ಮಹದೇಶ್ವರಬೆಟ್ಟ ಕಾಡುದಾರಿಗಳ ಮೂಲಕ ಬರುತ್ತಿದ್ದ ತಮಿಳರಿಗೆ ಬಿತ್ತು ಕಡಿವಾಣ

ಮಹದೇಶ್ವರ ಬೆಟ್ಟದ ಸುತ್ತಮುತ್ತಲಿನ ನಿವಾಸಿಗಳು ಅಡ್ಡದಾರಿಗಳ ಮೂಲಕ ತಮಿಳುನಾಡಿಗೆ ಹೋಗಿ ಬರುತ್ತಿದ್ದರು.

news18-kannada
Updated:May 25, 2020, 8:02 AM IST
ಮಹದೇಶ್ವರಬೆಟ್ಟ ಕಾಡುದಾರಿಗಳ ಮೂಲಕ ಬರುತ್ತಿದ್ದ ತಮಿಳರಿಗೆ ಬಿತ್ತು ಕಡಿವಾಣ
ಗಡಿ ಪ್ರದೇಶದಲ್ಲಿ ಕಾಯುತ್ತಿರುವ ಪೊಲೀಸರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗಳು
  • Share this:
ಚಾಮರಾಜನಗರ(ಮೇ.25): ಮಲೆ ಮಹದೇಶ್ವರ ಬೆಟ್ಟದ ಕಾಡು ದಾರಿಗಳ ಮೂಲಕ ತಮಿಳುನಾಡಿನಿಂದ  ಅಕ್ರಮವಾಗಿ ಬರುತ್ತಿದ್ದ ವಲಸಿಗರಿಗೆ ಅರಣ್ಯ ಇಲಾಖೆ ಕಡಿವಾಣ ಹಾಕಿದೆ. ಕಾಡುದಾರಿಗಳನ್ನು ಸಂಪೂರ್ಣ ಬಂದ್ ಮಾಡಲಾಗಿದ್ದು, ಕಳ್ಳದಾರಿಗಳಿಗೆ ಅಡ್ಡಲಾಗಿ ಮುಳ್ಳುಬೇಲಿ ಹಾಕಲಾಗಿದೆ. ಮಲೆಮಹದೇಶ್ವರ ವನ್ಯಜೀವಿ ವಿಭಾಗದ ಪಾಲಾರ್, ಹೂಗ್ಯಂ, ಜಲ್ಲಿಪಾಳ್ಯ, ಗಾಜನೂರು, ಗರಿಕೆಕಂಡಿ ರಸ್ತೆಗಳನ್ಮು ಸಂಪೂರ್ಣ ಬಂದ್ ಮಾಡುವ ಮೂಲಕ ತಮಿಳುನಾಡಿನಿಂದ ಕರ್ನಾಟಕ ಪ್ರವೇಶಿಸುವರಿಗೆ ಸಂಪೂರ್ಣ ನಿರ್ಬಂಧ ಹಾಕಲಾಗಿದೆ.

ದೇಶದಲ್ಲೇ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಎರಡನೇ ಸ್ಥಾನದಲ್ಲಿರುವ ತಮಿಳುನಾಡಿನಿ‌ಂದ ಬರುವ ವಲಸಿಗರಿಗೆ ಚಾಮರಾಜನಗರ ಜಿಲ್ಲಾಡಳಿತ ಅನುಮತಿ ನಿರಾಕರಿಸಿತ್ತು. ಅಲ್ಲದೆ ತಮಿಳುನಾಡಿನಿಂದ ಪ್ರವೇಶ ನಿರ್ಬಂಧಿಸಿ ಚೆಕ್ ಪೋಸ್ಟ್​​ಗಳಲ್ಲಿ ಬಿಗಿಯಾದ ಕ್ರಮ ಕೈಗೊಂಡಿತ್ತು. ಈ ಹಿನ್ನಲೆಯಲ್ಲಿ ತಮಿಳರು ಮಹದೇಶ್ವರ ಬೆಟ್ಟದ ಕಾಡಿನ ದಾರಿಗಳ ಮೂಲಕ ಕಾಲ್ನಡಿಗೆಯಲ್ಲಿ ಬರತೊಡಗಿದ್ದರು. ಹಾಗೆಯೇ ಮಹದೇಶ್ವರ ಬೆಟ್ಟದ ಸುತ್ತಮುತ್ತಲಿನ ನಿವಾಸಿಗಳು ಸಹ ಅಡ್ಡದಾರಿಗಳ ಮೂಲಕ ತಮಿಳುನಾಡಿಗೆ ಹೋಗಿ ಬರುತ್ತಿದ್ದರು.

ಪಾಲಾರ್ ನದಿಯ ಪಕ್ಕದಲ್ಲೇ ಚೆಕ್ ಪೋಸ್ಟ್ ಇದ್ದರೂ ಪೊಲೀಸರ ಕಣ್ತಪ್ಪಿಸಿ ಓಡಾಟ ನಡೆಸಲಾಗುತ್ತಿತ್ತು. ವ್ಯಾಪಾರ, ವಹಿವಾಟು, ಆಸ್ಪತ್ತೆ ಮೊದಲಾದ ಕೆಲಸಗಳಿಗೆ ಕಾಡುದಾರಿಗಳ ಮೂಲಕ ಎರಡು ರಾಜ್ಯಗಳ ನಡುವೆ ಸಂಚರಿಸುವ ಮೂಲಕ ಕೊರೋನಾ ಆತಂಕ ತಂದೊಡ್ಡಿದ್ದರು.

ಅರಣ್ಯದ ಗಡಿಭಾಗದ ಆಯಕಟ್ಟಿನ ಸ್ಥಳಗಳಿಗೆ ಅರಣ್ಯ ಸಿಬ್ಬಂದಿ ನಿಯೋಜಿಸಲಾಗಿದೆ ಅಲ್ಲದೆ ಗಸ್ತು ಹೆಚ್ಚಿಸಲಾಗಿದೆ ಎಂದು ಮಲೆಮಹದೇಶ್ವರ ವನ್ಯಜೀವಿ ವಿಭಾಗದ ಉಪ ಅರಣ್ಯಸಂರಕ್ಷಣಾಧಿಕಾರಿ ಯೇಡುಕೊಂಡಲು ತಿಳಿಸಿದ್ದಾರೆ

ಇದನ್ನೂ ಓದಿ : ವಿಜಯಪುರದ ಆಲಮೇಲದಲ್ಲಿಂದು ಗರಿಷ್ಠ ಉಷ್ಣಾಂಶ ದಾಖಲು; ಉತ್ತರ ಕರ್ನಾಟಕದಲ್ಲಿ ಬಿಸಿಗಾಳಿಯ ಭೀತಿ

ಈ ಬಗ್ಗೆ ಪ್ರತಿಕ್ರಿಯಿಸಿದ್ದ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ, ಅಕ್ರಮ ಬರುವವರನ್ನು ತಡೆಗಟ್ಟಲು ನಿರಂತರವಾಗಿ ಗಸ್ತು ನಡೆಸಲು ಅರಣ್ಯ ಇಲಾಖೆಗೆ ಸೂಚಿಸಲಾಗಿದೆ. ಅಡ್ಡದಾರಿಗಳ ಮೂಲಕ ಬರುವುದನ್ನು ತಡೆಗಟ್ಟಲು ಪೊಲೀಸ್, ಕಂದಾಯ ಹಾಗು ಅರಣ್ಯ ಇಲಾಖೆ ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದ್ದರು.

ಇದೀಗ ಮಲೆಮಹದೇಶ್ವರ ವನ್ಯಜೀವಿ ವಿಭಾಗದ ಅಧಿಕಾರಿಗಳು ಬಿಗಿಯಾದ ಕ್ರಮಗಳನ್ನು ಕೈಗೊಳ್ಳುವ ಮೂಲಕ ತಮಿಳುವ ಲಸಿಗರ ಪ್ರವೇಶಕ್ಕೆ ಕಡಿವಾಣ ಹಾಕಿದ್ದಾರೆ.
First published: May 25, 2020, 8:02 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading