ಕೊರೋನಾ ತಡೆ ಸಂಬಂಧ ಖಾಸಗಿ ವೈದ್ಯಕೀಯ ಕಾಲೇಜು ಮುಖ್ಯಸ್ಥರ ಜತೆ ಸಿಎಂ ಸಭೆ: ಇಲ್ಲಿವೆ ಮುಖ್ಯಾಂಶಗಳು

ಇನ್ನು, ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಾ. ಸಿ.ಎನ್​​ ಅಶ್ವತ್ಥನಾರಾಯಣ, ಕಂದಾಯ ಸಚಿವ ಆರ್. ಅಶೋಕ್, ಗೃಹ ಸಚಿವ ಬಸವರಾಜ ಬೊಮ್ಮಾಯಿ, ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ ವಿಜಯಭಾಸ್ಕರ್ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

news18-kannada
Updated:June 30, 2020, 12:09 PM IST
ಕೊರೋನಾ ತಡೆ ಸಂಬಂಧ ಖಾಸಗಿ ವೈದ್ಯಕೀಯ ಕಾಲೇಜು ಮುಖ್ಯಸ್ಥರ ಜತೆ ಸಿಎಂ ಸಭೆ: ಇಲ್ಲಿವೆ ಮುಖ್ಯಾಂಶಗಳು
ಸಿಎಂ ಬಿ.ಎಸ್‌. ಯಡಿಯೂರಪ್ಪ.
 • Share this:
ಬೆಂಗಳೂರು(ಜೂ.30): ರಾಜ್ಯದಲ್ಲಿ ತೀವ್ರಗೊಂಡ ಕೋವಿಡ್​​-19 ವೈರಸ್​ ತಹಬದಿಗೆ ತರುವ ನಿಟ್ಟಿನಲ್ಲಿ ಚರ್ಚಿಸಲು ಇಂದು ಮುಖ್ಯಮಂತ್ರಿ ಬಿ.ಎಸ್​​ ಯಡಿಯೂರಪ್ಪ ಬೆಂಗಳೂರಿನ ಖಾಸಗಿ ವೈದ್ಯಕೀಯ ಕಾಲೇಜುಗಳ ಮುಖ್ಯಸ್ಥರ ಸಭೆ ಕರೆದಿದ್ದರು. ಸಿಎಂ ಯಡಿಯೂರಪ್ಪನವರ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ನಡೆದ ಖಾಸಗಿ ವೈದ್ಯಕೀಯ ಕಾಲೇಜುಗಳ ಮುಖ್ಯಸ್ಥರೊಂದಿಗಿನ ಸಭೆಯಲ್ಲಿ ಹಲವು ವಿಚಾರಗಳು ಚರ್ಚೆಯಾದವು.


ಸಭೆಯಲ್ಲಿ ಚರ್ಚೆಯಾದ ಮುಖ್ಯಾಂಶಗಳು ಹೀಗೆವೆ..

 • ಬೆಂಗಳೂರಿನಲ್ಲಿ ಎರಡು ಸರ್ಕಾರಿ ಸಂಸ್ಥೆಗಳಲ್ಲಿ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ. ಪ್ರಸ್ತುತ ನಗರದ 11 ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿ 2200 ಹಾಸಿಗೆಗಳನ್ನು ಅಧಿಸೂಚನೆ ಹೊರಡಿಸಲಾಗಿದೆ.

 • ಪ್ರಸ್ತುತ ವರದಿಯಾಗುತ್ತಿರುವ ಪ್ರಕರಣಗಳನ್ನು ಗಮನಿಸಿದರೆ, 4500 ಹಾಸಿಗೆಗಳನ್ನು ಖಾಸಗಿ ಕಾಲೇಜುಗಳಿಂದ ಸರ್ಕಾರ ನಿರೀಕ್ಷಿಸುತ್ತಿದೆ.

 • ಕಳೆದ ನಾಲ್ಕು ತಿಂಗಳಿಂದ ಹತ್ತು ವೈದ್ಯಕೀಯ ಕಾಲೇಜುಗಳು ಹೊರತು ಪಡಿಸಿ, ಇತರ ಎಲ್ಲಾ ಕಾಲೇಜುಗಳು ಪ್ರಯೋಗಾಲಯ ವ್ಯವಸ್ಥೆ ಮಾಡಿವೆ.
 • ಸರ್ಕಾರಿ ಕಾಲೇಜುಗಳಲ್ಲಿ 2000 ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ 4500 ಸೇರಿದಂತೆ ಸುಮಾರು 6500 ಹಾಸಿಗೆಗಳು ಬೆಂಗಳೂರಿನ ವೈದ್ಯಕೀಯ ಕಾಲೇಜುಗಳಲ್ಲಿಯೇ ಲಭ್ಯವಾಗುತ್ತಿವೆ. ಇದಕ್ಕೆ ಖಾಸಗಿ ವೈದ್ಯಕೀಯ ಕಾಲೇಜುಗಳು ಸಹಕರಿಸುವಂತೆ ಮನವಿ ಮಾಡಿದರು.

 • ವೈದ್ಯಕೀಯ ಕಾಲೇಜುಗಳು ಸರ್ಕಾರದೊಂದಿಗೆ ಕೈಜೋಡಿಸಿ, ಕೋವಿಡ್-19 ಚಿಕಿತ್ಸೆಗೆ ಸಹಕರಿಸುವ ಭರವಸೆ ನೀಡಿದರು. ಇದಕ್ಕೆ ಸಿದ್ಧತೆಗಳು ಮಾಡಿಕೊಳ್ಳಬೇಕಾಗಿರುವುದರಿಂದ ಹಂತ ಹಂತವಾಗಿ ವ್ಯವಸ್ಥೆ ಮಾಡುವುದಾಗಿ ತಿಳಿಸಿದರು.

 • ಕೋವಿಡ್-19 ಚಿಕಿತ್ಸೆ ನೀಡುವ ಖಾಸಗಿ ವೈದ್ಯಕೀಯ ಮತ್ತು ಅರೆ ವೈದ್ಯಕೀಯ ಸಿಬ್ಬಂದಿಗೆ ಕೂಡ ವಿಮಾ ಸೌಲಭ್ಯ ಒದಗಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

 • ಕೋವಿಡ್-19 ರೋಗಿಗಳಿಗೆ ಹಾಸಿಗೆ ಹಂಚಿಕೆ ಕುರಿತಂತೆ ಕೇಂದ್ರೀಕೃತ ವ್ಯವಸ್ಥೆಯನ್ನು ಈಗಾಗಲೇ ಬಿಬಿಎಂಪಿಯಲ್ಲಿ ಮಾಡಲಾಗಿದ್ದು, ಎರಡು ಮೂರು ದಿನಗಳಲ್ಲಿ ಪೂರ್ಣಪ್ರಮಾಣದಲ್ಲಿ ಕಾರ್ಯನಿರ್ವಹಿಸಲಿದೆ. ಕೋವಿಡ್-19 ಚಿಕಿತ್ಸೆ ನೀಡುವ ಎಲ್ಲ ಆಸ್ಪತ್ರೆಗಳನ್ನು ಈ ವ್ಯವಸ್ಥೆಯ ವ್ಯಾಪ್ತಿಗೆ ತರಲಾಗುವುದು ಎಂದು ಸ್ಪಷ್ಟಪಡಿಸಿದರು.

 • ಖಾಸಗಿಯವರೊಂದಿಗೆ ಸಮನ್ವಯಕ್ಕೆ ಸಮಿತಿ ರಚನೆ ಮಾಡಲಾಗುವುದು.
  ಟೆಲಿಮೆಡಿಸಿನ್ ಮೂಲಕ ಚಿಕಿತ್ಸೆ ನೀಡಲು ಸಹ ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

 • ಕೋವಿಡ್-19 ಕೇರ್ ಸೆಂಟರ್​​ಗಳಿಗೆ ಅಗತ್ಯ ಸಿಬ್ಬಂದಿ ಒದಗಿಸುವಂತೆ ಮನವಿ ಮಾಡಿದರು.ಇದನ್ನೂ ಓದಿ: ‘ಕೋವಿಡ್​​-19 ತಡೆಗೆ 80 ಲ್ಯಾಬ್​​ ತೆರೆದಿದ್ದೇವೆ, ಯಾರು ಆತಂಕ ಪಡಬೇಡಿ‘ - ಸಚಿವ ಡಾ. ಸುಧಾಕರ್​​

ಇನ್ನು, ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಾ. ಸಿ.ಎನ್​​ ಅಶ್ವತ್ಥನಾರಾಯಣ, ಕಂದಾಯ ಸಚಿವ ಆರ್. ಅಶೋಕ್, ಗೃಹ ಸಚಿವ ಬಸವರಾಜ ಬೊಮ್ಮಾಯಿ, ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ ವಿಜಯಭಾಸ್ಕರ್ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
First published: June 30, 2020, 12:05 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading