ಒಂದೂಕಾಲು ಲಕ್ಷ ದಾಟಿದ ದೇಶದ ಕೊರೋನಾ ಸೋಂಕು ಪೀಡಿತರ ಸಂಖ್ಯೆ

ಕೇಂದ್ರ ಆರೋಗ್ಯ ಇಲಾಖೆ ಮಾಹಿತಿಗಳ ಪ್ರಕಾರ ಮೇ 10ರಿಂದ  ದೇಶದಲ್ಲಿ ಕೊರೋನಾ ಸೋಂಕು ಪೀಡಿತರ ಸಂಖ್ಯೆ ಪ್ರತಿನಿತ್ಯ ನಾಲ್ಕು ಸಾವಿರಕ್ಕಿಂತ ಹೆಚ್ಚಾಗುತ್ತಲೇ ಇದೆ.‌

news18
Updated:May 23, 2020, 10:43 AM IST
ಒಂದೂಕಾಲು ಲಕ್ಷ ದಾಟಿದ ದೇಶದ ಕೊರೋನಾ ಸೋಂಕು ಪೀಡಿತರ ಸಂಖ್ಯೆ
ಸಾಂದರ್ಭಿಕ ಚಿತ್ರ
  • News18
  • Last Updated: May 23, 2020, 10:43 AM IST
  • Share this:
ನವದೆಹಲಿ(ಮೇ 23): ಕೊರೋನಾ ಸೋಂಕು ತಡೆಯಲೇಬೇಕೆಂದು ಒಂದಲ್ಲ, ಎರಡಲ್ಲ, ಮೂರಲ್ಲ, ನಾಲ್ಕು ಬಾರಿ‌ ದೇಶಕ್ಕೆ ದೇಶವನ್ನೇ ದಿಗ್ಬಂಧನಕ್ಕೊಳಪಡಿಸಲಾಗಿದೆ. ಆದರೂ ಸೋಂಕು ಹರಡುವಿಕೆ ಮಾತ್ರ ಕಮ್ಮಿ ಆಗಿಲ್ಲ. ಇತ್ತೀಚೆಗೆ  ಒಂದು ಲಕ್ಷದ ಗಡಿ ದಾಟಿದ್ದ ಕೊರೋನಾ ಪೀಡಿತರ ಸಂಖ್ಯೆ ಈಗ ಒಂದೂಕಾಲು ಲಕ್ಷ ದಾಟಿದೆ.

ವಾರದ ಆರಂಭದಲ್ಲಿ 5 ಸಾವಿರಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗಿದ್ದವು. ವಾರಾಂತ್ಯದಲ್ಲಿ 6 ಸಾವಿರಕ್ಕೂ ಹೆಚ್ಚು ಪ್ರಕರಣಗಳು ಪತ್ತೆಯಾಗತೊಡಗಿವೆ. ಗುರುವಾರ ಒಂದೇ ದಿನ 6,088 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದವು‌. ಶುಕ್ರವಾರ 6,654 ಹೊಸ ಪ್ರಕರಣಗಳು ಕಂಡುಬಂದಿವೆ. ನಿರಂತರವಾಗಿ ಎರಡು ದಿನಗಳಿಂದ 6 ಸಾವಿರಕ್ಕೂ ಹೆಚ್ಚು ಪ್ರಕರಣಗಳು ಪತ್ತೆಯಾಗಿದ್ದರಿಂದ ದೇಶದ ಕೊರೊನಾ ಪೀಡಿತರ ಸಂಖ್ಯೆ 1,25,101ಕ್ಕೆ ಏರಿಕೆಯಾಗಿದೆ.

ಇದಲ್ಲದೆ ನಿನ್ನೆ ಒಂದೇ ದಿನ ಕೊರೊನಾದಿಂದ 137 ಜನ ಮೃತಪಟ್ಟಿದ್ದಾರೆ. ಇದರಿಂದ ದೇಶದಲ್ಲಿ ಕೊರೊನಾದಿಂದ ಸತ್ತವರ ಸಂಖ್ಯೆ 3,720ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆಯಿಂದ ಮಾಹಿತಿ ಬಿಡುಗಡೆ ಮಾಡಿದೆ.

ಇದನ್ನೂ ಓದಿ: ರೋಗಲಕ್ಷಣ ಇಲ್ಲದ ಸೋಂಕಿತರಿಗೆ ಆಸ್ಪತ್ರೆವಾಸದ ಅವಧಿ ಇಳಿಕೆ? ಹೊರರಾಜ್ಯಗಳಿಂದ ಬಂದವರಿಗೆ ಮನೆಯಲ್ಲೇ ಕ್ವಾರಂಟೈನ್

ಕೇಂದ್ರ ಆರೋಗ್ಯ ಇಲಾಖೆ ಮಾಹಿತಿಗಳ ಪ್ರಕಾರ ಮೇ 10ರಿಂದ  ದೇಶದಲ್ಲಿ ಕೊರೋನಾ ಸೋಂಕು ಪೀಡಿತರ ಸಂಖ್ಯೆ ಪ್ರತಿನಿತ್ಯ ನಾಲ್ಕು ಸಾವಿರಕ್ಕಿಂತ ಹೆಚ್ಚಾಗುತ್ತಲೇ ಇದೆ.‌ ಮೇ 10ರಂದು 4,213 ಜನರಿಗೆ, ಮೇ 11ರಂದು 3,064 ಮಂದಿಗೆ, ಮೇ 12 ರಂದು 3,525 ಜನರಿಗೆ, ಮೇ 13ರಂದು 3,722 ಮಂದಿಗೆ ಹಾಗೂ ಮೇ 14ರಂದು 3,967 ಜನರಿಗೆ, ಮೇ 15ರಂದು 3,970 ಮಂದಿಗೆ, ಮೇ 16ರಂದು 4,987 ಜನರಿಗೆ, ಮೇ 17ರಂದು 5,242, ಮೇ 18ರಂದು 4,970, ಮೇ 19ರಂದು 5,611, ಮೇ 20ರಂದು 5,609, ಮೇ 21ರಂದು 6,088 ಮತ್ತು ಮೇ 22ರಂದು 6,654 ಹೊಸ ಪ್ರಕರಣಗಳು ಪತ್ತೆಯಾಗಿವೆ.

ಗಮನಿಸಬೇಕಾದ ಮತ್ತೊಂದು ಅಂಶವೆಂದರೆ ಲಾಕ್​ಡೌನ್​​ ನಿಯಮಗಳನ್ನು ಸಡಿಲಗೊಳಿಸಿದ ಮೇಲೆ ಕೊರೋನಾ ಸೋಂಕು ಹರಡುವಿಕೆ ದುಪ್ಪಟ್ಟಾಗಿದೆ. ಸದ್ಯದ ಮಾಹಿತಿ ಪ್ರಕಾರ ಪ್ರಯಾಣಿಕರ ರೈಲು ಸಂಚಾರವನ್ನು ಹಂತಹಂತವಾಗಿ ಹೆಚ್ಚಿಸಲಾಗುತ್ತದೆ. ಅಂತರ ರಾಜ್ಯ ಸಂಚಾರಕ್ಕೂ ಅವಕಾಶ ಮಾಡಿಕೊಡಲಾಗಿದೆ. ಆದುದರಿಂದ ಲಾಕ್​ ಡೌನ್​ ನಡುವೆಯೇ ತೀವ್ರಗೊಂಡಿದ್ದ ಕೊರೋನಾ ಲಾಕ್ ​ಡೌನ್​ ಇಲ್ಲದಿದ್ದಾಗ ತಹಬದಿಗೆ ಬರುತ್ತದೆ ಎಂದು ಹೇಳಲು ಸಾಧ್ಯವಿಲ್ಲ.

ಇದನ್ನೂ ಓದಿ: ಬೆಂಗಳೂರಿನ ಹೈ ಫೈ ಸಲೂನ್​ಗಳಲ್ಲಿ ಸ್ವಚ್ಛತೆ ಹೇಗಿದೆ ಗೊತ್ತಾ? ಕೊರೊನಾ ಕಲಿಸಿರುವ ಸ್ಯಾನಿಟೈಸೇಶನ್ ಪಾಠಗಳುಪ್ರತಿದಿನವೂ ಸೋಂಕು ಪೀಡಿತರು ಸಂಖ್ಯೆ ಹೀಗೆ ಹೆಚ್ಚಾಗುತ್ತಿದ್ದರೆ ಶೀಘ್ರವೇ ಭಾರತದ ‌ಕೊರೋನಾ ಸೋಂಕು ಪೀಡಿತರ ಸಂಖ್ಯೆಯಲ್ಲಿ ಜಾಗತಿಕವಾಗಿ 'ಟಾಪ್ ಟೆನ್' ಒಳಗೂ ಬರುವ ಅಪಾಯವಿದೆ. ಸದ್ಯ ಜಾಗತಿಕವಾಗಿ ಕೊರೋನಾ ಸೋಂಕು ಪೀಡಿತರ ಸಂಖ್ಯೆಯಲ್ಲಿ ಈಗ ಭಾರತವು 11ನೇ ಸ್ಥಾನ ತಲುಪಿದೆ. 11ನೇ ಸ್ಥಾನದಲ್ಲಿದ್ದ ಚೀನಾ 12ನೇ ಸ್ಥಾನಕ್ಕೆ ಹೋಗಿದೆ.‌ ಅಮೇರಿಕಾ ಮೊದಲ ಸ್ಥಾನದಲ್ಲಿದೆ.

ವರದಿ: ಧರಣೀಶ್ ಬೂಕನಕೆರೆ

First published:May 23, 2020
ಮತ್ತಷ್ಟು ಓದಿರಿ
ಮುಂದಿನ ಸುದ್ದಿ
corona virus btn
corona virus btn
Loading