ಹೋಂಕ್ವಾರಂಟೈನ್ ಉಲ್ಲಂಘಿಸಿದ ವ್ಯಕ್ತಿ ಮತ್ತು ಸೋಂಕಿತನ ಹೆಸರು ಬಹಿರಂಗಪಡಿಸಿದ ಅಧಿಕಾರಿ ವಿರುದ್ಧ ದೂರು 

ಈ ಕುರಿತು ವಿರಾಜಪೇಟೆ ತಹಶೀಲ್ದಾರ್ ಅವರನ್ನು ಕೇಳಿದರೆ ಹೌದು ಹೆಸರು ಬಹಿರಂಗಪಡಿಸಬಾರದಿತ್ತು. ಇದು ಸ್ಥಳೀಯ ಆಡಳಿತದಿಂದ ತಪ್ಪಾಗಿದ್ದು, ಇನ್ಮುಂದೆ ಇಂತಹ ತಪ್ಪಾಗದಂತೆ ಸೂಚನೆ ನೀಡಲಾಗಿದೆ. ತಪ್ಪು ಮಾಡಿರುವುದಕ್ಕೆ ಶಿಕ್ಷೆಯೂ ಆಗಲಿದೆ ಎಂದರು.

news18-kannada
Updated:July 1, 2020, 10:18 AM IST
ಹೋಂಕ್ವಾರಂಟೈನ್ ಉಲ್ಲಂಘಿಸಿದ ವ್ಯಕ್ತಿ ಮತ್ತು ಸೋಂಕಿತನ ಹೆಸರು ಬಹಿರಂಗಪಡಿಸಿದ ಅಧಿಕಾರಿ ವಿರುದ್ಧ ದೂರು 
ಸಾಂದರ್ಭಿಕ ಚಿತ್ರ
  • Share this:
ಕೊಡಗು(ಜು.01): ಕೊರೋನಾ ಮಹಾಮಾರಿ ಹೆಸರು ಕೇಳಿದರೆ ಸಾಕು ಜನರು ಬೆಚ್ಚಿ ಬೀಳುತ್ತಾರೆ. ಇನ್ನು ಕೊರೋನಾ ಸೋಂಕಿತ ವ್ಯಕ್ತಿ ಇದ್ದಾನೆ ಎಂದರೆ ಕೇಳಬೇಕಾ? ಜನ ದೂರ ಓಡುತ್ತಾರೆ. ಆ ವ್ಯಕ್ತಿಯನ್ನು ಕಳಂಕಿತನಂತೆ ನೋಡುತ್ತಾರೆ. ಹೀಗಾಗಿಯೇ ಸರ್ಕಾರ ಸೋಂಕಿತನ ಹೆಸರು ಬಹಿರಂಗ ಮಾಡುವುದಿಲ್ಲ. ಆದರೆ ಹೊರ ದೇಶದಿಂದ ಕೊಡಗಿಗೆ ಬಂದ ಸೋಂಕಿತನೊಬ್ಬನ ಹೆಸರನ್ನು ಅಧಿಕಾರಿಗಳೇ ಬಹಿರಂಗಗೊಳಿಸುವ ಮೂಲಕ ಎಡವಟ್ಟು ಮಾಡಿದ್ದಾರೆ. ಹೀಗಾಗಿ ಅಧಿಕಾರಿಗಳ ವಿರುದ್ಧ ಜನರು ಆಕ್ರೋಶ ಹೊರಹಾಕಿದ್ದಾರೆ.

ಕೊರೋನಾ ಮಹಾಮಾರಿ ಯಾವ ಬೇಧ ಭಾವವಿಲ್ಲದೆ ಸಿಕ್ಕ ಸಿಕ್ಕವರಿಗೆ ಹರಡುತ್ತಲೇ ಇದೆ. ರೋಗ ನಿರೋಧಕ ಶಕ್ತಿ ಕಡಿಮೆ ಇರುವವರಿಗೆ ಹೆಗಲೇರಿತೆಂದರೆ ಮುಗಿಯಿತು. ಅಷ್ಟು ಭಯಾನಕ ರೋಗ ಎನ್ನೋದು ಎಲ್ಲರಿಗೂ ಗೊತ್ತಿರುವ ವಿಷಯ. ಹೀಗಾಗಿ ಕೊರೋನಾ ಪಾಸಿಟಿವ್ ಬಂದ ವ್ಯಕ್ತಿಯನ್ನು ಜನರು ಕಳಂಕಿತನಾಗಿ ನೋಡುತ್ತಿದ್ದಾರೆ. ಆದ್ದರಿಂದಲೇ ಸರ್ಕಾರ ಸೋಂಕಿತನ ಹೆಸರನ್ನು ಬಹಿರಂಗಗೊಳಿಸುವಂತಿಲ್ಲ ಎಂದು ಸ್ಪಷ್ಟವಾಗಿ ಸೂಚಿಸಿದೆ.

ಆದರೆ ವಿದೇಶದಿಂದ ಬಂದ ವ್ಯಕ್ತಿಯೊಬ್ಬರು ಸೇವಾ ಸಿಂಧುವಿನಲ್ಲಿ ಅರ್ಜಿ ಸಲ್ಲಿಸಿ, ಮಡಿಕೇರಿ ತಾಲ್ಲೂಕಿನ ನಾಪೋಕ್ಲಿಗೆ ಬಂದಿದ್ದಾರೆ. ಆದರೆ ನಾಪೋಕ್ಲಿನ ತಮ್ಮ ಮನೆಯಲ್ಲಿರಬೇಕಾದ  ವ್ಯಕ್ತಿ ವಿರಾಜಪೇಟೆ ಪಟ್ಟಣದ ಮೀನುಪೇಟೆಯಲ್ಲಿ ಇದ್ದಾರೆ. ವಿಷಯ ತಿಳಿದ ಆರೋಗ್ಯ ಇಲಾಖೆ ಅಧಿಕಾರಿಗಳು ಆತನ ಗಂಟಲ ದ್ರವ ಸಂಗ್ರಹಿಸಿ ಪರೀಕ್ಷಿಸಿದಾಗ ವ್ಯಕ್ತಿಗೆ ಪಾಸಿಟಿವ್ ಬಂದಿದೆ. ಇದರಿಂದ ವಿರಾಜಪೇಟೆ ಪಟ್ಟಣದ ಮೀನುಪೇಟೆಯನ್ನು ನಿಷೇಧಿತ ಪ್ರದೇಶವೆಂದು ಮಾಡಿದ್ದಾರೆ.

ಜಮ್ಮು ಕಾಶ್ಮೀರದ ಸೋಪೋರ್​ನಲ್ಲಿ ಇಂದು ಮುಂಜಾನೆ ಉಗ್ರರ ದಾಳಿ; ಓರ್ವ ಸಿಆರ್​ಪಿಎಫ್ ಯೋಧ, ನಾಗರಿಕ ಸಾವು

ಜೊತೆಗೆ ವಿರಾಜಪೇಟೆ ಪಟ್ಟಣ ಪಂಚಾಯಿತಿ ಅಧಿಕಾರಿಗಳು ವ್ಯಕ್ತಿಯ ವಿರುದ್ಧ ಅಲ್ಲಿನ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಆದರೆ ದೂರು ನೀಡುವಾಗ ವ್ಯಕ್ತಿಯ ಹೆಸರನ್ನು ಬಹಿರಂಗಗೊಳಿಸಿದ್ದಾರೆ. ಇದರಿಂದ ಸೋಂಕಿತ ವ್ಯಕ್ತಿಯ ಸ್ನೇಹಿತರು, ಸಂಬಂಧಿಕರು ಪಟ್ಟಣ ಪಂಚಾಯಿತಿ ಅಧಿಕಾರಿಗಳ ವಿರುದ್ಧವೇ ವಿರಾಜಪೇಟೆ ಪೊಲೀಸ್ ಠಾಣೆಗೆ ಪಟ್ಟಣ ಪಂಚಾಯಿತಿ ಸದಸ್ಯರೇ ದೂರು ನೀಡಿದ್ದಾರೆ.

ಈ ಕುರಿತು ವಿರಾಜಪೇಟೆ ತಹಶೀಲ್ದಾರ್ ಅವರನ್ನು ಕೇಳಿದರೆ ಹೌದು ಹೆಸರು ಬಹಿರಂಗಪಡಿಸಬಾರದಿತ್ತು. ಇದು ಸ್ಥಳೀಯ ಆಡಳಿತದಿಂದ ತಪ್ಪಾಗಿದ್ದು, ಇನ್ಮುಂದೆ ಇಂತಹ ತಪ್ಪಾಗದಂತೆ ಸೂಚನೆ ನೀಡಲಾಗಿದೆ. ತಪ್ಪು ಮಾಡಿರುವುದಕ್ಕೆ ಶಿಕ್ಷೆಯೂ ಆಗಲಿದೆ ಎಂದರು.

ಇನ್ನು ಸೋಂಕಿತ ವ್ಯಕ್ತಿ ಸೇವಾ ಸಿಂಧುವಿನಲ್ಲಿ ಅರ್ಜಿ ಸಲ್ಲಿಸುವಾಗ ಮಡಿಕೇರಿ ತಾಲ್ಲೂಕಿನ ನಾಪೋಕ್ಲಿನ ಅಡ್ರೆಸ್ ಕೊಟ್ಟಿದ್ದಾರೆ. ಬಳಿಕ ವಿರಾಜಪೇಟೆ ಪಟ್ಟಣಕ್ಕೆ ಬಂದು ನೆಲೆಸಿ ತಪ್ಪು ಮಾಡಿದ್ದಾರೆ. ಇಂತವರಿಂದಾಗಿ ಬೇರೆ ವ್ಯಕ್ತಿಗಳಿಗೆ ಹರಡಿದರೆ ಯಾರು ಜವಾಬ್ದಾರಿ. ಹೀಗಾಗಿ ಇಂತಹವರಿಂದ ಬೇರೆಯವರಿಗೂ ತಕ್ಕ ಪಾಠವಾಗಬೇಕು ಎನ್ನೋ ಉದ್ದೇಶದಿಂದ ಅಧಿಕಾರಿಗಳು ದೂರು ನೀಡಿದ್ದಾರೆ ಅಂತಾ ವಿರಾಜಪೇಟೆ ತಹಶೀಲ್ದಾರ್ ನಂದೀಶ್ ಹೇಳುತ್ತಿದ್ದಾರೆ.

ಒಟ್ಟಿನಲ್ಲಿ ಅಧಿಕಾರಿಗಳ ಕಣ್ಣುತಪ್ಪಿಸಿ ಬೇರೊಂದು ಅಡ್ರೆಸ್ ನಲ್ಲಿದ್ದ ಸೋಂಕಿತ ವ್ಯಕ್ತಿ ತಪ್ಪು ಮಾಡಿದ್ದರೆ, ಸೋಕಿತನ ಹೆಸರನ್ನು ಬಹಿರಂಗಗೊಳಿಸಿ ಅಧಿಕಾರಿಗಳು ತಪ್ಪು ಮಾಡಿದ್ದಾರೆ. ತಪ್ಪು ಮಾಡಿದ ವ್ಯಕ್ತಿ, ಅಧಿಕಾರಿಗಳ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
First published: July 1, 2020, 9:43 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading