ಡಿಕೆಶಿ ಪದಗ್ರಹಣಕ್ಕೆ ಅನುಮತಿ ನಿರಾಕರಣೆ - ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್​ ನಾಯಕರ ಆಕ್ರೋಶ

ಬಿಜೆಪಿಗೊಂದು ನ್ಯಾಯ, ಕಾಂಗ್ರೆಸ್ಸಿಗೊಂದು ನ್ಯಾಯ. ಒಬ್ಬರಿಗೊಂದು ನ್ಯಾಯ ಮಾಡುವುದು ಬೇಡ. ಅಮಿತ್ ಶಾ ಕಾರ್ಯಕ್ರಮ ಮಾಡಬಹುದು, ಆದರೆ ನಾವು ಮಾಡುವಂತಿಲ್ಲ. ಪಶ್ಚಿಮ ಬಂಗಾಳ ಮತ್ತು ದೆಹಲಿಯಲ್ಲಿ ಬಿಜೆಪಿ ಕಾರ್ಯಕ್ರಮಗಳಿಗೆ ಅವಕಾಶ ಕೊಟ್ಟಿದ್ದಾರೆ. ಇದು ಯಾವ ರೀತಿಯ ನ್ಯಾಯ ಎಂದು ಮತ್ತೊಂದು ಕಡೆ ಕಾಂಗ್ರೆಸ್​ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಪ್ರಶ್ನಿಸಿದ್ದಾರೆ.

ಡಿ.ಕೆ ಶಿವಕುಮಾರ್​​, ಸಿದ್ದರಾಮಯ್ಯ

ಡಿ.ಕೆ ಶಿವಕುಮಾರ್​​, ಸಿದ್ದರಾಮಯ್ಯ

  • Share this:
ಬೆಂಗಳೂರು(ಜೂ.10): ಕೆಪಿಸಿಸಿ ನೂತನ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪದಗ್ರಹಣ ಸಮಾರಂಭಕ್ಕೆ ಮತ್ತೆ ಅನುಮತಿ ನಿರಾಕರಿಸಿರುವ ರಾಜ್ಯ  ಸರ್ಕಾರದ ಕ್ರಮವನ್ನು ಹಿರಿಯ ಕಾಂಗ್ರೆಸ್ ನಾಯಕರು ತೀವ್ರವಾಗಿ ಖಂಡಿಸಿದ್ದಾರೆ. ಇಂದು ಈ ಸಂಬಂಧ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ಕೊರೋನಾ ನಿಯಮಗಳನ್ನ ಕಡ್ಡಾಯವಾಗಿ ಪಾಲಿಸಿ ಪದಗ್ರಹಣ ಕಾರ್ಯಕ್ರಮ ಮಾಡುತ್ತೇವೆ ಎಂದರು ಅನುಮತಿ ನೀಡಿಲ್ಲ. ಇದು ನಾಚಿಕೆಗೇಡಿನ ಸಂಗತಿ ಎಂದು ಕುಟುಕಿದರು.

ಬಿಜೆಪಿಗೊಂದು ನ್ಯಾಯ, ಕಾಂಗ್ರೆಸ್ಸಿಗೊಂದು ನ್ಯಾಯ. ಒಬ್ಬರಿಗೊಂದು ನ್ಯಾಯ ಮಾಡುವುದು ಬೇಡ. ಅಮಿತ್ ಶಾ ಕಾರ್ಯಕ್ರಮ ಮಾಡಬಹುದು, ಆದರೆ ನಾವು ಮಾಡುವಂತಿಲ್ಲ. ಪಶ್ಚಿಮ ಬಂಗಾಳ ಮತ್ತು ದೆಹಲಿಯಲ್ಲಿ ಬಿಜೆಪಿ ಕಾರ್ಯಕ್ರಮಗಳಿಗೆ ಅವಕಾಶ ಕೊಟ್ಟಿದ್ದಾರೆ. ಇದು ಯಾವ ರೀತಿಯ ನ್ಯಾಯ ಎಂದು ಮತ್ತೊಂದು ಕಡೆ ಕಾಂಗ್ರೆಸ್​ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಪ್ರಶ್ನಿಸಿದ್ದಾರೆ.

ಡಿಕೆಶಿ ಪದಗ್ರಹಣಕ್ಕೆ ಅನುಮತಿ ಕೊಡದೇ ಇರೋದು ಸರ್ಕಾರದ ದಮನಕಾರಿ ನೀತಿ ತೋರಿಸುತ್ತಿದೆ. ಕಾಂಗ್ರೆಸ್ ಮೇಲೆ ಬಿಜೆಪಿ ಗದಾ ಪ್ರಹಾರ ಮಾಡಲು ಹೊರಟಿದೆ. ಹೀಗೆ ಮಾಡುವುದು ತಪ್ಪು. ಕಾರ್ಯಕ್ರಮದಲ್ಲಿ 150 ಜನರಲ್ಲ, ಬದಲಿಗೆ 60 ಜನ ಸೇರುತ್ತಿರಲಿಲ್ಲ.  ಕಾನೂನಿನ ಪ್ರಕಾರವೇ ಕಾರ್ಯಕ್ರಮ ಮಾಡುತ್ತಿದ್ದೆವೆ ಎಂದು ಕಾಂಗ್ರೆಸ್​ ನಾಯಕರಾದ ಶಾಸಕ ಅಜಯ್ ಸಿಂಗ್ ಮತ್ತು ಪ್ರಿಯಾಂಕ ಖರ್ಗೆ ಸೇರಿದಂತೆ ಬಿಜೆಪಿ ಸರ್ಕಾರದ ನಡೆಯನ್ನು ಖಂಡಿಸಿದ್ದಾರೆ.

ಇದೇ ಜೂನ್​​ 14ನೇ ತಾರೀಕಿನಂದು ಪದಗ್ರಹಣಕ್ಕೆ ಮುಂದಾಗಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್​ ಸಾಕಷ್ಟು ಅಗತ್ಯ ಸಿದ್ಧತೆ ಮಾಡಿಕೊಂಡಿದ್ದರು. ಆದರೆ, ರಾಜ್ಯ ಸರ್ಕಾರ ನಿನ್ನೆ ಮತ್ತೆ ಯಾವುದೇ ರಾಜಕೀಯ ಕಾರ್ಯಕ್ರಮಕ್ಕೆ ಅವಕಾಶ ಇಲ್ಲ ಎಂದು ಹೇಳಿದೆ. ಕೇಂದ್ರ ಸರ್ಕಾರ ಕೊರೋನಾ ವೈರಸ್​ ಹಿನ್ನೆಲೆಯಲ್ಲಿ ಮದುವೆ, ಶವಸಂಸ್ಕಾರಕ್ಕೆ ಮಾತ್ರ ಅವಕಾಶ ನೀಡಿದೆ. ರಾಜಕೀಯ ಕಾರ್ಯಕ್ರಮಗಳಿಗೆ ನೀಡಿಲ್ಲ. ಹೀಗಾಗಿ ಪದಗ್ರಹಣ ಕಾರ್ಯಕ್ರಮಕ್ಕೆ ಅನುಮತಿ ಸಾಧ್ಯವಿಲ್ಲ ಎಂದು ಡಿಕೆಶಿಗೆ ಬರೆದ ಪತ್ರದಲ್ಲಿ ರಾಜ್ಯ ಸರ್ಕಾರ ಉಲ್ಲೇಖಿಸಿದೆ.

ಇದನ್ನೂ ಓದಿ: ಜೂ.14ರಂದು ನಡೆಯಬೇಕಿದ್ದ ಡಿಕೆಶಿ ಪದಗ್ರಹಣಕ್ಕೆ ಅನುಮತಿ ನಿರಾಕರಿಸಿದ ರಾಜ್ಯ ಸರ್ಕಾರ

ಮದುವೆಗೆ 50, ಶವಸಂಸ್ಕಾರಕ್ಕೆ 20 ಜನರಿಗೆ ಮಾತ್ರ ಅವಕಾಶವಿರುತ್ತಾದೆ ಎಂದು ಕೇಂದ್ರದ ಮಾರ್ಗಸೂಚಿ ತಿಳಿಸಿದೆ. ಹೀಗಾಗಿ ರಾಜಕೀಯ ಕಾರ್ಯಕ್ರಮಕ್ಕೆ ಅವಕಾಶವಿಲ್ಲ ಎಂದು ರಾಜ್ಯ ಸರ್ಕಾರ ಹೇಳಿದ ಕಾರಣ ಡಿಕೆಶಿ ಪದಗ್ರಹಣವೂ 4ನೇ ಸಲ ಮುಂದೂಡಬೇಕಾದ ಪರಿಸ್ಥಿತಿ ಎದುರಾಗಿದೆ.

ಲಾಕ್​ಡೌನ್​ನಿಂದಲೇ ಡಿಕೆಶಿ ಪದಗ್ರಹಣ ಕಾರ್ಯಕ್ರಮ ಮುಂದೂಡಲಾಗುತ್ತಿದೆ. ಈ ಸಂಬಂಧ ಅನುಮತಿ ಕೋರಿ ಡಿಕೆಶಿ ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪಗೆ ಪತ್ರವೂ ಬರೆದಿದ್ದರು. ಪ್ರಮಾನ ವಚನ ಸ್ವೀಕಾರ ಕಾರ್ಯಕ್ರಮಕ್ಕೆ ಅವಕಾಶ ನೀಡುವ ನಿರೀಕ್ಷೆಯೂ ಇತ್ತು. ಆದರೀಗ ನಾಲ್ಕನೇ ಬಾರಿಗೆ ಸರ್ಕಾರ ಅನುಮತಿ ನಿರಾಕರಿಸಿದೆ.
First published: