ವಿವಾದಾತ್ಮಕ ಹೇಳಿಕೆ; ಸಿಎಂ ರಾಜಕೀಯ ಕಾರ್ಯದರ್ಶಿ, ಶಾಸಕ ರೇಣುಕಾಚಾರ್ಯ ವಿರುದ್ಧ ದೂರು ದಾಖಲು

ಶಾಸಕ ರೇಣುಕಾಚಾರ್ಯ ವಿರುದ್ಧ ಕಾಂಗ್ರೆಸ್ ಮುಖಂಡ ಸುಭಾಷ್ ಚಂದ್ರ ಅವರು  ದಾವಣಗೆರೆಯ ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ

ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ

 • Share this:
  ದಾವಣಗೆರೆ: ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ಸಿಎಂ ರಾಜಕೀಯ ಕಾರ್ಯದರ್ಶಿ ಹಾಗೂ ಹೊನ್ನಾಳಿ ಶಾಸಕ ಎಂ.ಪಿ. ರೇಣುಕಾಚಾರ್ಯ ಮೇಲೆ ದೂರು ದಾಖಲಿಸಲಾಗಿದೆ.

  ಶಾಸಕ ರೇಣುಕಾಚಾರ್ಯ ವಿರುದ್ಧ ಕಾಂಗ್ರೆಸ್ ಮುಖಂಡ ಸುಭಾಷ್ ಚಂದ್ರ ಅವರು  ದಾವಣಗೆರೆಯ ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

  ಚಿಕಿತ್ಸೆಗೆ ಸ್ಪಂದಿಸದ ತಬ್ಲಿಘಿಗಳನ್ನು ಗುಂಡಿಕ್ಕಿ‌ ಎಂದು ಶಾಸಕ ರೇಣುಕಾಚಾರ್ಯ ವಿವಾದಾತ್ಮಕ ಹೇಳಿಕೆ ನೀಡಿದ್ದರು. ರೇಣುಕಾಚಾರ್ಯ ಅವರು ಸಮಾಜದಲ್ಲಿ ಶಾಂತಿ ಕದಡುವಂತಹ ಹೇಳಿಕೆ ನೀಡುತ್ತಿದ್ದಾರೆ. ಐಪಿಸಿ ಸೆಕ್ಷನ್ 505(ಬಿ) ಉಲ್ಲಂಘನೆ ಮಾಡಿರುವ ಹಿನ್ನೆಲೆಯಲ್ಲಿ ರೇಣುಕಾಚಾರ್ಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ದೂರುದಾರರು ಆಗ್ರಹಿಸಿದ್ದಾರೆ. ಅಲ್ಲದೇ, ಸಿಎಂ ರಾಜಕೀಯ ಕಾರ್ಯದರ್ಶಿ ಸ್ಥಾನದಿಂದ ಕೆಳಗಿಳಿಸುವಂತೆ ಒತ್ತಾಯಿಸುತ್ತಾರೆ.

  ಇದನ್ನು ಓದಿ: ಸುಳ್ಳು ಸುದ್ದಿ ನಂಬದಿರಿ; ಎರಡು ವಾರ್ಡ್ ಮಾತ್ರ ಸೀಲ್​ಡೌನ್: ಬೆಂಗಳೂರು ಪೊಲೀಸ್ ಸ್ಪಷ್ಟನೆ
  First published: