Coronavirus India Updates: ದೇಶದಲ್ಲಿ ದಿನೇ‌ದಿನೇ ದುಪ್ಪಟ್ಟಾಗುತ್ತಿರುವ ಕೊರೋನಾ: ಒಂದೇ ದಿನ 13,586 ಹೊಸ ಕೇಸ್​​ ಪತ್ತೆ

India Covid 19 Cases: ಗುರುವಾರ 336 ಮಂದಿ ಕೊರೋನಾದಿಂದ ಮೃತಪಟ್ಟಿದ್ದಾರೆ. ಇದರಿಂದ ದೇಶದಲ್ಲಿ ಕೊರೋನಾದಿಂದ ಮೃತಪಟ್ಟವರ ಸಂಖ್ಯೆ 12,573ಕ್ಕೆ ಏರಿಕೆಯಾಗಿದೆ. ಈವರೆಗೆ ಕೊರೋನಾದಿಂದ ಗುಣ ಆದವರು 2,04,711 ಜನ ಮಾತ್ರ. ದೇಶದಲ್ಲಿ ಇನ್ನೂ 1,63,248 ಜನರಲ್ಲಿ ಕೊರೋನಾ ಸಕ್ರಿಯವಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆಯ ಮಾಹಿತಿ ಬಿಡುಗಡೆ ಮಾಡಿದೆ.

ಕೊರೋನಾ ವೈರಸ್ ಪ್ರಾತಿನಿಧಿಕ ಚಿತ್ರ

ಕೊರೋನಾ ವೈರಸ್ ಪ್ರಾತಿನಿಧಿಕ ಚಿತ್ರ

  • Share this:
ನವದೆಹಲಿ(ಜೂ.19): ಕೊರೋನಾ ಸೋಂಕು ಹರಡುವಿಕೆ ಬಹಳ‌ ಕಡಿಮೆ ಇದ್ದಾಗ ಲಾಕ್ಡೌನ್ ಜಾರಿ ಮಾಡಲಾಗಿತ್ತು. ಆದೀಗ, ಸೋಂಕು ಹರಡುವಿಕೆ ಹೆಚ್ಚಾದಾಗ ನಾಮಕಾವಸ್ತೆಗೆ ಮಾತ್ರ ಲಾಕ್ಡೌನ್ ಜಾರಿಗೊಳಿಸಿದ ಪರಿಣಾಮ ಭಾರತದಲ್ಲಿ ಕೊರೋನಾ ಸೋಂಕು ಪೀಡಿತರ ಸಂಖ್ಯೆ ಶರವೇಗದಲ್ಲಿ ಸಾಗುತ್ತಿದೆ. ದೇಶದ ಕೊರೋನಾ ಸೋಂಕು‌ ಪೀಡಿತರ ಸಂಖ್ಯೆ ಮೂರುವರೆ ಲಕ್ಷ ದಾಟಿದೆ. ಇದೀಗ ದಿನವೊಂದರಲ್ಲಿ 13 ಸಾವಿರಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗತೊಡಗಿವೆ.

ಭಾರತದಲ್ಲಿ ಮೇ 30ರಿಂದ ಪ್ರತಿನಿತ್ಯ 8 ಸಾವಿರಕ್ಕೂ ಹೆಚ್ಚು ಕೊರೋನಾ ಪ್ರಕರಣಗಳು, ಜೂನ್‌ 3ರಿಂದ ದಿನವೊಂದರಲ್ಲಿ 9 ಸಾವಿರಕ್ಕೂ ಅಧಿಕ ಪ್ರಕರಣಗಳು, ಜೂನ್ 11ರಿಂದ 10 ಸಾವಿರಕ್ಕೂ ಹೆಚ್ಚು ಪ್ರಕರಣಗಳು, ಜೂನ್ 12ತಾರೀಖಿನಿಂದ 11 ಸಾವಿರಕ್ಕೂ ಹೆಚ್ಚು‌ ಪ್ರಕರಣಗಳು, ಜೂನ್ 17ರಿಂದ 12 ಸಾವಿರಕ್ಕೂ ಹೆಚ್ಚು ಪ್ರಕರಣಗಳು ಪತ್ತೆಯಾಗುತ್ತಿದ್ದವು. ಈಗ 13 ಸಾವಿರಕ್ಕೂ‌ ಹೆಚ್ಚು‌ ಪ್ರಕರಣಗಳು ವರದಿಯಾಗುತ್ತಿವೆ. ಗುರುವಾರ 13,586 ಹೊಸ ಪ್ರಕರಣಗಳು ಪತ್ತೆಯಾಗಿವೆ. ಇದರಿಂದ ದೇಶದ ಕೊರೋನಾ ಪೀಡಿತರ ಸಂಖ್ಯೆ 3,80,532ಕ್ಕೆ ಏರಿಕೆಯಾಗಿದೆ.

ಇದಲ್ಲದೆ ಗುರುವಾರ 336 ಮಂದಿ ಕೊರೋನಾದಿಂದ ಮೃತಪಟ್ಟಿದ್ದಾರೆ. ಇದರಿಂದ ದೇಶದಲ್ಲಿ ಕೊರೋನಾದಿಂದ ಮೃತಪಟ್ಟವರ ಸಂಖ್ಯೆ 12,573ಕ್ಕೆ ಏರಿಕೆಯಾಗಿದೆ. ಈವರೆಗೆ ಕೊರೋನಾದಿಂದ ಗುಣ ಆದವರು 2,04,711 ಜನ ಮಾತ್ರ. ದೇಶದಲ್ಲಿ ಇನ್ನೂ 1,63,248 ಜನರಲ್ಲಿ ಕೊರೋನಾ ಸಕ್ರಿಯವಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆಯ ಮಾಹಿತಿ ಬಿಡುಗಡೆ ಮಾಡಿದೆ.

ಇದನ್ನೂ ಓದಿ: ತಮಿಳುನಾಡಿನಲ್ಲಿ ಒಂದೇ ದಿನ 2,141 ಕೋವಿಡ್​​-19 ಕೇಸ್​​: 625 ಮಂದಿ ಬಲಿ, ಸೋಂಕಿತರ ಸಂಖ್ಯೆ 52,334ಕ್ಕೆ ಏರಿಕೆ

ಕೇಂದ್ರ ಆರೋಗ್ಯ ಇಲಾಖೆ ಮಾಹಿತಿಗಳ ಪ್ರಕಾರ ಮೇ 10ರಿಂದ  ದೇಶದಲ್ಲಿ ಕೊರೋನಾ ಸೋಂಕು ಪೀಡಿತರ ಸಂಖ್ಯೆ ಪ್ರತಿನಿತ್ಯ ನಾಲ್ಕು ಸಾವಿರಕ್ಕಿಂತ ಹೆಚ್ಚಾಗುತ್ತಲೇ ಇದೆ.‌ ಮೇ 10ರಂದು 4,213 ಜನರಿಗೆ, ಮೇ 11ರಂದು 3,064 ಮಂದಿಗೆ, ಮೇ 12 ರಂದು 3,525 ಜನರಿಗೆ, ಮೇ13ರಂದು 3,722 ಮಂದಿಗೆ ಹಾಗೂ ಮೇ 14ರಂದು 3,967 ಜನರಿಗೆ, ಮೇ 15ರಂದು 3,970 ಮಂದಿಗೆ, ಮೇ 16ರಂದು 4,987 ಜನರಿಗೆ, ಮೇ 17ರಂದು 5,242, ಮೇ 18ರಂದು 4,970, ಮೇ 19ರಂದು 5,611, ಮೇ 20ರಂದು 5,609, ಮೇ 21ರಂದು 6,088, ಮೇ 22ರಂದು 6,654, ಮೇ 23ರಂದು 6,767, ಮೇ 24ರಂದು 6,977, ಮೇ 25ರಂದು 6,535, ಮೇ 26ರಂದು 6,387, ಮೇ 27ರಂದು 6,566, ಮೇ 28ರಂದು 7,466, ಮೇ 29ರಂದು 7,964, ಮೇ 30ರಂದು 8,380, ಮೇ 31ರಂದು 8,392, ಜೂನ್ 1ರಂದು 8,171, ಜೂನ್ 2ರಂದು 8,909, ಜೂನ್ 3ರಂದು 9,304, ಜೂನ್ 4ರಂದು 9,851, ಜೂನ್ 5ರಂದು 9,887, ಜೂನ್ 6ರಂದು 9,971, ಜೂ 7ರಂದು 9,983, ಜೂನ್ 8ರಂದು 9987, ಜೂನ್‌ 9ರಂದು 9,985, ಜೂನ್ 10ರಂದು 9,996, ಜೂನ್ 11ರಂದು 10,956, ಜೂನ್ 12ರಂದು‌ 11,458, ಜೂನ್ 13ರಂದು 11,929, ಜೂನ್ 14ರಂದು 11,502, ಜೂನ್ 15ರಂದು 10,667, ಜೂನ್ 16ರಂದು 10,974, ಜೂನ್ 17ರಂದು 12,881 ಹಾಗೂ ಜೂನ್‌ 18ರಂದು 13,586 ಪ್ರಕರಣಗಳು ಕಂಡುಬಂದಿವೆ.
First published: