HOME » NEWS » Coronavirus-latest-news » CORONAS THIRD WAVE AFFECTS 3 4 LAKH CHILDREN IN KARNATAKA EXPERTS WARN MAK

Corona 3rd Wave| ಕರ್ನಾಟಕದಲ್ಲಿ 3.4 ಲಕ್ಷ ಮಕ್ಕಳನ್ನು ಬಾಧಿಸಲಿದೆ ಕೊರೋನಾ ಮೂರನೇ ಅಲೆ?; ತಜ್ಞರ ಎಚ್ಚರಿಕೆ!

ಕೊರೋನಾ ಮೂರನೇ ಅಲೆ ಮಕ್ಕಳ ಮೇಲೆ ಹೆಚ್ಚಿನ ಪರಿಣಾಮ ಬೀರಲಿದ್ದು, ಇದಕ್ಕಾಗಿ ಮಕ್ಕಳ ಆರೈಕೆಗಾಗಿ ವಿಶೇಷ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ಹೃದ್ರೋಗ ತಜ್ಞ ಡಾ.ದೇವಿ ಪ್ರಸಾದ್‌ ಶೆಟ್ಟಿ ನೇತೃತ್ವದ ತಜ್ಞರ ಸಮಿತಿ ರಾಜ್ಯ ಸರ್ಕಾರವನ್ನು ಎಚ್ಚರಿಸಿದೆ.

news18-kannada
Updated:June 20, 2021, 10:10 PM IST
Corona 3rd Wave| ಕರ್ನಾಟಕದಲ್ಲಿ 3.4 ಲಕ್ಷ ಮಕ್ಕಳನ್ನು ಬಾಧಿಸಲಿದೆ ಕೊರೋನಾ ಮೂರನೇ ಅಲೆ?; ತಜ್ಞರ ಎಚ್ಚರಿಕೆ!
ಪ್ರಾತಿನಿಧಿಕ ಚಿತ್ರ.
  • Share this:
ಬೆಂಗಳೂರು (ಜೂನ್ 20); ಕೊರೋನಾ ಎರಡನೇ ಅಲೆ ಭಾರತ ಮಾತ್ರವಲ್ಲ ಕರ್ನಾಟಕದಲ್ಲೂ ಕರಿಛಾಯೆ ಮೂಡಿಸಿತ್ತು. ಸಾವಿರಾರು ಜನ ಈ ಸೋಂಕಿಗೆ ಬಲಿಯಾಗಿದ್ದಾರೆ. ಸಾವಿರಾರು ಮಕ್ಕಳು ತಂದೆ ತಾಯಿಯನ್ನು ಕಳೆದುಕೊಂಡು ಅನಾಥರಾಗಿದ್ದಾರೆ. ಈ ನಡುವೆ ಕೊರೋನಾ ಎರಡನೇ ಅಲೆಗೆ ಮಹಾರಾಷ್ಟ್ರದಲ್ಲಿ ಅಪಾರ ಮಕ್ಕಳೂ ತುತ್ತಾಗಿದ್ದವು ಎಂಬ ಸುದ್ದಿ ಭಾರೀ ಆತಂಕಕ್ಕೆ ಕಾರಣವಾಗಿತ್ತು. ಶನಿವಾರ ಸ್ವತಃ ಏಮ್ಸ್​ ಹೇಳಿಕೆ ಬಿಡುಗಡೆ ಮಾಡಿದ್ದು, 6 ರಿಂದ 8 ವಾರದಲ್ಲಿ ಭಾರತಕ್ಕೆ ಕೊರೋನಾ ಮೂರನೇ ಅಲೆ ಅಪ್ಪಳಿಸಲಿದ್ದು, ದೊಡ್ಡ ಪ್ರಮಾಣದಲ್ಲಿ ಮಕ್ಕಳು ಈ ಸೋಂಕಿಗೆ ಬಾಧಿತರಾಗುವ ಸಾಧ್ಯತೆ ಇದೆ ಎಂದು ಎಚ್ಚರಿಸಿದ್ದರು. ಈ ನಡುವೆ ರಾಜ್ಯದಲ್ಲಿ ಕೊರೊನಾ ಎರಡನೇ ಅಲೆಯು ಇಳಿಕೆಯಾಗುತ್ತಿದ್ದು, ಅನ್‌ಲಾಕ್ ಪ್ರಕ್ರಿಯೆ ಆರಂಭವಾಗಿದೆ. ಆದರೆ, ಮೂರನೇ ಅಲೆ ಮಕ್ಕಳ ಮೇಲೆ ಹೆಚ್ಚಿನ ಪರಿಣಾಮ ಬೀರಲಿದ್ದು, ರಾಜ್ಯದಲ್ಲಿ 3.4 ಲಕ್ಷ ಮಕ್ಕಳು ಸೋಂಕಿಗೆ ತುತ್ತಾಗುವ ಸಾಧ್ಯತೆ ಇದೆ ಎಂದು ತಜ್ಞರ ಸಮಿತಿ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ.

"ಕೊರೋನಾ ಮೂರನೇ ಅಲೆ ಮಕ್ಕಳ ಮೇಲೆ ಹೆಚ್ಚಿನ ಪರಿಣಾಮ ಬೀರಲಿದ್ದು, ಇದಕ್ಕಾಗಿ ಮಕ್ಕಳ ಆರೈಕೆಗಾಗಿ ವಿಶೇಷ ವ್ಯವಸ್ಥೆ ಮಾಡಿಕೊಳ್ಳಬೇಕು" ಎಂದು ಹೃದ್ರೋಗ ತಜ್ಞ ಡಾ.ದೇವಿ ಪ್ರಸಾದ್‌ ಶೆಟ್ಟಿ ನೇತೃತ್ವದ ತಜ್ಞರ ಸಮಿತಿ ರಾಜ್ಯ ಸರ್ಕಾರವನ್ನು ಎಚ್ಚರಿಸಿದೆ.

ಹೃದ್ರೋಗ ತಜ್ಞ ಡಾ.ದೇವಿ ಪ್ರಸಾದ್‌ ಶೆಟ್ಟಿ ನೇತೃತ್ವದ 16 ಸದಸ್ಯರನ್ನು ಒಳಗೊಂಡ ತಜ್ಞರ ಸಮಿತಿ ಕೊರೊನಾ 3ನೇ ಅಲೆಯ ಬಗ್ಗೆ ಆತಂಕ ವ್ಯಕ್ತಪಡಿಸಿದೆ. 91 ಪುಟಗಳ ಮಧ್ಯಂತರ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿರುವ ಸಮಿತಿ, ಹಲವಾರು ಶಿಫಾರಸ್ಸುಗಳನ್ನು ಮಾಡಿದೆ.

ರಾಜ್ಯದಲ್ಲಿ ಅಕ್ಟೋಬರ್‌ ಅಥವಾ ನವೆಂಬರ್‌ ತಿಂಗಳಿನಲ್ಲಿ ಕೋವಿಡ್ ಮೂರನೇ ಅಲೆ ಉಲ್ಬಣಿಸುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ 0-18 ವರ್ಷ ವಯ್ಸಸಿನ 32.21 ಲಕ್ಷ ಮಕ್ಕಳಿದ್ದಾರೆ. ಈ ಪೈಕಿ, 45,958 ಮಕ್ಕಳು ಸೋಂಕಿಗೆ ತುತ್ತಾಗಲಿದ್ದಾರೆ. ರಾಜ್ಯದಾದ್ಯಂತ 0-18 ವರ್ಷ ವಯಸ್ಸಿನ 2.38 ಕೋಟಿ ಜನಸಂಖ್ಯೆಯಲ್ಲಿ 3.4 ಲಕ್ಷ ಮಕ್ಕಳು ಸೋಂಕಿಗೆ ಒಳಗಾಗುವ ಸಾಧ್ಯತೆ ಇದೆ ಎಂದು ಸಮಿತಿ ಅಂದಾಜಿಸಿದೆ.

ಇದನ್ನೂ ಓದಿ: Indian Economi| ಆರ್ಥಿಕತೆಯನ್ನು ಕಾಡುತ್ತಿದೆ ಕೊರೋನಾ, ಬಡವರ ತವರಾಯಿತೇ ಭಾರತ? ಇಲ್ಲಿದೆ ಜಿಡಿಪಿ ಕುಸಿತದ ವಾಸ್ತವ ಚಿತ್ರಣ!

ಬೆಂಗಳೂರಿನಲ್ಲಿ ಮಕ್ಕಳಿಗೆ 3,677 ಹಾಸಿಗೆಗಳ ಅವಶ್ಯಕತೆಯಿದೆ. ಅದರಲ್ಲಿ 1,838 ಐಸಿಯು ಮತ್ತು ಎಚ್‌ಡಿಯು (ಹೈ ಡಿಪೆಂಡೆನ್ಸಿ ಯುನಿಟ್) ಹಾಸಿಗೆಗಳು ಇರಬೇಕಾಗುತ್ತದೆ. ಅಲ್ಲದೆ, ಹೆಚ್ಚುವರಿಯಾಗಿ ಕೋವಿಡ್ ಕೇರ್ ಸೆಂಟರ್‌ಗಳಲ್ಲಿ 7,353 ಹಾಸಿಗೆಗಳು ಬೇಕಾಗುತ್ತವೆ ಎಂದು ಸಮಿತಿ ಅಂದಾಜಿಸಲಾಗಿದೆ.

ಉಳಿದಂತೆ ರಾಜ್ಯಾದ್ಯಂತ ಕೋವಿಡ್ ಕೇರ್ ಸೆಂಟರ್‌ಗಳಲ್ಲಿ 27,205 ಹಾಸಿಗೆಗಳು, 13,602 ಐಸಿಯು ಹಾಗೂ 54,409 ಎಚ್‌ಡಿಯು ಹಾಸಿಗೆಗಳು ಬೇಕಾಗುತ್ತವೆ ಎಂದು ಸಮಿತಿ ಸೂಚಿಸಿದೆ. ಬಾಲ ಆರೈಕೆ ಸುರಕ್ಷಾ ಕೇಂದ್ರಗಳನ್ನು ಸ್ಥಾಪಿಸಲು ಸಲಹೆ ನೀಡಿದೆ.ಇದನ್ನೂ ಓದಿ: Explained| ಪ್ರಧಾನಿ ಮೋದಿ ಅವಧಿಯಲ್ಲಾದ ಐದು ಮಹಾ ಪ್ರಮಾದಗಳು; ಡ್ಯಾಮೇಜ್ ಕಂಟ್ರೋಲ್​ಗೆ ಮುಂದಾದ ಬಿಜೆಪಿ!

ಸಮಿತಿ ವರದಿಗೆ ಪ್ರತಿಕ್ರಿಯಿಸಿರುವ ಆರೋಗ್ಯ ಸಚಿವ ಡಾ. ಕೆ. ಸುಧಾಕರ್, ‘ತಜ್ಞರ ಸಮಿತಿ ಅಂತಿಮ ವರದಿ ಆಧರಿಸಿ 45 ದಿನಗಳಲ್ಲಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತದೆ’ ಎಂದು ಹೇಳಿದ್ದಾರೆ. ಕೊರೋನಾ ಎರಡನೇ ಅಲೆಯ ಆರಂಭದ ಒಂದು ತಿಂಗಳು ಇಡೀ ದೇಶವೇ ತತ್ತರಿಸಿ ಹೋಗಿತ್ತು. ಆಕ್ಸಿಜನ್‌, ಬೆಡ್ ಕೊರತೆಯಿಂದಾಗಿ ಸಾವಿರಾರು ಜನರು ಪ್ರಾಣ ಕಳೆದುಕೊಂಡರು. ರಾಜ್ಯದಲ್ಲಿಯೂ ಬೆಡ್‌ಗ ಸಮಸ್ಯೆ ವಿಪರಿತವಾಗಿತ್ತು. ರಾಜಕೀಯ ಪಕ್ಷಗಳು ಕೊರೊನಾ ಬಿಕ್ಕಟ್ಟನ್ನು ತಮಗೆ ಅನುಕೂಲವಾಗುವಂತೆ ಮಾಡಿಕೊಳ್ಳಲು ಪ್ರಯತ್ನಿಸಿದ್ದು ವಿಪರ್ಯಾಸ. ಸದ್ಯ ಮಕ್ಕಳ ಬಗ್ಗೆ ಜಾಗ್ರತೆ ವಹಿಸಿ ಎಂದು ತಜ್ಷರ ಸಮಿತಿ ಎಚ್ಚರಿಸಿದೆ. ಸರ್ಕಾರ ಯಾವ ಕ್ರಮ ಕೈಗೊಳ್ಳುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

Youtube Video


ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ಲಾಕ್​​ಡೌನ್​ ನಿಯಮಗಳನ್ನು ಕಟ್ಟುನಿಟ್ಟಿನಿಂದ ಪಾಲಿಸಿ ಸೋಂಕಿನಿಂದ ತಮ್ಮನ್ನು ತಾವು ಕಾಪಾಡಿಕೊಳ್ಳುವ ಪ್ರತಿಜ್ಞೆ ತೆಗೆದುಕೊಳ್ಳಬೇಕು. ನಾವು ಸುರಕ್ಷಿತವಾಗಿ ಇದ್ದು, ನಮ್ಮಿಂದ ಇತರರಿಗೆ ಸೋಂಕು ಹಬ್ಬದಂತೆ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು.
Published by: MAshok Kumar
First published: June 20, 2021, 9:53 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories