ಬೆಂಗಳೂರು: ಸಿಎಂ ಬಿಎಸ್ ಯಡಿಯೂರಪ್ಪ ಅವರು ಎರಡನೇ ಬಾರಿಗೆ ಕೊರೋನಾ ವೈರಸ್ಗೆ ತುತ್ತಾಗಿ, ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮುಖ್ಯಮಂತ್ರಿಗಳಿಗೆ ಕೊರೋನಾ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ ನಡೆದ ಸಭೆಯಲ್ಲಿ ಪಾಲ್ಗೊಂಡಿದ್ದ ಆರೋಗ್ಯ ಸಚಿವರಾದ ಕೆ.ಸುಧಾಕರ್ ಅವರು ಕ್ವಾರಂಟೈನ್ ಆಗಬೇಕೇ ಎಂಬ ಪ್ರಶ್ನೆ ವ್ಯಕ್ತವಾಗಿದೆ. ಈ ಪ್ರಶ್ನೆಗೆ ಸಚಿವ ಸುಧಾಕರ್ ಅವರೇ ಟ್ವಿಟರ್ ಮೂಲಕ ಉತ್ತರ ನೀಡಿದ್ದಾರೆ.
ಇಂದು ನಡೆದ ಸಭೆ ಮುಖ್ಯಮಂತ್ರಿಗಳ ಅಧಿಕೃತ ನಿವಾಸದ ಹೊರಾಂಗಣದಲ್ಲಿ ನಡೆದಿದ್ದು, ಭೌತಿಕ ಅಂತರ, ಮಾಸ್ಕ್ ಧರಿಸುವ ಮುನ್ನೆಚ್ಚರಿಕೆಗಳನ್ನು ಪಾಲಿಸಲಾಗಿತ್ತು. ಕೋವಿಡ್ ಎರಡನೇ ಅಲೆಯನ್ನು ಎದುರಿಸುತ್ತಿರುವ ಸಂದರ್ಭದಲ್ಲಿ ರಾಜ್ಯದ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವನ ಸ್ಥಾನದಲ್ಲಿ ಸ್ವತಃ ಮುಂಚೂಣಿ ಕಾರ್ಯಕರ್ತನಾಗಿ ಕಾರ್ಯ ನಿರ್ವಹಿಸುತ್ತಿರುವ ನಾನು ನನ್ನ ಕರ್ತವ್ಯವನ್ನು ಎಂದಿನಂತೆ ಮುಂದುವರಿಸುವುದು ಅತ್ಯಂತ ಅನಿವಾರ್ಯವಾಗಿದೆ. ಆದ್ದರಿಂದ ಸಾಮಾಜಿಕ ಅಂತರ, ಮಾಸ್ಕ್ ಮುಂತಾದ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸುತ್ತ ಕನಿಷ್ಠ ಜನ ಸಂಪರ್ಕದೊಂದಿಗೆ ದೈನಂದಿನ ಕೆಲಸ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುತ್ತೇನೆ. ನಾಲ್ಕು ದಿನಗಳ ನಂತರ ಕೊರೋನಾ ಪರೀಕ್ಷೆಗೆ ಒಳಪಡುತ್ತೇನೆ. ಕ್ವಾರಂಟೈನ್ ಬದಲು ಪರೀಕ್ಷೆಗೆ ಒಳಪಡೋದಾಗಿ ಸುಧಾಕರ್ ತಿಳಿಸಿದ್ದಾರೆ.
ಮುಖ್ಯಮಂತ್ರಿಗಳಿಗೆ ಕೊರೊನಾ ಸೋಂಕು ಧೃಢಪಟ್ಟಿರುವ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ ನಡೆದ ಸಭೆಯಲ್ಲಿ ಪಾಲ್ಗೊಂಡಿದ್ದ ನಾನು ಕ್ವಾರಂಟೈನ್ ಆಗಬೇಕೇ ಎಂಬ ಪ್ರಶ್ನೆ ವ್ಯಕ್ತವಾಗಿದೆ.
ಇಂದು ನಡೆದ ಸಭೆ ಮುಖ್ಯಮಂತ್ರಿಗಳ ಅಧಿಕೃತ ನಿವಾಸದ ಹೊರಾಂಗಣದಲ್ಲಿ ನಡೆದಿದ್ದು, ಭೌತಿಕ ಅಂತರ, ಮಾಸ್ಕ್ ಧರಿಸುವ ಮುನ್ನೆಚ್ಚರಿಕೆಗಳನ್ನು ಪಾಲಿಸಲಾಗಿತ್ತು.
1/3
— Dr Sudhakar K (@mla_sudhakar) April 16, 2021
ಆದ್ದರಿಂದ ಸಾಮಾಜಿಕ ಅಂತರ, ಮಾಸ್ಕ್ ಮುಂತಾದ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸುತ್ತ ಕನಿಷ್ಠ ಜನಸಂಪರ್ಕದೊಂದಿಗೆ ದೈನಂದಿನ ಕೆಲಸ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುತ್ತೇನೆ. ನಾಲ್ಕು ದಿನಗಳ ನಂತರ ಕೊರೊನಾ ಪರೀಕ್ಷೆಗೆ ಒಳಪಡುತ್ತೇನೆ.
3/3
— Dr Sudhakar K (@mla_sudhakar) April 16, 2021
ಸಿಎಂ ಬಿಎಸ್ ಯಡಿಯೂರಪ್ಪ ಅವರು ಮತ್ತೆ ಕೊರೋನಾ ಸೋಂಕಿಗೆ ಒಳಗಾಗಿದ್ದು, ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇಂದು ಜ್ವರ ಬಂದ ಹಿನ್ನೆಲೆಯಲ್ಲಿ ರಾಮಯ್ಯ ಆಸ್ಪತ್ರೆಗೆ ತೆರಳಿ ಪರೀಕ್ಷೆ ಮಾಡಿಸಿಕೊಂಡಿದ್ದಾರೆ. ಪರೀಕ್ಷೆ ವರದಿಯಲ್ಲಿ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಈ ಹಿಂದೆ ಕೊರೋನಾ ಸೋಂಕಿಗೆ ತುತ್ತಾದಾಗ ಮಣಿಪಾಲ್ ಆಸ್ಪತ್ರೆಯಲ್ಲಿ ಬಿಎಸ್ವೈ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು. ಅದರಂತೆ ಇದೀಗ ಮತ್ತೆ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯಲಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ