ಬೆಂಗಳೂರು(ಜು.05): ರಾಜ್ಯದಲ್ಲಿ ಕೊರೋನಾ ಸೋಂಕು ಹೆಚ್ಚುತ್ತಲೇ ಇದೆ. ಇದರ ನಿಯಂತ್ರಣಕ್ಕೆ ಪುನಃ ಸರ್ಕಾರ ಸಂಡೆ ಲಾಕ್ಡೌನ್ ಕ್ರಮ ಜರುಗಿಸಲು ಮುಂದಾಗಿದೆ. ಹೀಗಾಗಿಯೇ ಜುಲೈ 5ರಿಂದಲೇ ಪ್ರತೀ ಭಾನುವಾರದಂದು ರಾಜ್ಯಾದ್ಯಂತ ಲಾಕ್ಡೌನ್ ಮಾಡಲಾಗುತ್ತಿದೆ. ಅದರಂತೆಯೇ ಇಂದು ಭಾನುವಾರ ಸಂಪೂರ್ಣ ಲಾಕ್ಡೌನ್ ಮಾಡಲಾಗಿದೆ.
ಇನ್ನು, ಪ್ರತೀದಿನ ರಾತ್ರಿ 9ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ಕರ್ಫ್ಯೂ ಇದೆ. ಈಗ ಒಂದು ಗಂಟೆ ಮುಂಚಿತವಾಗಿ, ಅಂದರೆ ರಾತ್ರಿ 8 ಗಂಟೆಗೇ ಕರ್ಫ್ಯೂ ಶುರುವಾಗಲಿದೆ. ಸರ್ಕಾರ ಈ ಆದೇಶವನ್ನು ಈಗಾಗಲೇ ಜಾರಿಗೊಳಿಸಿದೆ. ಜತೆಗೆ ಭಾನುವಾರ ಸಂಪೂರ್ಣ ಲಾಕ್ಡೌನ್ ಜಾರಿ ಮಾಡಲಾಗಿದೆ. ಹೀಗಾಗಿ, ಭಾನುವಾರ ಏನಿರುತ್ತೆ? ಏನು ಇರಲ್ಲ ಎನ್ನುವ ಪ್ರಶ್ನೆ ಅನೇಕರಲ್ಲಿ ಕಾಡಿತ್ತು. ಇದಕ್ಕೆ ಈಗ ಉತ್ತರ ಸಿಕ್ಕಿದೆ. ಏನು ಇರುತ್ತೆ ಏನು ಇರುವುದಿಲ್ಲ ಎನ್ನುವುದಕ್ಕೆ ಇಲ್ಲಿದೆ ಮಾಹಿತಿ.
ಏನಿರುತ್ತೆ?
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ