Coronavirus India: ಭಾರತದಲ್ಲಿ ಇಂದು ಅತೀ ಹೆಚ್ಚು ಕೊರೋನಾ ಪ್ರಕರಣಗಳು ಪತ್ತೆ

Coronavirus India: ಭಾರತದಲ್ಲಿ ಚೇತರಿಕೆ ಪ್ರಮಾಣವು ಶೇ.97.48 ರಷ್ಟಿದೆ. ಕಳೆದ 24 ಗಂಟೆಗಳಲ್ಲಿ 35,181 ಮಂದಿ ಚೇತರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೆ ದೇಶದಲ್ಲಿ ಕೊರೋನಾದಿಂದ ಚೇತರಿಕೆ ಕಂಡಿರುವವರ ಸಂಖ್ಯೆ 3,20,28,825 ಆಗಿದೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
ನವದೆಹಲಿ(ಸೆ.2): ಭಾರತದಲ್ಲಿ ಇಂದು ಏಕಾಏಕಿ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ ಕಂಡಿದೆ. ಕಳೆದ ಎರಡು ತಿಂಗಳ ಅವಧಿಯಲ್ಲಿ ಇಂದೇ ಅತೀ ಹೆಚ್ಚು ಕೋವಿಡ್ ಪ್ರಕರಣಗಳು ಪತ್ತೆಯಾಗಿರುವುದು. ಕೇಂದ್ರ ಆರೋಗ್ಯ ಸಚಿವಾಲಯ ನೀಡಿರುವ ಮಾಹಿತಿ ಪ್ರಕಾರ, ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 47,092 ಕೊರೋನಾ ಕೇಸ್​​ಗಳು ಕಂಡುಬಂದಿವೆ. ಆ ಮೂಲಕ ಭಾರತದಲ್ಲಿ ಒಟ್ಟು ಕೊರೋನಾ ಪ್ರಕರಣಗಳ ಸಂಖ್ಯೆ 3,28,57,937ಕ್ಕೆ ಏರಿಕೆಯಾಗಿದೆ.

ಕಳೆದ ಬಾರಿ ಅಂದರೆ 63 ದಿನಗಳ ಹಿಂದೆ ಜುಲೈ 1ರಂದು ಇದಕ್ಕಿಂತ ಹೆಚ್ಚಿನ ಕೊರೋನಾ ಪ್ರಕರಣಗಳು ದೇಶದಲ್ಲಿ ಕಂಡು ಬಂದಿದ್ದವು. ಅಂದು 48,786 ಕೋವಿಡ್ ಕೇಸ್​ಗಳು ಪತ್ತೆಯಾಗಿದ್ದವು. ಬುಧವಾರ ಅಂದರೆ ನಿನ್ನೆ 41,965 ಕೊರೋನಾ ಪ್ರಕರಣಗಳು ದಾಖಲಾಗಿದ್ದವು.

ಅತೀ ಹೆಚ್ಚು ಕೊರೋನಾ ಪ್ರಕರಣಗಳು ದಾಖಲಾಗಿರುವ ರಾಜ್ಯಗಳ ಪೈಕಿ ಮೊದಲ ಸ್ಥಾನ ಪಡೆದಿರುವುದು ಕೇರಳ. ಇಲ್ಲಿ ಕಳೆದ 24 ಗಂಟೆಗಳಲ್ಲಿ 32,803 ಕೇಸ್​​ಗಳು ದಾಖಲಾಗಿವೆ. ಅದರ ನಂತರ, ಮಹಾರಾಷ್ಟ್ರದಲ್ಲಿ 4,456 ಪ್ರಕರಣಗಳು, ಮಿಜೋರಾಂನಲ್ಲಿ 1922 ಕೇಸ್​ಗಳು, ತಮಿಳುನಾಡಿನಲ್ಲಿ 15009 ಕೇಸ್​ಗಳು ಹಾಗೂ ಆಂಧ್ರ ಪ್ರದೇಶದಲ್ಲಿ 1186 ಕೊರೋನಾ ಪ್ರಕರಣಗಳು ಪತ್ತೆಯಾಗಿವೆ.

ಇದನ್ನೂ ಓದಿ:ಅಬ್ಬಬ್ಬಾ..ಈ ನಾಯಿಮರಿಗೆ ಬೇರೆ ನಾಯಿಗಳನ್ನು ಕಂಡರೆ ಅದೆಷ್ಟು ಪ್ರೀತಿ!

ಈ 5 ರಾಜ್ಯಗಳಲ್ಲಿ ಶೆ.80.07ರಷ್ಟು ಹೊಸ ಕೊರೋನಾ ಪ್ರಕರಣಗಳು ಕಂಡುಬಂದಿವೆ. ಕೇರಳ ರಾಜ್ಯವೊಂದರಲ್ಲೇ ಶೆ.69.66ರಷ್ಟು ಹೊಸ ಕೇಸ್​ಗಳು ಪತ್ತೆಯಾಗಿವೆ.

ದೇಶದಲ್ಲಿ ಪಾಸಿಟಿವಿಟಿ ದರದದೊಂದಿಗೆ ಸಾವಿನ ದರವೂ ಹೆಚ್ಚಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ ಕೊರೋನಾ ಸೋಂಕಿನಿಂದ ಸಾವನ್ನಪ್ಪಿದವರ ಸಂಖ್ಯೆ 509. ಆ ಮೂಲಕ ಸಾವಿನ ಸಂಖ್ಯೆ 4,39,529ಕ್ಕೆ ಏರಿಕೆಯಾಗಿದೆ. ಮಹಾರಾಷ್ಟ್ರ(183) ಮತ್ತು ಕೇರಳ(173)ದಲ್ಲಿ ಅತೀ ಹೆಚ್ಚು ಕೋವಿಡ್ ಸಾವುಗಳು ಸಂಭವಿಸಿವೆ.

ಭಾರತದಲ್ಲಿ ಚೇತರಿಕೆ ಪ್ರಮಾಣವು ಶೇ.97.48 ರಷ್ಟಿದೆ. ಕಳೆದ 24 ಗಂಟೆಗಳಲ್ಲಿ 35,181 ಮಂದಿ ಚೇತರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೆ ದೇಶದಲ್ಲಿ ಕೊರೋನಾದಿಂದ ಚೇತರಿಕೆ ಕಂಡಿರುವವರ ಸಂಖ್ಯೆ 3,20,28,825 ಆಗಿದೆ.

ಸದ್ಯ ದೇಶದಲ್ಲಿರುವ ಸಕ್ರಿಯ ಪ್ರಕರಣಗಳ ಸಂಖ್ಯೆ 3,89,583. ಕಳೆದ 24 ಗಂಟೆಗಳ ಅವಧಿಯಲ್ಲಿ ಆ್ಯಕ್ಟಿವ್​ ಕೇಸ್​ಗಳ ಸಂಖ್ಯೆ 11,402 ಕ್ಕೆ ಏರಿಕೆಯಾಗಿದೆ.

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 81,09,244 ಜನರಿಗೆ ಕೋವಿಡ್​-19 ಲಸಿಕೆಯನ್ನು ನೀಡಲಾಗಿದೆ. ಈ ವರೆಗೆ ಒಟ್ಟು 66,30,37,334 ಮಂದಿಗೆ ಕೊರೋನಾ ವ್ಯಾಕ್ಸಿನ್​ ಹಾಕಲಾಗಿದೆ. ಇನ್ನು, ಕಳೆದ 24 ಗಂಟೆಗಳಲ್ಲಿ 16,84,441 ಜನರಿಗೆ ಕೋವಿಡ್ ಪರೀಕ್ಷೆ ಮಾಡಲಾಗಿದೆ.

ಇದನ್ನೂ ಓದಿ:Delhi Rains: ದೆಹಲಿಯಲ್ಲಿ ಧಾರಾಕಾರ ಮಳೆ; ಜಲಾವೃತಗೊಂಡ ರಸ್ತೆಗಳು; ವಾಹನ ಸಂಚಾರ ಅಸ್ತವ್ಯಸ್ತ

ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ಲಾಕ್​​ಡೌನ್​ ನಿಯಮಗಳನ್ನು ಕಟ್ಟುನಿಟ್ಟಿನಿಂದ ಪಾಲಿಸಿ ಸೋಂಕಿನಿಂದ ತಮ್ಮನ್ನು ತಾವು ಕಾಪಾಡಿಕೊಳ್ಳುವ ಪ್ರತಿಜ್ಞೆ ತೆಗೆದುಕೊಳ್ಳಬೇಕು. ನಾವು ಸುರಕ್ಷಿತವಾಗಿ ಇದ್ದು, ನಮ್ಮಿಂದ ಇತರರಿಗೆ ಸೋಂಕು ಹಬ್ಬದಂತೆ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು.
Published by:Latha CG
First published: