ಭಟ್ಕಳ, ಬೆಂಗಳೂರು, ಮಂಗಳೂರು, ಚಿಕ್ಕಬಳ್ಳಾಪುರದಲ್ಲಿ 5 ಕೊರೋನಾ ಕೇಸ್ ಪತ್ತೆ; ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 38ಕ್ಕೆ ಏರಿಕೆ

ನಿನ್ನೆ ಮಧ್ಯಾಹ್ನದಿಂದ ಇಂದು ಮಧ್ಯಾಹ್ನದವರೆಗೆ ಕರ್ನಾಟಕದಲ್ಲಿ ಐವರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

ದೇಶಾದ್ಯಂತ ಕೊರೋನಾದಿಂದ ಸತ್ತವರ ಸಂಖ್ಯೆ 18ಕ್ಕೆ ಏರಿದೆ. ಒಟ್ಟಾರೆ ಸೋಂಕಿತರ ಸಂಖ್ಯೆ 700 ದಾಟಿದೆ. ಕೇಂದ್ರ ಆರೋಗ್ಯ ಇಲಾಖೆ ಜಾಲತಾಣದಲ್ಲಿರುವ ಮಾಹಿತಿ ಪ್ರಕಾರ ಈದ 640 ರೋಗಿಗಳಲ್ಲಿ ಕೊರೋನಾ ಸೋಂಕು ಇದೆ.

ದೇಶಾದ್ಯಂತ ಕೊರೋನಾದಿಂದ ಸತ್ತವರ ಸಂಖ್ಯೆ 18ಕ್ಕೆ ಏರಿದೆ. ಒಟ್ಟಾರೆ ಸೋಂಕಿತರ ಸಂಖ್ಯೆ 700 ದಾಟಿದೆ. ಕೇಂದ್ರ ಆರೋಗ್ಯ ಇಲಾಖೆ ಜಾಲತಾಣದಲ್ಲಿರುವ ಮಾಹಿತಿ ಪ್ರಕಾರ ಈದ 640 ರೋಗಿಗಳಲ್ಲಿ ಕೊರೋನಾ ಸೋಂಕು ಇದೆ.

  • Share this:
ಬೆಂಗಳೂರು (ಮಾ. 24): ಸೋಮವಾರ ಮಧ್ಯಾಹ್ನದಿಂದ ಇಂದು ಮಧ್ಯಾಹ್ನದೊಳಗೆ ಕರ್ನಾಟಕದ ಐವರಲ್ಲಿ ಕೊರೋನಾ ಸೋಂಕು ಕಾಣಿಸಿಕೊಂಡಿದೆ. ಈ ಮೂಲಕ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 38ಕ್ಕೆ ಏರಿಕೆಯಾಗಿದೆ.

ಈಗಾಗಲೇ ಕಲಬುರ್ಗಿಯಲ್ಲಿ ವೃದ್ಧರೊಬ್ಬರು ಕೊರೋನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಭಾನುವಾರದಿಂದ ಸೋಮವಾರದವರೆಗೆ 7 ಹೊಸ ಸೋಂಕಿತ ಪ್ರಕರಣಗಳು ದಾಖಲಾಗಿದ್ದವು. ದುಬೈನಿಂದ ಬೆಂಗಳೂರಿಗೆ ವಾಪಸ್ಸಾಗಿದ್ದ ಕೇರಳ ಮೂಲದ 46 ವರ್ಷದ ವ್ಯಕ್ತಿಯೊಬ್ಬರಿಗೆ ಸೋಂಕು ದೃಢಪಟ್ಟಿತ್ತು. ದುಬೈನಿಂದ ವಾಪಸ್ಸಾಗಿದ್ದ 38 ವರ್ಷದ ವ್ಯಕ್ತಿಯಲ್ಲೂ ಕೊರೊನಾ ವೈರಸ್ ಸೋಂಕಿರುವುದು ದೃಢಪಟ್ಟಿದ್ದು, ಬೆಂಗಳೂರಿನಲ್ಲೇ ಪ್ರತ್ಯೇಕವಾಗಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ನಿನ್ನೆ ಮಧ್ಯಾಹ್ನದಿಂದ ಇಂದು ಮಧ್ಯಾಹ್ನದವರೆಗೆ ಐವರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಕಾಸರಗೋಡಿನ ಓರ್ವ ವ್ಯಕ್ತಿ ಮಾ. 20ರಂದು ದುಬೈನಿಂದ ಮಂಗಳೂರು ಏರ್​ಪೋರ್ಟ್​ಗೆ ಆಗಮಿಸಿದ್ದರು. ಅವರನ್ನು ಮಂಗಳೂರಿನ ಆಸ್ಪತ್ರೆಯಲ್ಲಿ ಕ್ವಾರಂಟೈನ್​ನಲ್ಲಿ ಇರಿಸಲಾಗಿತ್ತು. ಅವರಿಗೆ ಕೊರೋನಾ ವೈರಸ್​ ತಗುಲಿರುವುದು ಖಚಿತವಾಗಿದೆ.

ಇದನ್ನೂ ಓದಿ: ಕೊರೋನಾ ವೈರಸ್ ಭೀತಿ; ಇಂದಿನಿಂದ ಬೆಂಗಳೂರಿನಲ್ಲಿ ಔಷಧಿ ಸಿಂಪಡಣೆ ಕಾರ್ಯ ಶುರು

40 ವರ್ಷದ ಇನ್ನೋರ್ವ ಸೋಂಕಿತ ವ್ಯಕ್ತಿ ಉತ್ತರ ಕನ್ನಡ ಜಿಲ್ಲೆಯವರಾಗಿದ್ದು ಮಾ. 21ರಂದು ದುಬೈನಿಂದ ಆಗಮಿಸಿದ್ದರು. 65 ವರ್ಷದ ಇನ್ನೋರ್ವ ಸೋಂಕಿತ ಕೂಡ ಉತ್ತರ ಕನ್ನಡ ಜಿಲ್ಲೆಯವರೇ ಆಗಿದ್ದಾರೆ. ಅವರು ಕೂಡ ದುಬೈನಿಂದ ಮುಂಬೈಗೆ ಬಂದು, ಅಲ್ಲಿಂದ ಮಾ. 18ರಂದು ಉತ್ತರ ಕನ್ನಡಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದರು.

56 ವರ್ಷದ ಸೋಂಕಿತ ಮಹಿಳೆ ಚಿಕ್ಕಬಳ್ಳಾಪುರದವರಾಗಿದ್ದು, ಈಗಾಗಲೇ ಸೋಂಕಿತರ ಪಟ್ಟಿಯಲ್ಲಿರುವವರ ಕುಟುಂಬಸ್ಥರಾಗಿದ್ದಾರೆ. ಮೆಕ್ಕಾದಿಂದ ಮಾ. 14ರಂದು ಆಗಮಿಸಿರುವ ಇವರಿಗೆ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 56 ವರ್ಷದ ಮತ್ತೋರ್ವ ಮಹಿಳೆ ಬೆಂಗಳೂರಿನವರಾಗಿದ್ದು, ಸೋಂಕಿತ ವ್ಯಕ್ತಿಯೊಂದಿಗೆ ಸಂಪರ್ಕ ಹೊಂದಿದ್ದರಿಂದ ಇವರಿಗೂ ಸೋಂಕು ಹರಡಿದೆ.

ಇದನ್ನೂ ಓದಿ: ಮುಂಬೈನಲ್ಲಿ ಕೊರೋನಾಗೆ ಮೂರನೇ ಬಲಿ; ದೇಶದಲ್ಲಿ ಸಾವಿನ ಸಂಖ್ಯೆ 10ಕ್ಕೆ ಏರಿಕೆ

ಬೆಂಗಳೂರೊಂದರಲ್ಲೇ ಒಟ್ಟು 24 ಪ್ರಕರಣಗಳು ಪತ್ತೆಯಾಗಿದೆ. ಸೋಂಕು ತಗುಲಿದ್ದ ಒಬ್ಬರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಕಲಬುರ್ಗಿಯಲ್ಲಿ 3, ಕೊಡಗಿನಲ್ಲಿ 1, ಚಿಕ್ಕಬಳ್ಳಾಪುರದಲ್ಲಿ 3, ಮೈಸೂರಿನಲ್ಲಿ 2, ಧಾರವಾಡದಲ್ಲಿ 1 ಮತ್ತು ದಕ್ಷಿಣ ಕನ್ನಡದಲ್ಲಿ 1, ಉತ್ತರ ಕನ್ನಡದಲ್ಲಿ 2 ಪ್ರಕರಣ ಪತ್ತೆಯಾಗಿದೆ.
First published: