ಮೈಸೂರು(ಜ. 30): ವಿಶ್ವದಾದ್ಯಂತ ಕರೋನ ವೈರಸ್ ಭೀತಿ ಹಿನ್ನಲೆಯಲ್ಲಿ ಮೈಸೂರು ವಿವಿಯಲ್ಲಿ ಓದುತ್ತಿರುವ 18 ಚೀನಾ ವಿದ್ಯಾರ್ಥಿಗಳಿಗೆ ಸದ್ಯದ ಮಟ್ಟಿಗೆ ಮೈಸೂರಿಗೆ ವಾಪಸ್ ಮರಳದಂತೆ ಸೂಚನೆ ನೀಡಲಾಗಿದೆ.
ಮೈಸೂರಿನ ವಿವಿಧ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಚೀನಾ ದೇಶದ ಒಟ್ಟು 120 ವಿದ್ಯಾರ್ಥಿಗಳು ಓದುತ್ತಿದ್ದಾರೆ. ಇವರ ಪೈಕಿ 18 ವಿದ್ಯಾರ್ಥಿಗಳು ಚೀನಾಗೆ ತೆರಳಿದ್ದರು.
ಈ ತನಕ ಕರೋನಾ
ವೈರಸ್ ಗೆ ಚೀನಾದಲ್ಲಿ ಬಲಿಯಾದವರ ಸಂಖ್ಯೆ 170ಕ್ಕೆ ಏರಿದೆ. ಜತೆಗೆ ಈವರೆಗೆ 7,700 ಮಂದಿಗೆ ಸೋಂಕು ತಗುಲಿರುವುದು ಖಚಿತಗೊಂಡಿದೆ. ಈ ನಡುವೆ ಚೀನಾದಲ್ಲಿ ಕಂಡುಬಂದಿರುವ ಮಾರಣಾಂತಿಕ ಕೊರೋನ ವೈರಸ್ ಇದೀಗ ಭಾರತದಲ್ಲೂ ಕಾಣಿಸಿಕೊಂಡಿದ್ದು, ಕೇರಳದಲ್ಲಿ ಒರ್ವ ವಿದ್ಯಾರ್ಥಿಯಲ್ಲಿ ಈ ವೈರಸ್ ಪತ್ತೆಯಾಗಿರುವುದು ಆತಂಕಕ್ಕೆ ಎಡೆ ಮಾಡಿದೆ.
ಚೀನಾದಲ್ಲಿ ಹೊಸ ವರ್ಷದ ಆಚರಣೆ ಬಹು ದೊಡ್ಡದು. ಈ ಹಿನ್ನೆಲೆಯಲ್ಲಿ ಮೈಸೂರು ವಿವಿಯಲ್ಲಿ ಅಧ್ಯಯನ ನಡೆಸುತ್ತಿದ್ದ ವಿದ್ಯಾರ್ಥಿಗಳ ಪೈಕಿ 18 ಮಂದಿ, ಜ. 15 ರಂದು
ಚೀನಾಗೆ ತೆರಳಿದರು. ಜ.25 ರಂದು ಚೀನಾದಲ್ಲಿ ಹೊಸ ವರ್ಷಾಚರಣೆ. ಇದನ್ನು ಮುಗಿಸಿಕೊಂಡು ಅವರು ಈಗಾಗಲೇ ವಾಪಸ್ ಆಗಬೇಕಿತ್ತು. ಆದರೆ ಅಷ್ಟರಲ್ಲಿ ಚೀನಾದಲ್ಲಿ ಕಾಣಿಸಿಕೊಂಡ ಕರೋನಾ ವೈರಸ್ ಕಾರಣದಿಂದ ಅವರನ್ನು ಸದ್ಯಕ್ಕೆ ಹಿಂದಿರುಗದಂತೆ ಸೂಚಿಸಲಾಗಿದೆ.
ಇದನ್ನೂ ಓದಿ :
ಕೇರಳದ ವಿದ್ಯಾರ್ಥಿಯಲ್ಲಿ ಮಹಾಮಾರಿ ಕರೋನಾ ವೈರಸ್ ಪತ್ತೆ; ಹೆಚ್ಚಿದ ಭೀತಿ
ವಿದ್ಯಾರ್ಥಿಗಳು ಚೀನಾದ ಝೂಮೇಡಿಯನ್ ( zhumadian) ಪ್ರಾಂತ್ಯದ ಹೊಂಗೈ ( Huanghai) ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳು. ವಿದ್ಯಾರ್ಥಿ ವಿನಿಮಯ ಯೋಜನೆಯಲ್ಲಿ ಬಂದಿದ್ದ ಮೈಸೂರು ವಿವಿಗೆ ಬಂದಿದ್ದರು
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ