ಮಾ. 31ರವರೆಗೆ ಬಂದ್ ಮುಂದುವರಿಕೆ; ಕೊರೋನಾ ನಿಯಂತ್ರಣಕ್ಕೆ 200 ಕೋಟಿ ಬಿಡುಗಡೆ: ಸಿಎಂ ಯಡಿಯೂರಪ್ಪ

ಕೊರೋನಾ ಸೋಂಕು ತಡೆಗೆ ನಾಲ್ಕು ಟಾಸ್ಕ್ ಪೋರ್ಸ್ ರಚನೆ ಮಾಡಲಾಗುತ್ತಿದೆ. ಆರೋಗ್ಯ ಸಚಿವ ಶ್ರೀರಾಮುಲು ಅಧ್ಯಕ್ಷತೆಯಲ್ಲಿ ಟಾಸ್ಕ್ ಫೋರ್ಸ್ ರಚಿಸಲಾಗಿದೆ. ಡಾ. ಅಶ್ವಥ್ ನಾರಾಯಣ್, ಬಸವರಾಜ್ ಬೊಮ್ಮಾಯಿ, ಡಾ.ಸುಧಾಕರ್ ಹಾಗೂ ಮುಖ್ಯ ಕಾರ್ಯದರ್ಶಿ ಸಹ ಟಾಸ್ಕ್ ಫೋರ್ಸ್ ಸದಸ್ಯರಾಗಿರುತ್ತಾರೆ

ಸಿಎಂ ಬಿಎಸ್ ಯಡಿಯೂರಪ್ಪ.

ಸಿಎಂ ಬಿಎಸ್ ಯಡಿಯೂರಪ್ಪ.

  • Share this:
ಬೆಂಗಳೂರು(ಮಾ. 18 ): ರಾಜ್ಯದಲ್ಲಿ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆ ಮಾರ್ಚ್ 31ರವರೆಗೆ ಬಂದ್ ಮುಂದುವರೆಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಜೊತೆಗೆ ಕೊರೋನಾ ನಿಯಂತ್ರಣಕ್ಕೆ 200 ಕೋಟಿ ರೂಪಾಯಿ ಹಣವನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ. ಸಿಎಂ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ತುರ್ತು ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ

ಇಂದು ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆ ಬಳಿಕ ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ, ಕೊರೋನಾ ಸೋಂಕು ಹರಡುತ್ತಿರುವ ಹಿನ್ನೆಲೆ ಮಾರ್ಚ್ 31 ರವರೆಗೆ ಬಂದ್ ಮುಂದುವರೆಸಲು ನಿರ್ಧಾರ ಮಾಡಲಾಗಿದೆ.  ಹಿಂದಿನ ಮಾರ್ಗಸೂಚಿಯನ್ನೆ ಮುಂದುವರೆಸಲು ತೀರ್ಮಾನಿಸಿದ್ದೇವೆ. ನಗರ ಸ್ಥಳೀಯ ಚುನಾವಣೆಗಳನ್ನು ಮುಂದೂಡಲು ಸಭೆಯಲ್ಲಿ ತಿರ್ಮಾನಿಸಲಾಗಿದೆ ಎಂದು ಮಾಹಿತಿ ನೀಡಿದರು.

ಕೊರೋನಾ ಸೋಂಕು ತಡೆಗೆ ನಾಲ್ಕು ಟಾಸ್ಕ್ ಪೋರ್ಸ್ ರಚನೆ ಮಾಡಲಾಗುತ್ತಿದೆ. ಆರೋಗ್ಯ ಸಚಿವ ಶ್ರೀರಾಮುಲು ಅಧ್ಯಕ್ಷತೆಯಲ್ಲಿ ಟಾಸ್ಕ್ ಫೋರ್ಸ್ ರಚಿಸಲಾಗಿದೆ. ಡಾ. ಅಶ್ವಥ್ ನಾರಾಯಣ್, ಬಸವರಾಜ್ ಬೊಮ್ಮಾಯಿ, ಡಾ.ಸುಧಾಕರ್ ಹಾಗೂ ಮುಖ್ಯ ಕಾರ್ಯದರ್ಶಿ ಸಹ ಟಾಸ್ಕ್ ಫೋರ್ಸ್ ಸದಸ್ಯರಾಗಿರುತ್ತಾರೆ. ಕೊರೊನಾ ಜತೆಗೆ ಹಕ್ಕಿ ಜ್ವರ ಹಾಗೂ ಮಂಗನ ಕಾಯಿಲೆ ಬಗ್ಗೆ ನಿಗಾ ವಹಿಸಿ ಅಗತ್ಯ ಕ್ರಮ ಕೈಗೊಳ್ಳುವ ಕೆಲಸವನ್ನು ಮಾಡಲಿದೆ ಎಂದು ಮುಖ್ಯಮಂತ್ರಿ  ಮಾಹಿತಿ ನೀಡಿದರು.

ಇದೇ ಸಂದರ್ಭದಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್​ ಮಾತನಾಡಿ, ಸಾರ್ವಜನಿಕ ಸಭೆ, ಸಮಾರಂಭಗಳು, ಅದ್ದೂರಿ ಮದುವೆಗಳು, ಸಿನಿಮಾ ಪ್ರದರ್ಶನ, ಮಾಲ್ ಗಳು, ಪಬ್ ಮೇಲಿನ ನಿರ್ಬಂಧ ಮಾರ್ಚ್ 31 ರವರೆಗೆ ಮುಂದುವರೆಯಲಿದೆ. ವಿವಿಧ ದೇಶಗಳಿಂದ ಬರುವ ಪ್ರಯಾಣಿಕರ ತಪಾಸಣೆ ಕಡ್ಡಾಯ ಮಾಡಲಾಗಿದೆ ಎಂದರು.

ಇದನ್ನೂ ಓದಿ : ಶಾಸಕರ ಭೇಟಿಗೆ ಅವಕಾಶ ಕೋರಿ ಹೈಕೋರ್ಟ್ ಮೊರೆಹೋದ ದಿಗ್ವಿಜಯ್ ಸಿಂಗ್

ಕೊರೋನಾ ರಾಜ್ಯದಲ್ಲಿ ಒಂದು ಬಲಿ ಪಡೆದಿದೆ. ಅಲ್ಲದೆ ದೇಶಾದ್ಯಂತ 130ಕ್ಕೂ ಅಧಿಕ ಜನರಲ್ಲಿ ಈ ಸೋಂಕು ಕಾಣಿಸಿಕೊಂಡಿದೆ. ರಾಜ್ಯದಲ್ಲಿ ಇದುವರೆಗೆ 1,17, 316 ಪ್ರಯಾಣಿಕರ ತಪಾಸಣೆ ಮಾಡಲಾಗಿದೆ. ರಾಜ್ಯಕ್ಕೆ ಬೇರೆ ದೇಶಗಳಿಂದ ಆಗಮಿಸುವ ಪ್ರಯಾಣಿಕರಿಗೆ ಸ್ಟಾಂಪಿಂಗ್ ಮಾಡಲಾಗುವುದು ಎಂದು  ವೈದ್ಯಕೀಯ ಸಚಿವರು ತಿಳಿಸಿದರು.
First published: