HOME » NEWS » Coronavirus-latest-news » CORONA VIRUS FORMER CHIEF MINISTER HD KUMARASWAMY WARN TO STATE GOVERNMENT HK

ಸರ್ಕಾರದ ನಿರ್ಲಕ್ಷ್ಯದಿಂದ ರಾಮನಗರಕ್ಕೂ ವಕ್ಕರಿಸಿದ ಕೊರೋನಾ, ತಕ್ಷಣ ಕ್ರಮ ಕೈಗೊಳ್ಳದಿದ್ದರೆ ಉಗ್ರ ಹೋರಾಟ; ಕುಮಾರಸ್ವಾಮಿ ಎಚ್ಚರಿಕೆ

ಸರ್ಕಾರ ತಡಮಾಡದೆ ರಾಮನಗರ ಜೈಲಿನಲ್ಲಿರುವ ಕೈದಿಗಳನ್ನು ಕೂಡಲೇ ಸ್ಥಳಾಂತರ ಮಾಡಬೇಕು ಸರ್ಕಾರದ ಅವಿವೇಕದ ನಿರ್ಧಾರದಿಂದಾಗಿ ರಾಮನಗರ ಜಿಲ್ಲೆಯ ಜನ ಭೀತಿಗೊಂಡಿದ್ದಾರೆ. ಇದನ್ನು ಇನ್ನೂ ಸಹಿಸಲು ಸಾಧ್ಯವಿಲ್ಲ

news18-kannada
Updated:April 24, 2020, 12:03 AM IST
ಸರ್ಕಾರದ ನಿರ್ಲಕ್ಷ್ಯದಿಂದ ರಾಮನಗರಕ್ಕೂ ವಕ್ಕರಿಸಿದ ಕೊರೋನಾ, ತಕ್ಷಣ ಕ್ರಮ ಕೈಗೊಳ್ಳದಿದ್ದರೆ ಉಗ್ರ ಹೋರಾಟ; ಕುಮಾರಸ್ವಾಮಿ ಎಚ್ಚರಿಕೆ
ಮಾಜಿ ಸಿಎಂ ಕುಮಾರಸ್ವಾಮಿ
  • Share this:
ಬೆಂಗಳೂರು(ಏ.23): ರಾಮನಗರ ಜೈಲಿನಲ್ಲಿ ಇರಿಸಲಾಗಿರುವ ಕೈದಿಗಳನ್ನು ಸಕಲ ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ತಕ್ಷಣವೇ ಸ್ಥಳಾಂತರಿಸದಿದ್ದರೆ ನಾಳೆಯಿಂದ ಉಗ್ರ ಪ್ರತಿಭಟನೆ ಮಾಡಲಾಗುವುದು ಎಂದು ಸರ್ಕಾರಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ. 

ಈ ಬಗ್ಗೆ ಟ್ವೀಟ್ ಮಾಡಿರುವ ಹೆಚ್ಡಿಕೆ, ರಾಮನಗರ ಕಾರಾಗೃಹದಲ್ಲಿ ಇರಿಸಲಾಗಿದ್ದ ಪಾದರಾಯನಪುರದ ಗಲಭೆಕೋರರ ಪೈಕಿ ಇಬ್ಬರಿಗೆ ಕೊರೋನಾ ವೈರಸ್ ತಗುಲಿರುವ ಪಾಸಿಟಿವ್ ವರದಿ ಬಂದಿದೆ. ಈ ಹಿಂದೆಯೇ ನಾನು ಇದೇ ವಿಷಯವಾಗಿ ಸರ್ಕಾರದ ಗಮನ ಸೆಳೆದರೂ ನಿರ್ಲಕ್ಷಿಸಿದರ ಫಲವಾಗಿ ಇಂದು ರಾಮನಗರಕ್ಕೂ ಕೊರೋನಾ ವೈರಸ್ ವಕ್ಕರಿಸಿದೆ ಎಂದಿದ್ದಾರೆ.

ಪಾಸಿಟಿವ್ ಬಂದ ಇಬ್ಬರ ಜತೆಯಲ್ಲಿದ್ದ ಏಳೆಂಟು ಮಂದಿಯನ್ನು ಕ್ವಾರಂಟೈನ್​​ಗೆ ಕರೆದೊಯ್ಯಲಾಗಿದೆ. ಸರ್ಕಾರ ತಡಮಾಡದೆ ರಾಮನಗರ ಜೈಲಿನಲ್ಲಿರುವ ಕೈದಿಗಳನ್ನು ಕೂಡಲೇ ಸ್ಥಳಾಂತರ ಮಾಡಬೇಕು ಸರ್ಕಾರದ ಅವಿವೇಕದ ನಿರ್ಧಾರದಿಂದಾಗಿ ರಾಮನಗರ ಜಿಲ್ಲೆಯ ಜನ ಭೀತಿಗೊಂಡಿದ್ದಾರೆ. ಇದನ್ನು ಇನ್ನೂ ಸಹಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಈಗಾಗಲೇ ರಾಜ್ಯದಲ್ಲಿ 445 ಮಂದಿ ಸೋಂಕಿಗೆ ತುತ್ತಾಗಿ, 17 ಮಂದಿ ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಎಂಟು ಜಿಲ್ಲೆಗಳು ಮಾತ್ರ ಸೋಂಕು ಮುಕ್ತವಾಗಿವೆ. ಅವುಗಳಲ್ಲಿ ರಾಮನಗರವೂ ಒಂದು. ಇದೀಗ ಸರ್ಕಾರ ತೆಗೆದುಕೊಂಡ ಎಡವಟ್ಟು ನಿರ್ಧಾರದಿಂದ ರಾಮನಗರದಲ್ಲೂ ಸೋಂಕು ಹರಡುವ ಭೀತಿ ಎದುರಾಗಿದೆ. ಸರ್ಕಾರ ಸಕಲ ಮುನ್ನೆಚ್ಚರಿಕೆಯಿಂದ ಪರಿಸ್ಥಿತಿ ನಿಭಾಯಿಸದಿದ್ದರೆ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ : ರಾಮನಗರ ಜೈಲಿನಲ್ಲಿ ಇರಿಸಿದ್ದ ಪಾದರಾಯನಪುರ ಗಲಭೆ ಆರೋಪಿತರ ಪೈಕಿ ಇಬ್ಬರಲ್ಲಿ ಕೊರೋನಾ ಸೋಂಕು!

ರಾಮನಗರ ಜೈಲ್ ಅನ್ನು ಸಂಪೂರ್ಣ ಕ್ವಾರಂಟೈನ್ ಮಾಡಬೇಕು. ಪೊಲೀಸರು ಸೇರಿದಂತೆ ಜೈಲಿನಲ್ಲಿ ಕಾರ್ಯನಿರ್ವಹಿಸಿದ ಅಡುಗೆ ಮತ್ತು ಸ್ವಚ್ಛತೆ ಯವರು ಸಂಬಂಧಿಸಿದವರ ಆರೋಗ್ಯ ಕಾಪಾಡಲು ಸರ್ಕಾರ ತಕ್ಷಣವೇ ಕಾರ್ಯೋನ್ಮುಖವಾಗಬೇಕು ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
Youtube Video
First published: April 23, 2020, 11:28 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories