HOME » NEWS » Coronavirus-latest-news » CORONA POSITIVE CASES INCREASE IN BENGALURU BBMP HOLD MEETING WITH HOSPITALS NODAL OFFICERS RHHSN SHTV

ಕೊರೋನಾ‌ ಕೇಸ್ ದಿಢೀರ್‌ ಏರಿಕೆ; ಆಸ್ಪತ್ರೆಗಳ ನೋಡಲ್ ಅಧಿಕಾರಿಗಳ ಜೊತೆ ಬಿಬಿಎಂಪಿ ಸಭೆ

ನಗರದಲ್ಲಿ ಲಸಿಕೆಗೆ ಯಾವುದೇ ಕೊರತೆಯಿಲ್ಲ. ಅವಶ್ಯಕ ಲಸಿಕೆ ಲಭ್ಯವಿದ್ದು, ಸದ್ಯ 1.50 ಲಕ್ಷ ಲಸಿಕೆ ಸಂಗ್ರಹವಿದ್ದು, ನಾಳೆ 4 ಲಕ್ಷ ಲಸಿಕೆ ಬರಲಿದೆ. ಹೆಚ್ಚು ಸೆಷನ್‌ಗಳನ್ನು ಮಾಡುವ ಆಸ್ಪತ್ರೆಗಳಿಗೆ ಅವಶ್ಯಕ ಲಿಸಿಕೆಗಳನ್ನು ನೀಡಲಾಗುವುದು. ನಗರದಲ್ಲಿ ಇದುವರೆಗೆ 7 ಲಕ್ಷ ಲಸಿಕೆ ನೀಡಲಾಗಿದ್ದು, ಎಲ್ಲರೂ ಲಸಿಕೆ ಪಡೆದುಕೊಳ್ಳಬೇಕು. ಲಸಿಕೆ ಪಡೆಯುವುದರಿಂದ ಯಾವುದೇ ಅಡ್ಡಪರಿಣಾಮ ಉಂಟಾಗುವುದಿಲ್ಲ ಎಂದರು.

news18-kannada
Updated:March 31, 2021, 9:06 PM IST
ಕೊರೋನಾ‌ ಕೇಸ್ ದಿಢೀರ್‌ ಏರಿಕೆ; ಆಸ್ಪತ್ರೆಗಳ ನೋಡಲ್ ಅಧಿಕಾರಿಗಳ ಜೊತೆ ಬಿಬಿಎಂಪಿ ಸಭೆ
ಸಾಂದರ್ಭಿಕ ಚಿತ್ರ
  • Share this:
ಬೆಂಗಳೂರು; ನಗರದಲ್ಲಿ ಕೋವಿಡ್ ಸೋಂಕು ಕ್ರಮೇಣ ಹೆಚ್ಚಾಗುತ್ತಿದೆ. ಈ ಸಂಬಂಧ ಖಾಸಗಿ ಆಸ್ಪತ್ರೆಗಳಲ್ಲಿ ಮುಂದಿನ 7 ದಿನಗಳ ಕಾಲ ಕೋವಿಡ್ ಸೋಂಕು ದೃಢಪಟ್ಟವರಿಗೆ ಚಿಕಿತ್ಸೆ ನೀಡಲು ಶೇ.10 ರಷ್ಟು ಹಾಸಿಗೆಗಳನ್ನು ಮೀಸಲಿಡುವ ಸಂಬಂಧ ತಮ್ಮ ತಮ್ಮ ಆಸ್ಪತ್ರೆಗಳ ಮುಖ್ಯಸ್ಥರ ಜೊತೆ ಮಾತನಾಡಲು ನೋಡಲ್ ಅಧಿಕಾರಿಗಳಿಗೆ ಆಯುಕ್ತರು ಎನ್.ಮಂಜುನಾಥ್ ಪ್ರಸಾದ್ ಮನವಿ ಮಾಡಿದರು.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕೋವಿಡ್ ಸೋಂಕಿಗೆ ಸಂಬಂಧಿಸಿದಂತೆ ಆಯುಕ್ತ ಎನ್.ಮಂಜುನಾಥ್ ಪ್ರಸಾದ್ ಖಾಸಗಿ ಆಸ್ಪತ್ರೆಗಳ ನೋಡಲ್ ಅಧಿಕಾರಿಗಳ ಜೊತೆ ಇಂದು ಜೂಮ್ ಮುಖಾಂತರ ವರ್ಚ್ಯುವಲ್ ಸಭೆ ನಡೆಸಿದರು. ಸಭೆಯನ್ನು ಉದ್ದೇಶಿಸಿ ಮಾತನಾಡಿ, ನಗರದಲ್ಲಿ ಕೋವಿಡ್ ಸೋಂಕು ದೃಢಪಟ್ಟವರು ಬಹುತೇಕ ಹೋಮ್ ಐಸೋಲೇಷನ್‌ನಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪೈಕಿ ಅಸಿಮ್ಟಾಮ್ಯಾಟಿಕ್ ಇರುವರಿಗೆ  ಆಸ್ಪತ್ರೆಗಳಲ್ಲಿ ಹಾಸಿಗೆಗಳು ಲಭ್ಯವಿದೆ. ಮುಂದಿನ ದಿನಗಳಲ್ಲಿ ಕೋವಿಡ್ ಸೋಂಕು ಕ್ರಮೇಣ ಹೆಚ್ಚಾದರೆ ಖಾಸಗಿ ಆಸ್ಪತ್ರೆಗಳಲ್ಲಿ ಹಂತ ಹಂತವಾಗಿ ಹಾಸಿಗೆ ಸಾಮರ್ಥ್ಯವನ್ನು ಹೆಚ್ಚಳ ಮಾಡಲು ಮನವಿ ಮಾಡಿದರು.

ನಗರದಲ್ಲಿ ಕಳೆದ ಫೆಬ್ರವರಿ ತಿಂಗಳ ಕೊನೆಯಿಂದ ಕೋವಿಡ್ ಪ್ರಕರಣಗಳು ಕ್ರಮೇಣ ಏರಿಕೆಯಾಗುತ್ತಿದ್ದು, ಇಂದು ಪ್ರತಿನಿತ್ಯ 1,500ಕ್ಕೂ ಹೆಚ್ಚು ಪ್ರಕರಣಗಳು ಪತ್ತೆಯಾಗುತ್ತಿವೆ. 22 ರಿಂದ 40 ವರ್ಷದ ವಯೋಮಿತಿಯಲ್ಲಿರುವವರಿಗೇ ಹೆಚ್ಚು ಸೋಂಕು ದೃಢಪಡುತ್ತಿದ್ದು, ಹಿರಿಯ ವಯಸ್ಕರಿಗೆ ಹೆಚ್ಚು ಸೋಂಕು ಪತ್ತೆಯಾಗುತ್ತಿಲ್ಲ. ಸಾವಿನ ಪ್ರಮಾಣ ಶೇ. 0.5 ರಷ್ಟಿದ್ದು, ನಗರದಲ್ಲಿ ಸಾವಿನ ಪ್ರಮಾಣ ಕಡಿಮೆಯಿದೆ ಎಂದು ಹೇಳಿದರು.

ಸೋಂಕು ದೃಢಪಟ್ಟ ವ್ಯಕ್ತಿ ಆಸ್ಪತ್ರೆಗೆ ದಾಖಲಾಗಲು ಬಂದರೆ ಅವರಿಗೆ ಆಕ್ಸಿಜನ್ ವ್ಯವಸ್ಥೆಯಿಲ್ಲವೆಂದು ದಾಖಲು ಮಾಡಿಕೊಳ್ಳದೆ ಬೇರೆ ಆಸ್ಪತ್ರೆಗೆ ತೆರಳಲು ಸೂಚಿಸಬೇಡಿ. ಆಸ್ಪತ್ರೆಗೆ ಬಂದಂತಹ ಸೋಂಕಿತ ವ್ಯಕ್ತಿಯನ್ನು ಕೂಡಲೇ ಆಸ್ಪತ್ರಗೆ ದಾಖಲು ಮಾಡಿಕೊಂಡು ಚಿಕತ್ಸೆ ನೀಡಿ. ಎಲ್ಲಾ ಆಸ್ಪತ್ರೆಗಳ ಮುಂಭಾಗ ಕೋವಿಡ್ ಚಿಕಿತ್ಸೆಗಾಗಿ ಎಷ್ಟು ಹಾಸಿಗೆಗಳಿವೆ, ಎಷ್ಟು ಹಾಸಿಗೆಗಳು ಭರ್ತಿಯಾಗಿವೆ, ಯಾವ ಹಾಸಿಗೆ ಖಾಲಿಯಿದೆ ಎಂಬುದರ ಸಂಪೂರ್ಣ ಮಾಹಿತಿಯನ್ನು ಸೂಚನಾ ಫಲಕದಲ್ಲಿ ಅಳವಡಿಸಿದಾಗ ಆಸ್ಪತ್ರೆಗೆ ದಾಖಲಾಗಲು ಬಂದಂತಹ ವ್ಯಕ್ತಿಗೆ ಸುಲಭವಾಗಿ ಮಾಹಿತಿ ಲಭ್ಯವಾಗಲಿದೆ ಎಂದರು.

ಖಾಸಗಿ ಆಸ್ಪತ್ರೆಗಳಲ್ಲಿ ಪ್ರತ್ಯೇಕವಾಗಿ ಕೋವಿಡ್ ಬ್ಲಾಕ್‌ಗಳಿರಬೇಕು. ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡಲು ವೈದ್ಯರು, ಸಿಬ್ಬಂದಿ ಪ್ರತ್ಯೇಕವಾಗಿರಬೇಕು. ಕೋವಿಡ್ ಹಾಗೂ ಅನ್ಯ ಕಾಯಿಲೆಗಳಿಗೆ ಚಿಕಿತ್ಸೆ ನೀಡಲು ಒಂದೇ ಸಿಬ್ಬಂದಿಯನ್ನು ನಿಯೋಜನೆ ಮಾಡಿರಬಾರದು ಎಂದು ಹೇಳಿದರು.

ವ್ಯಾಕ್ಸಿನೇಷನ್ ನೀಡಲು ವ್ಯವಸ್ಥಿತ ಯೋಜನೆ

ಪಾಲಿಕೆ ವ್ಯಾಪ್ತಿಯಲ್ಲಿ ಬಿಬಿಎಂಪಿಯ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಸರ್ಕಾರಿ ಆಸ್ಪತ್ರೆಗಳು ಹಾಗೂ ಖಾಸಗಿ ಆಸ್ಪತ್ರೆಗಳು ಸೇರಿ 525 ಕೇಂದ್ರ ಗಳಲ್ಲಿ ಲಸಿಕೆ ನೀಡುವ ವ್ಯವಸ್ಥೆ ಮಾಡಲಾಗಿದ್ದು, ದಿನಕ್ಕೆ 85,000ಕ್ಕೂ ಲಸಿಕೆ ನೀಡಬಹುದಾಗಿದೆ. ನಾಳೆಯಿಂದ 45 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ನೀಡುವ ಪ್ರಕ್ರಿಯೆ ಜಾರಿಯಾಗಲಿದೆ. ಈ ಸಂಬಂಧ ಖಾಸಗಿ ಆಸ್ಪತ್ರೆಗಳಲ್ಲಿ ಇನ್ನೂ ಹೆಚ್ಚಿನ ಸೆಷನ್‌ಗಳನ್ನು ಮಾಡಿಕೊಂಡು ಅವಶ್ಯಕ ಸಿಬ್ಬಂದಿಯನ್ನು ನಿಯೋಜನೆ ಮಾಡಿಕೊಂಡು ವ್ಯವಸ್ಥಿತವಾಗಿ ಲಸಿಕೆ ನೀಡಲು ಕ್ರಮವಹಿಸಿ ಎಂದರು.ಇದನ್ನು ಓದಿ: 20 ವರ್ಷಕ್ಕೆ ಮೋದಿಯವರು ಜೈಲಿಗೆ ಹೋಗಿದ್ರಾ? ಸುಳ್ಳು ಹೇಳೋಕು ಮಿತಿ ಇರಬೇಕು; ಮಾಜಿ ಸ್ಪೀಕರ್ ರಮೇಶ್ ಕುಮಾರ್

ನಗರದಲ್ಲಿ ಲಸಿಕೆಗೆ ಯಾವುದೇ ಕೊರತೆಯಿಲ್ಲ. ಅವಶ್ಯಕ ಲಸಿಕೆ ಲಭ್ಯವಿದ್ದು, ಸದ್ಯ 1.50 ಲಕ್ಷ ಲಸಿಕೆ ಸಂಗ್ರಹವಿದ್ದು, ನಾಳೆ 4 ಲಕ್ಷ ಲಸಿಕೆ ಬರಲಿದೆ. ಹೆಚ್ಚು ಸೆಷನ್‌ಗಳನ್ನು ಮಾಡುವ ಆಸ್ಪತ್ರೆಗಳಿಗೆ ಅವಶ್ಯಕ ಲಿಸಿಕೆಗಳನ್ನು ನೀಡಲಾಗುವುದು. ನಗರದಲ್ಲಿ ಇದುವರೆಗೆ 7 ಲಕ್ಷ ಲಸಿಕೆ ನೀಡಲಾಗಿದ್ದು, ಎಲ್ಲರೂ ಲಸಿಕೆ ಪಡೆದುಕೊಳ್ಳಬೇಕು. ಲಸಿಕೆ ಪಡೆಯುವುದರಿಂದ ಯಾವುದೇ ಅಡ್ಡಪರಿಣಾಮ ಉಂಟಾಗುವುದಿಲ್ಲ. ಈ ಸಂಬಂಧ ಯಾರೂ ಭಯಪಡುವ ಅಗತ್ಯವಿಲ್ಲವೆಂದು ನಾಗರಿಕರಲ್ಲಿ ಅರಿವು ಮೂಡಿಸಬೇಕು. ಜನಗಣತಿ ಪ್ರಕಾರ 60 ವರ್ಷಕ್ಕೆ ಮೇಲ್ಪಟ್ಟವರು 10 ಲಕ್ಷ ಮಂದಿಯಿದ್ದು, 45 ವರ್ಷಕ್ಕೆ ಮೇಲ್ಪಟ್ಟವರು ಸುಮಾರು 25 ಲಕ್ಷ ಮಂದಿಯಿದ್ದಾರೆ. ಇಷ್ಟು ಮಂದಿಗೆ ಲಸಿಕೆ ನೀಡಲು ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಬೇಕು ಎಂದು ಆಯುಕ್ತರು ತಿಳಿಸಿದರು.

ಈ ವೇಳೆ ವಿಶೇಷ ಆಯುಕ್ತರು(ಆರೋಗ್ಯ) ರಾಜೇಂದ್ರ ಚೋಳನ್, ಮುಖ್ಯ ಆರೋಗ್ಯಾಧಿಕಾರಿ ಡಾ. ವಿಜೇಂದ್ರ, ಎಲ್ಲಾ ವಲಯ ಆರೋಗ್ಯಾಧಿಕಾರಿಗಳು ಹಾಗೂ ಆರೋಗ್ಯ ವೈದ್ಯಾಧಿಕಾರಿಗಳು ಉಪಸ್ಥಿತರಿದ್ದರು.
Published by: HR Ramesh
First published: March 31, 2021, 9:06 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories