ವಿಶ್ವಾದ್ಯಂತ 30 ಲಕ್ಷಕ್ಕೂ ಹೆಚ್ಚು ಜನರಿಗೆ ಕೊರೋನಾ; ಅಮೆರಿಕವೊಂದರಲ್ಲೇ 10.10 ಲಕ್ಷ ಸೋಂಕಿತರು

Coronavirus Updates: ಭಾರತದಲ್ಲಿ 29,451 ಜನರಲ್ಲಿ ಕೊರೋನಾ ಸೋಂಕು ಕಾಣಿಸಿಕೊಂಡಿದ್ದು, 939 ಜನರು ಸಾವನ್ನಪ್ಪಿದ್ದಾರೆ.

ಪ್ರಾತಿನಿಧಿಕ ಚಿತ್ರ

ಪ್ರಾತಿನಿಧಿಕ ಚಿತ್ರ

  • Share this:
ನವದೆಹಲಿ (ಏ. 28): ವಿಶ್ವಾದ್ಯಂತ ಕೊರೋನಾ ವೈರಸ್ ದಾಳಿ ಇನ್ನೂ ಮುಂದುವರೆಯುತ್ತಲೇ ಇದೆ. ಜಗತ್ತಿನಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 30 ಲಕ್ಷ ದಾಟುವ ಮೂಲಕ ಮತ್ತಷ್ಟು ಆತಂಕ ಹೆಚ್ಚಾಗಿದೆ.

ವಿಶ್ವದೆಲ್ಲೆಡೆ 30.64 ಲಕ್ಷ ಜನರು ಕೊರೋನಾ ಸೋಂಕಿನಿಂದ ಬಳಲುತ್ತಿದ್ದಾರೆ. ಪ್ರಪಂಚದಾದ್ಯಂತ ಕೊರೋನಾದಿಂದ ಸಾವನ್ನಪ್ಪಿದವರ ಸಂಖ್ಯೆ 2.11 ಲಕ್ಷಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ ಇದುವರೆಗೂ 9.22 ಲಕ್ಷ ಜನರು ಕೊರೋನಾದಿಂದ ಗುಣಮುಖರಾಗಿದ್ದಾರೆ. ಭಾರತದಲ್ಲಿ 29,451 ಜನರಲ್ಲಿ ಕೊರೋನಾ ಸೋಂಕು ಕಾಣಿಸಿಕೊಂಡಿದ್ದು, 939 ಜನರು ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ಕೋವಿಡ್​​-19: 24 ಗಂಟೆಗಳಲ್ಲಿ 60 ಸಾವು, 1,436 ಹೊಸ ಪ್ರಕರಣ; 28 ಸಾವಿರ ದಾಟಿದ ದೇಶದ ಸೋಂಕಿತರ ಸಂಖ್ಯೆ

ಜಗತ್ತಿನಲ್ಲಿ ಅತಿಹೆಚ್ಚು ಕೊರೋನಾ ಪೀಡಿತರು ಇರುವುದು ಅಮೆರಿಕದಲ್ಲಿ. ಅಮೆರಿಕದ ಕೊರೋನಾ ಪೀಡಿತರ ಸಂಖ್ಯೆ 10.10 ಲಕ್ಷಕ್ಕೆ ಏರಿಕೆಯಾಗಿದೆ. ಅಮೆರಿಕವೊಂದರಲ್ಲೇ 56,797 ಜನ ಕೊರೋನಾದಿಂದ ಸಾವನ್ನಪ್ಪಿದ್ದಾರೆ. ಇಟಲಿಯಲ್ಲಿ ಕೊರೋನಾದಿಂದ ಸಾವನ್ನಪ್ಪಿದವರ ಸಂಖ್ಯೆ 26,977ಕ್ಕೆ ಏರಿಕೆಯಾಗಿದ್ದು, 1.99 ಲಕ್ಷ ಜನರಿಗೆ ಸೋಂಕು ಕಾಣಿಸಿಕೊಂಡಿದೆ. ಸ್ಪೇನ್​ನಲ್ಲಿ 2.29 ಲಕ್ಷ ಜನರಲ್ಲಿ ಕೊರೋನಾ ಸೋಂಕು ಕಾಣಿಸಿಕೊಂಡಿದ್ದು, ಸಾವಿನ ಸಂಖ್ಯೆ 23,521ಕ್ಕೆ ಏರಿಕೆಯಾಗಿದೆ.
First published: