HOME » NEWS » Coronavirus-latest-news » CORONAVIRUS FOR A PREGNANT WOMAN IN UTTARA KANNADA NUMBER HIKED OF INFECTED CORONA CASES DISTRICT HK

ಉತ್ತರ ಕನ್ನಡದಲ್ಲಿ ಗರ್ಭಿಣಿ ಮಹಿಳೆಗೆ ಕೊರೋನಾ – ಜಿಲ್ಲೆಯಲ್ಲಿ ಒಂಬತ್ತಕ್ಕೇರಿದ ಸೊಂಕಿತರ ಸಂಖ್ಯೆ

26 ವರ್ಷದ ಐದು ತಿಂಗಳ ಗರ್ಭಿಣಿ ಮಹಿಳೆಗೆ ಸೋಂಕು ಇರುವುದು ದೃಢಪಟ್ಟಿದೆ. ಈಕೆಗೆ ಇಬ್ಬರು ಮಕ್ಕಳು ಇದ್ದು, ಈಕೆಯ ಗಂಡ ದುಬೈನಿಂದ ವಾಪಸ್ಸಾದವನಾಗಿದ್ದಾನೆ. ಆದರೆ, ಗಂಡನ ವರದಿ ನೆಗೆಟಿವ್ ಬಂದಿದೆ.

news18-kannada
Updated:April 8, 2020, 2:56 PM IST
ಉತ್ತರ ಕನ್ನಡದಲ್ಲಿ ಗರ್ಭಿಣಿ ಮಹಿಳೆಗೆ ಕೊರೋನಾ – ಜಿಲ್ಲೆಯಲ್ಲಿ ಒಂಬತ್ತಕ್ಕೇರಿದ ಸೊಂಕಿತರ ಸಂಖ್ಯೆ
ಸಾಂದರ್ಭಿಕ ಚಿತ್ರ
  • Share this:
ಕಾರವಾರ(ಏ.08): ದೇಶದಲ್ಲಿ ತಲ್ಲಣ ಮೂಡಿಸಿರುವ ಕೊರೋನಾ ಭೀತಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಕಡಿವಾಣಕ್ಕೆ ಬರುತ್ತಿದೆ ಎಂದು ನಿಟ್ಟುಸಿರು ಬಿಡುತ್ತಿದ್ದಂತೆ ಭಟ್ಕಳದಲ್ಲಿ ಗರ್ಭಿಣಿ ಮಹಿಳೆಯಲ್ಲಿ ಕೊರೋನಾ ಸೋಂಕು ಕಾಣಿಸಿಕೊಳ್ಳುವ ಮೂಲಕ ಮತ್ತೆ ಆತಂಕ ಹೆಚ್ಚಿಸಿದೆ. ಜಿಲ್ಲೆಯಲ್ಲಿ ಇದೀಗ ಸೋಂಕಿತರ ಸಂಖ್ಯೆ ಒಂಭತ್ತಕ್ಕೆ ಏರಿಕೆಯಾಗಿದೆ.

26 ವರ್ಷದ ಐದು ತಿಂಗಳ ಗರ್ಭಿಣಿ ಮಹಿಳೆಗೆ ಸೋಂಕು ಇರುವುದು ದೃಢಪಟ್ಟಿದೆ. ಈಕೆಗೆ ಇಬ್ಬರು ಮಕ್ಕಳು ಇದ್ದು, ಈಕೆಯ ಗಂಡ  ದುಬೈನಿಂದ ವಾಪಸ್ಸಾಗಿದ್ದರು. ಆದರೆ, ಗಂಡನ ವರದಿ ನೆಗೆಟಿವ್ ಎಂದು ಬಂದಿದೆ.

ದುಬೈನಲ್ಲಿ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ ಈಕೆಯ ಗಂಡ, ಮಾರ್ಚ್ 17ರಂದು ಮುಂಬೈಗೆ ಬಂದಿಳಿದಿದ್ದರು. ಮುಂಬೈನಲ್ಲಿ ಸುಮಾರು ನಾಲ್ಕು ದಿನ ಉಳಿದಿದ್ದ ಇವರು ಮುಂಬೈನಿಂದ ರೈಲಿನಲ್ಲಿ ಭಟ್ಕಳಕ್ಕೆ ಬಂದಿದ್ದರು. ರೈಲು ನಿಲ್ದಾಣದಿಂದ ಸ್ನೇಹಿತನ ಬೈಕ್ ನಲ್ಲಿ ಮನೆಗೆ ತೆರಳಿದ್ದರು.

ರಾಜ್ಯವಾರು ಹೊಸದಾಗಿ ಸೋಂಕಿತರ ಅಂಕಿ ಅಂಶ:

ದುಬೈನಿಂದ ಬಂದವರಾದ್ದರಿಂದ ಆರೋಗ್ಯ ಇಲಾಖೆ ಸಿಬ್ಬಂದಿ ಇವರ ಕೈಗೆ ಹೋಂ ಕ್ವಾರಂಟೈನ್ ಮುದ್ರೆ ಹಾಕಿದ್ದರು. ಮಾರ್ಚ್ 31ರಂದು ಗರ್ಭಿಣಿ ಹೆಂಡತಿಯ ಆರೋಗ್ಯದಲ್ಲಿ ಸ್ವಲ್ಪ ವ್ಯತ್ಯಾಸ ಕಂಡು ಬಂದ ಹಿನ್ನಲೆಯಲ್ಲಿ ಆಕೆಯನ್ನು ಗಂಡ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಆದರೆ, ಆಸ್ಪತ್ರೆಯ ಸಿಬ್ಬಂದಿ ಗಂಡನ ಕೈ ಮೇಲೆ ಕ್ವಾರಂಟೈನ್ ಮುದ್ರೆ ಇರುವುದನ್ನು ಗಮನಿಸಿ ವೈದ್ಯರ ಗಮನಕ್ಕೆ ತಂದಿದ್ದಾರೆ. ನಂತರ ಇಬ್ಬರನ್ನು ಭಟ್ಕಳ ತಾಲೂಕು ಆಸ್ಪತ್ರೆಗೆ ದಾಖಲಿಸಿ, ಇಬ್ಬರ ಗಂಟಲಿನ ದ್ರವದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಿದ್ದಾರೆ.

ಈ ವೇಳೆ ಹೆಂಡತಿಗೆ ಕೊರೋನಾ ಸೋಂಕು ತಗುಲಿರುವುದು ದೃಢ ಪಟ್ಟಿದ್ದು, ಗಂಡನ ವರದಿ ನೆಗೆಟಿವ್ ಬಂದಿದೆ. ಇದೀಗ ಗಂಡನ ಗಂಟಲಿನ ದ್ರವವನ್ನು ಮತ್ತೊಮ್ಮೆ ಪರೀಕ್ಷೆಗೆ ಕಳುಹಿಸಲಾಗಿದೆ.

ಸೋಂಕಿತ ಗರ್ಭಿಣಿ ಮಹಿಳೆಯನ್ನು ಮಣಿಪಾಲ ಆಸ್ಪತ್ರೆಗೆ ರವಾನಿಸಲಾಗಿದೆ. ಇನ್ನೊಮ್ಮೆ ಕಳುಹಿಸಲಾದ ಗಂಡನ ಗಂಟಲಿನ ದ್ರವದ ಮಾದರಿಯ ವರದಿ ಬರಬೇಕಿದ್ದು, ಅಲ್ಲಿಯವರೆಗೆ ಆಸ್ಪತ್ರೆಯಲ್ಲಿ ಕ್ವಾರಂಟೈನ್​ನಲ್ಲಿ ಇರಿಸಲಾಗಿದೆ.ಗರ್ಭಿಣಿಯ ಪತಿಗೆ ಕೊರೋನಾ ಇದ್ದು, ರೋಗ ನಿರೋಧಕ ಶಕ್ತಿ ಅಧಿಕವಾಗಿರುವುದರಿಂದ ಅದು ಅವರಲ್ಲಿ ಕಾಣಿಸಿಕೊಳ್ಳದೇ ಇರಬಹುದು ಅಥವಾ ಅವರಲ್ಲಿದ್ದ ವೈರಾಣು ನಾಶವಾಗಿರುವ ಸಾಧ್ಯತೆಯೂ ಇದೆ ಎನ್ನಲಾಗಿದೆ. ಅವರು 14 ದಿನಗಳ ಕ್ವಾರಂಟೈನ್ ಪೂರೈಸಿದ ಬಳಿಕ ಹೆಂಡತಿಯೊಂದಿಗೆ ಸಂಪರ್ಕ ಹೊಂದಿದ್ದು, ಈ ವೇಳೆ ವೈರಾಣು ಆಕೆಗೆ ತಗುಲಿರುವ ಸಾಧ್ಯತೆಯೂ ಇದೆ ಎಂದು ಶಂಕಿಸಲಾಗಿದೆ.

ಇದನ್ನೂ ಓದಿ : ಲಾಕ್ ಡೌನ್​ಗೆ ಚಾಮರಾಜನಗರದಲ್ಲಿ ಕವಡೆಕಾಸಿನ ಕಿಮ್ಮತ್ತಿಲ್ಲ - ಎಗ್ಗಿಲ್ಲದೆ ಸಂಚರಿಸುತ್ತಿರುವ ವಾಹನಗಳು

ಇನ್ನು ಜಿಲ್ಲೆಯಲ್ಲಿ 50 ಜನರ ರಕ್ತ ಹಾಗೂ ಗಂಟಲು ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಇದರ ಫಲಿತಾಂಶ ಸಹ ಬರಬೇಕಿದೆ‌. ಫಲಿತಾಂಶ ಬಂದಲ್ಲಿ ಇನ್ನೂ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆಗಳಿವೆ.
First published: April 8, 2020, 2:56 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories