ಕೊರೋನಾ ಬಿಕ್ಕಟ್ಟು: ಸರ್ವಪಕ್ಷಗಳ ಸಭೆಯಲ್ಲಿ ತೆಗೆದುಕೊಂಡ ನಿರ್ಣಯಗಳು

ಈ ಸಭೆಯಲ್ಲಿ ವಿಪಕ್ಷ ನಾಯಕರು ವ್ಯಕ್ತಪಡಿಸಿದ ಸಲಹೆಗಳನ್ನು ಆದಷ್ಟೂ ಅನುಷ್ಠಾನಕ್ಕೆ ತರುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಭರವಸೆ ನೀಡಿದ್ದಾರೆ.

news18
Updated:March 29, 2020, 4:15 PM IST
ಕೊರೋನಾ ಬಿಕ್ಕಟ್ಟು: ಸರ್ವಪಕ್ಷಗಳ ಸಭೆಯಲ್ಲಿ ತೆಗೆದುಕೊಂಡ ನಿರ್ಣಯಗಳು
ಸಿಎಂ ಬಿ.ಎಸ್.ಯಡಿಯೂರಪ್ಪ.
  • News18
  • Last Updated: March 29, 2020, 4:15 PM IST
  • Share this:
ಬೆಂಗಳೂರು(ಮಾ. 29): ರಾಜ್ಯದಲ್ಲಿ ದಿನೇ ದಿನೇ ಕೊರೋನಾ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪರಿಸ್ಥಿತಿ ಎದುರಿಸಲು ಸರ್ಕಾರ ಇಂದು ಸರ್ವ ಪಕ್ಷಗಳ ಸಭೆ ನಡೆಸಿತು. ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಈ ಸಭೆಯಲ್ಲಿ ಆರೋಗ್ಯ ಸಚಿವ ಶ್ರೀರಾಮುಲು, ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ, ಉಪಮುಖ್ಯಮಂತ್ರಿಗಳಾದ ಲಕ್ಷ್ಮಣ್ ಸವದಿ ಮತ್ತು ಅಶ್ವಥ್ ನಾರಾಯಣ, ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿಪಕ್ಷ ನಾಯಕ ಎಸ್.ಆರ್. ಪಾಟೀಲ್, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಕೆಪಿಸಿಸಿ ಕ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ಮಾಜಿ ಸ್ಪೀಕರ್ ರಮೇಶ್ ಕುಮಾರ್, ಜೆಡಿಎಸ್ ಸದಸ್ಯರಾದ ಮಾಜಿ ಸಿಎಂ ಕುಮಾರಸ್ವಾಮಿ, ಬಸವರಾಜ್ ಹೊರಟ್ಟಿ, ಹೆಚ್.ಡಿ. ರೇವಣ್ಣ‌ ಅವರು ಪಾಲ್ಗೊಂಡಿದ್ದರು.

ಈ ಸಭೆಯಲ್ಲಿ ಮಾತನಾಡಿದ ವಿಪಕ್ಷ ನಾಯಕರಾದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ, ಕುಮಾರಸ್ವಾಮಿ ಮೊದಲಾದವರು ಸರ್ಕಾರಕ್ಕೆ ಅನೇಕ ಸಲಹೆಗಳನ್ನ ನೀಡಿದರು. ಸರ್ಕಾರ ಮೊದಲೇ ಇನ್ನಷ್ಟು ಮುಂಜಾಗ್ರತಾ ಕ್ರಮಗಳನ್ನ ಕೈಗೊಂಡಿದ್ದರೆ ಪರಿಸ್ಥಿತಿ ಈ ಮಟ್ಟಕ್ಕೆ ಬರುತ್ತಿರಲಿಲ್ಲ. ಮುಂದೆ ಹೆಚ್ಚು ಜಾಗ್ರತೆಯಿಂದ ನಿಭಾಯಿಸಿ ಎಂದು ಇವರು ಸರ್ಕಾರಕ್ಕೆ ಚುರುಕು ಮುಟ್ಟಿಸಿದರು. ಈ ಸಭೆಯಲ್ಲಿ ಸರ್ವ ಪಕ್ಷಗಳ ಸದಸ್ಯರು ಸೇರಿ ಕೆಲ ಪ್ರಮುಖ ನಿರ್ಣಯಗಳನ್ನ ಮಾಡಿದ್ದು, ಸರ್ಕಾರ ಅದನ್ನು ಜಾರಿಗೊಳಿಸಲಿದೆ.

ಇದನ್ನೂ ಓದಿ: Fact Check - ದಿನಕ್ಕೆ ಮೂರೂವರೆ ತಾಸು ಮಾತ್ರ ವೈನ್ ಶಾಪ್: ಈ ಸುದ್ದಿ ನಿಜವೇ?

ಸರ್ವ ಪಕ್ಷಗಳ ಸಭೆಯಲ್ಲಿ ಬಂದ ನಿರ್ಣಯಗಳು:

1) ಸರ್ವ ಪಕ್ಷಗಳ ಸಭೆಯಲ್ಲಿ ನಾಯಕರು ಮುಂದಿಟ್ಟ ಉಪಯುಕ್ತ ಸಲಹೆಗಳನ್ನು ಅನುಷ್ಠಾನಕ್ಕೆ ತರುವುದು.

2) ಕೊರೋನಾ ಬಿಕ್ಕಟ್ಟು ಶಮನಕ್ಕೆ ಸರ್ಕಾರದ ಕ್ರಮಗಳಿಗೆ ಸರ್ವಪಕ್ಷಗಳ ಮುಖಂಡರಿಂದ ಒಕ್ಕೊರಲಿನ ಬೆಂಬಲ

3) ಸೋಂಕಿತರಿಗೆ ಚಿಕಿತ್ಸೆ ನೀಡುವ ವೈದ್ಯರು, ನರ್ಸ್‍ಗಳು ಹಾಗೂ ಅರೆ ವೈದ್ಯಕೀಯ ಸಿಬ್ಬಂದಿಗೆ ಪಿಪಿಇ ಕಿಟ್, ಮಾಸ್ಕ್ ಹಾಗೂ ಸ್ಯಾನಿಟೈಜರ್ ಬಾಟಲಿಗಳನ್ನು ಸರಬರಾಜು ಮಾಡಲು ಕೂಡಲೇ ಕ್ರಮ ಕೈಗೊಳ್ಳಲಾಗುವುದು.4) ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ರಕ್ಷಣಾ ಸಾಧನಗಳನ್ನು ಒದಗಿಸಲು ಕೂಡಲೇ ಕ್ರಮಕೈಗೊಳ್ಳಲಾಗುವುದು.

5) ರಾಜ್ಯದ ಗಡಿಗಳಲ್ಲಿ ಸಿಕ್ಕಿಕೊಂಡಿರುವ ಜನರ ವೈದ್ಯಕೀಯ ತಪಾಸಣೆ ನಡೆಸಿ, ಅವರಿಗೆ ಆಶ್ರಯ ಕಲ್ಪಿಸಲು ವ್ಯವಸ್ಥೆ ಮಾಡಲಾಗುವುದು.

6) ಸೋಂಕಿಗೊಳಗಾಗಿರುವ ಪ್ರಯಾಣಿಕರಿಗೆ ಕ್ವಾರಂಟೈನ್ ವ್ಯವಸ್ಥೆಗೆ ಒಳಪಡಿಸಲು ಹಾಗೂ ಆರೋಗ್ಯವಾಗಿರುವ ಪ್ರಯಾಣಿಕರನ್ನು ಅವರ ಸ್ಥಳಗಳಿಗೆ ತಲುಪಿಸಲು ಕ್ರಮ ಕೈಗೊಳ್ಳಲಾಗುವುದು.

7) ಜಿಲ್ಲಾ ಹಾಗೂ ತಾಲ್ಲೂಕು ಆಸ್ಪತ್ರೆಗಳಿಗೆ ಅಗತ್ಯ ಸಂಖ್ಯೆಯಲ್ಲಿ ಟೆಸ್ಟಿಂಗ್ ಕಿಟ್ (ಪರೀಕ್ಷಾ ಸಾಧನಗಳು) ವಿತರಿಸಲಾಗುವುದು.

8) ರೈತರ ಕೃಷಿ ಉತ್ಪನ್ನಗಳ ಸಾಗಣೆ, ಮಾರಾಟ ಮತ್ತು ವಿತರಣೆಗೆ ವ್ಯವಸ್ಥೆ ಮಾಡಲಾಗುವುದು.

9) ಬಿತ್ತನೆ ಬೀಜ, ರಸಗೊಬ್ಬರ, ಕೀಟನಾಶಕ ಇತ್ಯಾದಿಗಳ ವಿತರಣೆಗೆ ಸೂಕ್ತ ವ್ಯವಸ್ಥೆ ಮಾಡಲಾಗುವುದು.

10) ಪಡಿತರವನ್ನು ಫಲಾನುಭವಿಗಳ ಮನೆಬಾಗಿಲಿಗೆ ತಲುಪಿಸುವ ಸಲಹೆಯನ್ನು ವಿರೋಧ ಪಕ್ಷದ ನಾಯಕರು ನೀಡಿದ್ದು, ಆ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು.

11) ತಮ್ಮ ತಮ್ಮ ಮನೆಗಳಲ್ಲಿಯೇ ಪ್ರಾರ್ಥನೆ ನಡೆಸಲು ಒಪ್ಪಿ ಸಹಕರಿಸಿರುವ ಮುಸ್ಲಿಮ್ ಬಾಂಧವರಿಗೆ ಅಭಿನಂದನೆ.

First published:March 29, 2020
ಮತ್ತಷ್ಟು ಓದಿರಿ
ಮುಂದಿನ ಸುದ್ದಿ
corona virus btn
corona virus btn
Loading