ನಾಳೆಯಿಂದ ಇಡೀ ಕರ್ನಾಟಕ ಲಾಕ್​ಡೌನ್?; ಇಂದು ಸಂಜೆ ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

ಇಂದು ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ನೇತೃತ್ವದ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ. ಪ್ರತಿಪಕ್ಷ ಸದಸ್ಯರ ಅಭಿಪ್ರಾಯವನ್ನೂ ಪಡೆದು ಇಂದು ಸಂಜೆ ಬಿಎಸ್​ವೈ ಅಂತಿಮ ನಿರ್ಧಾರ ಪ್ರಕಟಿಸಲಿದ್ದಾರೆ.  

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
ಬೆಂಗಳೂರು (ಮಾ.23): ಕೊರೋನಾ ವೈರಸ್ ಸೋಂಕು ನಿಗ್ರಹಿಸಲು ರಾಜ್ಯ ಸರ್ಕಾರ ಕಠಿಣ ಕ್ರಮಗಳನ್ನ ತೆಗೆದುಕೊಂಡಿದೆ. ಕೇಂದ್ರ ಸರ್ಕಾರದ ಸೂಚನೆಯಂತೆ ರಾಜ್ಯದ 9 ಜಿಲ್ಲೆಗಳಲ್ಲಿ ಇಂದಿನಿಂದ ಬಂದ್​ ಆದೇಶ ಹೊರಡಿಸಿದೆ. ಇನ್ನು, ನಾಳೆಯಿಂದ ಸಂಪೂರ್ಣ ರಾಜ್ಯ ಸ್ಥಗಿತಗೊಳಿಸಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ ಎನ್ನಲಾಗಿದೆ.

ಇಂದು ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ನೇತೃತ್ವದ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ. ಪ್ರತಿಪಕ್ಷ ಸದಸ್ಯರ ಅಭಿಪ್ರಾಯವನ್ನೂ ಪಡೆದು ಇಂದು ಸಂಜೆ ಬಿಎಸ್​ವೈ ಅಂತಿಮ ನಿರ್ಧಾರ ಪ್ರಕಟಿಸಲಿದ್ದಾರೆ.

ಆರೋಗ್ಯ, ಗೃಹ, ಕಂದಾಯ, ಅರಣ್ಯ ಸೇರಿದಂತೆ ಪ್ರಮುಖ ಇಲಾಖೆಗಳು ಮಾತ್ರ ಕಾರ್ಯ ನಿರ್ವಹಿಸುತ್ತಿವೆ. ಉಳಿದೆಲ್ಲ ಇಲಾಖೆಗಳನ್ನು ತಾತ್ಕಾಲಿಕವಾಗಿ ಬಂದ್ ಮಾಡಲು ಸಭೆಯಲ್ಲಿ ಚರ್ಚೆ ನಡೆಸಲಾಗಿದೆ ಎನ್ನುವುದು ಮೂಲಗಳ ಮಾಹಿತಿ. ಇನ್ನು, ಈ ಬಾರಿ ಬೆಂಗಳೂರು ಕರಗ ನಡೆಸದಂತೆಯೂ ತೀರ್ಮಾನ ಮಾಡಲಾಗಿದೆ.

ಕೊರೋನಾ ವೈರಸ್ ಸೋಂಕಿತರು ಪತ್ತೆಯಾಗಿರುವ ಜಿಲ್ಲೆಗಳನ್ನು ಲಾಕ್ ಡೌನ್ ಮಾಡಲು ಈ ಮೊದಲು ನಿರ್ಧರಿಸಲಾಗಿತ್ತು. ಅಂತೆಯೇ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಗಳೂರು, ಮೈಸೂರು, ಬೆಳಗಾವಿ, ಕಲಬುರ್ಗಿ, ಧಾರವಾಡ, ಚಿಕ್ಕಬಳ್ಳಾಪುರ ಮತ್ತು ಕೊಡಗು ಜಿಲ್ಲೆಗಳಲ್ಲಿ ಮಾರ್ಚ್ 31ರವರೆಗೆ ಬಂದ್ ಮಾಡಲು ಆದೇಶಿಸಲಾಗಿದೆ.

ಇದನ್ನೂ ಓದಿ: ಕೊರೋನಾ ಬಾಧಿತರ ಪೈಕಿ ಆಸ್ಪತ್ರೆಗೆ ದಾಖಲಾಗುತ್ತಿರುವವರು ಶೇ. 5 ಮಾತ್ರ!; ಉಳಿದವರ ಕತೆ ಏನು?

ಭಾರತದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಏರುತ್ತಲೇ ಇದೆ. ಭಾರತದಲ್ಲಿ ಕೊರೋನಾಗೆ ಬಲಿಯಾದವರ ಸಂಖ್ಯೆ 8ಕ್ಕೆ ಏರಿದೆ. ಈ ಮೂಲಕ ಮುಂಬೈವೊಂದರಲ್ಲೇ ಮೂರು ವ್ಯಕ್ತಿಗಳು ಕೊರೋನಾಗೆ ಬಲಿಯಾದಂತಾಗಿದೆ. ಕರ್ನಾಟಕದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ 27 ಹಾಗೂ ಭಾರತದಾದ್ಯಂತ ಪ್ರಕರಣಗಳ ಸಂಖ್ಯೆ 415 ದಾಟಿದೆ.
First published: