ದೆಹಲಿ ಧಾರ್ಮಿಕ ಸಭೆಯಲ್ಲಿ 45 ಕನ್ನಡಿಗರು ಭಾಗಿ: ಓರ್ವ ಸಾವು, ರಾಜ್ಯದ 13 ಜನರಿಗೆ ಕ್ವಾರಂಟೈನ್​

ಕರ್ನಾಟಕದ ಶಿರಾದಲ್ಲಿ ಸಾವನ್ನಪ್ಪಿದ್ದ ಕೊರೋನಾ ಪೀಡಿತ ಕೂಡ ದೆಹಲಿಯ ಧಾರ್ಮಿಕ ಸಭೆಯಲ್ಲಿ ಭಾಗವಹಿಸಿದ್ದರು ಎಂಬ ಸತ್ಯ ಬೆಳಕಿಗೆ ಬಂದಿದೆ. ಹೀಗಾಗಿ, ಈಗಾಗಲೇ ಸೋಂಕಿತರ ಮತ್ತು ಸೋಂಕಿನಿಂದ ಮೃತಪಟ್ಟವರ ಕುಟುಂಬಸ್ಥರನ್ನು ಕ್ವಾರಂಟೈನ್​ನಲ್ಲಿ ಇರಿಸಲಾಗಿದೆ.

ಸಚಿವ ಶ್ರೀರಾಮುಲು ಟ್ವೀಟ್

ಸಚಿವ ಶ್ರೀರಾಮುಲು ಟ್ವೀಟ್

  • Share this:
ಬೆಂಗಳೂರು (ಮಾ. 31): ದೆಹಲಿಯ ನಿಜಾಮುದ್ದೀನ್ ಜಮಾತ್ ಮಸೀದಿಯಲ್ಲಿ 15 ದಿನಗಳ ಹಿಂದೆ ನಡೆದ ಧಾರ್ಮಿಕ ಸಭೆಯಲ್ಲಿ ಪಾಲ್ಗೊಂಡಿದ್ದ 10 ಜನ ಕೊರೋನಾ ವೈರಸ್​ನಿಂದ ಸಾವನ್ನಪ್ಪಿದ್ದಾರೆ. 1,500ಕ್ಕೂ ಹೆಚ್ಚು ಜನರು ಭಾಗವಹಿಸಿದ್ದ ಈ ಕಾರ್ಯಕ್ರಮದಲ್ಲಿ 45 ಕನ್ನಡಿಗರು ಕೂಡ ಪಾಲ್ಗೊಂಡಿದ್ದರು ಎಂಬುದು ಖಚಿತವಾಗಿದೆ. ಈ ಹಿನ್ನೆಲೆಯಲ್ಲಿ ಆ ಸಭೆಯಲ್ಲಿ ಭಾಗವಹಿಸಿದವರನ್ನು ಕ್ವಾರಂಟೈನ್​ನಲ್ಲಿ ಇರಿಸಲಾಗಿದೆ.

ಕೊರೋನಾ ಸೋಂಕು ಹರಡುವುದನ್ನು ನಿಯಂತ್ರಿಸಲು ದೇಶಾದ್ಯಂತ ಲಾಕ್​ಡೌನ್ ಘೋಷಿಸಲಾಗಿದೆ. ಇದರಿಂದಾಗಿ ಇನ್ನು 15 ದಿನಗಳಲ್ಲಿ ಸೋಂಕಿತರ ಪ್ರಮಾಣ ನಿಯಂತ್ರಣಕ್ಕೆ ಬರಲಿದೆ ಎಂಬ ಲೆಕ್ಕಾಚಾರ ಸರ್ಕಾರದ್ದಾಗಿತ್ತು. ಆದರೆ, ದೆಹಲಿಯಲ್ಲಿ ನಡೆದ ಬೃಹತ್ ಧಾರ್ಮಿಕ ಸಭೆಯಿಂದ ಕೊರೋನಾ ಸೋಂಕು ದೇಶದೆಲ್ಲೆಡೆ ಹರಡಲಾರಂಭಿಸಿರುವುದು ಆರೋಗ್ಯ ಇಲಾಖೆಗೆ ಮತ್ತೊಂದು ತಲೆನೋವು ತಂದಿಟ್ಟಿದೆ.

ಇದನ್ನೂ ಓದಿ: ದೆಹಲಿ ಧಾರ್ಮಿಕ ಸಭೆಯಲ್ಲಿ ಪಾಲ್ಗೊಂಡವರಿಗೆ ಕೊರೋನಾ ಪತ್ತೆ; ಮೌಲಾನಾ ವಿರುದ್ಧ ಕೇಸ್ ದಾಖಲು

ದೇಶದ ನಾನಾ ರಾಜ್ಯಗಳಿಂದ 1,830 ಜನರು ಈ ಸಭೆಯಲ್ಲಿ ಪಾಲ್ಗೊಂಡಿದ್ದರು. ಅವರಲ್ಲಿ ದೆಹಲಿಯ 24 ಮತ್ತು ಆಂಧ್ರಪ್ರದೇಶದ 11 ಜನರಿಗೆ ಕೊರೋನಾ ಸೋಂಕು ಹರಡಿರುವುದು ದೃಢಪಟ್ಟಿದೆ. ಈಗಾಗಲೇ ತೆಲಂಗಾಣದ 6 ಜನ ಸೇರಿದಂತೆ ಈ ಸಭೆಯಲ್ಲಿ ಪಾಲ್ಗೊಂಡಿದ್ದ ಒಟ್ಟು 10 ಜನರು ಸಾವನ್ನಪ್ಪಿದ್ದಾರೆ. ಕರ್ನಾಟಕದ ಶಿರಾದಲ್ಲಿ ಸಾವನ್ನಪ್ಪಿದ್ದ ಕೊರೋನಾ ಪೀಡಿತ ಕೂಡ ದೆಹಲಿಯ ಧಾರ್ಮಿಕ ಸಭೆಯಲ್ಲಿ ಭಾಗವಹಿಸಿದ್ದರು ಎಂಬ ಸತ್ಯ ಬೆಳಕಿಗೆ ಬಂದಿದೆ. ಹೀಗಾಗಿ, ಈಗಾಗಲೇ ಸೋಂಕಿತರ ಮತ್ತು ಸೋಂಕಿನಿಂದ ಮೃತಪಟ್ಟವರ ಕುಟುಂಬಸ್ಥರನ್ನು ಕ್ವಾರಂಟೈನ್​ನಲ್ಲಿ ಇರಿಸಲಾಗಿದೆ. ಸಭೆಯಲ್ಲಿ ಪಾಲ್ಗೊಂಡಿದ್ದ ಸುಮಾರು 850ಕ್ಕೂ ಹೆಚ್ಚು ಜನರನ್ನು ಆಸ್ಪತ್ರೆಗಳಲ್ಲಿ ಪ್ರತ್ಯೇಕವಾಗಿರಿಸಲಾಗಿದೆ.ದೆಹಲಿಯ ಸಭೆಯಲ್ಲಿ ಕರ್ನಾಟಕದ 45 ಜನರು ಪಾಲ್ಗೊಂಡಿದ್ದ ಬಗ್ಗೆ ಇಂದು ರಾಜ್ಯದ ಆರೋಗ್ಯ ಸಚಿವ ಬಿ. ಶ್ರೀರಾಮುಲು ಟ್ವಿಟ್ಟರ್​ನಲ್ಲಿ ಖಚಿತಪಡಿಸಿದ್ದಾರೆ. ದೆಹಲಿಯ ನಿಜಾಮುದ್ದೀನ್ ಜಮಾತ್ ಮಸೀದಿಯಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಕರ್ನಾಟಕದ ಸುಮಾರು 45 ಜನರು ಪಾಲ್ಗೊಂಡಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಶಿರಾದಲ್ಲಿ ಮೃತಪಟ್ಟ ವ್ಯಕ್ತಿ ಕೂಡ ಈ ಸಭೆಯಲ್ಲಿ ಭಾಗವಹಿಸಿದವರಲ್ಲಿ ಒಬ್ಬರಾಗಿದ್ದರು ಎಂದು ಶ್ರೀರಾಮುಲು ತಿಳಿಸಿದ್ದಾರೆ.

ಇದನ್ನೂ ಓದಿ: 10 ಸಾವಿಗೆ ಕಾರಣವಾಯ್ತು ದೆಹಲಿ ಧಾರ್ಮಿಕ ಸಭೆ; ಮತ್ತೆ 24 ಜನರಿಗೆ ಕೊರೋನಾ ಸೋಂಕು ದೃಢ, 850 ಜನ ಆಸ್ಪತ್ರೆಗೆ ಶಿಫ್ಟ್​

ದೆಹಲಿಯ ಮಸೀದಿಯಲ್ಲಿ ನಡೆದ ಪ್ರಾರ್ಥನೆಯಲ್ಲಿ ಭಾಗವಹಿಸಿದವರಿಗೆಲ್ಲಾ ಸೋಂಕು ಹರಡಿರುವ ಸಾಧ್ಯತೆಗಳನ್ನು ತಳ್ಳಿ ಹಾಕಲು ಸಾಧ್ಯವಿಲ್ಲ. ಹಾಗಾಗಿ, ಅವರನ್ನು ಪತ್ತೆ ಮಾಡಿ, ಕ್ವಾರಂಟೈನ್​ನಲ್ಲಿ ಇರಿಸುವ ಕಾರ್ಯದಲ್ಲಿ ತೊಡಗಿಸಿಕೊಳ್ಳಲಾಗಿದೆ. ಇವರಲ್ಲಿ ಈಗಾಗಲೇ 13 ವ್ಯಕ್ತಿಗಳನ್ನು ಪತ್ತೆಹಚ್ಚಿ ಪ್ರತ್ಯೇಕಿಸಲ್ಪಟ್ಟ ಕೇಂದ್ರದಲ್ಲಿ ನಿಗಾ ವಹಿಸಲಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.ದೆಹಲಿಯ ಧಾರ್ಮಿಕ ಸಭೆಗೆ ಆಸ್ಟ್ರೇಲಿಯಾ, ಸಿಂಗಾಪುರ್, ದುಬೈ, ಸೌದಿ ಅರೇಬಿಯಾ, ಇಂಡೋನೇಷ್ಯಾ ಸೇರಿದಂತೆ ಹಲವು ದೇಶಗಳಿಂದ ಪ್ರವಾಸಿಗರು ಆಗಮಿಸಿದ್ದರು ಎಂಬ ಮಾಹಿತಿ ದೊರೆತಿದೆ. ಉಳಿದ ವ್ಯಕ್ತಿಗಳನ್ನು ಆದಷ್ಟು ಬೇಗ ಗುರುತಿಸಿ, ಅವರನ್ನು ಕ್ವಾರಂಟೈನ್ ಮಾಡಲು ಬೇಕಾದ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಟ್ವಿಟ್ಟರ್​ನಲ್ಲಿ ಆರೋಗ್ಯ ಸಚಿವ ಶ್ರೀರಾಮುಲು ಮಾಹಿತಿ ನೀಡಿದ್ದಾರೆ.ಇದನ್ನೂ ಓದಿ: ಸಾವಿನ ಭೀತಿ ಹೆಚ್ಚಿಸಿದ ದೆಹಲಿ ಧಾರ್ಮಿಕ ಸಭೆ; ಕಾರ್ಯಕ್ರಮದಲ್ಲಿದ್ದ 10 ಜನ ಕೊರೋನಾಗೆ ಬಲಿ, 300ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲು

ಮಾ. 13ರಿಂದ 15ರವರೆಗೆ ನಡೆದ ಧಾರ್ಮಿಕ ಸಭೆಯಲ್ಲಿ ಭಾಗವಹಿಸಿದ್ದವರಲ್ಲಿ 10 ಜನ ಈಗಾಗಲೇ ಸಾವನ್ನಪ್ಪಿದ್ದಾರೆ.ಈ ಹಿನ್ನೆಲೆಯಲ್ಲಿ ಈ ಧಾರ್ಮಿಕ ಸಭೆಯನ್ನು ಆಯೋಜಿಸಿದ್ದ ಮೌಲಾನಾ ವಿರುದ್ಧ ದೆಹಲಿ ಸರ್ಕಾರ ಎಫ್​ಐಆರ್​ ದಾಖಲಿಸಿದೆ. ಮೂರ್ನಾಲ್ಕು ಆಸ್ಪತ್ರೆಗಳಲ್ಲಿ ನಿಜಾಮುದ್ದೀನ್​ ಸಭೆಗೆ ಆಗಮಿಸಿದ್ದವರನ್ನು ಸೇರಿಸಿ, ನಿಗಾದಲ್ಲಿ ಇರಿಸಲಾಗಿದೆ. ಅವರಲ್ಲಿ 1 ಆಸ್ಪತ್ರೆಯ 35 ಜನರಿಗೆ ಸೋಂಕು ಹರಡಿರುವುದು ಖಚಿತವಾಗಿದೆ. ಇನ್ನೂ ಎರಡು ಆಸ್ಪತ್ರೆಗಳ ಇಂದಿನ ವರದಿ ಹೊರಬೀಳಬೇಕಾಗಿದೆ.
First published: