Coronavirus Updates: ದೇಶದಲ್ಲಿ ಕೋವಿಡ್​​-19 ಕಾವು: ನಾಲ್ಕೂವರೆ ಲಕ್ಷ ದಾಟಿದ ಸೋಂಕಿತರ ಸಂಖ್ಯೆ

Coronavirus India Updates: ಮಂಗಳವಾರ 465 ಮಂದಿ ಕೊರೋನಾದಿಂದ ಮೃತಪಟ್ಟಿದ್ದಾರೆ. ಇದರಿಂದ ದೇಶದಲ್ಲಿ ಕೊರೋನಾದಿಂದ ಮೃತಪಟ್ಟವರ ಸಂಖ್ಯೆ 14,476ಕ್ಕೆ ಏರಿಕೆಯಾಗಿದೆ. ಈವರೆಗೆ ಕೊರೋನಾದಿಂದ ಗುಣ ಆದವರು 2,58,685 ಜನ ಮಾತ್ರ. ದೇಶದಲ್ಲಿ ಇನ್ನೂ 1,83,022 ಜನರಲ್ಲಿ ಕೊರೋನಾ ಸಕ್ರಿಯವಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆಯ ಮಾಹಿತಿ ಬಿಡುಗಡೆ ಮಾಡಿದೆ.

news18-kannada
Updated:June 24, 2020, 11:04 AM IST
Coronavirus Updates: ದೇಶದಲ್ಲಿ ಕೋವಿಡ್​​-19 ಕಾವು: ನಾಲ್ಕೂವರೆ ಲಕ್ಷ ದಾಟಿದ ಸೋಂಕಿತರ ಸಂಖ್ಯೆ
ಪ್ರಾತಿನಿಧಿಕ ಚಿತ್ರ
  • Share this:
ನವದೆಹಲಿ(ಜೂ.24): ಕೊರೋನಾ ಸೋಂಕು ಹರಡುವಿಕೆ ಬಹಳ‌ ಕಡಿಮೆ ಇದ್ದಾಗ ಸಂಪೂರ್ಣ ಲಾಕ್​ಡೌನ್​​ ಮಾಡಲಾಗಿತ್ತು. ಆದರೀಗ, ಸೋಂಕು ಹರಡುವಿಕೆ ಹೆಚ್ಚಾದಾಗ ನಾಮಕಾವಸ್ತೆಗೆ ಮಾತ್ರ ಲಾಕ್​ಡೌನ್​​ ಜಾರಿಗೊಳಿಸಿದ ಪರಿಣಾಮ ಭಾರತದಲ್ಲಿ ಕೊರೋನಾ ಪೀಡಿತರ ಸಂಖ್ಯೆ ಶರವೇಗದಲ್ಲಿ ಸಾಗುತ್ತಿದೆ. ಪರಿಣಾಮವಾಗಿ ಈಗ ದೇಶದ ಕೊರೋನಾ ಪೀಡಿತರ ಸಂಖ್ಯೆ ನಾಲ್ಕೂವರೆ ಲಕ್ಷದ ದಾಟಿದೆ‌.

ಭಾರತದಲ್ಲಿ ಪ್ರತಿದಿನ ಜೂನ್ 11ರಿಂದ 10 ಸಾವಿರಕ್ಕೂ ಹೆಚ್ಚು ಪ್ರಕರಣಗಳು, ಜೂನ್ 12ತಾರೀಖಿನಿಂದ 11 ಸಾವಿರಕ್ಕೂ ಹೆಚ್ಚು‌ ಪ್ರಕರಣಗಳು, ಜೂನ್ 17ರಿಂದ 12 ಸಾವಿರಕ್ಕೂ ಹೆಚ್ಚು ಪ್ರಕರಣಗಳು, ಜೂನ್ 18ರಿಂದ 13 ಸಾವಿರಕ್ಕೂ‌ ಹೆಚ್ಚು‌ ಪ್ರಕರಣಗಳು, ಜೂನ್ 19ರಿಂದ 14 ಸಾವಿರಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗುತ್ತಿದ್ದವು. ಈಗ 15 ಸಾವಿರಕ್ಕೂ ಹೆಚ್ಚು ಪ್ರಕರಣಗಳು ಪತ್ತೆಯಾಗಲು ಆರಂಭಿಸಿವೆ. ಮಂಗಳವಾರ 15,968 ಪ್ರಕರಣಗಳು ಕಂಡುಬಂದಿದ್ದು ದೇಶದ ಕೊರೋನಾ ಪೀಡಿತರ ಸಂಖ್ಯೆ 4,56,183ಕ್ಕೆ ಏರಿಕೆಯಾಗಿದೆ.

ಇದಲ್ಲದೆ ಮಂಗಳವಾರ 465 ಮಂದಿ ಕೊರೋನಾದಿಂದ ಮೃತಪಟ್ಟಿದ್ದಾರೆ. ಇದರಿಂದ ದೇಶದಲ್ಲಿ ಕೊರೋನಾದಿಂದ ಮೃತಪಟ್ಟವರ ಸಂಖ್ಯೆ 14,476ಕ್ಕೆ ಏರಿಕೆಯಾಗಿದೆ. ಈವರೆಗೆ ಕೊರೋನಾದಿಂದ ಗುಣ ಆದವರು 2,58,685 ಜನ ಮಾತ್ರ. ದೇಶದಲ್ಲಿ ಇನ್ನೂ 1,83,022 ಜನರಲ್ಲಿ ಕೊರೋನಾ ಸಕ್ರಿಯವಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆಯ ಮಾಹಿತಿ ಬಿಡುಗಡೆ ಮಾಡಿದೆ.

ಇದನ್ನೂ ಓದಿ: ಐಎಎಸ್​​ ಅಧಿಕಾರಿ ವಿಜಯಶಂಕರ್​​ ಆತ್ಮಹತ್ಯೆ ಪ್ರಕರಣ - ಪೊಲೀಸ್​​ ಎಫ್​​ಐಆರ್​​ನಲ್ಲಿ ಏನಿದೆ?

ಕೇಂದ್ರ ಆರೋಗ್ಯ ಇಲಾಖೆ ಮಾಹಿತಿಗಳ ಪ್ರಕಾರ ಮೇ 10ರಿಂದ  ದೇಶದಲ್ಲಿ ಕೊರೋನಾ ಸೋಂಕು ಪೀಡಿತರ ಸಂಖ್ಯೆ ಪ್ರತಿನಿತ್ಯ ನಾಲ್ಕು ಸಾವಿರಕ್ಕಿಂತ ಹೆಚ್ಚಾಗುತ್ತಲೇ ಇದೆ.‌ ಮೇ 10ರಂದು 4,213 ಜನರಿಗೆ, ಮೇ 11ರಂದು 3,064 ಮಂದಿಗೆ, ಮೇ 12 ರಂದು 3,525 ಜನರಿಗೆ, ಮೇ13ರಂದು 3,722 ಮಂದಿಗೆ ಹಾಗೂ ಮೇ 14ರಂದು 3,967 ಜನರಿಗೆ, ಮೇ 15ರಂದು 3,970 ಮಂದಿಗೆ, ಮೇ 16ರಂದು 4,987 ಜನರಿಗೆ, ಮೇ 17ರಂದು 5,242, ಮೇ 18ರಂದು 4,970, ಮೇ 19ರಂದು 5,611, ಮೇ 20ರಂದು 5,609, ಮೇ 21ರಂದು 6,088, ಮೇ 22ರಂದು 6,654, ಮೇ 23ರಂದು 6,767, ಮೇ 24ರಂದು 6,977, ಮೇ 25ರಂದು 6,535, ಮೇ 26ರಂದು 6,387, ಮೇ 27ರಂದು 6,566, ಮೇ 28ರಂದು 7,466, ಮೇ 29ರಂದು 7,964, ಮೇ 30ರಂದು 8,380, ಮೇ 31ರಂದು 8,392, ಜೂನ್ 1ರಂದು 8,171, ಜೂನ್ 2ರಂದು 8,909, ಜೂನ್ 3ರಂದು 9,304, ಜೂನ್ 4ರಂದು 9,851, ಜೂನ್ 5ರಂದು 9,887, ಜೂನ್ 6ರಂದು 9,971, ಜೂ 7ರಂದು 9,983, ಜೂನ್ 8ರಂದು 9987, ಜೂನ್‌ 9ರಂದು 9,985, ಜೂನ್ 10ರಂದು 9,996, ಜೂನ್ 11ರಂದು 10,956, ಜೂನ್ 12ರಂದು‌ 11,458, ಜೂನ್ 13ರಂದು 11,929, ಜೂನ್ 14ರಂದು 11,502, ಜೂನ್ 15ರಂದು 10,667, ಜೂನ್ 16ರಂದು 10,974, ಜೂನ್ 17ರಂದು 12,881, ಜೂನ್‌ 18ರಂದು 13,586, ಜೂನ್ 19ರಂದು 14,516, ಜೂನ್ 20ರಂದು 15,413, ಜೂನ್ 21ರಂದು 14,821, ಜೂನ್ 22ರಂದು 14,933 ಹಾಗೂ ಜೂನ್ 23ರಂದು 15,968 ಹೊಸ ಪ್ರಕರಣಗಳು ಕಂಡುಬಂದಿವೆ.
First published: June 24, 2020, 10:36 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading