ಹತ್ತು ದಿನಗಳಲ್ಲಿ 3ನೇ ಬಾರಿ ಬಂದು ಅಧಿಕಾರಿಗಳ ಸಭೆ ನಡೆಸಿ ಗಮನ ಸೆಳೆದ ಸಚಿವೆ ಶಶಿಕಲಾ ಜೊಲ್ಲೆ

ಒಂದು ಪಾಸಿಟಿವ್ ಕಂಡು ಬಂದ ತಿಕೋಟಾ ತಾಲೂಕಿನ ಗ್ರಾಮದಲ್ಲೂ ಕಟ್ಟೆಚ್ಚರ ವಹಿಸಲಾಗಿದೆ. ಅಲ್ಲಿ ತಹಶೀಲ್ದಾರ್ ನೇತೃತ್ವದಲ್ಲಿ ಸೀಲ್ ಡೌನ್ ಮಾಡಲಾಗಿದೆ. 

news18-kannada
Updated:April 22, 2020, 11:09 PM IST
ಹತ್ತು ದಿನಗಳಲ್ಲಿ 3ನೇ ಬಾರಿ ಬಂದು ಅಧಿಕಾರಿಗಳ ಸಭೆ ನಡೆಸಿ ಗಮನ ಸೆಳೆದ ಸಚಿವೆ ಶಶಿಕಲಾ ಜೊಲ್ಲೆ
ಸಚಿವೆ ಶಶಿಕಲಾ ಜೊಲ್ಲೆ
  • Share this:
ವಿಜಯಪುರ(ಏ.22): ಜಿಲ್ಲೆಯಲ್ಲಿ ಕೊರೋನಾ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಕೇವಲ 10 ದಿನಗಳಲ್ಲಿ 3ನೇ ಬಾರಿ ಭೇಟಿ ನೀಡಿ ಅಧಿಕಾರಿಗಳ ಸಭೆ ನಡೆಸಿದ್ದಾರೆ. ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಜಯಪುರ ಜಿಲ್ಲೆಯಲ್ಲಿ ಈವರೆಗೆ 35 ಕೊರೋನಾ ಪಾಸಿಟಿವ್ ವರದಿ ಬಂದಿವೆ.  ಈ ಪೈಕಿ ಇಬ್ಬರು ಮೃತಪಟ್ಟಿದ್ದಾರೆ. ಈಗ ಸೋಂಕಿತರ ಆರೋಗ್ಯ ಸ್ಥಿರವಾಗಿದೆ. 

ಕೆಲವೇ ಕುಟುಂಬಗಳಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳು ಕಂಡು ಬಂದಿದ್ದು, ಮೊದಲನೇ ಹಂತದ ಸಂಪರ್ಕದಲ್ಲಿದ್ದ ಎಲ್ಲರ ಗಂಟಲು ದ್ರವ ಪರೀಕ್ಷೆಗೆ ಕಳುಹಿಸಲಾಗಿದೆ. ಕ್ಲಸ್ಟರ್ ನಗರಗಳಲ್ಲಿ ಡ್ರೋಣ್ ಕ್ಯಾಮರಾ ಮೂಲಕ ಪೊಲೀಸರು ಕಣ್ಗಾವಲು ವಹಿಸಿದ್ದಾರೆ ಎಂದು ತಿಳಿಸಿದರು.

ಒಂದು ಪಾಸಿಟಿವ್ ಕಂಡು ಬಂದ ತಿಕೋಟಾ ತಾಲೂಕಿನ ಗ್ರಾಮದಲ್ಲೂ ಕಟ್ಟೆಚ್ಚರ ವಹಿಸಲಾಗಿದೆ. ಅಲ್ಲಿ ತಹಶೀಲ್ದಾರ್ ನೇತೃತ್ವದಲ್ಲಿ ಸೀಲ್ ಡೌನ್ ಮಾಡಲಾಗಿದೆ. ಡಯಾಲಿಸಿಸ್ ರೋಗಿ, ಗರ್ಭಿಣಿಯರು, ಹಿರಿಯ ನಾಗರಿಕರ ಬಗ್ಗೆ ಮಾಹಿತಿ ಸಂಗ್ರಹಣೆ ಮಾಡಲಾಗುತ್ತಿದೆ. ಇನ್ನು ಮುಂದೆ ಕೊರೋನಾ ಪಾಸಿಟಿವ್ ಪ್ರಕರಣ ಬರಲಿಕ್ಕಿಲ್ಲ ಎನ್ನುವ ವಿಶ್ವಾಸವಿದೆ ಎಂದರು.

ವಿಜಯಪುರ ಜಿಲ್ಲೆಯಲ್ಲಿ 1705 ಜನ ವಿದೇಶ ಹಾಗೂ ಬೇರೆ ಕಡೆಗಳಿಂದ ಬಂದಿದ್ದಾರೆ. ಅವರಲ್ಲಿ 1374 ಗಂಟಲು ದ್ರವ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ. 1084 ವರದಿಗಳು ನೆಗೆಟಿವ್ ಬಂದಿವೆ. 35 ವರದಿಗಳು ಪಾಸಿಟಿವ್ ಬಂದಿವೆ. ಇನ್ನೂ 255 ಜನರ ವರದಿಗಳು ಬರಬೇಕಿದೆ. ಈಗಾಗಲೇ 378 ಜನರು 28 ದಿನಗಳ ನಿಗಾ ಪೂರ್ಣಗೊಳಿಸಿದ್ದಾರೆ.   1325 ಜನರು 28 ದಿನಗಳ ನಿಗಾದಲ್ಲಿದ್ದಾರೆ. 1 ರಿಂದ 28 ದಿನಗಳ ಹೋಮ್ ಕ್ವಾರಂಟೈನ್ ಅವಧಿಯಲ್ಲಿ ಒಟ್ಟು 1325 ಜನರಿದ್ದಾರೆ. 378 ಜನರು 28 ದಿನಗಳ ಹೋಮ್ ಕ್ವಾರಂಟೈನ್​ನಿಂದ ಮುಕ್ತರಾಗಿದ್ದಾರೆಂದು ಕೊರೋನಾ ಪಾಸಿಟಿವ್ ಬಂದವರ ಮೊದಲ ಹಂತದ ಸಂಪರ್ಕ ಹೊಂದಿದ 1033 ಜನರನ್ನು ಕ್ವಾರಂಟೈನ್ ಮಾಡಲಾಗಿದೆ ಎಂದು ತಿಳಿಸಿದರು.

ಇದಕ್ಕೂ ಮುನ್ನ ಅಧಿಕಾರಿಗಳೊಂದಿಗೆ ಸಭೆಯಲ್ಲಿ ಮಾತನಾಡಿದ ಅವರು, ವಿಜಯಪುರ ಜಿಲ್ಲೆಯಲ್ಲಿ ತೀವ್ರ ತರವಾದ ಶ್ವಾಸಕೋಶದ ಸೋಂಕು, ನೆಗಡಿ, ಕೆಮ್ಮು, ಜ್ವರ ಲಕ್ಷಣವುಳ್ಳವರನ್ನು ಪತ್ತೆ ಹಚ್ಚಲು ಆಶಾ ಕಾರ್ಯಕರ್ತೆಯರು, ಎಎನ್ಎಂ ಮತ್ತು ಬಿಎಲ್ಒ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿ ವರದಿ ಸಲ್ಲಿಸುವಂತೆ ಸೂಚನೆ ನೀಡಿದರು.

ಜಿಲ್ಲೆಯಲ್ಲಿ ಕೋವಿಡ್-19ಗೆ ಸಂಬಂಧಪಟ್ಟಂತೆ ದ್ರವ ಮಾದರಿ ಪರೀಕ್ಷಾ ಪ್ರಯೋಗಾಲಯ ಸ್ಥಾಪನೆ ಕುರಿತಂತೆ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗಿದ್ದು, ಅವರಿಂದ ಸಕಾರಾತ್ಮಕ ಪ್ರತಿಕ್ರಿಯೆ ಲಭ್ಯವಾಗಿದ್ದು, ಅವಶ್ಯಕತೆಗೆ ಅನುಗುಣವಾಗಿ ಈ ಪ್ರಯೋಗಾಲಯ ಸ್ಥಾಪನೆಯಾಗಲಿದೆ. ನಗರದ ಜಿಲ್ಲಾಸ್ಪತ್ರೆಯನ್ನು ಕೋವಿಡ್ ಆಸ್ಪತ್ರೆಯಾಗಿ ಪರಿವರ್ತಿಸಲಾಗಿದ್ದು, ಪಾಸಿಟಿವ್ ರೋಗಿಗಳನ್ನು ಉತ್ತಮ ರೀತಿಯಲ್ಲಿ ವೈದ್ಯಕೀಯ ಚಿಕಿತ್ಸೆಗೆ ಒಳಪಡಿಸಲು ರಾಜ್ಯದ ಅತ್ಯಂತ ನುರಿತ ತಜ್ಞ ವೈದ್ಯರು ಸಂಪರ್ಕದಲ್ಲಿದ್ದು, ಜಿಲ್ಲೆಯ ಖಾಸಗಿ ತಜ್ಞ ವೈದ್ಯರು ಈ ರೋಗಿಗಳ ಮೇಲೆ ತೀವ್ರ ನಿಗಾ ಇಟ್ಟು, ಉಪಚರಿಸುವಂತಹ ವಿಶೇಷವಾದ  ಆ್ಯಪ್​ವೊಂದನ್ನು ಅಭಿವೃದ್ಧಿಪಡಿಸಿ ಜಿಲ್ಲಾಡಳಿತ ಕಾರ್ಯಪ್ರವೃತ್ತವಾಗಿರುವುದು ಸಂತಸದ ಸಂಗತಿಯಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ : ಮಣ್ಣಿನ ಮಕ್ಕಳು ಅಂತ ನಾವು ಕರೆದುಕೊಂಡಿದ್ದಲ್ಲ, ನಾಡಿನ ಜನರು ಕೊಟ್ಟ ಬಿರುದು; ಬಾಲಕೃಷ್ಣಗೆ ಕುಮಾರಸ್ವಾಮಿ ತಿರುಗೇಟುಜಿಲ್ಲೆಯಲ್ಲಿ ಈವರೆಗೆ 35 ಕೋವಿಡ್ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದ್ದು, ಈ ಪೈಕಿ ಇಬ್ಬರು ಮೃತ ಪಟ್ಟಿದ್ದಾರೆ. ಇನ್ನುಳಿದ 32 ರೋಗಿಗಳ ಆರೋಗ್ಯ ಸ್ಥಿರವಾಗಿದ್ದು, ಲಕ್ಷಣಗಳು ಕಂಡು ಬರದೇ ಇರುವುದು ಆಶಾದಾಯಕ ಬೆಳವಣಿಗೆಯಾಗಿದೆ. ಇನ್ನೊಬ್ಬ ರೋಗಿ ಆಕ್ಸಿಜನ್ ಆಧಾರದ ಮೇಲೆ ಉತ್ತಮ ರೀತಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಮುಂಬರುವ ದಿನಗಳಲ್ಲಿ ಕೋವಿಡ್-19 ಕಟ್ಟಿಹಾಕುವ ನಿಟ್ಟಿನಲ್ಲಿ ಜಿಲ್ಲಾಡಳಿತ ಕೈಗೊಂಡಿರುವ ಕ್ರಮಗಳು ಪರಿಣಾಮಕಾರಿಯಾಗಿವೆ. ಪಾಸಿಟಿವ್ ಪ್ರಕರಣಗಳಿಗೆ ಸಂಬಂಧಪಟ್ಟಂತೆ ಒಟ್ಟು 1033 ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಗಳ ಬಗ್ಗೆ ಪತ್ತೆ ಹಚ್ಚಲಾಗಿದೆ. ಸರ್ಕಾರದ ನಿರ್ದೇಶನದಂತೆ ಅವರ ಗಂಟಲು ದ್ರವ ಮಾದರಿ ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ ಎಂದರು.
First published: April 22, 2020, 11:07 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading