ಪ್ರಧಾನಿ ನರೇಂದ್ರ ಮೋದಿ ಕರೆಯಂತೆ ಒಟ್ಟಾಗಿ ಕೊರೋನಾ ತಡೆಯೋಣ: ಬಿಎಸ್ ಯಡಿಯೂರಪ್ಪ

ಪ್ರಧಾನಿಗಳ ಕರೆಯಂತೆ ಎಲ್ಲರೂ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಅಂತರವನ್ನು ಕಾಯ್ದುಕೊಂಡು ಮಾಸ್ಕನ್ನು ಬಳಸಿ ಆರೋಗ್ಯ ಕಾಪಾಡಿಕೊಂಡು ಕೋವಿಡ್-19 ವೈರಾಣುವನ್ನು ನಿಯಂತ್ರಣಕ್ಕೆ ತರಲು ಒಟ್ಟಾಗಿ ಹೋರಾಡೋಣ ಎಂದು ಯಡಿಯೂರಪ್ಪ ಕರೆ ನೀಡಿದ್ದಾರೆ.

news18-kannada
Updated:June 30, 2020, 7:01 PM IST
ಪ್ರಧಾನಿ ನರೇಂದ್ರ ಮೋದಿ ಕರೆಯಂತೆ ಒಟ್ಟಾಗಿ ಕೊರೋನಾ ತಡೆಯೋಣ: ಬಿಎಸ್ ಯಡಿಯೂರಪ್ಪ
ವಿಡಿಯೋ ಕಾನ್ಫೆರೆನ್ಸ್​ನಲ್ಲಿ ಯಡಿಯೂರಪ್ಪ ಭಾಗಿಯಾಗಿರುವ ಒಂದು ಫೈಲ್ ಚಿತ್ರ
  • Share this:
ಬೆಂಗಳೂರು(ಜೂನ್ 30): ಪ್ರಧಾನಿ ನರೇಂದ್ರ ಮೋದಿ ಕೊಟ್ಟ ಕರೆಯಂತೆ ಎಲ್ಲರೂ ಸರ್ಕಾರದ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ, ಕೊರೋನಾ ನಿಯಂತ್ರಣ ಮಾಡೋಣ ಎಂದು ಸಿಎಂ ಯಡಿಯೂರಪ್ಪ ಕರೆ ಕೊಟ್ಟಿದ್ದಾರೆ. ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಮಾಸ್ಕನ್ನು ಬಳಸಿ ಆರೋಗ್ಯ ಕಾಪಾಡಿಕೊಂಡು ಕೋವಿಡ್-19 ವೈರಾಣುವನ್ನು ನಿಯಂತ್ರಣ ತರಲು ಒಟ್ಟಾಗಿ ಹೋರಾಡೋಣ ಎಂದು ಸಿಎಂ ಬಿ.ಎಸ್.ವೈ. ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣಕ್ಕೆ ಮಾಧ್ಯಮ ಹೇಳಿಕೆ ಮೂಲಕ ಸಿಎಂ ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ಇಂದು ದೇಶದ ಪ್ರಧಾನಿ ಮಂತ್ರಿಗಳು ರಾಷ್ಟ್ರವನ್ನುದ್ದೇಶಿಸಿ ಮಾಡಿದ ಭಾಷಣದಲ್ಲಿ ದೇಶದ ಇತರ ದೇಶಗಳಿಗೆ ಹೋಲಿಸಿದಲ್ಲಿ ಕೋವಿಡ್-19 ನಿಯಂತ್ರಣದಲ್ಲಿ ಉತ್ತಮ ಸ್ಥಿತಿಯಲ್ಲಿರುತ್ತದೆ ಎಂದು ತಿಳಿಸಿರುತ್ತಾರೆ. ಇದಕ್ಕೆ ಲಾಕ್ ಡೌನ್ ಅವಧಿಯಲ್ಲಿ ರಾಷ್ಟ್ರದ ಜನತೆ ಲಾಕ್ ಡೌನ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದು ಪ್ರಮುಖ ಕಾರಣವೆಂದು ತಿಳಿಸಿ ಅನ್​ಲಾಕ್-1ರ ಅವಧಿಯಲ್ಲಿ ನಿಯಮಗಳ ಬಗ್ಗೆ ಹೆಚ್ಚಿನ ಗಮನ ನೀಡದಿರುವುದು ಆತಂಕದ ಸಂಗತಿಯಾಗಿದೆ ಎಂದು ತಿಳಿಸಿರುತ್ತಾರೆ. ಈ ಬಗ್ಗೆ ಜನರು ಎಚ್ಚೆತ್ತುಕೊಂಡು ನಿಯಮಗಳನ್ನು ಪಾಲಿಸಿ ಸಂವೇದನಾಶೀಲತೆಯಿಂದ ತೀರ್ಮಾನ ತೆಗೆದುಕೊಳ್ಳುವುದರಿಂದ ಉತ್ತಮ ಫಲಿತಾಂಶ ದೊರೆಯುತ್ತದೆಂಬ ಆಶಾ ಭಾವನೆಯನ್ನು ವ್ಯಕ್ತಪಡಿಸಿದ್ದು ಇದಕ್ಕೆ ಸಹಮತ ವ್ಯಕ್ತಪಡಿಸಿ ಜನ ನಿಯಮಗಳನ್ನು ಪಾಲಿಸುವಂತೆ ಮನವಿ ಮಾಡಿದ್ದಾರೆ ಎಂದು ಯಡಿಯೂರಪ್ಪ ಅಂದಿದ್ದಾರೆ.

ಇದನ್ನೂ ಓದಿ: ಕೊರೋನಾ ಚಿಕಿತ್ಸೆ ಬಗ್ಗೆ ವಿವರ ತಿಳಿಯುವುದು ರೋಗಿಗಳ ಹಕ್ಕು: ಸಿದ್ದರಾಮಯ್ಯ

ಲಾಕ್ ಡೌನ್ ಅವಧಿಯಲ್ಲಿ ಜಾರಿಗೆ ತಂದ ಗರೀಬ್ ಕಲ್ಯಾಣ್ ಅನ್ನ ಯೋಜನೆಯನ್ವಯ ದೇಶದ 80 ಕೋಟಿ ಜನಸಂಖ್ಯೆಗೆ ಏಪ್ರಿಲ್‌ನಿಂದ ಜೂನ್​ವರೆಗೆ ಪ್ರತಿ ತಿಂಗಳು ಪ್ರತಿ ವ್ಯಕ್ತಿಗೆ 5 ಕೆ.ಜಿ.ಯಂತೆ ಅಕ್ಕಿ /ಗೋಧಿ ಹಾಗೂ ಪ್ರತಿ ಕುಟುಂಬಕ್ಕೆ 1 ಕೆ.ಜಿ. ಬೇಳೆಯನ್ನು ಉಚಿತವಾಗಿ ನೀಡಲಾಗಿತ್ತು. ಇಂದಿನ ಪರಿಸ್ಥಿತಿಯನ್ನು ಮನಗಂಡು ಬಡವರಿಗೆ ಉಚಿತವಾಗಿ ಆಹಾರ ನೀಡುವ ಯೋಜನೆಯನ್ನು ಮುಂದಿನ 5 ತಿಂಗಳು ಅಂದರೆ ಜುಲೈನಿಂದ ನವೆಂಬರ್ ಅಂತ್ಯದವರೆಗೆ ಮುಂದುವರೆಸಲು ಘೋಷಿಸಿರುತ್ತಾರೆ. ಈ ಯೋಜನೆಗೆ ರೂ. 90 ಸಾವಿರ ಕೋಟಿ ವೆಚ್ಚವಾಗಲಿದ್ದು, ಕಳೆದ ಮೂರು ತಿಂಗಳಲ್ಲಿ ಭರಿಸುವ ವೆಚ್ಚ 60 ಸಾವಿರ ಸೇರಿ ಒಟ್ಟು ರೂ.1.50 ಲಕ್ಷ ಕೋಟಿ ಗರೀಬ್ ಕಲ್ಯಾಣ್ ಅನ್ನ ಯೋಜನೆ ಒದಗಿಸಿರುವುದು ಅಭಿನಂದನಾರ್ಹ ಸಂಗತಿಯಾಗಿದೆ. ಒಂದು ದೇಶ ಒಂದು ಪಡಿತರ ಯೋಜನೆಯನ್ನು ಜಾರಿಗೆ ತಂದಿರುವುದು ಸಂತೋಷದಾಯಕ ಸಂಗತಿಯಾಗಿರುತ್ತದೆ ಎಂದು ಯಡಿಯೂರಪ್ಪ ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ಐಎಎಸ್ ಅಧಿಕಾರಿ ವಿಜಯ್ ಶಂಕರ್ ಆತ್ಮಹತ್ಯೆಗೆ ಕಾರಣವಾಯ್ತಾ ಈ ಒಂದು ಕಾರಣ?ಸ್ವಾವಲಂಬಿ ಭಾರತ ನಿರ್ಮಾಣ:

ಪ್ರಧಾನಿಯವರು ದೇಶದಲ್ಲಿ ಹಿಂದುಳಿದವರ, ಬಡವರ ಸಬಲೀಕರಣಕ್ಕೆ ಆರ್ಥಿಕ ಚಟುವಟಿಕೆಗಳನ್ನು ಮುಂದುವರೆಸುವ ಘೋಷಣೆ ಮಾಡಿದ್ದಾರೆ. ಸಂಕಷ್ಟದ ಸಮಯದಲ್ಲಿ ದೇಶಕ್ಕೆ ಅನ್ನ ನೀಡುವ ರೈತರನ್ನು, ಸಮಯಕ್ಕೆ ಸರಿಯಾಗಿ ತೆರಿಗೆ ಪಾವತಿಸಿದ ತೆರಿಗೆದಾರರನ್ನು ಅಭಿನಂದಿಸಿದ ಮಾನ್ಯ ಪ್ರಧಾನ ಮಂತ್ರಿಯವರು ದೇಶದ ಎಲ್ಲರೂ ಆರೋಗ್ಯವಾಗಿರಬೇಕೆಂದು ಬಯಸಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಲಿ ಹಾಗು ಮುಖಗವಸನ್ನು (ಮಾಸ್ಕ್) ತಪ್ಪದೇ ಬಳಸಲು ವಿನಂತಿಸಿರುತ್ತಾರೆ. ಇದಕ್ಕಾಗಿ ನಾನು ಪ್ರಧಾನ ಮಂತ್ರಿಯವರನ್ನು ಅಭಿನಂದಿಸುತ್ತೇನೆ. ಹಾಗೂ ಅವರ ಕರೆಯಂತೆ ಎಲ್ಲರೂ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಅಂತರವನ್ನು ಕಾಯ್ದುಕೊಂಡು ಮಾಸ್ಕನ್ನು ಬಳಸಿ ಆರೋಗ್ಯ ಕಾಪಾಡಿಕೊಂಡು ಕೋವಿಡ್-19 ವೈರಾಣುವನ್ನು ನಿಯಂತ್ರಣಕ್ಕೆ ತರಲು ಒಟ್ಟಾಗಿ ಹೋರಾಡೋಣ ಎಂದು ಪತ್ರಿಕಾ ಪ್ರಕಟಣೆ ಮೂಲಕ ಕರೆ ನೀಡಿದ್ದಾರೆ.
First published: June 30, 2020, 7:01 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading