Coronavirus India Updates : ದೇಶದಲ್ಲಿ ಕೊರೋನಾ ಮಹಾಸ್ಫೋಟ ; ನಿನ್ನೆ ಒಂದೇ ದಿನ 28,701 ಹೊಸ ಪ್ರಕರಣಗಳು ಪತ್ತೆ

ಭಾನುವಾರ 28,701 ಪ್ರಕರಣಗಳು ಪತ್ತೆಯಾಗಿದ್ದು ದೇಶದ ಕೊರೋನಾ ಪೀಡಿತರ ಸಂಖ್ಯೆ 8,78,254ಕ್ಕೆ ಏರಿಕೆಯಾಗಿದೆ. ಇದಲ್ಲದೆ ಭಾನುವಾರ 500 ಮಂದಿ ಕೊರೋನಾದಿಂದ ಮೃತಪಟ್ಟಿದ್ದಾರೆ.

news18-kannada
Updated:July 14, 2020, 10:47 AM IST
Coronavirus India Updates : ದೇಶದಲ್ಲಿ ಕೊರೋನಾ ಮಹಾಸ್ಫೋಟ ; ನಿನ್ನೆ ಒಂದೇ ದಿನ 28,701 ಹೊಸ ಪ್ರಕರಣಗಳು ಪತ್ತೆ
ಸಾಂದರ್ಭಿಕ ಚಿತ್ರ
  • Share this:
ನವದೆಹಲಿ(ಜುಲೈ.13): ಕೊರೋನಾ ಸೋಂಕು ಹರಡುವಿಕೆ ವ್ಯಾಪಕವಾಗಿದ್ದರೂ ಲಾಕ್​ಡೌನ್​​ ನಿಯಮಗಳನ್ನು ಸಡಿಲಿಸಿ ಅನ್ ಲಾಕ್ 1 ಮತ್ತು 2 ಅನ್ನು ಜಾರಿ ಮಾಡಿದ ಪರಿಣಾಮ ದೇಶದಲ್ಲಿ ಕೊರೋನಾ ಸೋಂಕು ಪೀಡಿತರ ಸಂಖ್ಯೆ ಶರವೇಗದಲ್ಲಿ ಸಾಗುತ್ತಲೇ ಇದೆ. ಶುಕ್ರವಾರ 8 ಲಕ್ಷ ದಾಟಿತ್ತು. ನಾಲ್ಕು ದಿನಗಳಲ್ಲಿ 1 ಲಕ್ಷಕ್ಕೂ ‌ಹೆಚ್ಚು ಜನರು‌ ಸೋಂಕು ಪೀಡಿತರಾಗಿದ್ದಾರೆ. ಈಗ ಭಾನುವಾರ ಒಂದೇ ದಿನ 28,701 ಪ್ರಕರಣಗಳು ಪತ್ತೆಯಾಗಿವೆ.

ಭಾರತದಲ್ಲಿ ಜುಲೈ 1 ರಿಂದ 19 ಸಾವಿರಕ್ಕೂ ಹೆಚ್ಚು ಪ್ರಕರಣಗಳು, ಜುಲೈ 2 ರಿಂದ 20 ಸಾವಿರಕ್ಕೂ ಹೆಚ್ಚು ಪ್ರಕರಣಗಳು ಜುಲೈ 3 ರಿಂದ 22  ಸಾವಿರಕ್ಕೂ ಹೆಚ್ಚು ಪ್ರಕರಣಗಳು, ಜುಲೈ 4 ರಿಂದ 24 ಸಾವಿರಕ್ಕೂ ಹೆಚ್ಚು ಪ್ರಕರಣಗಳು, ಜುಲೈ 9 ರಿಂದ 26 ಸಾವಿರಕ್ಕೂ ಹೆಚ್ಚು ಪ್ರಕರಣಗಳು, ಜುಲೈ 10 ರಂದು 27 ಸಾವಿರಕ್ಕೂ ಹೆಚ್ಚು ಪ್ರಕರಣಗಳು ಹಾಗೂ ಜುಲೈ 11ರಂದು 28 ಸಾವಿರಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗಿದ್ದವು. ಜುಲೈ 12 ರಿಂದ 28 ಸಾವಿರಕ್ಕೂ ಹೆಚ್ಚು‌ ಪ್ರಕರಣಗಳು ಪತ್ತೆಯಾಗಿವೆ.

ಭಾನುವಾರ 28,701 ಪ್ರಕರಣಗಳು ಪತ್ತೆಯಾಗಿದ್ದು ದೇಶದ ಕೊರೋನಾ ಪೀಡಿತರ ಸಂಖ್ಯೆ 8,78,254ಕ್ಕೆ ಏರಿಕೆಯಾಗಿದೆ. ಇದಲ್ಲದೆ ಭಾನುವಾರ 500 ಮಂದಿ ಕೊರೋನಾದಿಂದ ಮೃತಪಟ್ಟಿದ್ದಾರೆ. ಇದರಿಂದ ದೇಶದಲ್ಲಿ ಕೊರೋನಾದಿಂದ ಮೃತಪಟ್ಟವರ ಸಂಖ್ಯೆ 23 ಸಾವಿರದ ಗಡಿ ದಾಟಿದೆ.

ದೇಶದಲ್ಲಿ ಈಗ ಕೊರೋನಾದಿಂದ ಮೃತಪಟ್ಟವರ ಸಂಖ್ಯೆ 23,174ಕ್ಕೆ ಏರಿಕೆಯಾಗಿದೆ. ಈವರೆಗೆ ಕೊರೋನಾದಿಂದ ಗುಣ ಆದವರು 5,53,471 ಜನ ಮಾತ್ರ. ದೇಶದಲ್ಲಿ ಇನ್ನೂ 3,01,609 ಜನರಲ್ಲಿ ಕೊರೊನಾ ಸಕ್ರೀಯವಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆಯ ಮಾಹಿತಿ ಬಿಡುಗಡೆ ಮಾಡಿದೆ.

ಇದನ್ನೂ ಓದಿ : Coronavirus Vaccine: ಕೊರೋನಾಗೆ ಲಸಿಕೆ ಕಂಡು ಹಿಡಿದ ರಷ್ಯಾ ; ಮಾನವ ಪ್ರಯೋಗವೂ ಯಶಸ್ವಿ

ಕೇಂದ್ರ ಆರೋಗ್ಯ ಇಲಾಖೆ ಮಾಹಿತಿಗಳ ಪ್ರಕಾರ ಜೂನ್ 11ರಂದು 10,956, ಜೂನ್ 12 ರಂದು 11,458, ಜೂನ್ 13 ರಂದು 11,929, ಜೂನ್ 14ರಂದು 11,502, ಜೂನ್ 15 ರಂದು 10,667, ಜೂನ್ 16ರಂದು 10,974, ಜೂನ್ 17ರಂದು 12,881, ಜೂನ್ 18ರಂದು 13,586, ಜೂನ್ 19ರಂದು 14,516, ಜೂನ್ 20ರಂದು 15,413, ಜೂನ್ 21ರಂದು 14,821, ಜೂನ್ 22 ರಂದು 14,933, ಜೂನ್ 23ರಂದು 15,968, ಜೂನ್ 24ರಂದು 16,922, ಜೂನ್ 25 ರಂದು 17,296, ಜೂನ್ 26ರಂದು 18,552, ಜೂನ್ 27ರಂದು 19,906,
ಜೂನ್ 28ರಂದು 19,459, ಜೂನ್ 29ರಂದು 18,522, ಜೂನ್ 30ರಂದು 18,653, ಜುಲೈ 1ರಂದು 19,148, ಜುಲೈ 2 ರಂದು 20,903, ಜುಲೈ 3 ರಂದು 22,771, ಜುಲೈ 4ರಂದು 24,850, ಜುಲೈ 5 ರಂದು 24,248, ಜುಲೈ 6ರಂದು 22,252, ಜುಲೈ 7ರಂದು 22,752, ಜುಲೈ 8ರಂದು 24,879, ಜುಲೈ 9ರಂದು 26,506 ಹಾಗೂ ಜುಲೈ 10ರಂದು 27,114 ಹೊಸ ಪ್ರಕರಣಗಳು ಪತ್ತೆಯಾಗಿವೆ.
Published by: G Hareeshkumar
First published: July 13, 2020, 10:26 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading