Coronavirus India Updates: ದೇಶದಲ್ಲಿ ಮತ್ತೆ ಏರಿಕೆಯಾಗುತ್ತಿರುವ ಕೊರೋನಾ ಪಾಸಿಟಿವ್ ಪ್ರಕರಣಗಳು

ಬುಧವಾರ 2,11,298 ಪ್ರಕರಣಗಳು ಪತ್ತೆಯಾಗಿವೆ. ಇದರಿಂದ ದೇಶದಲ್ಲಿ ಕೊರೋನಾ ಸೋಂಕು ಪೀಡಿತರ ಸಂಖ್ಯೆ 2,73,69,093ಕ್ಕೆ ಏರಿಕೆ ಆಗಿದೆ.‌ ಬುಧವಾರ 3,847 ಜನರು ಬಲಿ ಆಗಿದ್ದು ಈವರೆಗೆ ಕೊರೋನಾದಿಂದ ಸತ್ತವರ ಸಂಖ್ಯೆ 3,15,235ಕ್ಕೆ ಏರಿಕೆ ಆಗಿದೆ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
ನವದೆಹಲಿ(ಮೇ 27): ಮೇ ತಿಂಗಳ ಮಧ್ಯ ಭಾಗದಲ್ಲಿ ಕೊರೋನಾ ಎರಡನೇ ಅಲೆ ತಾರಕಕ್ಕೇ ಏರುತ್ತದೆ. ತಿಂಗಳ ಕೊನೆಯಲ್ಲಿ ಕಡಿಮೆ ಆಗುತ್ತದೆ ಎಂಬ ದೇಶಿಯ ಮತ್ತು ವಿದೇಶಿ ತಜ್ಞರ ಅಭಿಪ್ರಾಯದಂತೆ ಮೇ 6ರಂದು ದೇಶದಲ್ಲಿ 4,14,188 ಪ್ರಕರಣಗಳು ಕಂಡುಬಂದಿದ್ದು ದಾಖಲೆಯಾಗಿತ್ತು. ನಂತರ ತಳಮುಖಿಯಾಗಿ ಸಾಗಿದ್ದ ಕೊರೋನಾ ಈಗ ಮೇ 25ರಿಂದ ಮತ್ತೆ ಏರುಗತಿಯಲ್ಲಿ ಸಾಗುತ್ತಿದೆ.‌

ಮೇ 24ರಂದು ಮೊದಲ ಬಾರಿಗೆ ದೇಶದ ಕೊರೋನಾ ಪೀಡಿತರ ಸಂಖ್ಯೆ ಎರಡು ಲಕ್ಷಕ್ಕಿಂತ ಕಡಿಮೆ ಆಗಿತ್ತು. ಇದರಿಂದ ಇಡೀ ದೇಶವನ್ನೇ ಕಾಡಿ ಕಂಗೆಡಿಸಿದ್ದ ಎರಡನೇ ಸುತ್ತಿನ ಕೊರೋನಾ ಅಲೆ ಕೊನೆಯಾಗಲಿದೆ ಎಂಬ ನಿಟ್ಟುಸಿರು ಬಿಡುವಷ್ಟರಲ್ಲಿ ಮೇ 25ರಿಂದ ಮತ್ತೆ ದೇಶದಲ್ಲಿ 2 ಲಕ್ಷಕ್ಕೂ ಹೆಚ್ಚು (2,08,921) ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆ ಆಗುತ್ತಿವೆ. ಮೇ 6ರಂದು ದೇಶದಲ್ಲಿ 4,14,188 ಪ್ರಕರಣಗಳು ಕಂಡುಬಂದಿದ್ದವು. ನಂತರ ಕೆಳಮುಖವಾಗಿ ಸಾಗಿದ ಕೊರೋನಾ ಎರಡನೇ ಅಲೆಯಲ್ಲಿ ಮೇ 16ರಂದು ಮೊದಲ ಬಾರಿಗೆ ಮೂರು ಲಕ್ಷಕ್ಕೂ ಕಡಿಮೆ ಪ್ರಕರಣಗಳು (2,81,386) ಕಂಡು ಬಂದಿದ್ದವು. ಮೇ 24ರಂದು ಮೊದಲ ಬಾರಿಗೆ  ಎರಡು ಲಕ್ಷಕ್ಕಿಂತ ಕಡಿಮೆ (1,96,427) ಆಗಿದ್ದವು.

ಇದನ್ನೂ ಓದಿ:CM BS Yediyurappa: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ; ನನ್ನ ಮುಂದೆ ಇರೋದು ಕೋವಿಡ್​ ನಿರ್ವಹಣೆ ಮಾತ್ರ ಎಂದ ಸಿಎಂ ಯಡಿಯೂರಪ್ಪ

ಬುಧವಾರ 2,11,298 ಪ್ರಕರಣಗಳು ಪತ್ತೆಯಾಗಿವೆ. ಇದರಿಂದ ದೇಶದಲ್ಲಿ ಕೊರೋನಾ ಸೋಂಕು ಪೀಡಿತರ ಸಂಖ್ಯೆ 2,73,69,093ಕ್ಕೆ ಏರಿಕೆ ಆಗಿದೆ.‌ ಬುಧವಾರ 3,847 ಜನರು ಬಲಿ ಆಗಿದ್ದು ಈವರೆಗೆ ಕೊರೋನಾದಿಂದ ಸತ್ತವರ ಸಂಖ್ಯೆ 3,15,235ಕ್ಕೆ ಏರಿಕೆ ಆಗಿದೆ. ಈವರೆಗೆ 2,46,33,951 ಮಂದಿ ಕೊರೋನಾದಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಇನ್ನೂ 24,19,907 ಆಕ್ಟಿವ್ ಕೇಸುಗಳಿವೆ. ದೇಶದಲ್ಲಿ ಕೊರೋನಾ ಲಸಿಕೆ ಪಡೆದುಕೊಂಡವರ ಸಂಖ್ಯೆ 20 ಕೋಟಿ ದಾಟಿದೆ.‌ ಈವರೆಗೆ 20,26,95,874 ಜನರಿಗೆ ಕೊರೋನಾ ಲಸಿಕೆ ಹಾಕಲಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ‌.

ದೇಶದಲ್ಲಿ ಈಗ ಅತಿ ಹೆಚ್ಚು ಕೊರೋನಾ ಪ್ರಕರಣಗಳು ಕಂಡುಬಂದಿರುವುದು ತಮಿಳುನಾಡಿನಲ್ಲಿ. ಮಂಗಳವಾರ ತಮಿಳುನಾಡಿನಲ್ಲಿ 33.76 ಸಾವಿರ ಹೊಸ ಪ್ರಕರಣಗಳು ಕಂಡುಬಂದಿದ್ದರೆ ಕೇರಳ ಎರಡನೇ‌ ಸ್ಥಾನದಲ್ಲಿದೆ. ಕೇರಳದಲ್ಲಿ ನಿನ್ನೆ 28.8 ಸಾವಿರ ಪ್ರಕರಣಗಳು ಕಂಡುಬಂದಿವೆ. ಎರಡನೇ ಸ್ಥಾನದಲ್ಲಿದ್ದ ಕರ್ನಾಟಕ ಈಗ ಮೂರನೇ ಸ್ಥಾನಕ್ಕೆ ಬಂದಿದ್ದು ನಿನ್ನೆ ಕರ್ನಾಟಕದಲ್ಲಿ 26.81 ಸಾವಿರ ಪ್ರಕರಣಗಳು ಗೋಚರಿಸಿವೆ.‌ ಸಂಪೂರ್ಣ ನಿಯಂತ್ರಣದ ಹಾದಿಯಲ್ಲಿರುವ ಮಹಾರಾಷ್ಟ್ರ ಈಗ ನಾಲ್ಕನೇ ಸ್ಥಾನದಲ್ಲಿದ್ದು ನಿನ್ನೆ 24.75 ಸಾವಿರ ಪ್ರಕರಣಗಳು ಪತ್ತೆಯಾಗಿವೆ.‌

ದೇಶದಲ್ಲಿ ಮೊದಲ ಬಾರಿಗೆ ಕೊರೋನಾ ಸೋಂಕು ಕಾಣಿಸಿಕೊಂಡಿದ್ದು 2020ರ ಜನವರಿ 30ರಂದು; ಕೇರಳದಲ್ಲಿ. ಆಗ ಸೋಂಕು ಪೀಡಿತರ ಸಂಖ್ಯೆ ಲಕ್ಷದ ಗಡಿ ಬಳಿ ಬರಲು ಹೆಚ್ಚು ಕಡಿಮೆ ಎಂಟು ತಿಂಗಳು ಹಿಡಿದವು. ಆಗಲೂ ದಿನ ಒಂದರಲ್ಲಿ ಕೊರೋನಾ ಸೋಂಕು ಪೀಡಿತರ ಸಂಖ್ಯೆ ಲಕ್ಷ ದಾಟಿರಲಿಲ್ಲ. 2020ರ ಸೆಪ್ಟೆಂಬರ್ 17ರಂದು 98,795 ಕೇಸ್ ಕಂಡುಬಂದಿದ್ದೇ ಅತಿಹೆಚ್ಚಾಗಿತ್ತು.
Published by:Latha CG
First published: