news18-kannada Updated:March 28, 2020, 6:47 PM IST
ಸಿಎಂ ಬಿ.ಎಸ್.ಯಡಿಯೂರಪ್ಪ.
ಬೆಂಗಳೂರು: ಕೊರೋನಾ ಮಹಾಮಾರಿ ದಿನದಿಂದ ದಿನಕ್ಕೆ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಕೋವಿಡ್-19 ನಿಯಂತ್ರಣಕ್ಕಾಗಿ ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚೆ ನಡೆಸಲು ಸಿಎಂ ಬಿಎಸ್ ಯಡಿಯೂರಪ್ಪ ಅವರು ನಾಳೆ ಸರ್ವಪಕ್ಷಗಳ ಮುಖಂಡರ ಸಭೆ ಕರೆದಿದ್ದಾರೆ.
ವಿಧಾನಸೌಧದಲ್ಲಿ ನಾಳೆ ಮಧ್ಯಾಹ್ನ 12 ಗಂಟೆಗೆ ಸಭೆ ಕರೆದಿರುವ ಸಿಎಂ ಬಿಎಸ್ವೈ ಎಲ್ಲ ಪಕ್ಷಗಳ ಮುಖಂಡರು ಸಭೆಯಲ್ಲಿ ಭಾಗವಹಿಸಿ, ಕೊರೋನಾ ವೈರಸ್ ನಿಯಂತ್ರಣ ಸಂಬಂಧ ಸಲಹೆ, ಸೂಚನೆಗಳನ್ನು ನೀಡುವಂತೆ ಮನವಿ ಮಾಡಿಕೊಂಡಿದ್ದಾರೆ.
ತಮಗೆಲ್ಲ ತಿಳಿದಿರುವಂತೆ ಕೋವಿಂದ್-19 (ನೋವೆಲ್ ಕೊರೋನಾ) ವೈರಸ್ ವಿಶ್ವವ್ಯಾಪಿ ಲಕ್ಷಾಂತರ ಜನರಿಗೆ ಹರಡಿ ಹಲವಾರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಕರ್ನಾಟಕದಲ್ಲಿಯೂ ಕೋವಿಡ್-19 ಹಲವು ಜನರಿಗೆ ಹರಡಿರುವ ಪ್ರಕರಣಗಳು ಕಂಡು ಬಂದಿದ್ದು, ನಿಯಂತ್ರಣಕ್ಕಾಗಿ ಎಲ್ಲಾ ರೀತಿಯ ಅಗತ್ಯ ಕ್ರಮಗಳನ್ನು ತೆಗೆದಿಕೊಳ್ಳಲಾಗುತ್ತಿದೆ. ಲಾಕ್ಡೌನ್ ವ್ಯವಸ್ಥೆ ಜಾರಿಯಲ್ಲಿ ಇರುವುದರಿಂಧ ರಾಜ್ಯದ ಜನರ ಹಿತದೃಷ್ಟಿಯಿಂದ ಎಲ್ಲಾ ಪಕ್ಷಗಳ ಮುಖಂಡರೊಂದಿಗೆ ಚರ್ಚಿಸಲು ತೀರ್ಮಾನಿಸಲಾಗಿದ್ದೇನೆ. ಕೋವಿಡ್-19 ನಿಯಂತ್ರಣಕ್ಕಾಗಿ ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತಾಗಿ ಚರ್ಚಿಸಲು ಭಾನುವಾರ (ಮಾ.29) ಮಧ್ಯಾಹ್ನ 12 ಗಂಟೆಗೆ ವಿಧಾನಸೌಧದ 3ನೇ ಮಹಡಿ ಕೊಠಿಡಿ ಸಂಖ್ಯೆ 334ರಲ್ಲಿ ಸರ್ವ ಪಕ್ಷಗಳ ಮುಖಂಡರ ಸಭೆ ಕರೆಯಲಾಗಿದೆ. ಈ ಸಭೆಗೆ ತಾವುಗಳು ಆಗಮಿಸಿ, ಸಲಹೆ ಸೂಚನೆಗಳನ್ನು ನೀಡುವಂತೆ ಕೋರುತ್ತೇನೆ ಎಂದು ಸಿಎಂ ಬಿಎಸ್ವೈ ಅವರು ಪತ್ರದಲ್ಲಿ ಮನವಿ ಮಾಡಿದ್ದಾರೆ.
ಇದನ್ನು ಓದಿ: ಭಾರತದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 834ಕ್ಕೆ ಏರಿಕೆ; ನಿನ್ನೆ ಒಂದೇ ದಿನ 144 ಹೊಸ ಕೇಸ್ ಪತ್ತೆ
First published:
March 28, 2020, 6:47 PM IST