Coronavirus India Updates : 9 ಲಕ್ಷ ದಾಟಿದ ದೇಶದ ಕೊರೋನಾ ಸೋಂಕು ಪೀಡಿತರ ಸಂಖ್ಯೆ

ಸೋಮವಾರ 28,498 ಪ್ರಕರಣಗಳು ಪತ್ತೆಯಾಗಿದ್ದು ದೇಶದ ಕೊರೋನಾ ಪೀಡಿತರ ಸಂಖ್ಯೆ 9,06,752ಕ್ಕೆ ಏರಿಕೆಯಾಗಿದೆ.

news18-kannada
Updated:July 14, 2020, 11:01 AM IST
Coronavirus India Updates : 9 ಲಕ್ಷ ದಾಟಿದ ದೇಶದ ಕೊರೋನಾ ಸೋಂಕು ಪೀಡಿತರ ಸಂಖ್ಯೆ
ಸಾಂದರ್ಭಿಕ ಚಿತ್ರ.
  • Share this:
ನವದೆಹಲಿ(ಜುಲೈ.14): ಕೊರೋನಾ ಸೋಂಕು ಹರಡುವಿಕೆ ವ್ಯಾಪಕವಾಗಿದ್ದರೂ ಲಾಕ್​ಡೌನ್​​​ ನಿಯಮಗಳನ್ನು ಸಡಿಲಿಸಿ ಅನ್ ಲಾಕ್ 1 ಮತ್ತು 2 ಅನ್ನು ಜಾರಿ ಮಾಡಿದ ಪರಿಣಾಮ ದೇಶದಲ್ಲಿ ಕೊರೋನಾ ಸೋಂಕು ಪೀಡಿತರ ಸಂಖ್ಯೆ ಶರವೇಗದಲ್ಲಿ ಸಾಗುತ್ತಲೇ ಇದೆ. ಪರಿಣಾಮವಾಗಿ ನಾಲ್ಕೇ ದಿನಗಳ ಅಂತರದಲ್ಲಿ 1 ಲಕ್ಷಕ್ಕೂ ‌ಹೆಚ್ಚು ಜನರು‌ ಸೋಂಕು ಪೀಡಿತರಾಗಿದ್ದಾರೆ. ದೇಶದ ಕೊರೋನಾ ಪೀಡಿತರ ಸಂಖ್ಯೆ 9 ಲಕ್ಷ ದಾಟಿದೆ.

ಭಾರತದಲ್ಲಿ ಜುಲೈ 1ರಿಂದ 19 ಸಾವಿರಕ್ಕೂ ಹೆಚ್ಚು ಪ್ರಕರಣಗಳು, ಜುಲೈ 2 ರಿಂದ 20 ಸಾವಿರಕ್ಕೂ ಹೆಚ್ಚು ಪ್ರಕರಣಗಳು ಜುಲೈ 3 ರಿಂದ 22  ಸಾವಿರಕ್ಕೂ ಹೆಚ್ಚು ಪ್ರಕರಣಗಳು, ಜುಲೈ 4 ರಿಂದ 24 ಸಾವಿರಕ್ಕೂ ಹೆಚ್ಚು ಪ್ರಕರಣಗಳು, ಜುಲೈ 9ರಿಂದ 26 ಸಾವಿರಕ್ಕೂ ಹೆಚ್ಚು ಪ್ರಕರಣಗಳು, ಜುಲೈ 10ರಂದು 27 ಸಾವಿರಕ್ಕೂ ಹೆಚ್ಚು ಪ್ರಕರಣಗಳು ಹಾಗೂ ಜುಲೈ 11ರಂದು 28 ಸಾವಿರಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗಿದ್ದವು. ಇದೇ ಟ್ರೆಂಡ್ ಮುಂದುವರೆದಿದ್ದು ಸೋಮವಾರ 28,498 ಪ್ರಕರಣಗಳು ಪತ್ತೆಯಾಗಿದ್ದು ದೇಶದ ಕೊರೋನಾ ಪೀಡಿತರ ಸಂಖ್ಯೆ 9,06,752ಕ್ಕೆ ಏರಿಕೆಯಾಗಿದೆ.

ಇದಲ್ಲದೆ ಸೋಮವಾರ 553 ಮಂದಿ ಕೊರೋನಾದಿಂದ ಮೃತಪಟ್ಟಿದ್ದಾರೆ. ಇದರಿಂದ ದೇಶದಲ್ಲಿ ಕೊರೋನಾದಿಂದ ಮೃತಪಟ್ಟವರ ಸಂಖ್ಯೆ 23,727ಕ್ಕೆ ಏರಿಕೆಯಾಗಿದೆ. ಈವರೆಗೆ ಕೊರೊನಾದಿಂದ ಗುಣ ಆದವರು 5,71,459 ಜನ ಮಾತ್ರ. ದೇಶದಲ್ಲಿ ಇನ್ನೂ 3,11,565 ಜನರಲ್ಲಿ ಕೊರೋನಾ ಸಕ್ರೀಯವಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆಯ ಮಾಹಿತಿ ಬಿಡುಗಡೆ ಮಾಡಿದೆ.

ಇದನ್ನೂ ಓದಿ :  Sree Padmanabhaswamy Temple - ಪದ್ಮನಾಭಸ್ವಾಮಿ ದೇವಸ್ಥಾನದ ಮೇಲೆ ರಾಜಮನೆತನದವರಿಗೆ ಈಗಲೂ ಹಕ್ಕಿದೆ: ಸುಪ್ರೀಂ ಕೋರ್ಟ್

ಕೇಂದ್ರ ಆರೋಗ್ಯ ಇಲಾಖೆ ಮಾಹಿತಿಗಳ ಪ್ರಕಾರ ಜೂನ್ 11 ರಂದು 10,956, ಜೂನ್ 12 ರಂದು 11,458, ಜೂನ್ 13 ರಂದು 11,929, ಜೂನ್ 14ರಂದು 11,502, ಜೂನ್ 15 ರಂದು 10,667, ಜೂನ್ 16 ರಂದು 10,974, ಜೂನ್ 17ರಂದು 12,881, ಜೂನ್ 18 ರಂದು 13,586, ಜೂನ್ 19 ರಂದು 14,516, ಜೂನ್ 20 ರಂದು 15,413, ಜೂನ್ 21ರಂದು 14,821, ಜೂನ್ 22 ರಂದು 14,933, ಜೂನ್ 23 ರಂದು 15,968, ಜೂನ್ 24ರಂದು 16,922, ಜೂನ್ 25 ರಂದು 17,296, ಜೂನ್ 26 ರಂದು 18,552, ಜೂನ್ 27ರಂದು 19,906, ಜೂನ್ 28ರಂದು 19,459, ಜೂನ್ 29 ರಂದು 18,522, ಜೂನ್ 30ರಂದು 18,653

ಜುಲೈ 1 ರಂದು 19,148, ಜುಲೈ 2 ರಂದು 20,903, ಜುಲೈ 3 ರಂದು 22,771, ಜುಲೈ 4 ರಂದು 24,850, ಜುಲೈ 5 ರಂದು 24,248, ಜುಲೈ 6 ರಂದು 22,252, ಜುಲೈ 7ರಂದು 22,752, ಜುಲೈ 8 ರಂದು 24,879, ಜುಲೈ 9 ರಂದು 26,506, ಜುಲೈ 10 ರಂದು 27,114, ಜುಲೈ 11 ರಂದು 28,637, ಜುಲೈ 12ರಂದು‌ 28,701 ಹಾಗೂ ಜುಲೈ 13 ರಂದು 28,498 ಹೊಸ ಪ್ರಕರಣಗಳು ಪತ್ತೆಯಾಗಿವೆ.
Published by: G Hareeshkumar
First published: July 14, 2020, 11:01 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading