ಕೊರೋನಾ ವೈರಸ್​​: ಇಂದಿನಿಂದ 1-7ನೇ ತರಗತಿ ಮಕ್ಕಳಿಗೆ ಬೇಸಿಗೆ ರಜೆ; ನಾಳೆಯಿಂದ 8-10 ತರಗತಿ ಮಕ್ಕಳಿಗೆ ಪರೀಕ್ಷಾ ರಜೆ

ಜಗತ್ತಿನಾದ್ಯಂತ ತಲ್ಲಣ ಮೂಡಿಸುತ್ತಿರುವ ಕೊರೋನಾ ವೈರಸ್​ ಸೋಂಕು ರಾಜ್ಯದ ಐವರಲ್ಲಿ ಪತ್ತೆಯಾಗಿದೆ. ಸೋಂಕಿತರನ್ನು ಕುಟುಂಬ ಸದಸ್ಯರಿಂದ ಪ್ರತ್ಯೇಕವಾಗಿರಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ರಾಜ್ಯದ ಜನರು ಮುಂಜಾಗೃತ ಕ್ರಮವಾಗಿ ಸೋಂಕು ಹರಡದಂತೆ ಸಹಕರಿಸಬೇಕು ಎಂದು ಎಚ್ಚರಿಕೆಯನ್ನು ನೀಡಿದ್ದಾರೆ.

ಸಚಿವ ಸುರೇಶ್ ಕುಮಾರ್

ಸಚಿವ ಸುರೇಶ್ ಕುಮಾರ್

 • Share this:
  ಬೆಂಗಳೂರು(ಮಾ.12): ರಾಜ್ಯಾದ್ಯಂತ ಕೊರೋನಾ ವೈರಸ್​​​ ಪ್ರಕರಣಗಳು ಪತ್ತೆಯಾಗುತ್ತಿರುವ ಕಾರಣ ಮುನ್ನೆಚ್ಚರಿಕಾ ಕ್ರಮವಾಗಿ ಬೆಂಗಳೂರು ನಗರ ಮತ್ತು ಗ್ರಾಮಾಂತರ ವ್ಯಾಪ್ತಿಗೆ ಬರುವ ಶಾಲೆಗಳಲ್ಲಿ 1ರಿಂದ 6ನೇ ತರಗತಿವರೆಗಿನ ಮಕ್ಕಳಿಗೆ ಇಂದಿನಿಂದ ಬೇಸಿಗೆ ರಜೆ ನೀಡಲಾಗಿದೆ. ಖುದ್ದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರೇ ಹೀಗೆ ಆದೇಶ ಹೊರಡಿಸಿದ್ದಾರೆ.

  ಇಂದು ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತಾಡಿದ ಸಚಿವ ಸುರೇಶ್ ಕುಮಾರ್, ರಾಜ್ಯ ಸರ್ಕಾರದ ಈ ಆದೇಶವೂ ಬೆಂಗಳೂರು ನಗರ ಹಾಗೂ ಗ್ರಾಮಾಂತರ ಭಾಗದ ಎಲ್ಲಾ ಶಾಲೆಗಳಿಗೆ ಅನ್ವಯವಾಗಲಿದೆ. ಸರ್ಕಾರಿ ಶಾಲೆಗಳ ಸಹಿತ ಎಲ್ಲಾ ICSE, CBSE ಬೋರ್ಡ್ ಶಾಲೆಗಳಿಗೂ ಅನ್ವಯವಾಗುತ್ತದೆ ಎಂದರು.

  ಇನ್ನು, ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳ 1ರಿಂದ 6ನೇ ತರಗತಿವರೆಗಿನ ವಿದ್ಯಾರ್ಥಿಗಳ ಫಲಿತಾಂಶ ಮುಂದಿನ ಶೈಕ್ಷಣಿಕ ವರ್ಷದಲ್ಲಿ ಪ್ರಕಟಿಸಲಾಗುತ್ತದೆ. ಹಾಗೆಯೇ 7ರಿಂದ 10ನೇ ತರಗತಿ ಓದುತ್ತಿರುವ ಮಕ್ಕಳಿಗೂ ನಾಳೆಯಿಂದ ಪರೀಕ್ಷಾ ರಜೆ ಘೋಷಣೆ ಮಾಡಲಾಗಿದೆ. ಹಾಗಾಗಿ 7, 8, 9 ಮತ್ತು 10ನೇ ತರಗತಿ ವಿದ್ಯಾರ್ಥಿಗಳು ಪರೀಕ್ಷೆಗೆ ಮಾತ್ರ ಹಾಜರಾದರೆ ಸಾಕು ಎಂದರು ಸುರೇಶ್ ಕುಮಾರ್.

  ಈಗಾಗಲೇ ಕೊರೋನಾ ವೈರಸ್​​ ವ್ಯಾಪಕವಾಗಿ ಹರಡುತ್ತಿರುವ ಕಾರಣ ಯಾವುದೇ ಕಾರಣಕ್ಕೂ ಜನ ಒಂದೆಡೆ ಗುಂಪು ಸೇರುವಂತಿಲ್ಲ ಎಂದು ಬೆಂಗಳೂರು ಮಹಾನಗರ ಪಾಲಿಕೆ ಆದೇಶ ಹೊರಡಿಸಿದೆ. ನಗರದ ಖಾಸಗಿ ಆಸ್ಪತ್ರೆಗಳು, ಬಾರ್‌ ಅಂಡ್‌ ರೆಸ್ಟೋರೆಂಟ್‌, ಹೋಟೆಲ್‌, ಕಲ್ಯಾಣ ಮಂಟಪ, ಚಿತ್ರಮಂದಿರ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಜನ ಒಟ್ಟಾಗಿ ಗುಂಪು ಸೇರಬಾರದು ಎಂದು ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್ ಕಟ್ಟುನಿಟ್ಟಿನ ಸುತ್ತೋಲೆ ಹೊರಡಿಸಿದ್ದಾರೆ. ಹಾಗೆಯೇ ಪೊಲೀಸರ ಅನುಮತಿ ಇಲ್ಲದೆ, ಎನ್​​ಒಸಿ ಪ್ರತಿ ಪಡೆಯದೆ ಯಾವುದೇ ಸಾರ್ವಜನಿಕ ಸಭೆಯಗಳನ್ನು ಆಯೋಜಿಸುವಂತಿಲ್ಲ ಎಂದು ನಿಷೇಧ ಹೇರಲಾಗಿದೆ.

  ಇದನ್ನೂ ಓದಿ: ಕೊರೋನಾ ವೈರಸ್​​ ಭೀತಿ: ‘ಜನ ಒಂದೆಡೆ ಗುಂಪು ಸೇರುವಂತಿಲ್ಲ‘ - ಬಿಬಿಎಂಪಿ ಆದೇಶ

  ಜಗತ್ತಿನಾದ್ಯಂತ ತಲ್ಲಣ ಮೂಡಿಸುತ್ತಿರುವ ಕೊರೋನಾ ವೈರಸ್​ ಸೋಂಕು ರಾಜ್ಯದ ಐವರಲ್ಲಿ ಪತ್ತೆಯಾಗಿದೆ. ಸೋಂಕಿತರನ್ನು ಕುಟುಂಬ ಸದಸ್ಯರಿಂದ ಪ್ರತ್ಯೇಕವಾಗಿರಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ರಾಜ್ಯದ ಜನರು ಮುಂಜಾಗೃತ ಕ್ರಮವಾಗಿ ಸೋಂಕು ಹರಡದಂತೆ ಸಹಕರಿಸಬೇಕು ಎಂದು ಎಚ್ಚರಿಕೆಯನ್ನು ನೀಡಿದ್ದಾರೆ.

  ಹಲವರಲ್ಲಿ ಸೋಂಕಿರುವುದು ದೃಢಪಟ್ಟ ಹಿನ್ನೆಲೆ ಸಿಎಂ ಬಿಎಸ್​ ಯಡಿಯೂರಪ್ಪ ನೇತೃತ್ವದಲ್ಲಿ ಸಭೆ ನಡೆಸಿದ್ದಾರೆ. ಈ ಸಭೆಯಲ್ಲಿ ಆರೋಗ್ಯ ಸಚಿವ ಬಿ ಶ್ರೀರಾಮುಲು, ಉನ್ನತ ಮಟ್ಟದ ಅಧಿಕಾರಿಗಳು, ಆರೋಗ್ಯ ಅಧಿಕಾರಿಗಳು ಭಾಗಿಯಾಗಿದ್ದಾರೆ. ಇಲ್ಲಿ ಎಲ್ಲರಿಗೂ ಕೊರೋನಾ ವೈರಸ್​​​ ಹರಡದಂತೆ ಮುನ್ನೆಚ್ಚರಿಕಾ ಕ್ರಮವಹಿಸುವಂತೆ ಸಿಎಂ ಸೂಚಿಸಿದ್ದಾರೆ.
  First published: