Coronavirus India Updates: ಭಾರತದಲ್ಲಿ ಕೊರೋನಾ ಇನ್ನೂ ಸಮುದಾಯಕ್ಕೆ ಹರಡಿಲ್ಲ; ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್

ಕೊರೋನಾ ಸೋಂಕು ಸಮುದಾಯಕ್ಕೆ ಹರಡಿದೆ ಎಂಬ ವಿಷಯವನ್ನು ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ನಿರಾಕರಿಸಿದ್ದಾರೆ. ಕೊರೋನಾ ಸೋಂಕು ಕೆಲವು ಪ್ರದೇಶಗಳಲ್ಲಿ ಹೆಚ್ಚಾಗಿ ಕಾಣಿಸಿಕೊಂಡಿದೆ ಅಷ್ಟೇ. ಆದ ಕಾರಣ ಕೊರೋನಾ ಸಮುದಾಯಕ್ಕೆ ಹರಡಿದೆ ಎಂದು ಹೇಳಲು ಸಾಧ್ಯವಿಲ್ಲ ಎಂದಿದ್ದಾರೆ.

news18-kannada
Updated:July 9, 2020, 1:57 PM IST
Coronavirus India Updates: ಭಾರತದಲ್ಲಿ ಕೊರೋನಾ ಇನ್ನೂ ಸಮುದಾಯಕ್ಕೆ ಹರಡಿಲ್ಲ; ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್
ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್
  • Share this:
ನವದೆಹಲಿ(ಜು.09): ಕೇಂದ್ರ ಆರೋಗ್ಯ ಇಲಾಖೆಯ ಅಧಿಕೃತ ಮಾಹಿತಿ ಪ್ರಕಾರವೇ ದೇಶದಲ್ಲಿ ಈಗ ಪ್ರತಿದಿನ ಸುಮಾರು 25 ಸಾವಿರ ಜನರಿಗೆ ಕೊರೋನಾ ಸೋಂಕು ತಗಲುತ್ತಿದೆ. ಆದರೂ ದೇಶದಲ್ಲಿ ಕೊರೋನಾ ವೈರಸ್ ಸಮುದಾಯಕ್ಕೆ ಹರಡಿಲ್ಲ ಎಂದು ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ಹೇಳಿದ್ದಾರೆ.

ಕೊರೋನಾ ಸೋಂಕು ಸಮುದಾಯಕ್ಕೆ ಹರಡಿದೆ ಎನ್ನುವುದನ್ನು ವೈದ್ಯಕೀಯ ಕ್ಷೇತ್ರದ ತಜ್ಞರು ಕೂಡ ಹೇಳುತ್ತಿದ್ದಾರೆ. ಇತ್ತೀಚೆಗೆ ದೆಹಲಿಯ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಕೂಡ ಹೇಳಿದ್ದರು. ಕೊರೋನಾ ಸಮುದಾಯಕ್ಕೆ ಹರಡಿರುವ ವಿಷಯವನ್ನು ಕೇಂದ್ರ ಸರ್ಕಾರ ಅಧಿಕೃತವಾಗಿ ಪ್ರಕಟಿಸಬೇಕು, ರಾಜ್ಯ ಸರ್ಕಾರ ಘೋಷಣೆ ಮಾಡಲು ಸಾಧ್ಯವಿಲ್ಲ ಎಂದಿದ್ದರು. ಆ ಮುಖಾಂತರ ಕೊರೋನಾ ಸೋಂಕು ಸಮುದಾಯಕ್ಕೆ ಹರಡಿರುವುದನ್ನು ಒಪ್ಪಿಕೊಂಡು ಅದನ್ನು ತಡೆಯುವ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದರು.

ಇಷ್ಟೆಲ್ಲದರ ನಡುವೆ ಕೊರೋನಾ ಸೋಂಕು ಸಮುದಾಯಕ್ಕೆ ಹರಡಿದೆ ಎಂಬ ವಿಷಯವನ್ನು ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ನಿರಾಕರಿಸಿದ್ದಾರೆ. ಕೊರೋನಾ ಸೋಂಕು ಕೆಲವು ಪ್ರದೇಶಗಳಲ್ಲಿ ಹೆಚ್ಚಾಗಿ ಕಾಣಿಸಿಕೊಂಡಿದೆ ಅಷ್ಟೇ. ಆದ ಕಾರಣ ಕೊರೋನಾ ಸಮುದಾಯಕ್ಕೆ ಹರಡಿದೆ ಎಂದು ಹೇಳಲು ಸಾಧ್ಯವಿಲ್ಲ ಎಂದಿದ್ದಾರೆ.

ವಾಸುದೇವ ಮಯ್ಯ ಡೆತ್​ ನೋಟ್​ನಲ್ಲಿತ್ತು 11 ಜನರ ಹೆಸರು; ಸಿಐಡಿಗೆ ಪ್ರಕರಣ ವರ್ಗಾವಣೆ

ಶೇ,90ರಷ್ಟು  ಕೊರೋನಾ ಪ್ರಕರಣಗಳು ಕೇವಲ 8 ರಾಜ್ಯಗಳಲ್ಲಿ ಮಾತ್ರ ಸಕ್ರಿಯವಾಗಿವೆ ಎಂದು ಹೇಳಿದ್ದಾರೆ. ಕೊರೋನಾ ಸೋಂಕು ಸಮುದಾಯಕ್ಕೆ ಹರಡಿದೆ ಎನ್ನುವ ವೈದ್ಯಕೀಯ ಕ್ಷೇತ್ರದ ತಜ್ಞರ ಅಭಿಪ್ರಾಯವನ್ನು ನಿರಾಕರಿಸಿರುವ ಡಾ. ಹರ್ಷವರ್ಧನ್, ಆರೋಗ್ಯ ಕ್ಷೇತ್ರ ತಜ್ಞರ ಪ್ರಕಾರ ಭಾರತದಲ್ಲಿ ಸೋಂಕು ಸಮುದಾಯಕ್ಕೆ ಹರಡಿಲ್ಲ ಎಂದು ವ್ಯತಿರಿಕ್ತವಾದ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

ಇದಲ್ಲದೆ ದೇಶದಲ್ಲಿ ಈಗ ಪ್ರತಿದಿನ ಸುಮಾರು 25 ಸಾವಿರ ಜನರಿಗೆ ಕೊರೋನಾ ಸೋಂಕು ತಗಲುತ್ತಿದ್ದರೂ ಪರಿಸ್ಥಿತಿ ನಿಯಂತ್ರಣದಲ್ಲಿದೆ, ಆತಂಕ ಪಡುವ ಅಗತ್ಯ ಇಲ್ಲ ಎಂದು ಅಭಯ ನೀಡಿದ್ದಾರೆ.
Published by: Latha CG
First published: July 9, 2020, 1:48 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading