ಹೊಟ್ಟೆಪಾಡಿಗಾಗಿ ಆಂಧ್ರಕ್ಕೆ ತೆರಳಿ ಈಗ ದುಡಿಮೆಯೂ ಇಲ್ಲದೆ, ವಾಪಾಸ್ ರಾಜ್ಯಕ್ಕೂ ಹಿಂದಿರುಗಲಾಗದೆ ಪರಿತಪಿಸುತ್ತಿರುವ ಕರ್ನಾಟಕ ಮೂಲದ ನೂರಕ್ಕೂ ಹೆಚ್ಚು ಕಾರ್ಮಿಕರು ದಯವಿಟ್ಟು ನಮ್ಮನ್ನು ಕಾಪಾಡಿ ಇಲ್ಲಿಂದ ಕರೆದುಕೊಂಡು ಹೋಗಿ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಲ್ಲಿ ಮನವಿ ಮಾಡಿದ್ದಾರೆ.
ಬೇಕರಿ ಕೆಲಸಕ್ಕೆಂದು ಕರ್ನಾಟಕದಿಂದ ನೂರಾರು ಜನ ಆಂಧ್ರಪ್ರದೇಶದ ಗುಂಟೂರಿಗೆ ತೆರಳಿದ್ದಾರೆ. ಆದರೆ, ಕೊರೋನಾ ಹಿನ್ನೆಲೆ ಇಡೀ ರಾಷ್ಟ್ರದಾದ್ಯಂತ ಲಾಕ್ಡೌನ್ ಘೋಷಿಸಲಾಗಿದೆ. ಹೀಗಾಗಿ ಗುಂಟೂರಿನಲ್ಲಿ ಸಿಲುಕಿಕೊಂಡಿರುವ ಕರ್ನಾಟಕ ಮೂಲದ ಕೂಲಿ ಕಾರ್ಮಿಕರಿಗೆ ಕೆಲಸವೂ ಇಲ್ಲ ಮತ್ತೊಂದೆಡೆ ರಾಜ್ಯಕ್ಕೂ ಹಿಂದಿರುಗಲಾಗದ ಸ್ಥಿತಿ ಎದುರಾಗಿದೆ. ಇನ್ನೂ ದುಡಿಮೆ ಇಲ್ಲದೆ ಒಪ್ಪೊತ್ತಿನ ಊಟಕ್ಕೂ ಪರದಾಡುವ ಸ್ಥಿತಿ ಎದುರಾಗಿದೆ.
ಹೀಗಾಗಿ ಸಂಷಕ್ಟಕ್ಕೆ ಸಿಲುಕಿರುವ ನೂರಾರು ಜನ ಕಾರ್ಮಿಕರು ವಿಡಿಯೋ ಮಾಡುವ ಮೂಲಕ ಸಿಎಂ ಯಡಿಯೂರಪ್ಪ ತಮ್ಮ ಕಷ್ಟಕ್ಕೆ ಸ್ಪಂದಿಸಬೇಕು, ರಾಜ್ಯಕ್ಕೆ ಕರೆದುಕೊಂಡು ಹೋಗಬೇಕು ಎಂದು ಮೊರೆಯಿಟ್ಟಿದ್ದಾರೆ. ಅಲ್ಲದೆ, ಈ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಈ ವಿಡಿಯೋ ಇದೀಗ ವೈರಲ್ ಆಗಿದ್ದು ಕನ್ನಡಿಗರ ರಕ್ಷಣೆಗೆ ಸಿಎಂ ಧಾವಿಸಬೇಕು ಎಂಬ ಮಾತುಗಳು ಕೇಳಿಬರುತ್ತಿವೆ.
ಇದನ್ನೂ ಓದಿ : ಕೊರೋನಾ ಲಾಕ್ ಡೌನ್ ಹಿನ್ನಲೆ; ಮಂಗಳೂರಿನಿಂದ ಉತ್ತರ ಕರ್ನಾಟಕಕ್ಕೆ ನಡೆದೇ ಸಾಗುತ್ತಿರುವ ಕಾರ್ಮಿಕರ ತಂಡ
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ