• Home
 • »
 • News
 • »
 • coronavirus-latest-news
 • »
 • ಕೊರೋನಾ ಭೀತಿಯಿಂದ ಕೇರಳ ಗಡಿ ಬಂದ್ - ಬಂಡೀಪುರ ಚೆಕ್ ಪೋಸ್ಟ್ ನಲ್ಲಿ ವಾಹನ ಸಂಚಾರ ನಿಷೇಧ

ಕೊರೋನಾ ಭೀತಿಯಿಂದ ಕೇರಳ ಗಡಿ ಬಂದ್ - ಬಂಡೀಪುರ ಚೆಕ್ ಪೋಸ್ಟ್ ನಲ್ಲಿ ವಾಹನ ಸಂಚಾರ ನಿಷೇಧ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ನೆರೆಯ ಕೇರಳದಿಂದ ಯಾವುದೇ ವಾಹನ ಕರ್ನಾಟಕ ಪ್ರವೇಶ ಮಾಡದಂತೆ ಕಟ್ಟೆಚ್ಚರ ವಹಿಸಲಾಗಿದೆ.  ಆ್ಯಂಬುಲೆನ್ಸ್ ನಂತಹ ತುರ್ತು ವಾಹನಗಳಿಗಷ್ಟೆ ಅವಕಾಶ ನೀಡಲಾಗಿದೆ

 • Share this:

  ಚಾಮರಾಜನಗರ(ಮಾ.23) : ಕೊರೋನಾ ಭೀತಿಯ ಹಿನ್ನಲೆಯಲ್ಲಿ ಕರ್ನಾಟಕ ಕೇರಳ ಗಡಿ ಬಂದ್ ಮಾಡಲಾಗಿದೆ. ಚಾಮರಾಜನಗರ ಜಿಲ್ಲೆಯ ಬಂಡೀಪುರದ ಮೂಲೆಹೊಳೆ ಚೆಕ್ ಪೋಸ್ಟ್ ಮೂಲಕ ವಾಹನಗಳ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.


  ನೆರೆಯ ಕೇರಳದಿಂದ ಯಾವುದೇ ವಾಹನ ಕರ್ನಾಟಕ ಪ್ರವೇಶ ಮಾಡದಂತೆ ಕಟ್ಟೆಚ್ಚರ ವಹಿಸಲಾಗಿದೆ.  ಆ್ಯಂಬುಲೆನ್ಸ್ ನಂತಹ ತುರ್ತು ವಾಹನಗಳಿಗಷ್ಟೆ ಅವಕಾಶ ನೀಡಲಾಗಿದೆ. ಬಸ್ ಕಾರು ಸೇರಿದಂತೆ ಯಾವುದೇ ರೀತಿಯ ಪ್ರಯಾಣಿಕರ ವಾಹನಗಳ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ.


  ಅಂತರರಾಜ್ಯ ಗಡಿ ಪ್ರದೇಶಗಳಲ್ಲಿ ಗಳಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದ್ದು ನಿನ್ನೆಯಿಂದ ಕೇರಳ ಚೆಕ್ ಪೋಸ್ಟ್ ನ್ನು ಸಂಪೂರ್ಣವಾಗಿ ಬಂದ್ ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆನಂದಕುಮಾರ್ ತಿಳಿಸಿದ್ದಾರೆ.


  ಉಳಿದಂತೆ ಚಾಮರಾಜನಗರ ಜಿಲ್ಲೆಯಿಂದ ತಮಿಳುನಾಡು ರಾಜ್ಯಕ್ಕೆ ಸಂಪರ್ಕ ಕಲ್ಪಿಸುವ ಪಾಲಾರ್, ನಾಲಾರೋಡ್ ಪುಣಜನೂರು ಹಾಗು ಅರ್ಧನಾರೀಪುರ ಚೆಕ್ ಪೋಸ್ಟ್ ಗಳಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದ್ದು ಕೊರೋನಾ ಲಕ್ಷಣ ಇರುವ ವ್ಯಕ್ತಿಗಳು ರಾಜ್ಯಕ್ಕೆ ಪ್ರವೇಶ ಮಾಡದಂತೆ ಪೊಲೀಸ್ ಹಾಗು ಆರೋಗ್ಯ ಇಲಾಖೆ ಸಿಬ್ಬಂದಿಯಿಂದ ಕಟ್ಟೆಚ್ಚರ ವಹಿಸಲಾಗಿದೆ.


  ನೆರೆಯ ಮೈಸೂರು ಜಿಲ್ಲೆಯನ್ನು ಲಾಕ್ ಡೌನ್ ಮಾಡಿರುವ ಹಿನ್ನಲೆಯಲ್ಲಿ ಚಾಮರಾಜನಗರ ಜಿಲ್ಲೆಯಲ್ಲಿ ಮೂರು ಕಡೆ ಅಂತರಜಿಲ್ಲಾ ಚೆಕ್ ಪೋಸ್ಟ್ ಗಳನ್ನು ಸ್ಥಾಪಿಸಲಾಗಿದೆ. ಕೊಳ್ಳೇಗಾಲ ತಾಲೋಕಿನ ಸತ್ತೇಗಾಲ. ಗುಂಡ್ಲುಪೇಟೆ ತಾಲೋಕಿನ ಬೇಗೂರು, ಚಾಮರಾಜನಗರ ತಾಲೋಕಿನ ಹೆಗ್ಗವಾಡಿ ಹಾಗು ಮೂಗೂರು ಕ್ರಾಸ್ ಹೀಗೆ ನಾಲ್ಕು ಕಡೆ ಆಂತರಿಕ ಚೆಕ್ ಪೋಸ್ಟ್ ಗಳನ್ನು ತೆರೆಯಲಾಗಿದೆ.


  ಇದನ್ನೂ ಓದಿ : ಕೊರೋನಾ ಸೋಂಕಿನ ಬಗ್ಗೆ ಕಲೆಯ ಮೂಲಕ ಜಾಗೃತಿ - ಅರಿವಿನೊಂದಿಗೆ ವೈರಸ್ ನಿಯಂತ್ರಿಸುವಂತೆ ಮನವಿ


  ಆರೋಗ್ಯ ಇಲಾಖೆ ಹಾಗೂ ಪೊಲೀಸ್ ಇಲಾಖೆ ಸಿಬ್ಬಂದಿಯಿಂದ ಪ್ರತಿಯೊಬ್ಬ ಪ್ರಯಾಣಿಕರನ್ನು ಕೂಲಂಕುಷವಾಗಿ ತಪಾಸಣೆಗೆ ಒಳಪಡಿಸಲಾಗುತ್ತಿದೆ. ರೋಗ ಲಕ್ಷಣಗಳು ಇರುವ ವ್ಯಕ್ತಿಗಳು ಕಂಡು ಬಂದಲ್ಲಿ ಅವರನ್ನು ಕ್ವಾರಂಟೈನ್ ಅಥವಾ ಐಸೋಲೇಷನ್ ವಾರ್ಡ್ ನಲ್ಲಿ ಇಡಲು ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗಿದೆ ಎಂದು ಎಸ್ಪಿ ಆನಂದಕುಮಾರ್ ತಿಳಿಸಿದ್ದಾರೆ.

  Published by:G Hareeshkumar
  First published: