HOME » NEWS » Coronavirus-latest-news » CORONAVIRUS IMPACT SECTION 144 INVOKED IN UDUPI GNR

ಕೊರೋನಾ ಭೀತಿ: ಉಡುಪಿ ಜಿಲ್ಲೆಯಲ್ಲಿ ಸೆಕ್ಷನ್ 144(3) ಜಾರಿ; ಜಿಲ್ಲಾಧಿಕಾರಿ ಆದೇಶ

ಒಂದು ವಾರ ಜಾತ್ರೆ, ಉತ್ಸವಗಳನ್ನು ರದ್ದುಗೊಳಿಸಲು ಸರಕಾರ ನಿರ್ದೇಶನ ನೀಡಿದ ಹಿನ್ನೆಲೆಯಲ್ಲಿ ಹೀಗೆ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಒಂದು ವೇಳೆ ಯಾವುದಾದರೂ ಕಾರ್ಯಕ್ರಮ, ಜಾತ್ರೆ, ಉತ್ಸವಗಳು ಮೊದಲೇ ನಿಗದಿಯಾಗಿದ್ದರೆ ಸರಳವಾಗಿ ಆಚರಿಸಲು ತಿಳಿಸುವುದಾಗಿ ಧಾರ್ಮಿಕ ದತ್ತಿ ಇಲಾಖೆ ಮೂಲಗಳು ತಿಳಿಸಿವೆ.

news18-kannada
Updated:March 18, 2020, 4:04 PM IST
ಕೊರೋನಾ ಭೀತಿ: ಉಡುಪಿ ಜಿಲ್ಲೆಯಲ್ಲಿ ಸೆಕ್ಷನ್ 144(3) ಜಾರಿ; ಜಿಲ್ಲಾಧಿಕಾರಿ ಆದೇಶ
ಸಾಂದರ್ಭಿಕ ಚಿತ್ರ
  • Share this:
ಉಡುಪಿ(ಮಾ.18): ಕೊರೋನಾ ವೈರಸ್​​ ತಡೆಯುವ ನಿಟ್ಟಿನಲ್ಲಿ ಮುಂಜಾಗೃತ ಕ್ರಮವಾಗಿ ಉಡುಪಿ ಜಿಲ್ಲೆಯಲ್ಲಿ 144 (3) ಸೆಕ್ಷನ್ ಜಾರಿಗೊಳಿಸಿ ಜಿಲ್ಲಾಧಿಕಾರಿ ಜಿ. ಜಗದೀಶ್​ ಆದೇಶ ಹೊರಡಿಸಿದ್ದಾರೆ. ಈ ಮಹಾಮಾರಿ ಸೋಂಕು ಹರಡುವುದನ್ನು ತಡೆಗಟ್ಟಲು ಇಲ್ಲಿನ ಧಾರ್ಮಿಕ ಸಂಸ್ಥೆಗಳ ಜಾತ್ರೆಗಳು, ಸಭೆ ಸಮಾರಂಭಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು, ಸಂತೆ, ಸಾಮೂಹಿಕ ವಿವಾಹಗಳು ಮತ್ತು ಯಾವುದೇ ಜನ ಸೇರುವ ಕಾರ್ಯಕ್ರಮಗಳನ್ನು ನಡೆಸಬಾರದು. ಇದರಿಂದ ಸೋಂಕು ಹರಡುವ ಸಾಧ್ಯತೆ ಹೆಚ್ಚಾಗಿರುವ ಕಾರಣ ನಿರ್ಬಂಧ ಹೇರಲಾಗಿದೆ ಎಂದು ಜಿ. ಜಗದೀಶ್​ ತಿಳಿಸಿದ್ದಾರೆ.

ಇನ್ನು, ಕೊರೋನಾ ವೈರಸ್​​ ಕಾರಣ ಈ ಆದೇಶ ಹೊರಡಿಸಲಾಗಿದೆ. ಮುಂದಿನ ಆದೇಶದವರೆಗೂ ಈ ಸೆಕ್ಷನ್ ಜಾರಿಯಲ್ಲಿದೆ.  ಹಾಗಾಗಿ ಯಾವುದೇ ಕಾರಣಕ್ಕೂ ಜಿಲ್ಲಾಡಳಿತ ಆದೇಶ ಮೀರಿ ಉತ್ಸವ/ಜಾತ್ರೆಗಳನ್ನು ಮಾಡಬಾರದು. ಒಂದು ವೇಳೆ ನಡೆದರೆ ಕೇವಲ ಧಾರ್ಮಿಕ ಕೇಂದ್ರಗಳ ಸಿಬ್ಬಂದಿ ಮಾತ್ರ ಭಾಗವಹಿಸಬಹುದು. ದೇವರ ದರ್ಶನ ಹೊರತು ಉಳಿದ ಸೇವೆಗಳನ್ನು ರದ್ದು ಮಾಡಲಾಗಿದೆ ಎಂದರು ಜಿಲ್ಲಾಧಿಕಾರಿ ಜಿ. ಜಗದೀಶ್​​.

ಈ ಹಿಂದೆಯೇ ಕೊರೊನಾ ಸೋಂಕಿಗೆ ಸಂಬಂಧಿಸಿ ಮಣಿಪಾಲ ಆಸ್ಪತ್ರೆಗೆ ಸೇರಿದ ಇಬ್ಬರು ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ಇಲ್ಲ ಎಂದು ಪರೀಕ್ಷೆಯಿಂದ ದೃಢಪಟ್ಟಿತ್ತು. ಆಂಧ್ರ ಮತ್ತು ಕೇರಳ ಮೂಲದ ಈ ವಿದ್ಯಾರ್ಥಿಗಳು ಅಮೆರಿಕ ಮತ್ತು ಮಲೇಶ್ಯಾಕ್ಕೆ ಹೋಗಿ ಮಣಿಪಾಲಕ್ಕೆ ಆಗಮಿಸಿದ್ದರು. ಇವರಲ್ಲಿ ಸೋಂಕು ಲಕ್ಷಣಗಳು ಕಂಡು ಬಂದಾಗ ರಕ್ತ ಪರೀಕ್ಷೆಯನ್ನು ಶಿವಮೊಗ್ಗಕ್ಕೆ ಕಳುಹಿಸಲಾಯಿತು. ನಂತರ ಸೋಂಕು ಇಲ್ಲ ಎಂದು ವರದಿ ಬಂದಿತ್ತು.

ಇದನ್ನೂ ಓದಿ: ಇಟಲಿಯಿಂದ ಭಾರತಕ್ಕೆ ಆಗಮಿಸಿದ ಸಚಿವ ಆನಂದ್​​ ಸಿಂಗ್​ ಮಗಳು: ಕೊರೋನಾದಿಂದ ಪಾರು, ಪರೀಕ್ಷೆಯಿಂದ ಧೃಡ

ಈಗಾಗಲೇ ಹಂಗಾರಕಟ್ಟೆಯಲ್ಲಿ ಎರಡು ದಿನಗಳ ಹಿಂದೆ ನಡೆಯಬೇಕಿದ್ದ ಸಾಹಿತ್ಯ ಸಮ್ಮೇಳನ ಮುಂದೂಡಲಾಗಿದೆ. ಬ್ರಹ್ಮಾವರ ಬಂಟರ ಭವನದಲ್ಲಿ ನಡೆಯಬೇಕಾಗಿದ್ದ “ಬಾಂಧವ್ಯ’ ಕಾರ್ಯಕ್ರಮ, ಕಾರ್ಕಳದ ಮೊಗೇರ ಸಮ್ಮೇಳನವನ್ನು ಮುಂದೂಡಲಾಗಿದೆ.

ಒಂದು ವಾರ ಜಾತ್ರೆ, ಉತ್ಸವಗಳನ್ನು ರದ್ದುಗೊಳಿಸಲು ಸರಕಾರ ನಿರ್ದೇಶನ ನೀಡಿದ ಹಿನ್ನೆಲೆಯಲ್ಲಿ ಹೀಗೆ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಒಂದು ವೇಳೆ ಯಾವುದಾದರೂ ಕಾರ್ಯಕ್ರಮ, ಜಾತ್ರೆ, ಉತ್ಸವಗಳು ಮೊದಲೇ ನಿಗದಿಯಾಗಿದ್ದರೆ ಸರಳವಾಗಿ ಆಚರಿಸಲು ತಿಳಿಸುವುದಾಗಿ ಧಾರ್ಮಿಕ ದತ್ತಿ ಇಲಾಖೆ ಮೂಲಗಳು ತಿಳಿಸಿವೆ.
!function(e,i,n,s){var t="InfogramEmbeds",d=e.getElementsByTagName("script")[0];if(window[t]&&window[t].initialized)window[t].process&&window[t].process();else if(!e.getElementById(n)){var o=e.createElement("script");o.async=1,o.id=n,o.src="https://e.infogram.com/js/dist/embed-loader-min.js",d.parentNode.insertBefore(o,d)}}(document,0,"infogram-async");

 
Loading...

 

First published: March 18, 2020, 3:58 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories