• Home
  • »
  • News
  • »
  • coronavirus-latest-news
  • »
  • Coronavirus India Updates: 5 ಲಕ್ಷ ಸಮೀಪಿಸಿದ ದೇಶದ ಕೊರೋನಾ ಪೀಡಿತರ ಸಂಖ್ಯೆ; ಒಂದೇ ದಿನ 17,296 ಕೇಸುಗಳು ಪತ್ತೆ; ಈವರೆಗೆ 15 ಸಾವಿರ ಮಂದಿ ಬಲಿ

Coronavirus India Updates: 5 ಲಕ್ಷ ಸಮೀಪಿಸಿದ ದೇಶದ ಕೊರೋನಾ ಪೀಡಿತರ ಸಂಖ್ಯೆ; ಒಂದೇ ದಿನ 17,296 ಕೇಸುಗಳು ಪತ್ತೆ; ಈವರೆಗೆ 15 ಸಾವಿರ ಮಂದಿ ಬಲಿ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

Coronavirus India Updates: ಇದಲ್ಲದೆ ಗುರುವಾರ 407 ಮಂದಿ ಕೊರೋನಾದಿಂದ ಮೃತಪಟ್ಟಿದ್ದು, ದೇಶದಲ್ಲಿ ಕೊರೋನಾಗೆ ಬಲಿಯಾದವರ ಸಂಖ್ಯೆ 15 ಸಾವಿರ ದಾಟಿದ್ದು 15,301ಕ್ಕೆ ಏರಿಕೆಯಾಗಿದೆ. ಈವರೆಗೆ ಕೊರೊನಾದಿಂದ ಗುಣ ಆದವರು 2,85,637 ಜನ ಮಾತ್ರ.

  • Share this:

ನವದೆಹಲಿ(ಜೂ.26): ಕೊರೋನಾ ಸೋಂಕು ಹರಡುವಿಕೆ ಬಹಳ‌ ಕಡಿಮೆ ಇದ್ದಾಗ ಲಾಕ್​ಡೌನ್​ ಜಾರಿ ಮಾಡಿ, ಸೋಂಕು ಹರಡುವಿಕೆ ಹೆಚ್ಚಾದಾಗ ನಾಮಕಾವಸ್ಥೆಗೆ ಮಾತ್ರ ಲಾಕ್​ಡೌನ್​ ಜಾರಿಗೊಳಿಸಿದ ಪರಿಣಾಮ ಭಾರತದಲ್ಲಿ ಕೊರೋನಾ ಸೋಂಕು ಪೀಡಿತರ ಸಂಖ್ಯೆ ಶರವೇಗದಲ್ಲಿ ಸಾಗುತ್ತಿದೆ. ಮೊನ್ನೆಯಷ್ಟೇ ದೇಶದ ಕೊರೋನಾ ಪೀಡಿತರ ಸಂಖ್ಯೆ ನಾಲ್ಕೂವರೆ ಲಕ್ಷದ ದಾಟಿತ್ತು. ಈಗ ಐದು ಲಕ್ಷದ ಗಡಿ ಬಳಿ ಬಂದು ನಿಂತಿದೆ.


ಭಾರತದಲ್ಲಿ ಪ್ರತಿದಿನ ಜೂನ್ 11ರಿಂದ 10 ಸಾವಿರಕ್ಕೂ ಹೆಚ್ಚು ಪ್ರಕರಣಗಳು, ಜೂನ್ 12ತಾರೀಖಿನಿಂದ 11 ಸಾವಿರಕ್ಕೂ ಹೆಚ್ಚು‌ ಪ್ರಕರಣಗಳು, ಜೂನ್ 17ರಿಂದ 12 ಸಾವಿರಕ್ಕೂ ಹೆಚ್ಚು ಪ್ರಕರಣಗಳು, ಜೂನ್ 18ರಿಂದ 13 ಸಾವಿರಕ್ಕೂ‌ ಹೆಚ್ಚು‌ ಪ್ರಕರಣಗಳು, ಜೂನ್ 19ರಿಂದ 14 ಸಾವಿರಕ್ಕೂ ಹೆಚ್ಚು ಪ್ರಕರಣಗಳು, ಜೂನ್ 23ರಿಂದ 15 ಸಾವಿರಕ್ಕೂ ಹೆಚ್ಚು ಪ್ರಕರಣಗಳು, ಜೂನ್ 24ರಿಂದ 16 ಸಾವಿರಕ್ಕೂ ಹೆಚ್ಚು ಪ್ರಕರಣಗಳು ಪತ್ತೆಯಾಗುತ್ತಿದ್ದವು. ಈಗ ಜೂನ್  25ರಂದು 17 ಸಾವಿರಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗತೊಡಗಿವೆ. ಮೂರು ದಿನಗಳಿಂದ ದಿನವೊಂದರಲ್ಲಿ ದಾಖಲಾದ ಸಂಖ್ಯೆಯಲ್ಲಿ ಒಂದೊಂದು ಸಾವಿರ ಸಂಖ್ಯೆಗಳು ಹೆಚ್ಚಾಗುತ್ತಿವೆ. ಗುರುವಾರ 17,296 ಪ್ರಕರಣಗಳು ಕಂಡುಬಂದಿದ್ದು ದೇಶದ ಕೊರೊನಾ ಪೀಡಿತರ ಸಂಖ್ಯೆ 4,90,401ಕ್ಕೆ ಏರಿಕೆಯಾಗಿದೆ.


ಹುಬ್ಬಳ್ಳಿಯಲ್ಲಿ ಹಿಂದೂ ಸಂಪ್ರದಾಯದಂತೆ ಮಗಳ ಮುಡಿ ತೆಗೆಸಿದ ಮುಸ್ಲಿಂ ದಂಪತಿ


ಇದಲ್ಲದೆ ಗುರುವಾರ 407 ಮಂದಿ ಕೊರೋನಾದಿಂದ ಮೃತಪಟ್ಟಿದ್ದು, ದೇಶದಲ್ಲಿ ಕೊರೋನಾಗೆ ಬಲಿಯಾದವರ ಸಂಖ್ಯೆ 15 ಸಾವಿರ ದಾಟಿದ್ದು 15,301ಕ್ಕೆ ಏರಿಕೆಯಾಗಿದೆ. ಈವರೆಗೆ ಕೊರೊನಾದಿಂದ ಗುಣ ಆದವರು 2,85,637 ಜನ ಮಾತ್ರ. ದೇಶದಲ್ಲಿ ಇನ್ನೂ 1,89,463 ಜನರಲ್ಲಿ ಕೊರೊನಾ ಸಕ್ರೀಯವಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆಯ ಮಾಹಿತಿ ಬಿಡುಗಡೆ ಮಾಡಿದೆ.


ಕೇಂದ್ರ ಆರೋಗ್ಯ ಇಲಾಖೆ ಮಾಹಿತಿಗಳ ಪ್ರಕಾರ ಮೇ 10ರಿಂದ  ದೇಶದಲ್ಲಿ ಕೊರೋನಾ ಸೋಂಕು ಪೀಡಿತರ ಸಂಖ್ಯೆ ಪ್ರತಿನಿತ್ಯ ನಾಲ್ಕು ಸಾವಿರಕ್ಕಿಂತ ಹೆಚ್ಚಾಗುತ್ತಲೇ ಇದೆ.‌ ಮೇ 10ರಂದು 4,213 ಜನರಿಗೆ, ಮೇ 11ರಂದು 3,064 ಮಂದಿಗೆ, ಮೇ 12 ರಂದು 3,525 ಜನರಿಗೆ, ಮೇ13ರಂದು 3,722 ಮಂದಿಗೆ ಹಾಗೂ ಮೇ 14ರಂದು 3,967 ಜನರಿಗೆ, ಮೇ 15ರಂದು 3,970 ಮಂದಿಗೆ, ಮೇ 16ರಂದು 4,987 ಜನರಿಗೆ, ಮೇ 17ರಂದು 5,242, ಮೇ 18ರಂದು 4,970, ಮೇ 19ರಂದು 5,611, ಮೇ 20ರಂದು 5,609, ಮೇ 21ರಂದು 6,088, ಮೇ 22ರಂದು 6,654, ಮೇ 23ರಂದು 6,767, ಮೇ 24ರಂದು 6,977, ಮೇ 25ರಂದು 6,535, ಮೇ 26ರಂದು 6,387, ಮೇ 27ರಂದು 6,566, ಮೇ 28ರಂದು 7,466, ಮೇ 29ರಂದು 7,964, ಮೇ 30ರಂದು 8,380, ಮೇ 31ರಂದು 8,392 ಪ್ರಕರಣಗಳು ಪತ್ತೆಯಾಗಿವೆ.


ಜೂನ್ 1ರಂದು 8,171, ಜೂನ್ 2ರಂದು 8,909, ಜೂನ್ 3ರಂದು 9,304, ಜೂನ್ 4ರಂದು 9,851, ಜೂನ್ 5ರಂದು 9,887, ಜೂನ್ 6ರಂದು 9,971, ಜೂ 7ರಂದು 9,983, ಜೂನ್ 8ರಂದು 9987, ಜೂನ್‌ 9ರಂದು 9,985, ಜೂನ್ 10ರಂದು 9,996, ಜೂನ್ 11ರಂದು 10,956, ಜೂನ್ 12ರಂದು‌ 11,458, ಜೂನ್ 13ರಂದು 11,929, ಜೂನ್ 14ರಂದು 11,502, ಜೂನ್ 15ರಂದು 10,667, ಜೂನ್ 16ರಂದು 10,974, ಜೂನ್ 17ರಂದು 12,881, ಜೂನ್‌ 18ರಂದು 13,586, ಜೂನ್ 19ರಂದು 14,516, ಜೂನ್ 20ರಂದು 15,413, ಜೂನ್ 21ರಂದು 14,821, ಜೂನ್ 22ರಂದು 14,933, ಜೂನ್ 23ರಂದು 15,968, ಜೂನ್ 24ರಂದು‌ 16,922 ಹಾಗೂ ಜೂನ್ 25ರಂದು  17,296 ಹೊಸ ಪ್ರಕರಣಗಳು ಕಂಡುಬಂದಿವೆ.

Published by:Latha CG
First published: