Coronavirus: ಹುಬ್ಬಳ್ಳಿಯಲ್ಲಿ ಕೊರೊನಾ ವೈರಸ್‌ ಭೀತಿ- ಅವಳಿ ನಗರದ ಜನರಲ್ಲಿ ಹೆಚ್ಚಿದ ಆತಂಕ

ಹುಬ್ಬಳ್ಳಿಯ ಕಿಮ್ಸ್‌ ಆಸ್ಪತ್ರೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಪ್ರತ್ಯೇಕ ವಾರ್ಡ್ ಸಿದ್ದಪಡಿಸಲಾಗಿದೆ. ಕೊರೊನಾ ರೋಗಿಗಳಿಗೆ ಹತ್ತು ಹಾಸಿಗೆಯ ಪ್ರತ್ಯೇಕ ವ್ಯವಸ್ಥೆ ಕಲ್ಪಿಸಲಾಗಿದೆ. ಅಗತ್ಯ ಔಷಧಿಗಳನ್ನು ಸಂಗ್ರಹಿಸಿಟ್ಟುಳ್ಳಲಾಗಿದೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
ಹುಬ್ಬಳ್ಳಿ(ಫೆ.03): ಹುಬ್ಬಳ್ಳಿಯಲ್ಲಿ ಕೊರೊನಾ  ವೈರಸ್ ಭೀತಿ ಎದುರಾಗಿದೆ. ಚೀನಾದಿಂದ ಹುಬ್ಬಳ್ಳಿಗೆ ಮರಳಿದ್ದ ವ್ಯಕ್ತಿಯಲ್ಲಿ ರೋಗ ಲಕ್ಷಣಗಳು ಕಾಣಿಸಿಕೊಂಡಿವೆ. ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರಿದಿದ್ದು ಅವಳಿ ನಗರದಲ್ಲಿ ಆತಂಕ ಸೃಷ್ಟಿಸಿದೆ.

ಜನೆವರಿ 18ರಂದು ಚೀನಾದಿಂದ ಹುಬ್ಬಳ್ಳಿಗೆ ಮರಳಿರುವ ಸಂದೀಪ್‌ ಎಂಬುವವರಲ್ಲಿ ಕೊರೊನಾ ರೋಗದ ಲಕ್ಷಣಗಳು ಕಾಣಿಸಿಕೊಂಡಿವೆ. 39 ವರ್ಷ ವಯಸ್ಸಿನ ಸಂದೀಪ್‌ ಕೆಮ್ಮು, ತಲೆಸುತ್ತು ಮತ್ತು ಅತಿಯಾದ ಜ್ವರದಿಂದ ಬಳಲುತ್ತಿದ್ದಾರೆ. ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿರುವ ಕೊರೋನಾ ಸೋಂಕಿತರ‌ ವಿಶೇಷ ಚಿಕಿತ್ಸಾ ವಾರ್ಡ್‌ಗೆ ಸಂದೀಪ್‌ರನ್ನು ದಾಖಲಿಸಲಾಗಿದೆ. ತೀವ್ರ ನಿಗಾ ಘಟಕದಲ್ಲಿ ತಜ್ಞ ವೈದ್ಯರಿಂದ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಸಂದೀಪ್ ರಕ್ತದ ಮಾದರಿ ಸಂಗ್ರಹಿಸಿ ಪುಣೆಯ ಲ್ಯಾಬ್‌ಗೆ ಕಳಿಸಲಾಗಿದೆ. ನಾಳೆ ರಕ್ತಪರೀಕ್ಷೆಯ ವರದಿ ಬರಲಿದೆ. ಈ ಕುರಿತು ಮಾಹಿತಿ ನೀಡಿರುವ ಕಿಮ್ಸ್ ನಿರ್ದೇಶಕ ಡಾ. ರಾಮಲಿಂಗಪ್ಪ ಅಂಟರತಾನಿ, ಸಂದೀಪ್ ಆರೋಗ್ಯದಲ್ಲಿ ಸ್ವಲ್ಪ ಚೇತರಿಕೆ ಕಾಣಿಸಿದೆ. ರಕ್ತ ಪರೀಕ್ಷೆಯ ವರದಿ ಬಂದ ಬಳಿಕ ದೇಹದಲ್ಲಿನ ರೋಗದ ಬಗ್ಗೆ ದೃಢವಾಗಲಿದೆ ಎಂದಿದ್ದಾರೆ.

ಕಿಮ್ಸ್‌ನಲ್ಲಿ ವಿಶೇಷ ವಾರ್ಡ್‌

ಹುಬ್ಬಳ್ಳಿಯ ಕಿಮ್ಸ್‌ ಆಸ್ಪತ್ರೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಪ್ರತ್ಯೇಕ ವಾರ್ಡ್ ಸಿದ್ದಪಡಿಸಲಾಗಿದೆ. ಕೊರೊನಾ ರೋಗಿಗಳಿಗೆ ಹತ್ತು ಹಾಸಿಗೆಯ ಪ್ರತ್ಯೇಕ ವ್ಯವಸ್ಥೆ ಕಲ್ಪಿಸಲಾಗಿದೆ. ಅಗತ್ಯ ಔಷಧಿಗಳನ್ನು ಸಂಗ್ರಹಿಸಿಟ್ಟುಳ್ಳಲಾಗಿದೆ.

Coronavirus: ಕೊರೊನಾ ವೈರಸ್​ ಭೀತಿ: ಕೇರಳದಲ್ಲಿ ಮೂರನೇ ಪ್ರಕರಣ ಪತ್ತೆ

ಇನ್ನು ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಬರುವವರ ಆರೋಗ್ಯದ ಬಗ್ಗೆ ನಿಗಾ ಇಡಲಾಗುತ್ತಿದೆ. ವಿದೇಶಗಳಿಂದ ಬರುವವರ ಆರೋಗ್ಯದ ಕುರಿತು ಮಾಹಿತಿ ಸಂಗ್ರಹಿಸಲಾಗುತ್ತಿದೆ. ವಿಮಾನ ನಿಲ್ದಾಣಕ್ಕೆ ಬರುವ ಪ್ರಯಾಣಿಕರು ಮುಖಕ್ಕೆ ಮಾಸ್ಕ್‌ ಧರಿಸಿ ಬರುತ್ತಿದ್ದಾರೆ. ಕೊರೊನಾ  ಭೀತಿ ಈಗ ಉತ್ತರ ಕರ್ನಾಟಕದ ಹೆಬ್ಬಾಗಿಲಿಗೆ ಬಂದಿದೆ. ಹುಬ್ಬಳ್ಳಿ- ಧಾರವಾಡ ಅವಳಿ ನಗರಕ್ಕೂ ವೈರಸ್‌ ಕಾಲಿಟ್ಟಿದೆಯಾ ಅನ್ನೋ ಆತಂಕ ಜನರಲ್ಲಿ ಮನೆಮಾಡಿದೆ. ಆದರೆ ಭಯಪಡುವ ಅವಶ್ಯಕತೆಯಿಲ್ಲ ಎಂದು ವೈದ್ಯರು ಹೇಳುತ್ತಿದ್ದಾರೆ.
First published: