• Home
  • »
  • News
  • »
  • coronavirus-latest-news
  • »
  • Coronavirus India: ಭಾರತದಲ್ಲಿ 32 ಲಕ್ಷ ದಾಟಿದ ಕೊರೋನಾ ಸೋಂಕಿತರ ಸಂಖ್ಯೆ; 59,449 ಜನ ಸಾವು

Coronavirus India: ಭಾರತದಲ್ಲಿ 32 ಲಕ್ಷ ದಾಟಿದ ಕೊರೋನಾ ಸೋಂಕಿತರ ಸಂಖ್ಯೆ; 59,449 ಜನ ಸಾವು

ಪ್ರಾತಿನಿಧಿಕ ಚಿತ್ರ

ಪ್ರಾತಿನಿಧಿಕ ಚಿತ್ರ

ಭಾರತದಲ್ಲಿ ಆಗಸ್ಟ್ 6 ನಂತರ ಪ್ರತಿ ದಿನ 60 ಸಾವಿರಕ್ಕೂ ಹೆಚ್ಚು ಕೊರೊನಾ ಸೋಂಕು ಪ್ರಕರಣಗಳು ದಾಖಲಾಗುವ ಟ್ರೆಂಡ್ ಶುರುವಾಗಿ ಅದೇ ಮುಂದುವರೆಯುತ್ತಿದೆ. ಆಗಸ್ಟ್‌ 19ರ ನಂತರ ಪ್ರತಿದಿನ ಸುಮಾರು 70 ಸಾವಿರ ಪ್ರಕರಣಗಳು ಕಾಣಿಸಿಕೊಳ್ಳಲಾರಂಭಿಸಿವೆ.

  • Share this:

ನವದೆಹಲಿ (ಆ. 26): ದೇಶದಲ್ಲಿ ಮಾರಣಾಂತಿಕ ಕೊರೋನಾ ಕಾಣಿಸಿಕೊಂಡು ಸುಮಾರು ಏಳು ತಿಂಗಳಾಗುತ್ತಿವೆ.  ಇನ್ನೂ ಕೊರೋನಾ ಸೋಂಕಿನ ಅಟ್ಟಹಾಸ ಕಡಿಮೆಯಾಗಿಲ್ಲ.  ಲಾಕ್​ಡೌನ್ ತೆರವುಗೊಳಿಸಿ, ಅನ್​ಲಾಕ್ ಜಾರಿಯಾಗಿದ್ದರೂ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದೆ.  ದೇಶದಲ್ಲಿ ಕೋರೊನಾ ಸೋಂಕು ಪೀಡಿತರ ಸಂಖ್ಯೆ ಇದೀಗ 32 ಲಕ್ಷ‌ದ ಗಡಿ ದಾಟಿದೆ.


ದೇಶದಲ್ಲಿ ಆಗಸ್ಟ್ 6 ನಂತರ ಪ್ರತಿ ದಿನ 60 ಸಾವಿರಕ್ಕೂ ಹೆಚ್ಚು ಕೊರೊನಾ ಸೋಂಕು ಪ್ರಕರಣಗಳು ದಾಖಲಾಗುವ ಟ್ರೆಂಡ್ ಶುರುವಾಗಿ ಅದೇ ಮುಂದುವರೆಯುತ್ತಿದೆ. ಆಗಸ್ಟ್‌ 19ರ ನಂತರ ಪ್ರತಿದಿನ ಸುಮಾರು70 ಸಾವಿರ ಪ್ರಕರಣಗಳು ಕಾಣಿಸಿಕೊಳ್ಳಲಾರಂಭಿಸಿವೆ. ಆಗಸ್ಟ್ 19ರಂದ 69,652 ಪ್ರಕರಣಗಳು, ಆಗಸ್ಟ್ 20ರಂದು 68,898 ಪ್ರಕರಣಗಳು, ಆಗಸ್ಟ್ 21ರಂದು 69,878 ಪ್ರಕರಣಗಳು, ಆಗಸ್ಟ್‌ 22ರಂದು 69,239 ಪ್ರಕರಣಗಳು, ಆಗಸ್ಟ್ 23ರಂದು 61,408 ಪ್ರಕರಣಗಳು ಹಾಗೂ ಆಗಸ್ಟ್ 24ರಂದು 60,975 ಪ್ರಕರಣಗಳು ವರದಿಯಾಗಿದ್ದವು. ಆಗಸ್ಟ್ 25ರಂದು 67,151 ಪ್ರಕರಣಗಳು ಪತ್ತೆಯಾಗಿದ್ದು ದೇಶದ ಕೊರೊನಾ ಪೀಡಿತರ ಸಂಖ್ಯೆ 32,34,475ಕ್ಕೆ ಏರಿಕೆಯಾಗಿದೆ.


ಇದನ್ನೂ ಓದಿ: ಬಹುಕೋಟಿ ವಂಚಕ ನೀರವ್‌ ಮೋದಿ ಪತ್ನಿ ವಿರುದ್ಧ ಜಾಗತಿಕ ಬಂಧನ ವಾರೆಂಟ್‌ ಹೊರಡಿಸಿದ ಇಂಟರ್‌ಪೋಲ್‌


ಇದಲ್ಲದೆ ಮಂಗಳವಾರ 1,059 ಮಂದಿ ಕೊರೊನಾದಿಂದ ಮೃತಪಟ್ಟಿದ್ದಾರೆ. ಇದರಿಂದ ದೇಶದಲ್ಲಿ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 59 ಸಾವಿರದ ಗಡಿ‌ ದಾಟಿದ್ದು 59,449ಕ್ಕೆ ಏರಿಕೆಯಾಗಿದೆ. ಈವರೆಗೆ ಕೊರೊನಾದಿಂದ ಗುಣ ಆದವರು 24,67,759 ಜನ  ಮಾತ್ರ. ಇನ್ನೂ ಸಕ್ರಿಯವಾಗಿರುವ ಪ್ರಕರಣಗಳ ಸಂಖ್ಯೆ 7,07,267 ಎಂದು ಕೇಂದ್ರ ಆರೋಗ್ಯ ಇಲಾಖೆಯು ಮಾಹಿತಿ ಬಿಡುಗಡೆ ಮಾಡಿದೆ.


ಕೇಂದ್ರ ಆರೋಗ್ಯ ಇಲಾಖೆ ಮಾಹಿತಿಗಳ ಪ್ರಕಾರ, ಆಗಸ್ಟ್ 1ರಂದು 54,736, ಆಗಸ್ಟ್ 2ರಂದು 52,972, ಆಗಸ್ಟ್ 3ರಂದು 52,050, ಆಗಸ್ಟ್ 4ರಂದು 52,509, ಆಗಸ್ಟ್ 5ರಂದು 56,282, ಆಗಸ್ಟ್ 6ರಂದು 62,538, ಆಗಸ್ಟ್ 7ರಂದು 61,537, ಆಗಸ್ಟ್ 8ರಂದು 64,399, ಆಗಸ್ಟ್ 9ರಂದು 62,064, ಆಗಸ್ಟ್ 10ರಂದು  53,601, ಆಗಸ್ಟ್ 11ರಂದು 60,963, ಆಗಸ್ಟ್ 12ರಂದು 66,999, ಆಗಸ್ಟ್ 13ರಂದು 64,553, ಆಗಸ್ಟ್ 14ರಂದು 65,002, ಆಗಸ್ಟ್ 15ರಂದು 63,489, ಆಗಸ್ಟ್ 16ರಂದು 57,982, ಆಗಸ್ಟ್ 17ರಂದು 55,079, ಆಗಸ್ಟ್ 18ರಂದು 64,531, ಆಗಸ್ಟ್ 19ರಂದು 69,652, ಆಗಸ್ಟ್ 20ರಂದು 68,898, ಆಗಸ್ಟ್ 21ರಂದು 69,878, ಆಗಸ್ಟ್ 22ರಂದು 69,239, ಆಗಸ್ಟ್ 23ರಂದು 61,408, ಆಗಸ್ಟ್‌ 24ರಂದು 60,975 ಹಾಗೂ ಆಗಸ್ಟ್ 25ರಂದು 67,151 ಹೊಸ ಪ್ರಕರಣಗಳು ಪತ್ತೆಯಾಗಿವೆ.

Published by:Sushma Chakre
First published: