Coronavirus India Updates: ಕೊರೋನಾ ಅಟ್ಟಹಾಸ; 6 ಲಕ್ಷ ಸಮೀಪಿಸಿದ ಭಾರತದ ಸೋಂಕಿತರ ಸಂಖ್ಯೆ

Indian Coronavirus Updates: ಭಾರತದಲ್ಲಿ ಜೂನ್ 26ರಿಂದ 18 ಸಾವಿರಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗತೊಡಗಿವೆ. ಇದೇ ಟ್ರೆಂಡ್ ಮುಂದುವರೆದಿದ್ದು ಜೂನ್ 30ರಂದು 18,653 ಪ್ರಕರಣಗಳು ಕಂಡುಬಂದಿವೆ.

news18-kannada
Updated:July 1, 2020, 9:50 AM IST
Coronavirus India Updates: ಕೊರೋನಾ ಅಟ್ಟಹಾಸ; 6 ಲಕ್ಷ ಸಮೀಪಿಸಿದ ಭಾರತದ ಸೋಂಕಿತರ ಸಂಖ್ಯೆ
ಕೊರೋನಾ ವೈರಸ್ ಸ್ಯಾಂಪಲ್
  • Share this:
ನವದೆಹಲಿ (ಜು. 1): ಕೊರೋನಾ ಸೋಂಕು ಹರಡುವಿಕೆ ಬಹಳ‌ ಕಡಿಮೆ ಇದ್ದಾಗ ಲಾಕ್​ಡೌನ್ ಜಾರಿ ಮಾಡಿ, ಸೋಂಕು ಹರಡುವಿಕೆ ಹೆಚ್ಚಾದಾಗ ನಾಮಕಾವಸ್ತೆಗೆ ಮಾತ್ರ ಲಾಕ್​ಡೌನ್ ಜಾರಿಗೊಳಿಸಿದ ಪರಿಣಾಮ ಅನ್ ಲಾಕ್ 2 ಅನುಷ್ಠಾನಕ್ಕೆ ಬರುವ ವೇಳೆಗೆ ದೇಶದ ಕೊರೋನಾ ಸೋಂಕು ಪೀಡಿತರ ಸಂಖ್ಯೆ 6 ಲಕ್ಷದ ಗಡಿ ಬಳಿ ಬಂದಿದೆ.

ಭಾರತದಲ್ಲಿ ಜೂನ್ 26ರಿಂದ 18 ಸಾವಿರಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗತೊಡಗಿವೆ. ಇದೇ ಟ್ರೆಂಡ್ ಮುಂದುವರೆದಿದ್ದು ಜೂನ್ 30ರಂದು 18,653 ಪ್ರಕರಣಗಳು ಕಂಡುಬಂದಿವೆ. ದೇಶದ ಕೊರೊನಾ ಪೀಡಿತರ ಸಂಖ್ಯೆ 5,85,493ಕ್ಕೆ ಏರಿಕೆಯಾಗಿದೆ.

ಇದಲ್ಲದೆ ಮಂಗಳವಾರ 507 ಮಂದಿ ಕೊರೊನಾದಿಂದ ಮೃತಪಟ್ಟಿದ್ದಾರೆ. ಇದರಿಂದ ದೇಶದಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ 17 ಸಾವಿರ ದಾಟಿದೆ. ಸದ್ಯ ಅದು 17,400ಕ್ಕೆ ಏರಿಕೆಯಾಗಿದೆ. ಈವರೆಗೆ ಕೊರೊನಾದಿಂದ ಗುಣ ಆದವರು 3,47,979 ಜನ ಮಾತ್ರ. ದೇಶದಲ್ಲಿ ಇನ್ನೂ 2,20,114 ಜನರಲ್ಲಿ ಕೊರೊನಾ ಸಕ್ರಿಯವಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆಯ ಮಾಹಿತಿ ಬಿಡುಗಡೆ ಮಾಡಿದೆ.

ಇದನ್ನೂ ಓದಿ: ಇಂದಿನಿಂದ ಯುರೋಪ್ ಪ್ರವೇಶಕ್ಕೆ ಚೀನಾ ಸೇರಿ 15 ದೇಶಗಳಿಗೆ ಅನುಮತಿ; ಅಮೆರಿಕ, ಭಾರತಕ್ಕೆ ನಿಷೇಧ

ಕೇಂದ್ರ ಆರೋಗ್ಯ ಇಲಾಖೆ ಮಾಹಿತಿಗಳ ಪ್ರಕಾರ ಜೂನ್ 1ರಂದು 8,171, ಜೂನ್ 2ರಂದು 8,909, ಜೂನ್ 3ರಂದು 9,304, ಜೂನ್ 4ರಂದು 9,851, ಜೂನ್ 5ರಂದು 9,887, ಜೂನ್ 6ರಂದು 9,971, ಜೂ 7ರಂದು 9,983, ಜೂನ್ 8ರಂದು 9987, ಜೂನ್‌ 9ರಂದು 9,985, ಜೂನ್ 10ರಂದು 9,996, ಜೂನ್ 11ರಂದು 10,956, ಜೂನ್ 12ರಂದು‌ 11,458, ಜೂನ್ 13ರಂದು 11,929, ಜೂನ್ 14ರಂದು 11,502, ಜೂನ್ 15ರಂದು 10,667, ಜೂನ್ 16ರಂದು 10,974, ಜೂನ್ 17ರಂದು 12,881, ಜೂನ್‌ 18ರಂದು 13,586, ಜೂನ್ 19ರಂದು 14,516, ಜೂನ್ 20ರಂದು 15,413, ಜೂನ್ 21ರಂದು 14,821, ಜೂನ್ 22ರಂದು 14,933, ಜೂನ್ 23ರಂದು 15,968, ಜೂನ್ 24ರಂದು‌ 16,922, ಜೂನ್ 25ರಂದು 17,296, ಜೂನ್ 26ರಂದು 18,552, ಜೂನ್ 27ರಂದು 19,906, ಜೂನ್ 28ರಂದು 19,459, ಜೂನ್ 29ರಂದು 18,522 ಹಾಗೂ ಜೂನ್ 30ರಂದು 18,653 ಹೊಸ ಪ್ರಕರಣಗಳು ಕಂಡುಬಂದಿವೆ.
First published:July 1, 2020
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading