ಕೊಡಗು(ಡೆ.25): ಕೊಡಗಿನ ಶಾಲೆಗಳಲ್ಲಿ ಕೋವಿಡ್(COVID-19) ಸ್ಫೋಟಗೊಳ್ಳುತ್ತಿದೆ. ಕುಶಾಲನಗರ(Kushalanagar) ತಾಲ್ಲೂಕಿನ ಅತ್ತೂರಿನಲ್ಲಿ ಇರುವ ಜ್ಞಾನಗಂಗಾ ಶಾಲೆಯ 26 ವಿದ್ಯಾರ್ಥಿಗಳಿಗೆ(Students) ಕೋವಿಡ್ ದೃಢ ಪಟ್ಟಿದೆ. ಹಾಗೆಯೇ ಪೊನ್ನಂಪೇಟೆಯ ಕರ್ನಾಟಕ ಪಬ್ಲಿಕ್ ಶಾಲೆ(Karnataka Public School)ಯ 6 ವಿದ್ಯಾರ್ಥಿಗಳಿಗೆ ಕೋವಿಡ್ ಸೋಂಕು ಇರುವುದು ದೃಢಪಟ್ಟಿದ್ದು, ಒಟ್ಟು 32 ವಿದ್ಯಾರ್ಥಿಗಳಿಗೆ ಮಹಾಮಾರಿ ವಕ್ಕರಿಸಿದೆ. ಜ್ಞಾನಗಂಗಾ ಶಾಲೆ ವಸತಿ ಸಹಿತ ಮತ್ತು ವಸತಿ ರಹಿತ ಎರಡು ಮಾದರಿಗಳನ್ನು ಹೊಂದಿದ್ದು ವಸತಿ ಶಾಲೆಯ ಇಬ್ಬರು ವಿದ್ಯಾರ್ಥಿಗಳಿಗೆ ಮೊದಲು ಕೋವಿಡ್ ಸೋಂಕು ಇರುವುದು ದೃಢಪಟ್ಟಿತ್ತು.
ವಿದ್ಯಾರ್ಥಿಗಳಿಗೆ ಕೊರೋನಾ ಪರೀಕ್ಷೆ
ಶಾಲೆಯಲ್ಲಿ ಒಟ್ಟು 685 ವಿದ್ಯಾರ್ಥಿಗಳಿದ್ದು ಅವರಲ್ಲಿ 387 ವಿದ್ಯಾರ್ಥಿಗಳಿಗೆ ನಿನ್ನೆ ಕೋವಿಡ್ ಪರೀಕ್ಷೆ ಮಾಡಲಾಗಿತ್ತು. 387 ವಿದ್ಯಾರ್ಥಿಗಳ ಪೈಕಿ ಮತ್ತೆ 24 ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಈ ಶಾಲೆಯ ಇನ್ನೂ 300 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಇಂದು ಕೋವಿಡ್ ಟೆಸ್ಟ್ ಮಾಡಲಾಗುತ್ತಿದೆ. ಇದೀಗ 6 ರಿಂದ 10 ನೇ ತರಗತಿಯ ವಿದ್ಯಾರ್ಥಿಗಳಿಗೆ ಕೋವಿಡ್ ಟೆಸ್ಟ್ ಮಾಡಲಾಗಿದ್ದು, ಶನಿವಾರ ಎಲ್ ಕೆಜಿಯಿಂದ 5 ತರಗತಿವರೆಗಿನ ವಿದ್ಯಾರ್ಥಿಗಳಿಗೆ ಕೋವಿಡ್ ಟೆಸ್ಟ್ ಮಾಡಲಾಗುತ್ತಿದೆ. ಹೀಗಾಗಿ ಇಷ್ಟು ವಿದ್ಯಾರ್ಥಿಗಳಿಗೆ ಸೋಂಕು ಹರಡಿರುವ ಸಾಧ್ಯತೆ ಇದ್ದು ಸೋಂಕಿತ ವಿದ್ಯಾರ್ಥಿಗಳ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ.
ಇದನ್ನೂ ಓದಿ: Omicron: ಜೀನೋಮಿಕ್ ಸೀಕ್ವೆನ್ಸಿಂಗ್ ವರದಿ ಬರಲು ಏಕೆ ತಡವಾಗುತ್ತವೆ ಗೊತ್ತೇ.. ಇಲ್ಲಿದೆ ನೋಡಿ ಡಿಟೇಲ್ಸ್
ಸೋಂಕಿತರ ಪ್ರಾಥಮಿಕ ಸಂಪರ್ಕಿತರಿಗೂ ಟೆಸ್ಟ್
24 ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್ ಬಂದಿರುವುದು ತಿಳಿಯುತ್ತಿದ್ದಂತೆ ಶಾಲೆಗೆ ಕೊಡಗು ಡಿಎಚ್ಓ ವೆಂಕಟೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೆ ಶಾಲಾ ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಕೋವಿಡ್ ಸೋಂಕು ಇರುವುದು ದೃಢಪಟ್ಟಿರುವುದರಿಂದ ಎರಡು ಶಾಲೆಗಳನ್ನು ಕಂಟೈನ್ಮೆಂಟ್ ಏರಿಯವನ್ನಾಗಿ ಮಾಡಲಾಗಿದೆ. ಬುಧವಾರ ಪೊನ್ನಂಪೇಟೆಯ ಕರ್ನಾಟಕ ಪಬ್ಲಿಕ್ ಶಾಲೆಯ ಶಿಕ್ಷಕರೊಬ್ಬರಿಗೆ ಕೋವಿಡ್ ಸೋಂಕು ದೃಢಪಟ್ಟಿತ್ತು. ಕಳೆದ ಶನಿವಾರದವರೆಗೆ ಆ ಶಿಕ್ಷಕ ಶಾಲೆಗೆ ಬಂದಿದ್ದರು. ವಿದ್ಯಾರ್ಥಿಗಳು ಮತ್ತು ಶಿಕ್ಷಕರೆಲ್ಲರೂ ಪ್ರಾಥಮಿಕ ಸಂಪರ್ಕಿತರಾಗಿದ್ದರಿಂದ ಅವರೆಲ್ಲರಿಗೂ ಕೋವಿಡ್ ಟೆಸ್ಟ್ ಮಾಡಲಾಗಿತ್ತು. ಅವರಲ್ಲಿ 6 ವಿದ್ಯಾರ್ಥಿಗಳಿಗೆ ಕೋವಿಡ್ ಸೋಂಕು ಇರುವುದು ದೃಢಪಟ್ಟಿದೆ.
ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ಹರಡಿದ ಕೊರೋನಾ
ಶಿಕ್ಷಕನಿಂದ 6 ವಿದ್ಯಾರ್ಥಿಗಳಿಗೆ ಕೋವಿಡ್ ಸೋಂಕು ಹರಡಿದಂತಾಗಿದೆ. ಸದ್ಯ ಹೆಚ್ಚಿನ ವಿದ್ಯಾರ್ಥಿಗಳಲ್ಲಿ ಯಾವುದೇ ರೋಗ ಲಕ್ಷಣಗಳೇ ಇರಲಿಲ್ಲ. ಇಂತಹ ವಿದ್ಯಾರ್ಥಿಗಳನ್ನು ಸಾಧ್ಯವಿದ್ದಲ್ಲಿ ಅವರ ಮನೆಗಳಲ್ಲೇ ಐಸೋಲೇಷನ್ ಮಾಡಲಾಗಿದ್ದು, ರೋಗ ಲಕ್ಷಣಗಳಿರುವ ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಕೊಡಗು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್ ತಿಳಿಸಿದ್ದಾರೆ. ಕೊಡಗಿನಲ್ಲಿ ಕಳೆದ ಒಂದು ತಿಂಗಳ ಅವಧಿಯಲ್ಲಿ 150 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಕೋವಿಡ್ ಮಹಾಮಾರಿ ವಕ್ಕರಿಸಿರುವುದು ಪೋಷಕರನ್ನು ಚಿಂತೆಗೆ ದೂಡಿದೆ.
ಇದನ್ನೂ ಓದಿ: Omicron ಭೀತಿ: ರಾಜ್ಯದ ಮಹಾರಾಷ್ಟ್ರ, ತೆಲಂಗಾಣ ಗಡಿಯಲ್ಲಿ ಕಟ್ಟೆಚ್ಚರ
ಹಬ್ಬಗಳೇ ಕೋವಿಡ್ ಸ್ಪೋಟಕ್ಕೆ ಕಾರಣ
ಕಳೆದ ತಿಂಗಳ ಅಂತ್ಯದಲ್ಲಿ ಕೊಡಗು ಜಿಲ್ಲೆಯಲ್ಲಿ ನಡೆದ ವಿವಿಧ ಹಬ್ಬಗಳು ನಡೆದಿದ್ದವು. ಈ ಹಬ್ಬಗಳಿಗೆ ವಸತಿ ಶಾಲೆಗಳ ವಿದ್ಯಾರ್ಥಿಗಳು ಭಾಗವಹಿಸಿ ವಾಪಸ್ ಆಗಿದ್ದೇ ವಸತಿ ಶಾಲೆಗಳಲ್ಲಿ ಕೋವಿಡ್ ಸ್ಫೋಟಗೊಳ್ಳಲು ಮುಖ್ಯ ಕಾರಣ ಎನ್ನೋದು ಆರೋಗ್ಯ ಇಲಾಖೆ ಅಧಿಕಾರಗಳ ಅಭಿಪ್ರಾಯ. ಒಟ್ಟಿನಲ್ಲಿ ಕೊಡಗಿನಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಕೋವಿಡ್ ಹರಡುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ