ತಮಿಳುನಾಡಿನಲ್ಲಿ ಕೊರೋನಾಗೆ ಮೊದಲ ಬಲಿ; ದೇಶದಲ್ಲಿ ಸಾವನ್ನಪ್ಪಿದವರ ಸಂಖ್ಯೆ 11ಕ್ಕೆ ಏರಿಕೆ

Coronavirus Death Toll in India: ತಮಿಳುನಾಡಿನ 54 ವರ್ಷದ ವ್ಯಕ್ತಿಯೊಬ್ಬರು ಮಧುರೈನ ರಾಜಾಜಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಸೋಮವಾರ ಅವರಿಗೆ ಕೊರೋನಾ ಸೋಂಕು ತಗಲಿರುವುದು ಪತ್ತೆಯಾಗಿತ್ತು.

Sushma Chakre | news18-kannada
Updated:March 25, 2020, 8:30 AM IST
ತಮಿಳುನಾಡಿನಲ್ಲಿ ಕೊರೋನಾಗೆ ಮೊದಲ ಬಲಿ; ದೇಶದಲ್ಲಿ ಸಾವನ್ನಪ್ಪಿದವರ ಸಂಖ್ಯೆ 11ಕ್ಕೆ ಏರಿಕೆ
ಸಾಂದರ್ಭಿಕ ಚಿತ್ರ
  • Share this:
ಚೆನ್ನೈ (ಮಾ. 25): ದಕ್ಷಿಣ ಭಾರತದಲ್ಲಿ ಕೊರೋನಾ ವೈರಸ್​ಗೆ ಮತ್ತೋರ್ವ ವ್ಯಕ್ತಿ ಸಾವನ್ನ್ಪಪ್ಪುವ ಮೂಲಕ ಮಾರಣಾಂತಿಕ ವೈರಸ್​ನ ಭೀತಿ ಮತ್ತಷ್ಟು ಹೆಚ್ಚಾಗಿದೆ. ತಮಿಳುನಾಡಿನಲ್ಲಿ ಕೊರೋನಾಗೆ ಮೊದಲ ವ್ಯಕ್ತಿ ಬಲಿಯಾಗಿದ್ದು, ಈ ಮೂಲಕ ಭಾರತದಲ್ಲಿ  ಸಾವಿನ ಸಂಖ್ಯೆ 11ಕ್ಕೆ ಏರಿಕೆಯಾಗಿದೆ.

ತಮಿಳುನಾಡಿನ 54 ವರ್ಷದ ವ್ಯಕ್ತಿಯೊಬ್ಬರು ಮಧುರೈನ ರಾಜಾಜಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಸೋಮವಾರ ಅವರಿಗೆ ಕೊರೋನಾ ಸೋಂಕು ತಗಲಿರುವುದು ಪತ್ತೆಯಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ಅವರು ಮೃತಪಟ್ಟಿರುವುದಾಗಿ ತಮಿಳುನಾಡಿನ ಆರೋಗ್ಯ ಸಚಿವ ಡಾ. ಸಿ. ವಿಜಯಭಾಸ್ಕರ್ ಟ್ವೀಟ್ ಮಾಡಿದ್ದಾರೆ.
ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 500ರ ಗಡಿ ದಾಟಿದೆ. ಭಾರತದಲ್ಲಿ ಒಂದೇ ದಿನ 3 ಮಂದಿ ಬಲಿಯಾಗುವ ಮೂಲಕ ಸಾವಿನ ಸಂಖ್ಯೆ 10ಕ್ಕೇರಿತ್ತು.  ಮಾರ್ಚ್ 15ರಂದು ಅಮೆರಿಕದಿಂದ ಹಿಮಾಚಲ ಪ್ರದೇಶಕ್ಕೆ ಆಗಮಿಸಿದ್ದ 69 ವರ್ಷದ ವ್ಯಕ್ತಿಯೊಬ್ಬರಿಗೆ ಟಂಡಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದರು. ಪಶ್ಚಿಮ ಬಂಗಾಳ ಮತ್ತು ಮಹಾರಾಷ್ಟ್ರದಲ್ಲಿ ತಲಾ ಒಬ್ಬರು ಮೃತಪಟ್ಟಿದ್ದರು.  ಇದೀಗ ತಮಿಳುನಾಡಿನಲ್ಲಿ ಮತ್ತೋರ್ವ ವ್ಯಕ್ತಿ ಮೃತಪಡುವ ಮೂಲಕ ದೇಶದಲ್ಲಿ ಸಾವಿನ ಸಂಖ್ಯೆ 11ಕ್ಕೆ ಏರಿಕೆಯಾಗಿದೆ.
 

 
First published: March 25, 2020, 8:19 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading