು ಸೋಂಕಿತರಾದಲ್ಲಿ ಅವರಿಗೆ ಸರ್ಕಾರಿ ವೆಚ್ಚದಲ್ಲಿ ಚಿಕಿತ್ಸೆ ನೀಡಲು ಕ್ರಮ ಕೈಗೊಳ್ಳುವುದು.

  • ಅಂತಿಮ ವರ್ಷದ ವೈದ್ಯಕೀಯ ವಿದ್ಯಾರ್ಥಿಗಳನ್ನು ಕೋವಿಡ್ ಚಿಕಿತ್ಸೆಗೆ ಬಳಸಿಕೊಂಡಲ್ಲಿ  ಅವರಿಗೆ ಆದ್ಯತೆಯ ಮೇಲೆ ಕೋವಿಡ್ ಲಸಿಕೆ ನೀಡಲು ಕ್ರಮ ಕೈಗೊಳ್ಳುವುದು.

Published by: HR Ramesh
First published: May 1, 2021, 7:09 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories