Coronavirus Pandemic: ಕೊರೋನಾ ಭೀತಿ; SSLC ಪರೀಕ್ಷೆಯನ್ನೇ ರದ್ದುಗೊಳಿಸಿ ಆದೇಶಿಸಿದ ಆಂಧ್ರಪ್ರದೇಶ ಸರ್ಕಾರ

ದಕ್ಷಿಣದ ರಾಜ್ಯಗಳ ಪೈಕಿ ಕೇರಳ ಸರ್ಕಾರ ಮಾತ್ರ 3 ವಿಷಯದ SSLC ಪರೀಕ್ಷೆಯನ್ನು ಮೇ ಅಂತ್ಯದಲ್ಲಿ ಯಶಸ್ವಿಯಾಗಿ ನಡೆಸಿದೆ. ತೆಲಂಗಾಣ, ತಮಿಳುನಾಡು ಮತ್ತು ಆಂಧ್ರ ಪ್ರದೇಶ ಸರ್ಕಾರಗಳು ಪರೀಕ್ಷೆಯನ್ನು ರದ್ದುಗೊಳಿಸಿ ವಿದ್ಯಾರ್ಥಿಗಳಿಗೆ ಮುಂಬಡ್ತಿ ನೀಡಿದೆ.

MAshok Kumar | news18-kannada
Updated:June 20, 2020, 7:58 PM IST
Coronavirus Pandemic: ಕೊರೋನಾ ಭೀತಿ; SSLC ಪರೀಕ್ಷೆಯನ್ನೇ ರದ್ದುಗೊಳಿಸಿ ಆದೇಶಿಸಿದ ಆಂಧ್ರಪ್ರದೇಶ ಸರ್ಕಾರ
ಸಾಂದರ್ಭಿಕ ಚಿತ್ರ
  • Share this:
ಆಂಧ್ರಪ್ರದೇಶ (ಜೂನ್‌ 20); ದೇಶದಲ್ಲಿ ಕೊರೋನಾ ಸೋಂಕಿನ ಪ್ರಮಾಣ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಕೊರೋನಾ ಭಯದಿಂದಾಗಿಯೇ ಕಳೆದ ಮಾರ್ಚ್‌‌ನಲ್ಲೇ ನಡೆಯಬೇಕಿದ್ದ 10ನೇ ತರಗತಿ ಪರೀಕ್ಷೆಯನ್ನು ಎಲ್ಲಾ ರಾಜ್ಯಗಳು ತಾತ್ಕಾಲಿಕವಾಗಿ ಮುಂದೂಡಿದ್ದವು. ಆದರೆ, ಪ್ರಸ್ತುತ ಆಂಧ್ರಪ್ರದೇಶದ ಜಗನ್‌ಮೋಹನ್‌ ರೆಡ್ಡಿ ಸರ್ಕಾರ 10ನೇ ತರಗತಿ ಪರೀಕ್ಷೆಯನ್ನೇ ರದ್ದುಗೊಳಿಸಿ ಆದೇಶಿಸಿದೆ. ಕಳೆದ ವಾರ ತಮಿಳುನಾಡು ಸರ್ಕಾರ ಸಹ 10ನೇ ತರಗತಿ ಪರೀಕ್ಷೆಯನ್ನು ರದ್ದುಮಾಡಿ ಆದೇಶಿಸಿತ್ತು.

ಇಂದು ಈ ಕುರಿತು ಸ್ಪಷ್ಟೀಕರಣ ನೀಡಿರುವ ಆಂಧ್ರಪ್ರದೇಶದ ಶಿಕ್ಷಣ ಸಚಿವ ಆದಿಮುಲಾಪು ಸುರೇಶ್, "ರಾಜ್ಯದಲ್ಲಿ ಮತ್ತು ದೇಶದಲ್ಲಿ ಕೊರೋನಾ ಸೋಂಕು ಈವರೆಗೆ ತಹಬಂದಿದೆ ಬಂದಿಲ್ಲ. ಹೀಗಾಗಿ ವಿದ್ಯಾರ್ಥಿಗಳ ಆರೋಗ್ಯದ ದೃಷ್ಟಿಯಿಂದ SSLC ಪರೀಕ್ಷೆಯನ್ನೇ ರದ್ದು ಮಾಡಿದ್ದು ಎಲ್ಲಾ ವಿದ್ಯಾರ್ಥಿಗಳನ್ನು ಉತ್ತೀರ್ಣಗೊಳಿಸಲಾಗಿದೆ" ಎಂದು ತಿಳಿಸಿದ್ದಾರೆ.
ಆಂಧ್ರ ಪ್ರದೇಶದಲ್ಲಿ ಈವರೆಗೆ ಒಟ್ಟು 7961 ಕೊರೋನಾಪ್ರಕರಣಗಳು ದಾಖಲಿಸಿದ್ದು, 96 ಜನ ಮೃತಪಟ್ಟಿದ್ದಾರೆ. 3,948 ಜನ ಇನ್ನು ಚಿಕಿತ್ಸೆ ಪಡೆಯುತ್ತಿದ್ದು, ಇಂದು ಒಂದೇ ದಿನ 443 ಪ್ರಕರಣಗಳು ವರದಿಯಾಗಿರುವುದು ಜನರಲ್ಲಿ ಆತಂಕ ಹೆಚ್ಚಿಸಿದೆ.ದಕ್ಷಿಣದ ರಾಜ್ಯಗಳ ಪೈಕಿ ಕೇರಳ ಸರ್ಕಾರ ಮಾತ್ರ 3 ವಿಷಯದ SSLC ಪರೀಕ್ಷೆಯನ್ನು ಮೇ ಅಂತ್ಯದಲ್ಲಿ ಯಶಸ್ವಿಯಾಗಿ ನಡೆಸಿದೆ. ತೆಲಂಗಾಣ, ತಮಿಳುನಾಡು ಮತ್ತು ಆಂಧ್ರ ಪ್ರದೇಶ ಸರ್ಕಾರಗಳು ಪರೀಕ್ಷೆಯನ್ನು ರದ್ದುಗೊಳಿಸಿ ವಿದ್ಯಾರ್ಥಿಗಳಿಗೆ ಮುಂಬಡ್ತಿ ನೀಡಿದೆ.

ಇದನ್ನೂ ಓದಿ : Health Bulletin: ಏರುತ್ತಲೇ ಇದೆ ಮಹಾಮಾರಿಯ ಕಾವು; ಒಂದೇ ದಿನದಲ್ಲಿ ದಾಖಲೆಯ 416 ಜನರಿಗೆ ಸೋಂಕು, 9 ಬಲಿ!

ಇನ್ನೂ ಕರ್ನಾಟಕ ಜೂನ್. 25 ರಿಂದ SSLC ಪರೀಕ್ಷೆ ನಡೆಸುವುದಾಗಿ ಘೋಷಿಸಿ ಸರ್ವ ತಯಾರಿ ನಡೆಸಿದೆ. ಆದರೆ,ಈ ಪ್ರಯತ್ನ ಯಶಸ್ವಿಯಾಗುತ್ತಾ? ಸರ್ಕಾರದ ಶ್ರಮಕ್ಕೆ ಫಲ ಸಿಗುತ್ತಾ ಎಂಬುದನ್ನು ಕಾದು ನೋಡಬೇಕಿದೆ.
First published: June 20, 2020, 7:57 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading